ದಿಢೀರ್ ಬೆಂಗಳೂರಿನತ್ತ ತೆರಳಿದ ಪ್ರಲ್ಹಾದ್ ಜೋಶಿ; ಕುತೂಹಲ ಮೂಡಿಸಿದ ಜೋಶಿ ನಡೆ

TV9 Digital Desk

| Edited By: shivaprasad.hs

Updated on:Jul 25, 2021 | 12:22 PM

Pralhad Joshi: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹುಬ್ಬಳ್ಳಿಯಿಂದ ದಿಢೀರ್ ಆಗಿ ಬೆಂಗಳೂರಿಗೆ ಹೊರಟಿರುವುದು ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ. ಮುಖ್ಯಮಂತ್ರಿ ರೇಸ್​ನಲ್ಲಿ ಅವರ ಹೆಸರು ಪ್ರಮುಖವಾಗಿ ಕೇಳಿಬರುತ್ತಿರುವುದರಿಂದ ಈ ಪ್ರಯಾಣ ಮಹತ್ವ ಪಡೆದುಕೊಂಡಿದೆ. ಆದರೆ ಪ್ರಲ್ಹಾದ್ ಜೋಶಿ ರಾಜ್ಯ ರಾಜಕೀಯದ ಕುರಿತು ಮಾತನಾಡಲು ನಿರಾಕರಿಸದ್ದಾರೆ.

ದಿಢೀರ್ ಬೆಂಗಳೂರಿನತ್ತ ತೆರಳಿದ ಪ್ರಲ್ಹಾದ್ ಜೋಶಿ; ಕುತೂಹಲ ಮೂಡಿಸಿದ ಜೋಶಿ ನಡೆ
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (ಫೈಲ್ ಚಿತ್ರ)
Follow us

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹುಬ್ಬಳ್ಳಿಯಿಂದ ಬೆಂಗಳೂರಿನತ್ತ ದಿಡೀರ್ ಪ್ರಯಾಣ ಬೆಳೆಸಿದ್ದಾರೆ. ಸಚಿವರ ಈ ನಡೆ ರಾಜ್ಯ ರಾಜಕೀಯದಲ್ಲಿ ಕುತೂಹಲ ಮೂಡಿಸಿದ್ದು, ಸಂಚಲನ ಸೃಷ್ಟಿಸಿದೆ. ಕೇಂದ್ರ ಗಣಿ, ಕಲ್ಲಿದ್ದಲು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾಗಿರುವ ಪ್ರಲ್ಹಾದ್ ಜೋಶಿ ಅವರ ಹೆಸರು ಮುಖ್ಯಮಂತ್ರಿ ರೇಸ್​ನಲ್ಲಿ ಪ್ರಮುಖವಾಗಿ ಕೇಳಿಬರುತ್ತಿದೆ. ಈ ಹಿನ್ನೆಲೆಯಲ್ಲಿ ಅವರು ಹುಬ್ಬಳ್ಳಿಯ ತಮ್ಮ ಮನೆಯಿಂದ ನೇರವಾಗಿ ರಾಜ್ಯ ರಾಜಧಾನಿಯತ್ತ ಹೊರಟಿರುವುದು ಮಹತ್ವ ಪಡೆದುಕೊಂಡಿದೆ.

ಬೆಂಗಳೂರಿಗೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿರುವ ಪ್ರಲ್ಹಾದ್ ಜೋಶಿ ಬೆಂಗಳೂರಿಗೆ ತೆರಳುತ್ತಿರುವ ಕುರಿತು ಹೆಚ್ಚಿನ ಮಾಹಿತಿಯನ್ನು ಬಿಟ್ಟುಕೊಟ್ಟಿಲ್ಲ. ಅಲ್ಲದೇ ರಾಜ್ಯ ರಾಜಕೀಯದ ಕುರಿತು ಮಾತನಾಡಲು ನಿರಾಕರಿಸಿದ್ದಾರೆ. ಮಳೆಯಿಂದ ಉತ್ತರ ಕರ್ನಾಟಕದಲ್ಲಿ ಭಾರಿ ಹಾನಿಯಾಗಿದೆ. ಧಾರವಾಡ ಜಿಲ್ಲೆಯಲ್ಲಿ ಹಾನಿ ಬಗ್ಗೆ ಪರಿಶೀಲನೆ ಮಾಡಿದ್ದೇನೆ. ಗೃಹ ಸಚಿವರಿಂದ ಮಳೆ ಹಾನಿ ಬಗ್ಗೆ ಮಾಹಿತಿ ಪಡೆದಿದ್ದೇನೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ. ಮಳೆ ಹಾನಿಯ ಎಲ್ಲಾ ಮಾಹಿತಿಯನ್ನು ಕೇಂದ್ರದ ಗಮನಕ್ಕೆ ತರಲಾಗುವುದು ಎಂದು ಸ್ಪಷ್ಟಪಡಿಸಿರುವ ಅವರು, ರಾಜ್ಯಕ್ಕೆ ಹೆಚ್ಚಿನ ನೆರವು ದೊರಕಿಸಿಕೊಡಲು ಪ್ರಯತ್ನಿಸುವುದಾಗಿ ತಿಳಿಸಿದ್ದಾರೆ.

ಪ್ರಲ್ಹಾದ್ ಜೋಶಿಯವರು ಹುಬ್ಬಳ್ಳಿಯ ಹೆಬಸೂರು ಭವನದಲ್ಲಿ ಆರ್.ಎಸ್.ಎಸ್ ಆಯೋಜಿಸಿದ್ದ ಗುರು ಪೂರ್ಣಿಮ ಕಾರ್ಯಕ್ರಮದಲ್ಲಿ ಭಾಗಿಯಾಗಿ ನಂತರ ನೇರವಾಗಿ ಬೆಂಗಳೂರಿಗೆ ಪ್ರಯಾಣ ಬೆಳಸಲಿದ್ದಾರೆ. ಅಲ್ಲಿಂದ ದೆಹಲಿಗೆ ಹೋಗುವ ಸಾಧ್ಯತೆಯೂ ಇದೆ ಎನ್ನಲಾಗಿದೆ.

ಇದನ್ನೂ ಓದಿ: ‘ಬಿಜೆಪಿಯೆಂದರೆ ಬ್ಯುಸಿನೆಸ್ ಜನತಾ ಪಾರ್ಟಿ’: ಮಾಜಿ ಶಾಸಕ ಮಧು ಬಂಗಾರಪ್ಪ ಆರೋಪ

ಇದನ್ನೂ ಓದಿ: ದಲಿತ ಮುಖ್ಯಮಂತ್ರಿ ಬಗ್ಗೆ ನಿರ್ಧರಿಸುವುದು ನಾನಲ್ಲ, ಹೈಕಮಾಂಡ್: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಇದನ್ನೂ ಓದಿ: ಬ್ರಾಹ್ಮಣ ಮುಖ್ಯಮಂತ್ರಿ, ಲಿಂಗಾಯತ, ಒಕ್ಕಲಿಗ, ವಾಲ್ಮೀಕಿ, ದಲಿತ ಸಮುದಾಯದಿಂದ 4 ಉಪಮುಖ್ಯಮಂತ್ರಿ; ಏನಿದು ಲೆಕ್ಕಾಚಾರ?

(Central Minister Pralhad Joshi will visit to Bengaluru gets huge attention due to change of CM issue in Karnataka)

ತಾಜಾ ಸುದ್ದಿ

Related Stories

Click on your DTH Provider to Add TV9 Kannada