ಉಚಿತ ಅಕ್ಕಿ ವಿಚಾರದಲ್ಲಿ ಕೇಂದ್ರ ಸರ್ಕಾರ ರಾಜಕೀಯ ಮಾಡುತ್ತಿದೆ: ಸಿದ್ದರಾಮಯ್ಯ

ಅಕ್ಕಿ ಕೊಡುತ್ತೇವೆ ಅಂತ ಹೇಳಿದ್ದ ಕೇಂದ್ರ ಸರ್ಕಾರ, ಇದೀಗ ರಾಜಕೀಯ ನಿರ್ಧಾರ ಕೈಗೊಂಡಿದೆ. ಉಚಿತ ಅಕ್ಕಿ ವಿಚಾರದಲ್ಲೂ ಕೇಂದ್ರ ಸರ್ಕಾರ ರಾಜಕೀಯ ಮಾಡುತ್ತಿದೆ ಅಂತಾ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಉಚಿತ ಅಕ್ಕಿ ವಿಚಾರದಲ್ಲಿ ಕೇಂದ್ರ ಸರ್ಕಾರ ರಾಜಕೀಯ ಮಾಡುತ್ತಿದೆ: ಸಿದ್ದರಾಮಯ್ಯ
ಉಚಿತ ಅಕ್ಕಿ ವಿಚಾರದಲ್ಲಿ ಕೇಂದ್ರ ಸರ್ಕಾರ ರಾಜಕೀಯ ಮಾಡುತ್ತಿದೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ
Follow us
Rakesh Nayak Manchi
|

Updated on:Jun 14, 2023 | 5:02 PM

ಬೆಂಗಳೂರು: ಉಚಿತ ಅಕ್ಕಿ ವಿಚಾರದಲ್ಲೂ ಕೇಂದ್ರ ಸರ್ಕಾರ ರಾಜಕೀಯ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಡೆಪ್ಯುಟಿ ಮ್ಯಾನೇಜರ್​ 7 ಲಕ್ಷ ಟನ್​ ಅಕ್ಕಿ ಸಂಗ್ರಹ ಇದೆ ಎಂದಿದ್ದರು. ಅಕ್ಕಿ ಸಂಗ್ರಹ ಇದ್ದರೂ ಕೇಂದ್ರ ಯಾಕೆ ಪೂರೈಕೆ ಮಾಡುತ್ತಿಲ್ಲ? ಬಿಜೆಪಿಯವರು (BJP) ಬಡವರ ವಿರೋಧಿಗಳು. ಕಾಂಗ್ರೆಸ್ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಈ ರೀತಿ ಮಾಡುತ್ತಿದ್ದಾರೆ. ಅಕ್ಕಿ ಪೂರೈಸಲು ಛತ್ತೀಸ್​ಗಢ ಸರ್ಕಾರಕ್ಕೂ ಮನವಿ ಮಾಡಿದ್ದೇವೆ ಎಂದರು.

5 ಗ್ಯಾರೆಂಟಿಗಳನ್ನ ಈಗಾಗಲೇ ಘೋಷಣೆ ಮಾಡಿದ್ದೇವೆ. ಯಾವಾಗ ಜಾರಿ ಬರಲಿದೆ ಅಂತ ದಿನಾಂಕ ಘೋಷಣೆ ಮಾಡಿದ್ದೇವೆ. ಮೊದಲ ಗ್ಯಾರೆಂಟಿ ಈಗಾಗಲೇ ಜಾರಿ ಆಗಿದೆ. ಅಂತ್ಯೋದಯ ಕಾರ್ಡ್ ದಾರರಿಗೆ ತಲಾ 10 ಕೆ.ಜಿ ಅಕ್ಕಿ ಕೊಡುತ್ತೇವೆ ಅಂತ ಹೇಳಿದ್ದೆವು. ಸದ್ಯ ರಾಜ್ಯ ಸರ್ಕಾರ 5 ಕೆ.ಜಿ ಅಕ್ಕಿ ಕೊಡುತ್ತಿದೆ. ಅದರ ಜೊತೆಗೆ ಇನ್ನೂ 5 ಕೆ.ಜಿ ಸೇರಿಸಿ 10 ಕೆ.ಜಿ ಅಕ್ಕಿ ಕೊಡುತ್ತೇವೆ ಅಂತ ಹೇಳಿದ್ದೆವು. ನಾವು ಹೆಚ್ಚುವರಿಯಾಗಿ ಕೊಡಬೇಕು ಅಂದರೆ ಪ್ರತಿ ತಿಂಗಳಿಗೆ 2 ಲಕ್ಷದ 28 ಸಾವಿರ ಮೆಟ್ರಿಕ್ ಟನ್ ಅಕ್ಕಿ ಬೇಕು ಎಂದರು.

ಇದನ್ನೂ ಓದಿ: ಕರ್ನಾಟಕ ಸರ್ಕಾರ ದಿಲ್ಲಿಯ ಜನಪಥ ರಸ್ತೆಯ 10ನೇ ನಂಬರಿನ ಹಂಗಿನ ಸರಕಾರ: ಕುಮಾರಸ್ವಾಮಿ

ಕೆ.ಜಿಗೆ 34 ರೂ. ಹಾಗೂ 2.60 ಪೈಸೆ ಟ್ರಾನ್ಸ್ ಪೋರ್ಟ್ ಚಾರ್ಜ್ ಆಗುತ್ತದೆ. ಅನ್ನಭಾಗ್ಯ ಯೋಜನೆಗಾಗಿ ತಿಂಗಳಿಗೆ 840 ಕೋಟಿ ವೆಚ್ಚ ಆಗಲಿದ್ದು, ಪ್ರತಿ ವರ್ಷಕ್ಕೆ 10,092 ಕೋಟಿ ರೂಪಾಯಿ ಬೇಕು. ಹೀಗಾಗಿ ಹೆಚ್ಚುವರಿ ಅಕ್ಕಿ ವಿತರಣೆ ಬಗ್ಗೆ FCI ಡೆಪ್ಯುಟಿ ಮ್ಯಾನೇಜರ್​ ಜೊತೆ ಚರ್ಚೆ ನಡೆಸಿದ್ದೆವು. ಈ ವೇಳೆ ಹೆಚ್ಚುವರಿ ಅಕ್ಕಿ ಕೊಡುವುದಾಗಿ ಸಚಿವ ಕೆಹೆಚ್​ ಮುನಿಯಪ್ಪ ಮತ್ತು ನಮ್ಮ ಜೊತೆ ಹೇಳಿದ್ದರು. ಜೂ.12ರಂದು ಪತ್ರವೂ ಬರೆದಿದ್ದರು. ಕೇಂದ್ರದ ಒಪ್ಪಿಗೆ ಆಧಾರದಲ್ಲಿ ಜುಲೈ 1ರಿಂದ ಅಕ್ಕಿ ಕೊಡುತ್ತೇವೆ ಎಂದಿದ್ದೆವು. ಇದಾದ ಬಳಿಕ ಕೇಂದ್ರ ಸರ್ಕಾರ ರಾಜಕೀಯ ನಿರ್ಧಾರ ತೆಗೆದುಕೊಂಡಿದೆ ಎಂದು ಆರೋಪಿಸಿದರು.

2,08,425 ಮೆಟ್ರಿಕ್ ಟನ್ ಅಕ್ಕಿ ಕೊಡಲು ಒಪ್ಪಿಕೊಂಡಿದ್ದರು. ಆದರೆ 13ರಂದು ಒಂದು ಪತ್ರ ಬರೆದಿದ್ದಾರೆ. ಓಪನ್ ಮಾರ್ಕೆಟ್ ಸೇಲ್ಸ್ ಸ್ಕೀಂ (OMMSS) ಜಾರಿ ಮಾಡಿ ರಾಜ್ಯ ಸರ್ಕಾರಗಳಿಗೆ ಸೇಲಂ ಗೋಧಿ ಹಾಗೂ ಅಕ್ಕಿ ಕೊಡಲು ಆಗಲ್ಲವೆಂದು ತಿಳಿಸಿದ್ದಾರೆ. ಕೇಂದ್ರ ಸರ್ಕಾರ ರಾಜಕೀಯ ತೀರ್ಮಾನ ಮಾಡಿ ಕರ್ನಾಟಕ ಸರ್ಕಾರಕ್ಕೆ ಅಕ್ಕಿ ಕೊಡಬಾರದು ಅಂತ ಈ ರೀತಿ ಮಾಡುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಈ ರೀತಿ ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಅಕ್ಕಿ ವಿತರಿಸಲು ಪ್ರಯತ್ನ ಮಾಡುತ್ತೇವೆ: ಸಿದ್ದರಾಮಯ್ಯ

ಅಕ್ಕಿ ಪೂರೈಕೆ ಮಾಡದಂತೆ ಕೇಂದ್ರ ಸರ್ಕಾರ ಷಡ್ಯಂತ್ರ ಮಾಡುತ್ತಿದೆ ಎಂದು ಹೇಳಿದ ಸಿದ್ದರಾಮಯ್ಯ, ಎಷ್ಟೇ ಷಡ್ಯಂತ್ರ ಮಾಡಿದರೂ ಅಕ್ಕಿ ವಿತರಿಸಲು ಪ್ರಯತ್ನ ಮಾಡುತ್ತೇವೆ. ಅಕ್ಕಿ ಕೊಡುವ ಬಗ್ಗೆ ತಮಿಳುನಾಡು ಸರ್ಕಾರ ಶೇ 100 ರಷ್ಟು ಭರವಸೆ ನೀಡಿಲ್ಲ. ನಾಳೆ ಸಚಿವ ಮುನಿಯಪ್ಪ ಅವರು ತೆಲಂಗಾಣಕ್ಕೆ ಹೋಗಿ ಅಲ್ಲಿನ ಸಿಎಂ ಹಾಗೂ ಸಚಿವರ ಜೊತೆ ಚರ್ಚೆ ನಡೆಸಿದ ನಂತರ ಸ್ಪಷ್ಟ ಚಿತ್ರಣ ಸಿಗಲಿದೆ. ಹೆಚ್ಚುವರಿ ಅಕ್ಕಿ ಖರೀದಿಗೆ ರಾಜ್ಯ ಸರ್ಕಾರಕ್ಕೆ ಹಣದ ಸಮಸ್ಯೆ ಇಲ್ಲ. ಈ ಹಿಂದೆ ಅಕ್ಕಿ ಕೊಡುತ್ತಿರುವುದಕ್ಕೆ ಯಾವುದೇ ಸಮಸ್ಯೆ ಇಲ್ಲ ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:44 pm, Wed, 14 June 23

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್