ಕಾವೇರಿ ಪ್ರತಿಭಟನೆ, ಸೋತು ಸುಣ್ಣವಾಗಿರುವ ಬಿಜೆಪಿಯಿಂದ ಭಾವನಾತ್ಮಕ ರಾಜಕೀಯ; ಎಂಬಿ ಪಾಟೀಲ್ ಕಿಡಿ

MB Patil reaction to BJP Protest; ಸೋಲಿನಿಂದ ಹತಾಶರಾಗಿ ಬಿಜೆಪಿಯವರು ಕಾವೇರಿ ವಿಚಾರದಲ್ಲಿ ರಾಜಕೀಯ ಮಾಡಲು ಬಯಸುತ್ತಿದ್ದಾರೆ. ಭಾವನಾತ್ಮಕ ಸಂಬಂಧಗಳನ್ನು ಕೆರಳಿಸುವಂತಹ ಕೆಲಸ ಮಾಡುತ್ತಿದ್ದಾರೆ. ಅವರ ಕೆಲಸ ಅದೇ ಅಲ್ವಾ? ಹಿಜಾಬ್, ಹಲಾಲ್, ಧರ್ಮ ಜಾತಿ, ಭಾವನಾತ್ಮಕ ವಿಷಯಗಳನ್ನು ಎತ್ತುವುದು. ಆದರೆ ಇದರಿಂದ ಪ್ರಯೋಜನವಾಗಲ್ಲ ಎಂದು ಸಚಿವ ಎಂಬಿ ಪಾಟೀಲ್ ಗದಗದಲ್ಲಿ ಹೇಳಿದ್ದಾರೆ.

ಕಾವೇರಿ ಪ್ರತಿಭಟನೆ, ಸೋತು ಸುಣ್ಣವಾಗಿರುವ ಬಿಜೆಪಿಯಿಂದ ಭಾವನಾತ್ಮಕ ರಾಜಕೀಯ; ಎಂಬಿ ಪಾಟೀಲ್ ಕಿಡಿ
ಎಂಬಿ ಪಾಟೀಲ್
Follow us
| Updated By: ಗಣಪತಿ ಶರ್ಮ

Updated on:Aug 23, 2023 | 2:53 PM

ಗದಗ, ಆಗಸ್ಟ್ 23: ಕಾವೇರಿ ನೀರು (Cauvery Water)ತಮಿಳುನಾಡಿಗೆ ಬಿಡುವ ವಿಚಾರವಾಗಿ ಪ್ರತಿಭಟನೆ ಮಾಡುತ್ತಿರುವ ಬಿಜೆಪಿ ವಿರುದ್ಧ ಸಚಿವ ಎಂಬಿ ಪಾಟೀಲ್ (MB Patil) ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗದಗದಲ್ಲಿ (Gadag) ಮಾತನಾಡಿದ ಅವರು, ಬಿಜೆಪಿಯವರು ಸೋತು ಸುಣ್ಣವಾಗಿದ್ದಾರೆ. ನೆಲ, ಜಲ, ಭಾಷೆ ವಿಚಾರದಲ್ಲಿ ರಾಜಕೀಯ ಮಾಡಬಾರದು. ಬಿಜೆಪಿಯವರಿಗೆ ವಿರೋಧ ಪಕ್ಷದ ನಾಯಕನನ್ನು ನೇಮಕ ಮಾಡಲು ಸಾಧ್ಯವಾಗಿಲ್ಲ. ವಿರೋಧ ಪಕ್ಷದ ನಾಯಕ ಇಲ್ಲದೆ ಅಧಿವೇಶನ ನಡೆದಿದೆ. ಅವರ ಪಕ್ಷದಲ್ಲಿ ಹತಾಶರಾಗಿ ಪಕ್ಷವನ್ನು ಬಿಡುವ ಹಂತದಲ್ಲಿ ಬಹಳಷ್ಟು ಜನ ಇದ್ದಾರೆ ಎಂದು ಹೇಳಿದರು.

ಸೋಲಿನಿಂದ ಹತಾಶರಾಗಿ ಬಿಜೆಪಿಯವರು ಕಾವೇರಿ ವಿಚಾರದಲ್ಲಿ ರಾಜಕೀಯ ಮಾಡಲು ಬಯಸುತ್ತಿದ್ದಾರೆ. ಭಾವನಾತ್ಮಕ ಸಂಬಂಧಗಳನ್ನು ಕೆರಳಿಸುವಂತಹ ಕೆಲಸ ಮಾಡುತ್ತಿದ್ದಾರೆ. ಅವರ ಕೆಲಸ ಅದೇ ಅಲ್ವಾ? ಹಿಜಾಬ್, ಹಲಾಲ್, ಧರ್ಮ ಜಾತಿ, ಭಾವನಾತ್ಮಕ ವಿಷಯಗಳನ್ನು ಎತ್ತುವುದು. ಆ ಮೂಲಕ ರಾಜಕೀಯ ಮಾಡುವುದು. ಆದರೆ ಅವುಗಳಿಂದ ಏನೂ ಪ್ರಯೋಜನವಾಗೋದಿಲ್ಲ ಎಂದು ಎಂಬಿ ಪಾಟೀಲ್ ಹೇಳಿದರು.

ಚಂದ್ರಯಾನ ಭಾರತಕ್ಕೆ ಹೆಮ್ಮೆಯ ವಿಷಯ; ಪಾಟೀಲ್

ಚಂದ್ರಯಾನ-3 ನಮ್ಮ ದೇಶಕ್ಕೆ ಹೆಮ್ಮೆಯ ವಿಷಯ. ಮುಂದುವರೆದ ರಾಷ್ಟ್ರಗಳು ಚಂದ್ರಯಾನದಲ್ಲಿ ಭಾಗಿಯಾಗಿವೆ. ಈ ನಿಟ್ಟಿನಲ್ಲಿ ಶ್ರಮ ವಹಿಸಿದ ನಮ್ಮ ವಿಜ್ಞಾನಿಗಳು, ಆಯಾ ಕಾಲಕಾಲದ ಪ್ರಧಾನ ಮಂತ್ರಿಗಳನ್ನೂ ಅಭಿನಂದಿಸಬೇಕು. ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿಜ್ಞಾನ ಹಾಗೂ ತಂತ್ರಜ್ಞಾನದಲ್ಲಿ ಭಾರತ ಹಿಂದೆ ಉಳಿದಿಲ್ಲ. ನಾವೂ ಪ್ರಭಲವಾಗಿದ್ದೇವೆ ಅನ್ನೋ ಸಂದೇಶವನ್ನು ಜಗತ್ತಿಗೆ ಸಾರಿದ್ದೇವೆ‌. ಇದು 130 ಕೋಟಿ ಜನರು ಹೆಮ್ಮೆ ಪಡುವ ಸಂಗತಿ. ಚಂದ್ರಯಾನದ ಸಫಲತೆಗೆ ಶ್ರಮ ವಹಿಸಿದ ವಿಜ್ಞಾನಿಗಳಿಗೆ ಅಭಿನಂದಿಸುತ್ತೇವೆ ಎಂದು ಎಂಬಿ ಪಾಟೀಲ್ ಹೇಳಿದರು.

ಇದನ್ನೂ ಓದಿ: ಕರ್ನಾಟಕದ ನೀರಾವರಿ ಸಮಸ್ಯೆ: ಕೇಂದ್ರದ ಬಳಿಗೆ ಸರ್ವಪಕ್ಷ ನಿಯೋಗ ಕರೆದೊಯ್ಯಲು ನಿರ್ಧಾರ- ಸಿದ್ದರಾಮಯ್ಯ

ಈ ಮಧ್ಯೆ, ಕಾವೇರಿ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ವಪಕ್ಷ ಸಭೆ ನಡೆಸಿದ್ದಾರೆ. ಜತೆಗೆ, ರಾಜ್ಯದ ದೃಷ್ಟಿಯಿಂದ ಮಹತ್ವದ್ದಾದ ಮಹದಾಯಿ ಯೋಜನೆ ಆರಂಭಿಸುವ ಬಗ್ಗೆ ಹೋರಾಟಗಾರರಿಗೆ ಭರವಸೆ ನೀಡಿದ್ದಾರೆ. ಮಹದಾಯಿ ಯೋಜನೆಯ ಡಿಪಿಆರ್ ಕ್ಲಿಯರೆನ್ಸ್​ಗಾಗಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡುತ್ತೇವೆ ಎಂದು ಅವರು ಹೇಳಿದ್ದಾರೆ. ಕಾವೇರಿ ಜಲ ವಿವಾದದ ಬಗ್ಗೆ ಸುಪ್ರೀಂಕೋರ್ಟ್​​ನಲ್ಲಿ ಕರ್ನಾಟಕದ ಪರವಾಗಿ ಸಮರ್ಥವಾಗಿ ವಾದ ಮಂಡಿಸಲು ಸಲಹೆ ನೀಡಿದ್ದೇವೆ. ತಮಿಳುನಾಡು ಅರ್ಜಿ ವಜಾ ಆಗುವಂತೆ ವಾದಮಾಡಿ ಎಂದಿದ್ದೇವೆ ಎಂದೂ ಸಿಎಂ ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 2:52 pm, Wed, 23 August 23

Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು