Amarinder Singh: ಬಿಜೆಪಿ ಸೇರ್ಪಡೆಗೂ ಮುನ್ನ ಜೆಪಿ ನಡ್ಡಾ ಅವರನ್ನು ಭೇಟಿಯಾದ ಕ್ಯಾಪ್ಟನ್ ಅಮರಿಂದರ್ ಸಿಂಗ್

ಅಮರಿಂದರ್ ಸಿಂಗ್ ಅವರೊಂದಿಗೆ ಮಾಜಿ ಶಾಸಕರು ಸೇರಿದಂತೆ 6 ಮಾಜಿ ಕಾಂಗ್ರೆಸ್ ನಾಯಕರು ಬಿಜೆಪಿ ಸೇರುವ ನಿರೀಕ್ಷೆಯಿದೆ. ಇಂದು ಸಂಜೆ 4.30ಕ್ಕೆ ಅಮರಿಂದರ್ ಸಿಂಗ್ ತಮ್ಮ ಬೆಂಬಲಿಗ ನಾಯಕರೊಂದಿಗೆ ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾಗಲಿದ್ದಾರೆ.

Amarinder Singh: ಬಿಜೆಪಿ ಸೇರ್ಪಡೆಗೂ ಮುನ್ನ ಜೆಪಿ ನಡ್ಡಾ ಅವರನ್ನು ಭೇಟಿಯಾದ ಕ್ಯಾಪ್ಟನ್ ಅಮರಿಂದರ್ ಸಿಂಗ್
ಜೆಪಿ ನಡ್ಡಾ ಭೇಟಿಯಾದ ಕ್ಯಾಪ್ಟನ್ ಅಮರಿಂದರ್ ಸಿಂಗ್
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Sep 19, 2022 | 1:48 PM

ನವದೆಹಲಿ: ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಪಂಜಾಬ್ ಲೋಕ ಕಾಂಗ್ರೆಸ್ (ಪಿಎಲ್​ಸಿ) ಎಂಬ ಹೊಸ ಪಕ್ಷ ಸ್ಥಾಪಿಸಿದ್ದ ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ (Amarinder Singh) ಇಂದು ಸಂಜೆ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಅದಕ್ಕೂ ಮೊದಲು ಇಂದು ಅವರು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ (JP Nadda) ಅವರನ್ನು ಔಪಚಾರಿಕವಾಗಿ ಭೇಟಿಯಾಗಿದ್ದಾರೆ. ಅಮರಿಂದರ್ ಸಿಂಗ್ ತಮ್ಮ ಪಂಜಾಬ್ ಲೋಕ ಕಾಂಗ್ರೆಸ್ ಪಕ್ಷವನ್ನು ಬಿಜೆಪಿಯೊಂದಿಗೆ ವಿಲೀನಗೊಳಿಸಲಿದ್ದಾರೆ.

ಅಮರಿಂದರ್ ಸಿಂಗ್ ಅವರೊಂದಿಗೆ ಮಾಜಿ ಶಾಸಕರು ಸೇರಿದಂತೆ 6 ಮಾಜಿ ಕಾಂಗ್ರೆಸ್ ನಾಯಕರು ಬಿಜೆಪಿ ಸೇರುವ ನಿರೀಕ್ಷೆಯಿದೆ. ಇಂದು ಸಂಜೆ 4.30ಕ್ಕೆ ಅಮರಿಂದರ್ ಸಿಂಗ್ ತಮ್ಮ ಬೆಂಬಲಿಗ ನಾಯಕರೊಂದಿಗೆ ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾಗಲಿದ್ದಾರೆ.

ಬಿಜೆಪಿಗೆ ಸೇರ್ಪಡೆಗೊಂಡ ನಂತರ ಅವರು ಪಕ್ಷದಲ್ಲಿ ಪ್ರಮುಖ ಪಾತ್ರ ವಹಿಸುವ ಸಾಧ್ಯತೆಯಿದೆ ಎನ್ನಲಾಗಿದೆ. ಇತ್ತೀಚೆಗೆ ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಅಮರಿಂದರ್ ಸಿಂಗ್ ಭೇಟಿ ಮಾಡಿದ್ದರು.

ಇದನ್ನೂ ಓದಿ: ಅಮರಿಂದರ್ ಸಿಂಗ್ ರಾಜೀನಾಮೆ ಬಳಿಕ ನಾನೇ ಸಿಎಂ ಆಗಬೇಕೆಂಬುದು ಶಾಸಕರ ಆಯ್ಕೆಯಾಗಿತ್ತು; ಸುನಿಲ್ ಜಖಾರ್

ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದಿದ್ದ ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರ ಬದಲಿಗೆ ಚರಣ್​ಜಿತ್ ಸಿಂಗ್ ಚನ್ನಿ ಅವರನ್ನು ಪಂಜಾಬ್ ಮುಖ್ಯಮಂತ್ರಿ ಸ್ಥಾನದಲ್ಲಿ ಕೂರಿಸಲಾಗಿತ್ತು. ಇದರಿಂದ ಅಮರೀಂದರ್ ಸಿಂಗ್ ಅಸಮಾಧಾನಗೊಂಡು, ಕಾಂಗ್ರೆಸ್​ಗೆ ರಾಜೀನಾಮೆ ನೀಡಿದ್ದರು. ಕಾಂಗ್ರೆಸ್ ತೊರೆದ ನಂತರ ಅವರು ಪಂಜಾಬ್ ಲೋಕ ಕಾಂಗ್ರೆಸ್ (PLC) ಸ್ಥಾಪಿಸಿದ್ದರು. 80 ವರ್ಷದ ಅಮರೀಂದರ್ ಸಿಂಗ್ ಇಂದು ದೆಹಲಿಯಲ್ಲಿ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಇತರ ನಾಯಕರ ಸಮ್ಮುಖದಲ್ಲಿ ಬಿಜೆಪಿ ಪಕ್ಷಕ್ಕೆ ಸೇರಲಿದ್ದಾರೆ. ಅಮರೀಂದರ್ ಸಿಂಗ್ 2 ಬಾರಿ ಪಂಜಾಬ್​ನ ಮುಖ್ಯಮಂತ್ರಿಯಾಗಿದ್ದವರು. ಅವರು ಪಟಿಯಾಲ ರಾಜಮನೆತನಕ್ಕೆ ಸೇರಿದವರಾಗಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:47 pm, Mon, 19 September 22

ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು