Cauvery Dispute: ವಿಪಕ್ಷದವರು ಹೇಳಿದ ಪ್ರಕಾರ ನೀರು ನಿಲ್ಲಿಸಲು ಆಗುವುದಿಲ್ಲ: ಡಿಕೆ ಶಿವಕುಮಾರ್

ರೈತರ ಪ್ರತಿಭಟನೆಯ ನಡುವೆಯೂ ಕರ್ನಾಟಕ ಕಾಂಗ್ರೆಸ್ ಸರ್ಕಾರವು ತಮಿಳುನಾಡಿಗೆ ಹರಿಸುತ್ತಿರುವ ನೀರಿನ ಪ್ರಮಾಣವನ್ನು ಹೆಚ್ಚಿಸಿದೆ. ಈ ಬಗ್ಗೆ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಅಲ್ಲದೆ, ಸರ್ಕಾರದ ವಿರುದ್ಧ ವಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಟೀಕೆಗಳನ್ನು ನಡೆಸುತ್ತಿದೆ. ಆದರೆ, ವಿಪಕ್ಷದವರು ಹೇಳಿದ ಪ್ರಕಾರ ನೀರು ನಿಲ್ಲಿಸಲು ಆಗುವುದಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

Cauvery Dispute: ವಿಪಕ್ಷದವರು ಹೇಳಿದ ಪ್ರಕಾರ ನೀರು ನಿಲ್ಲಿಸಲು ಆಗುವುದಿಲ್ಲ: ಡಿಕೆ ಶಿವಕುಮಾರ್
ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್
Image Credit source: PTI
Edited By: Rakesh Nayak Manchi

Updated on: Sep 01, 2023 | 5:58 PM

ಬೆಂಗಳೂರು, ಸೆ.1: ವಿಪಕ್ಷದವರು ಹೇಳಿದ ಪ್ರಕಾರ ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಲು ಆಗುವುದಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (D.K.Shivakumar) ಹೇಳಿದ್ದಾರೆ. ಕಾನೂನು ತಜ್ಞರ ಜೊತೆಗೆ ನಾನು ಮಾತನಾಡಿದ್ದೇನೆ. ಈ ಬಾರಿ ಸರಿಯಾಗಿ ಮಳೆ ಇಲ್ಲ. ಕೇವಲ ಬೆಂಗಳೂರಿಗೆ ಮಳೆ ಬಂದಿದೆ. ಕಾವೇರಿ (Cauvery) ಬೇಸಿಸ್​ಗೆ ಮಳೆ ಬಂದಿಲ್ಲ. ಹೀಗಾಗಿ ವಾಸ್ತವಾಂಶದ ಬಗ್ಗೆ ಎರಡೂ ಕಮಿಟಿಗಳ ಮುಂದೆ ನಮ್ಮ ವಾದ ಮಂಡಿಸಲು ತೀರ್ಮಾನ ಮಾಡಿದ್ದೇವೆ ಎಂದರು.

ಕಾವೇರಿ ವಿಚಾರ ಸಂಬಂಧಿಸಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಸಭೆ ನಡೆದಾಗ 24 ಸಾವಿರ ಕ್ಯುಸೆಕ್ ನೀರು ಬಿಡುಗಡೆ ಮಾಡಬೇಕು ಅಂತ ಒತ್ತಾಯ ಮಾಡಿತ್ತು. ಅಷ್ಟು ನೀರು ಬಿಡಲು ಸಾಧ್ಯವಿಲ್ಲ ಅಂತ ವಾದ ಮಾಡಿದೆವು. ಹೀಗಾಗಿ 5 ಸಾವಿರ ಕ್ಯುಸೆಕ್ ಬಿಡಬೇಕು ಅಂಯ ಆದೇಶ ಮಾಡಿದರು. ನಾವು 3 ಸಾವಿರ ಕ್ಯುಸೆಕ್ ಬಿಡುತ್ತೇವೆ ಅಂತ ಹೇಳಿದ್ದಾಗಿ ತಿಳಿಸಿದರು.

ಈಗ ನಾವು ಮತ್ತೆ ಕರ್ನಾಟಕದ ಪರಿಸ್ಥಿತಿ ಸುಪ್ರಿಂ ಕೋರ್ಟ್​​​ಗೆ ಮನವರಿಕೆ ಮಾಡಿದ್ದೇವೆ. ನೀರು ಬಿಡಬೇಕಾಗಿದ್ದನ್ನು ಹಿಂದೆ ಬಿಟ್ಟಿದ್ದೇವೆ. ನಮ್ಮ ರೈತರನ್ನು ನಾವು ಕಾಪಾಡಬೇಕು ಎಂದು ಡಿಕೆ ಶಿವಕುಮಾರ್ ಹೇಳಿದರು.

ಇದನ್ನೂ ಓದಿ: ಕಾವೇರಿ ನೀರು ಹಂಚಿಕೆ ವಿವಾದ; ವಿಚಾರಣೆಯನ್ನು ಸೆಪ್ಟೆಂಬರ್ 6ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್​

ತಮಿಳುನಾಡಿನವರು ಬೆಳೆಗಳನ್ನು ನಿಯಂತ್ರಿಸುತ್ತಿಲ್ಲ. 93 ಟಿಎಂಸಿ ನೀರು ಈ ಬಾರಿ ತಮಿಳುನಾಡು ಬಳಸಿಕೊಂಡಿದೆ. ಹೆಚ್ಚೆಚ್ಚು ನೀರನ್ನು ತಮಿಳುನಾಡು ಬಳಸಿಕೊಂಡಿದೆ. ಸಂಕಷ್ಟ ಸಮಯದಲ್ಲಿ ಎಷ್ಟು ಕಡಿಮೆ ಬಳಸಿಕೊಳ್ಳಬೇಕಿತ್ತೋ ಅದಕ್ಕಿಂತ ಹೆಚ್ಚು ಬಳಸಿಕೊಂಡಿದ್ದಾರೆ. ಈ ಅಂಶವನ್ನು ನಾವು ಸುಪ್ರಿಂಗೆ ಮನವರಿಕೆ ಮಾಡಿದ್ದೇವೆ. ವಾಸ್ತವಾಂಶ ಬಂದು ನೋಡಿ ಅಂತ ನಾವು ಮನವಿ ಮಾಡಿಕೊಂಡಿದ್ದೇವೆ ಎಂದು ತಿಳಿಸಿದರು.

ತೂಕಕ್ಕೆ ತಕ್ಕಂತೆ ಬಿಎಲ್ ಸಂತೋಷ್ ಮಾತನಾಡಲಿ: ಡಿಕೆ ಶಿವಕುಮಾರ್

ಕಾವೇರಿ ವಿಚಾರದಲ್ಲಿ ಯಾಕೆ ನಾವು ರಾಜಕೀಯ ತರಬೇಕು? ಬಿಜೆಪಿ ಜೆಡಿಎಸ್ ರಾಜಕೀಯ ನಿಲುವಿಗೆ ನಾನು ಯಾಕೆ ಮಧ್ಯಪ್ರವೇಶ ಮಾಡಲಿ? ಎಂದು ಡಿಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ. ಬಿಎಲ್ ಸಂತೋಷ್ ರಾಷ್ಟ್ರೀಯ ನಾಯಕರು ಅಂತ ಭಾವಿಸಿದ್ದೇನೆ. ಸಿಟಿ ರವಿ, ಕೆಎಸ್ ಈಶ್ವರಪ್ಪ ಅವರಂತೆ ಮಾತನಾಡಿದರೆ ನಾನು ಏನೂ ಮಾಡಲು ಆಗುವುದಿಲ್ಲ. ಅವರಂತೆ ಸಂತೋಷ್ ಮಾತನಾಡುವುದು ಬೇಡ. ಸ್ಟೇಟಸ್ ಹಾಳಾಗುವುದು ಬೇಡ. ಅವರ ತೂಕಕ್ಕೆ ತಕ್ಕಂತೆ ಮಾತನಾಡಲಿ ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
Follow Us