ಮಾಜಿ ಕೇಂದ್ರ ಸಚಿವ ಸದಾನಂದ ಗೌಡ ತಮ್ಮ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದ ವಿಡಿಯೊವೊಂದರ ಕುರಿತು ಸ್ಪಷ್ಟನೆ ನೀಡಿ ಟ್ವೀಟ್ ಮಾಡಿದ್ದಾರೆ. ವಿಡಿಯೊದಲ್ಲಿ ಇರುವುದು ತಾವಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
‘ನನ್ನನ್ನು ಹೋಲುವಂತೆ ಮಾರ್ಫ್ ಮಾಡಿದ ಅಥವಾ ತಿರುಚಿದ ವಿಡಿಯೊ ದೃಶ್ಯವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಆ ವಿಡಿಯೊದಲ್ಲಿ ಇರುವುದು ನಾನಲ್ಲ. ನನ್ನ ವಿರೋಧಿಗಳು ನಿಷ್ಪಕ್ಷಪಾತ ವ್ಯಕ್ತಿತ್ವವನ್ನು ಹಾಳುಮಾಡಲು ಈ ವಿಡಿಯೊ ನಿರ್ಮಿಸಿದ್ದಾರೆ ಎಂದು ಹಿರಿಯ ಬಿಜೆಪಿ ಮುಖಂಡ, ಮಾಜಿ ಕೇಂದ್ರ ಸಚಿವ ಸದಾನಂದ ಗೌಡ ಸ್ಪಷ್ಟನೆ ನೀಡಿದ್ದಾರೆ.
ನಾನು ಈಗಾಗಲೇ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದೇನೆ. ನನಗೆ ನಂಬಿಕೆ ಇದೆ, ಅಪರಾಧಿಗಳನ್ನು ಶೀಘ್ರವೇ ಬಂಧಿಸಲಾಗುವುದು. ಅಲ್ಲದೆ, ನಾನು ನ್ಯಾಯಾಲಯದ ತಡೆಯಾಜ್ಞೆಯ ಪ್ರಕಾರ, ವಿಷಯವನ್ನು ಫಾರ್ವರ್ಡ್ ಮಾಡುವ/ಅಪ್‌ಲೋಡ್ ಮಾಡುವ ಯಾರಾದರೂ ಕಾನೂನಿನ ಸಂಬಂಧಿತ ವಿಭಾಗಗಳ ಪ್ರಕಾರ ಶಿಕ್ಷೆಗೆ ಗುರಿಯಾಗುತ್ತಾರೆ’ ಎಂದು ಅವರು ಬರೆದುಕೊಂಡಿದ್ದಾರೆ. ಅಷ್ಟೇ ಅಲ್ಲದೇ, ಇಂತಹ ಕೃತ್ಯ ಎಸಗುವ ಯಾರಾದರೂ ತಿಳಿದಿದ್ದಲ್ಲಿ ತಿಳಿಸುವಂತೆಯೂ ಅವರು ಮನವಿ ಮಾಡಿದ್ದಾರೆ.
Dear well wishers,
A morphed (deep fake) video of mine has been making rounds on social media. I would like to inform that, it is not me in the video, its created to malign my impeccable image by my adversaries with vested interest. 1/3— Sadananda Gowda (@DVSadanandGowda) September 19, 2021
I have also filed a complaint with the cyber crime police. I have faith, the culprits will be nabbed soon. 2/3
— Sadananda Gowda (@DVSadanandGowda) September 19, 2021
ಈ ರೀತಿ ಮಾಡುವ ಯಾರಾದರೂ ನಿಮಗೆ ತಿಳಿದಿದ್ದರೆ, ದಯವಿಟ್ಟು ನನಗೆ ಇನ್ ಬಾಕ್ಸ್ ಮಾಡಿ. 3/3
— Sadananda Gowda (@DVSadanandGowda) September 19, 2021
ಇದನ್ನೂ ಓದಿ: ತಮ್ಮ ವಿರುದ್ಧ ಮಾಧ್ಯಮಗಳು ವರದಿ ಮಾಡಬಾರದೆಂದು ಕೋರ್ಟ್ ಮೆಟ್ಟಿಲೇರಿದ ಕರ್ನಾಟಕದ 6 ಸಚಿವರು: ಅಚ್ಚರಿ ಹುಟ್ಟಿಸಿದ ನಡೆ
(Former Union Minister Sadananda Gowda tweet his morphed fake video goes viral and do not trust it)
Published On - 7:56 pm, Sun, 19 September 21