Cabinet Meeting: ಮತಾಂತರ ನಿಷೇಧ ಕಾಯ್ದೆ ತಿದ್ದುಪಡಿಗೆ ತೀರ್ಮಾನ, ಪಠ್ಯ ಪರಿಷ್ಕರಣೆಗೆ ಅಸ್ತು ಎಂದ ಸಿದ್ದರಾಮಯ್ಯ ಸಂಪುಟ!

ಮತಾಂತರ ನಿಷೇಧ ಕಾಯ್ದೆಗೆ ತಿದ್ದುಪಡಿ ಹಾಗೂ ಪಠ್ಯ ಪರಿಷ್ಕರಣೆ ಸೇರಿದಂತೆ ಬಿಜೆಪಿ ಅವಧಿಯ ಮಹತ್ವದ ಕಾಯ್ದೆಗಳಿಗೆ ಕೊಕ್‌ ನೀಡಲು ಸಿದ್ದರಾಮಯ್ಯ ಸಂಪುಟ ತೀರ್ಮಾನಿಸಿದೆ. ಹಾಗಾದರೆ ಸಂಪುಟ ಸಭೆಯಲ್ಲಾದ ತೀರ್ಮಾನಗಳೇನು ಎನ್ನುವ ವಿವರ ಇಲ್ಲಿದೆ ನೋಡಿ.

Cabinet Meeting: ಮತಾಂತರ ನಿಷೇಧ ಕಾಯ್ದೆ ತಿದ್ದುಪಡಿಗೆ ತೀರ್ಮಾನ, ಪಠ್ಯ ಪರಿಷ್ಕರಣೆಗೆ ಅಸ್ತು ಎಂದ ಸಿದ್ದರಾಮಯ್ಯ ಸಂಪುಟ!
ವಿಧಾನಸೌಧ
Follow us
ಗಂಗಾಧರ​ ಬ. ಸಾಬೋಜಿ
|

Updated on:Jun 15, 2023 | 4:19 PM

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಇಂದು(ಜೂನ್ 15) ನಡೆದ ಸಚಿವ ಸಂಪುಟದಲ್ಲಿ ಕೆಲ ಮಹತ್ವದ ತೀರ್ಮಾನಗಳನ್ನು ಕೈಗೊಳ್ಳಲಾಗಿದೆ. ಮತಾಂತರ ನಿಷೇಧ ಕಾಯ್ದೆಗೆ (amend anti-conversion law) ತಿದ್ದುಪಡಿ ತರಲು ಮತ್ತು ಪಠ್ಯ ಪುಸ್ತಕ ಪರಿಷ್ಕರಣೆಗೆ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಬಿಜೆಪಿ ಸರ್ಕಾರ ಮತಾಂತರ ನಿಷೇಧ ಕಾಯ್ದೆಯಲ್ಲಿ ಸೇರಿಸಿದ್ದ ಅಂಶಗಳನ್ನು ಕೈಬಿಟ್ಟು ತಿದ್ದುಪಡಿ ಮಾಡಲು ನಿರ್ಧಾರ ಮಾಡಲಾಗಿದೆ. ಜುಲೈ ಅಧಿವೇಶನದಲ್ಲಿ ತಿದ್ದುಪಡಿ ಮಸೂದೆ ಮಂಡನೆ ಆಗಲಿದೆ. ಸಚಿವ ಸಂಪುಟ ಮುಗಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದೀಯ ವ್ಯವಹಾರಗಳ ಸಚಿವ ಎಚ್​ಕೆ ಪಾಟೀಲ್​, ಸಭೆಯಲ್ಲಿ ಕೈಗೊಳ್ಳಲಾದ ಪ್ರಮುಖ ತೀರ್ಮಾನಗಳ ಬಗ್ಗೆ ಮಾಹಿತಿ ನೀಡಿದರು.

ರಾಷ್ಟ್ರಗೀತೆ ಹಾಡುವ ಸ್ಥಳಗಳಲ್ಲಿ ಸಂವಿಧಾನದ ಪೀಠಿಕೆ ಓದುವುದುನ್ನು ಕಡ್ಡಾಯಗೊಳಿಸಲಾಗುವುದು. ಪಠ್ಯ ಪುಸ್ತಕ ಪರಿಷ್ಕರಣೆಗೆ ಸಚಿವ ಸಂಪುಟ ಸಭೆ ಅನುಮೋದಿಸಿದೆ. ಎಪಿಎಂಸಿ ಕಾನೂನು ಹಿಂಪಡೆಯಲು ಕಾಂಗ್ರೆಸ್ ಸರ್ಕಾರ ನಿರ್ಧರಿಸಿದೆ. ಸಣ್ಣ ನೀರಾವರಿ ಇಲಾಖೆ ಪ್ರಸ್ತಾವನೆಗೆ ಸಂಪುಟ ಅನುಮೋದಿಸಿದೆ. ಬೆಂಗಳೂರು ಗ್ರಾಮಾಂತರ, ತುಮಕೂರು ಜಿಲ್ಲೆಯ 83 ಕೆರೆಗಳ ಭರ್ತಿ ಮಾಡುವುದು. 1081 ಕೋಟಿ ವೆಚ್ಚದಲ್ಲಿ ವೃಷಭಾವತಿ ನಾಲೆ ನೀರು ಶುದ್ಧೀಕರಿಸಿದ ನೀರನ್ನು ಕೆರೆಗಳಿಗೆ ಹರಿಸಲು ಸಂಪುಟ ಸಮ್ಮತಿಸಿದೆ.

ಇದನ್ನೂ ಓದಿ: ಶಾಲಾ ಪಠ್ಯಪುಸ್ತಕ ಪರಿಷ್ಕರಣೆಯ ಅಂತಿಮ ವರದಿ ಸಿದ್ಧ: ಯಾವ ಪಠ್ಯಗಳಿಗೆ ಬೀಳಲಿದೆ ಕತ್ತರಿ?

ವಿಪತ್ತು ನಿರ್ವಹಣೆ ಪರಿಶೀಲನೆಗೆ ಸಂಪುಟ ಉಪ ಸಮಿತಿ ರಚನೆ ಮಾಡಿದ್ದು, ಸಾರಿಗೆ ನಿಗಮಗಳ 79 ಕೋಟಿ ರೂ. ಮೋಟಾರ್​ ವೆಹಿಕಲ್ ಟ್ಯಾಕ್ಸ್​ ವಿನಾಯಿತಿಗೆ ತಿರ್ಮಾನಿಸಲಾಗಿದೆ.

ಪಠ್ಯ ಪುಸ್ತಕ ಪರಿಷ್ಕರಣೆ: ಹೆಡ್ಗೇವಾರ್, ಸೂಲಿಬೆಲೆ ಬರೆದ ಅಂಶ ಕೈಬಿಟ್ಟ ಸರ್ಕಾರ

ವಿಧಾನಸೌಧದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪಠ್ಯ ಪುಸ್ತಕ ಪರಿಷ್ಕರಣೆಗೆ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಆರ್​ಎಸ್​ಎಸ್ ಸಂಸ್ಥಾಪಕ ಕೇಶವ ಹೆಡ್ಗೇವಾರ್​ ಭಾಷಣ ತೆಗೆದಿದ್ದೇವೆ. ಸಾವರ್ಕರ್, ಚಕ್ರವರ್ತಿ ಸೂಲಿಬೆಲೆ ಬರೆದ ಅಂಶಗಳನ್ನು ಸಹ ತೆಗೆದಿದ್ದೇವೆ. ಮಕ್ಕಳು ಸರಿಯಾದ ವಿಚಾರ ಕಲಿಯಬೇಕೆಂದು ಕೆಲ ಬದಲಾವಣೆ ಮಾಡಿದ್ದೇವೆ. ನಾವು ತುಂಬಾ ಆಳವಾಗಿ ಹೋಗಬೇಕಾಗಿತ್ತು, ಹಾಗೆ ಮಾಡಿಲ್ಲ. ಸರ್ಕಾರಕ್ಕೆ ಹೊರೆಯಾಗದಂತೆ ಸರಳವಾಗಿ ಪಠ್ಯ ಪರಿಷ್ಕರಿಸಿದ್ದೇವೆ ಎಂದರು.

ಇದನ್ನೂ ಓದಿ: ಅಕ್ಕಿ ರಾಜಕೀಯ ಜಟಾಪಟಿ ನಡುವೆ ಖುದ್ದು ಪ್ರಧಾನಿ ಮೋದಿ ಭೇಟಿಗೆ ಮುಂದಾದ ಸಿದ್ದರಾಮಯ್ಯ

ನೀ ಬರೆದ ಪತ್ರ ಮರುಸೇರ್ಪಡೆ

ಪಠ್ಯ ಪುಸ್ತಕ ಪರಿಷ್ಕರಣೆಗೆ ರಾಜಪ್ಪ ದಳವಾಯಿ ನೇತೃತ್ವದಲ್ಲಿ ಐವರ ಸಮಿತಿ ರಚಿಸಲಾಗಿದೆ. ಕನ್ನಡದಲ್ಲಿ ಸಮಾಜ ವಿಜ್ಞಾನದಲ್ಲಿ 6ರಿಂದ 10ನೇ ತರಗತಿಯವರೆಗೆ ಕೆಲವು ಬದಲಾವಣೆ ಮಾಡಲಾಗಿದೆ. ಸಪ್ಲಿಮೆಂಟರಿ ವಿಚಾರ ನೀಡಿ ಮಕ್ಕಳಿಗೆ ಹೊರೆಯಾಗದಂತೆ ಬದಲಾವಣೆ ಮಾಡಿದ್ದು, ಸಾವಿತ್ರಿ ಫುಲೆ ಅವರ ನೀ ಹೋದ ಮರು ದಿನ ವಿಚಾರ ಮತ್ತು ಇಂದಿರಾ ಗಾಂಧಿಗೆ ನೆಹರು ಬರೆದಿದ್ದ ‘ನೀ ಬರೆದ ಪತ್ರ’ ಮರುಸೇರ್ಪಡೆ ಮಾಡಲಾಗಿದೆ ಎಂದು ತಿಳಿಸಿದರು.

ಹಗರಣಗಳ ತನಿಖೆಗೆ ಎಸ್​​ಐಟಿ ರಚಿಸುವ ಬಗ್ಗೆ ಸಂಪುಟದಲ್ಲಿ ಚರ್ಚೆ

ಬಿಜೆಪಿ ಸರ್ಕಾರದ ಅವಧಿಯ ಹಗರಣಗಳ ತನಿಖೆ ವಿಚಾರ ಪ್ರಸ್ತಾಪವಾಗಿದ್ದು, ಹಗರಣಗಳ ತನಿಖೆಗೆ ಎಸ್​​ಐಟಿ ರಚಿಸುವ ಬಗ್ಗೆ ಸಂಪುಟದಲ್ಲಿ ಚರ್ಚೆ ಮಾಡಲಾಗಿದೆ. ಈ ಹಿಂದೆ ಬಿಜೆಪಿ ಅವಧಿಯಲ್ಲಿನ ಹಗರಣಗಳ ಬಗ್ಗೆ ಧ್ವನಿ ಎತ್ತಿದ್ದೇವೆ. ಈಗ ತನಿಖೆ ಮಾಡದಿದ್ದರೆ ಹೊಂದಾಣಿಕೆ ರಾಜಕಾರಣ ಎನ್ನುತ್ತಾರೆ. ಹೀಗಾಗಿ ಕೂಡಲೇ ವಿಶೇಷ ತನಿಖಾ ತಂಡ ರಚಿಸಿ ತನಿಖೆಗೆ ಸೂಚಿಸಿ ಎಂದು ಸಂಪುಟ ಸಭೆಯಲ್ಲಿ ಸಚಿವರಾದ ಪ್ರಿಯಾಂಕ್, ಕೃಷ್ಣ ಭೈರೇಗೌಡ ಮನವಿ ಮಾಡಿದ್ದಾರೆ. ಸಚಿವರಿಬ್ಬರ ಮಾತಿಗೆ ಧ್ವನಿಗೂಡಿಸಿದ ಸಚಿವ ದಿನೇಶ್ ಗುಂಡೂರಾವ್, ಮುಂದಿನ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಧರಿಸೋಣ ಎಂದು ಸಿಎಂ ಸಿದ್ಧರಾಮಯ್ಯ ಹೇಳಿದರು.

ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:43 pm, Thu, 15 June 23

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್