ವಿಧಾನ ಪರಿಷತ್ತಿಗೆ ಯೋಗ್ಯರನ್ನು ಆರಿಸಿ; ಸಿಎಂ ಸಿದ್ದರಾಮಯ್ಯಗೆ ಸಭಾಪತಿ ಬಸವರಾಜ ಹೊರಟ್ಟಿ ಪತ್ರ

ವಿಧಾನಪರಿಷತ್ತಿಗೆ ನಾಮನಿರ್ದೇಶಿತ ಸ್ಥಾನಗಳಿಗೆ ಸಂವಿಧಾನದ ಮೂಲ ಆಶಯದಂತೆ ಸಾಮಾಜಿಕ ಹೊಣೆಗಾರಿಕೆಯುಳ್ಳ, ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರನ್ನು ಪರಿಗಣಿಸಬೇಕೆಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ(Basavaraj Horatti) ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.

ವಿಧಾನ ಪರಿಷತ್ತಿಗೆ ಯೋಗ್ಯರನ್ನು ಆರಿಸಿ; ಸಿಎಂ ಸಿದ್ದರಾಮಯ್ಯಗೆ ಸಭಾಪತಿ ಬಸವರಾಜ ಹೊರಟ್ಟಿ ಪತ್ರ
ಬಸವರಾಜ ಹೊರಟ್ಟಿ, ಸಿದ್ದರಾಮಯ್ಯ
Updated By: ಕಿರಣ್ ಹನುಮಂತ್​ ಮಾದಾರ್

Updated on: Jan 25, 2024 | 10:41 PM

ಬೆಂಗಳೂರು, ಜ.25: ವಿಧಾನಪರಿಷತ್ತಿಗೆ ನಾಮನಿರ್ದೇಶನ ಹೊಂದುತ್ತಿರುವ ವ್ಯಕ್ತಿಗಳ ಕುರಿತು ಸಾರ್ವಜನಿಕ ವಲಯದಲ್ಲಿ ತೀವ್ರ ತರವಾದ ಚರ್ಚೆಗೊಳಪಡುತ್ತಿದ್ದು, ನಾಮನಿರ್ದೇಶಿತ ಸ್ಥಾನಗಳಿಗೆ ಸಂವಿಧಾನದ ಮೂಲ ಆಶಯದಂತೆ ಸಾಮಾಜಿಕ ಹೊಣೆಗಾರಿಕೆಯುಳ್ಳ, ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರನ್ನು ಪರಿಗಣಿಸಬೇಕೆಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ(Basavaraj Horatti) ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.

‘ಶಕ್ತಿ ರಾಜಕೀಯದ ದುಷ್ಪರಿಣಾಮದಿಂದ ಮೇಲ್ಮನೆಯು ರಾಜಕೀಯ ಪಕ್ಷಗಳ ಹಿತಾಸಕ್ತಿ ಮತ್ತು ಒತ್ತಡಗಳನ್ನು ನಿವಾರಿಸುವ ಆಶ್ರಯ ತಾಣವಾಗುತ್ತಿರುವುದು ಬೇಸರ ಮೂಡಿಸಿದೆ. ಇದರಿಂದ ಗುಣಮಟ್ಟ ಕುಸಿಯುತ್ತಿರುವ ಸಂಗತಿ ನಿಮ್ಮ ಗಮನಕ್ಕೆ ಬಂದಿದೆ ಎಂದು ನಾನು ಭಾವಿಸುತ್ತೇನೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ:ಬಿಜೆಪಿಯಲಿ ಅವಮಾನ ಆಗಿದೆ ಮತ್ತೆ ಹೋಗಲ್ಲ ಎಂದಿದ್ದರು, ಕಾಂಗ್ರೆಸ್ ಪಕ್ಷದಲ್ಲಿ ಶೆಟ್ಟರ್​ಗೆ​​​​ ಯಾವುದೇ ಅನ್ಯಾಯ ಆಗಿಲ್ಲ -ಸಿಎಂ ಸಿದ್ದರಾಮಯ್ಯ

ಇನ್ನು ‘ಚಿಂತಕರ ಚಾವಡಿ, ಮೇಲ್ಮನೆ ಮತ್ತು ಹಿರಿಯರ ಮನೆ ಎಂದು ಕರೆಯಲ್ಪಡುವ ವಿಧಾನಪರಿಷತ್​ ತನ್ನದೇ ಆದ ಘನತೆ ಹಾಗೂ ಹಿರಿಮೆ ಹೊಂದಿದ್ದು, ಇತ್ತೀಚೆಗೆ ಶಾಸಕರಲ್ಲಿ ಸಹ ಅಧ್ಯಯನ ಶೀಲ ಮನೋಭಾವ ಕಡಿಮೆ ಆಗುತ್ತಿದ್ದು, ಗುಣಾತ್ಮಕ ಚರ್ಚೆಗಳಲ್ಲಿ ಭಾಗವಹಿಸುವ ಉತ್ಸಾಹ ಕುಂಟಿತವಾಗುತ್ತಿದೆ ಎಂದು ವಿಷಾಧ ವ್ಯಕ್ತಪಡಿಸಿದ್ದಾರೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ