ಕಾವೇರಿ ಜಲ ವಿವಾದ: ಮೇಕೆದಾಟು ಯೋಜನೆಗೆ ಲೋಕಸಭೆಯಲ್ಲಿ ಡಿಎಂಕೆ ತೀವ್ರ ವಿರೋಧ; ಜುಲೈ 22ರಂದು CWMA ಮೀಟಿಂಗ್​

Cauvery Water Dispute: ಮೇಕೆದಾಟು ಯೋಜನೆಗೆ ಲೋಕಸಭೆಯಲ್ಲಿ ಡಿಎಂಕೆ ತೀವ್ರ ವಿರೋಧ ವ್ಯಕ್ತಪಡಿಸಿದೆ. ಈ ವಿಚಾರವಾಗಿ ನಿಲುವಳಿ ಸೂಚನೆಗೆ ಅವಕಾಶ ಡಿಎಂಕೆ ಕೋರಿದ್ದು, ತಕ್ಷಣವೇ ಚರ್ಚೆ ನಡೆಸಬೇಕು ಎಂದು ಪಟ್ಟು ಹಿಡಿದ ಪ್ರಸಂಗ ನಡೆದಿದೆ. ಮತ್ತೊಂದೆಡೆ ತಮಿಳುನಾಡಿನ ಒತ್ತಾಯದ ಮೇರೆಗೆ ಜುಲೈ 22 ರಂದು ದೆಹಲಿಯಲ್ಲಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (CWMA) ಮಹತ್ವದ ಸಭೆ ನಿಗದಿಯಾಗಿದೆ.

ಕಾವೇರಿ ಜಲ ವಿವಾದ: ಮೇಕೆದಾಟು ಯೋಜನೆಗೆ ಲೋಕಸಭೆಯಲ್ಲಿ ಡಿಎಂಕೆ ತೀವ್ರ ವಿರೋಧ; ಜುಲೈ 22ರಂದು CWMA ಮೀಟಿಂಗ್​
ಮೇಕೆದಾಟು ಯೋಜನೆಗೆ ಲೋಕಸಭೆಯಲ್ಲಿ ಡಿಎಂಕೆ ತೀವ್ರ ವಿರೋಧ
Edited By:

Updated on: Jul 20, 2026 | 7:44 PM

ದೆಹಲಿ, ಜುಲೈ 20: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ನೆರೆ ರಾಜ್ಯ ತಮಿಳುನಾಡು ಮತ್ತೆ ಕ್ಯಾತೆ ತೆಗೆದಿದೆ. ಕರ್ನಾಟಕದ ಮೇಕೆದಾಟು ಯೋಜನೆಗೆ ಲೋಕಸಭೆಯಲ್ಲಿ ಡಿಎಂಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಕಲಾಪ ಆರಂಭವಾಗುತ್ತಿದ್ದಂತೆಯೇ ವಿಷಯ ಪ್ರಸ್ತಾಪ ಮಾಡಿದೆ. ಮೇಕೆದಾಟು ವಿಚಾರವಾಗಿ ನಿಲುವಳಿ ಸೂಚನೆಗೆ ಅವಕಾಶ ಡಿಎಂಕೆ ಕೋರಿದ್ದು, ತಕ್ಷಣವೇ ಚರ್ಚೆ ನಡೆಸಬೇಕು ಎಂದು ಪಟ್ಟು ಹಿಡಿದ ಪ್ರಸಂಗ ನಡೆದಿದೆ. ಡಿಎಂಕೆ ಸಂಸದೀಯ ಮಂಡಳಿ ನಾಯಕ ಟಿ.ಆರ್.ಬಾಲು ಈ ಬಗ್ಗೆ ಒತ್ತಾಯಿಸಿದ್ದು, ಪ್ರಸ್ತಾವನೆಗೆ ಸ್ಪೀಕರ್ ಓಂ ಬಿರ್ಲಾ ನಿರಾಕರಿಸಿದ ಕಾರಣ ಲೋಕಸಭೆ ಸದನದ ಬಾವಿಗಿಳಿದು ಡಿಎಂಕೆ‌ ಸಂಸದರು ಪ್ರತಿಭಟನೆ ನಡೆಸಿದ್ದಾರೆ.

ಜುಲೈ 22ರಂದು ದೆಹಲಿಯಲ್ಲಿ CWMA ಮೀಟಿಂಗ್​

ಬರದ ನಡುವೆಯೂ ನೀರು ಬಿಡುವಂತೆ ಕಾವೇರಿ ನೀರು ಹರಿಸುವಂತೆ ತಮಿಳುನಾಡು ಸರ್ಕಾರ ಪಟ್ಟು ಹಿನ್ನೆಲೆ ಬುಧವಾರ ದೆಹಲಿಯಲ್ಲಿ ಉನ್ನತ ಮಟ್ಟದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆ ನಿಗದಿಯಾಗಿದೆ. ಕಳೆದ ವಾರವಷ್ಟೇ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆ ನಡೆದಿತ್ತು. ಆದರೆ ಈ ವೇಳೆ ಕರ್ನಾಟಕಕ್ಕೆ ನೀರು ಹರಿಸುವ ಬಗ್ಗೆ ಯಾವುದೇ ಸೂಚನೆಯನ್ನು CWRC ನೀಡಿರಲಿಲ್ಲ. ಹೀಗಾಗಿ CWRC ನಿರ್ಧಾರಕ್ಕೆ ತಮಿಳುನಾಡು ಅಸಮಾಧಾನ ವ್ಯಕ್ತಪಡಿಸಿದ್ದು, ಶೀಘ್ರ CWMA ಸಭೆ ಕರೆಯುವಂತೆ ಮನವಿ ಮಾಡಿತ್ತು. ಹೀಗಾಗಿ ಜುಲೈ 22ರಂದು ದೆಹಲಿಯಲ್ಲಿ CWMA ಮೀಟಿಂಗ್​ ನಡೆಯಲಿದೆ. ಕೇಂದ್ರ ಜಲ ಆಯೋಗದ ಅಧ್ಯಕ್ಷರ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಸಿಡಬ್ಲ್ಯುಆರ್​ಸಿಗಿಂತ ಉನ್ನತ ಅಧಿಕಾರವನ್ನು CWMA ಹೊಂದಿದೆ ಎನ್ನುವುದಿಲ್ಲಿ ಗಮನಾರ್ಹ.

ಇದನ್ನೂ ಓದಿ: ತಮ್ಮ ಪಾಲಿನ ನೀರು ಬಿಡುವಂತೆ ತಮಿಳುನಾಡು ಪಟ್ಟು; ಸಾಧ್ಯವೇ ಇಲ್ಲ ಎಂದ ಕರ್ನಾಟಕ

CWRC ಸಭೆಯಲ್ಲಿ ಕರ್ನಾಟಕದ ವಾದ ಏನಾಗಿತ್ತು?

ಕೆಆರ್​ಎಸ್​ನಿಂದ ತಮಿಳುನಾಡಿಗೆ ನೀರು ಹರಿಸಲು ಸಾಧ್ಯವಿಲ್ಲವೆಂದು CWRC ಸಭೆಯಲ್ಲಿ ಕರ್ನಾಟಕ ವಾದಿಸಿತ್ತು. ಕಾವೇರಿ ಕೊಳ್ಳದಲ್ಲಿ ಮಳೆ ಅಭಾವ ಆಗಿದೆ. ಜೂನ್ ತಿಂಗಳಲ್ಲಿ ಜಲಾಶಯಗಳಿಗೆ ಶೂನ್ಯ ಒಳಹರಿವಿದ್ದು, ಜುಲೈ ತಿಂಗಳಲ್ಲಿ ಹಲವೆಡೆ ಸ್ವಲ್ಪ ಪ್ರಮಾಣದಲ್ಲಿ ಮಳೆಯಾಗಿದೆ. ಇದರಿಂದ ಬರಿದಾದ ಡ್ಯಾಂಗಳಿಗೆ ಸ್ವಲ್ಪ ಪ್ರಮಾಣದಲ್ಲಿ ನೀರು ಸಂಗ್ರಹವಾಗಿದೆ. ಈ ನಡುವೆ ಮಾನ್ಸೂನ್ ಮತ್ತೆ ಚುರುಕು ಪಡೆಯುವ ಯಾವ ಮುನ್ಸೂಚನೆ ಇಲ್ಲ. ಹೀಗಾಗಿ ಸದ್ಯ ಸಂಗ್ರಹವಿರುವ ನೀರನ್ನು ಮುಂದಿನ ಮಾನ್ಸೂನ್​ವರೆಗೂ ಕುಡಿಯಲು ಬಳಸಿಕೊಳ್ಳಬೇಕು. ಕರ್ನಾಟಕದಲ್ಲಿ ರೈತರು ಕೃಷಿಗೆ ನೀರು ಕೇಳುತ್ತಿದ್ದಾರೆ, ಆದರೆ ನಾವು ಬಿಡುತ್ತಿಲ್ಲ. ರಾಜ್ಯದಲ್ಲಿ ಸಂಪೂರ್ಣ ಬರ ಆವರಿಸಿದೆ. ಹೀಗಾಗಿ ತಮಿಳುನಾಡಿಗೆ ನೀರು ಬಿಡಲು ಸಾಧ್ಯವೇ ಇಲ್ಲ. ನಮಗೆ ಇಲ್ಲಿ ಕುಡಿಯಲೂ ನೀರಿಲ್ಲ ಎಂದು ಕರ್ನಾಟಕ ತಿಳಿಸಿತ್ತು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 1:57 pm, Mon, 20 July 26

ಹರೀಶ್ ಜಿ.ಆರ್​.

ಹರೀಶ್ ಜಿ.ಆರ್ ಮೂಲತಃ ಚಿಕ್ಕಮಗಳೂರಿನವರಾಗಿದ್ದು, ಪೌಢ ಶಿಕ್ಷಣವನ್ನು ಉಜಿರೆಯ ಎಸ್ ಡಿಎಂ ಸಂಸ್ಥೆಯಲ್ಲಿ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ದಲ್ಲಿ ಬಿ.ಎ ಪದವಿಯನ್ನು, ಮಾನಸ ಗಂಗೋತ್ರಿಯ EMMRC ಸಂಸ್ಥೆಯ ಎಲೆಕ್ಟ್ರಾನಿಕ್ ಮೀಡಿಯಾ ವಿಷಯದಲ್ಲಿ ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸಧ್ಯ ಪತ್ರಿಕೋದ್ಯಮದಲ್ಲಿ 14 ವರ್ಷದ ಅನುಭವ ಹೊಂದಿರುವ ಇವರು, ದೆಹಲಿಯಲ್ಲಿಯೇ 10 ವರ್ಷಗಳ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ, ರಾಜಕೀಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ಸುಪ್ರೀಂಕೋರ್ಟ್ ವರದಿಗಾರಿಕೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಅಯೋಧ್ಯೆ ರಾಮಮಂದಿರದ ತೀರ್ಪು ನಿಂದ ಹಿಡಿದು ಮಂದಿರ ಉದ್ಘಾಟನೆವರೆಗೂ ವರದಿ ಮಾಡಿದ ಅನುಭವ ಹೊಂದಿದ್ದಾರೆ. ಪುಲ್ವಾಮ ಉಗ್ರರ ದಾಳಿ, ಪಹಲ್ಗಾಂ ಉಗ್ರರ ದಾಳಿ, ಆದಾದ ನಂತರದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೌಂಡ್ ರಿಪೋರ್ಟ್ ಮಾಡಿರುವ ಅನುಭವ ಹೊಂದಿದ್ದಾರೆ.. ಉತ್ತರಖಂಡದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಗಳನ್ನು ಗ್ರೌಂಡ್ ರಿಪೋರ್ಟ್ ಮಾಡಿದ್ದಾರೆ. 2019‌ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ವಿವಿಧ ರಾಜ್ಯಗಳನ್ನು ಸುತ್ತಿ ಜನರ ರಾಜಕೀಯ ನಾಡಿಮಿಡಿತದ ವರದಿ ಮಾಡಿದ್ದಾರೆ.. ಸಧ್ಯ ಇವರು ಬೆಂಗಳೂರಿನಲ್ಲಿ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

Read More
Loading...
Unable to load recommendations.
Follow Us