AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾತಿ ಗಣತಿ: ಹೈಕಮಾಂಡ್ ಮೊರೆ ಹೋಗಲಿದ್ದಾರೆ ಕಾಂಗ್ರೆಸ್ ಲಿಂಗಾಯತ ನಾಯಕರು

ಹೈಕಮಾಂಡ್ ನಾಯಕರೇ ಜಾತಿಗಣತಿ ಬಗ್ಗೆ ಮರುಪರಿಶೀಲನೆಗೆ ಸರ್ಕಾರಕ್ಕೆ ಸೂಚಿಸುವಂತೆ ಒತ್ತಡ ಹಾಕುವುದು ಲಿಂಗಾಯತ ಮುಖಂಡರ ಯೋಜನೆಯಾಗಿದೆ. ಎರಡು ಬಾರಿ ಮುಖಾಮುಖಿಯಾದಾಗಲೂ ವೀರಶೈವ ಮಹಾಸಭಾ ಅಧ್ಯಕ್ಷರಿಗೆ ಸಿಎಂ ಯಾವುದೇ ಭರವಸೆ ನೀಡಿಲ್ಲ. ಇದು ಸಮುದಾಯದ ಮುಖಂಡರ ನಿರಾಸೆಗೆ ಕಾರಣವಾಗಿದೆ.

ಜಾತಿ ಗಣತಿ: ಹೈಕಮಾಂಡ್ ಮೊರೆ ಹೋಗಲಿದ್ದಾರೆ ಕಾಂಗ್ರೆಸ್ ಲಿಂಗಾಯತ ನಾಯಕರು
ಸಾಂದರ್ಭಿಕ ಚಿತ್ರ
ಪ್ರಸನ್ನ ಗಾಂವ್ಕರ್​
| Edited By: |

Updated on: Jan 02, 2024 | 9:02 AM

Share

ಬೆಂಗಳೂರು, ಜನವರಿ 2: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ (Congress Government) ಜಾತಿ ಗಣತಿ (Caste Census) ಕಗ್ಗಂಟು ಮುಂದುವರಿದಿದ್ದು, ಈ ವಿಚಾರವಾಗಿ ಹೈಕಮಾಂಡ್ ಮೊರೆ ಹೋಗಲು ಕಾಂಗ್ರೆಸ್​​ನ ಲಿಂಗಾಯತ (Lingayat) ನಾಯಕರು ತೀರ್ಮಾನಿಸಿದ್ದಾರೆ. ಜಾತಿ ಜನಗಣತಿ ಮರು ಪರಿಶೀಲನೆಗೆ ಹೈಕಮಾಂಡ್ ಮೇಲೆ ಒತ್ತಡ ಹಾಕಲು ಪಕ್ಷದ ಲಿಂಗಾಯತ ನಾಯಕರು ನಿರ್ಧಾರ ಕೈಗೊಂಡಿದ್ದಾರೆ.

ಸದ್ಯ, ಜಾತಿ ಗಣತಿ ವಿಚಾರದಲ್ಲಿ ಲಿಂಗಾಯತ ನಾಯಕರ ಮನವಿಗೆ ಸ್ಪಂದನೆ ಸಿಗುತ್ತಿಲ್ಲ ಎಂಬ ಬೇಸರ ಸಮುದಾಯದ ನಾಯಕರಲ್ಲಿದೆ. ವೀರಶೈವ ಮಹಾಸಭಾ ನಿರ್ಣಯದ ಬಳಿಕವೂ ಸಿಎಂ ಸಿದ್ದರಾಮಯ್ಯ ಜಾತಿ ಗಣತಿ ವಿಚಾರವಾಗಿ ಅವರಿಗೆ ಯಾವುದೇ ಉತ್ತರ ನೀಡಿಲ್ಲ. ಈ ಹಿನ್ನೆಲೆಯಲ್ಲಿ ವೀರಶೈವ ಮಹಾಸಭಾ ನಿರ್ಣಯಗಳೊಂದಿಗೆ ದೆಹಲಿಗೆ ತೆರಳಲು ಲಿಂಗಾಯತ ನಾಯಕರು ಮುಂದಾಗಿದ್ದಾರೆ.

ಹೈಕಮಾಂಡ್ ನಾಯಕರೇ ಜಾತಿಗಣತಿ ಬಗ್ಗೆ ಮರುಪರಿಶೀಲನೆಗೆ ಸರ್ಕಾರಕ್ಕೆ ಸೂಚಿಸುವಂತೆ ಒತ್ತಡ ಹಾಕುವುದು ಲಿಂಗಾಯತ ಮುಖಂಡರ ಯೋಜನೆಯಾಗಿದೆ. ಎರಡು ಬಾರಿ ಮುಖಾಮುಖಿಯಾದಾಗಲೂ ವೀರಶೈವ ಮಹಾಸಭಾ ಅಧ್ಯಕ್ಷರಿಗೆ ಸಿಎಂ ಯಾವುದೇ ಭರವಸೆ ನೀಡಿಲ್ಲ. ಇದು ಸಮುದಾಯದ ಮುಖಂಡರ ನಿರಾಸೆಗೆ ಕಾರಣವಾಗಿದೆ.

ಪ್ರಸ್ತುತ ಜಾತಿ ಗಣತಿ ವರದಿಗೆ ವೀರಶೈವ ಮಹಾಸಭಾ ಮತ್ತು ಒಕ್ಕಲಿಗರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ವೀರಶೈವ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅಂತೂ ಬಹಿರಂಗವಾಗಿಯೇ ಹಲವು ಬಾರಿ ಜಾತಿ ಗಣತಿ ವರದಿ ಅವೈಜ್ಞಾನಿಕ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಾತಿ ಗಣತಿ ವರದಿಯನ್ನು ನಾವು ವಿರೋಧಿಸುತ್ತಿಲ್ಲ. ಆದರೆ ಈಗಿನ ವರದಿ ಅವೈಜ್ಞಾನಿಕವಾಗಿದೆ. ಅದನ್ನು ಸರ್ಕಾರ ಅಂಗೀಕರಿಸಬಾರದು ಎಂದು ಅವರು ಹಲವು ಬಾರಿ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಜಾತಿಗಣತಿ ವರದಿ ಜಾರಿಗೆ ಒತ್ತಾಯಿಸಿ ಶೋಷಿತ ಸಮುದಾಯಗಳ ಸಮಾವೇಶಕ್ಕೆ ಮುಹೂರ್ತ ಫಿಕ್ಸ್, ಸಿಎಂಗೆ ಆಹ್ವಾನ

ಈ ಎಲ್ಲ ಬೆಳವಣಿಗೆಗಳ ಮಧ್ಯೆ ಜಾತಿ ಗಣತಿ ವರದಿ ಜಾರಿಗೆ ಒತ್ತಾಯಿಸಿ ಅಹಿಂದ ವರ್ಗ ಸಿಡಿದೆದ್ದಿದ್ದು ಚಿತ್ರದುರ್ಗದಲ್ಲಿ ಬೃಹತ್ ಸಮಾವೇಶ ಮಾಡಲು ತೀರ್ಮಾನಿಸಿದೆ. ಜನವರಿ 28 ರಂದು ಸಮಾವೇಶಕ್ಕೆ ದಿನ ನಿಗದಿಪಡಿಸಲಾಗಿದೆ. ಈ ಸಮಾವೇಶಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಅಧಿಕೃತ ಆಹ್ವಾನ ನೀಡಲಾಗಿದೆ. ಈ ಎಲ್ಲ ಬೆಳವಣಿಗೆಗಳು ಕುತೂಹಲ ಮೂಡಿಸಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರಸನ್ನ ಗಾಂವ್ಕರ್​
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ