ಸಿದ್ದರಾಮಯ್ಯ, ಸುರ್ಜೇವಾಲ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ ಛಲವಾದಿ ನಾರಾಯಣಸ್ವಾಮಿ

|

Updated on: Mar 30, 2023 | 5:53 PM

ವರುಣ ಕ್ಷೇತ್ರದಲ್ಲಿ ಪ್ರಚಾರ ವೇಳೆ ವಾಲಗ ಬಾರಿಸುವವರಿಗೆ ಹಣ ನೀಡಿದ್ದು, ಸಿಎಂ ಬೊಮ್ಮಾಯಿ ಅವರನ್ನು ಶಕುನಿ ಎಂದಿದಕ್ಕೆ ಮಾಜಿ ಸಿಎಂ ಸಿದ್ಧರಾಮಯ್ಯ, ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್​ ಸುರ್ಜೇವಾಲ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿದೆ.

ಸಿದ್ದರಾಮಯ್ಯ, ಸುರ್ಜೇವಾಲ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ ಛಲವಾದಿ ನಾರಾಯಣಸ್ವಾಮಿ
ಸಿದ್ದರಾಮಯ್ಯ, ರಣದೀಪ್ ಸಿಂಗ್​ ಸುರ್ಜೇವಾಲ
Follow us on

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್​ ಸುರ್ಜೇವಾಲ ವಿರುದ್ಧ ಚುನಾವಣಾ ಆಯೋಗಕ್ಕೆ MLC ಛಲವಾದಿ ನಾರಾಯಣಸ್ವಾಮಿ (Chalavadi Narayanaswamy) ದೂರು ನೀಡಿದ್ದಾರೆ. ಬಳಿಕ ಮಾತನಾಡಿದ ಅವರು, ಕಾಂಗ್ರೆಸ್ ವಿರುದ್ಧ ಚುನಾವಣಾ ಆಯೋಗಕ್ಕೆ 3 ದೂರು ಸಲ್ಲಿಸಿದ್ದೇನೆ. ನಿನ್ನೆ 11:30ರಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದೆ. ವರುಣ ಕ್ಷೇತ್ರದಲ್ಲಿ ನಿನ್ನೆ ಸಿದ್ದರಾಮಯ್ಯ ಪ್ರಚಾರದಲ್ಲಿ ತೊಡಗಿದ್ದರು. ಈ ವೇಳೆ ವಾಲಗ ಬಾರಿಸುವವರಿಗೆ ಹಣ ನೀಡಿದ್ದಾರೆ. ಈಗಾಗಲೇ ಸಿದ್ದರಾಮಯ್ಯ ವಿರುದ್ಧ ಎಫ್​​​ಐಆರ್ ದಾಖಲಾಗಿದೆ. ನಾವು ಚುನಾವಣಾ ಆಯುಕ್ತರ ಬಳಿ ದೂರು ನೀಡಿದ್ದೇವೆ. ಸುರ್ಜೇವಾಲ ಹಲವು ಬಾರಿ ಮುಖ್ಯಮಂತ್ರಿಗಳನ್ನು ಶಕುನಿ ಎಂದಿದ್ದಾರೆ. ಅಲ್ಲದೇ ಪ್ರಧಾನಮಂತ್ರಿಯನ್ನು ಕೆಟ್ಟದಾಗಿ ನಿಂದಿಸಿದ್ದಾರೆ. ಹಾಗಾಗಿ ಕ್ರಮಕ್ಕೆ ಆಗ್ರಹಿಸಿ ದೂರು ನೀಡಿದ್ದೇವೆ ಎಂದು ಹೇಳಿದರು.

ಚುನಾವಣಾ ಆಯೋಗದ ಮೇಲೆಯೇ ಆರೋಪ

ಕಾಂಗ್ರೆಸ್ ಕಟ್ಟಿಹಾಕಲು ಹೆಚ್ಚು ಐಟಿ ಅಧಿಕಾರಿಗಳನ್ನ ಚುನಾವಣಾ ಆಯೋಗ ನಿಯೋಜಿಸಿದೆ ಎಂದು ಸಿದ್ದರಾಮಯ್ಯ ಹೇಳಿದ್ದರು. ಚುನಾವಣಾ ಆಯೋಗದ ಮೇಲೆಯೇ ಆರೋಪ ಮಾಡಿದ್ದಾರೆ ಅಂದರೆ ಇದು ಎಷ್ಟು ಸರಿ ಎಂದು ಪ್ರಶ್ನಿಸಿದರು. ಸಂಪೂರ್ಣ ಅಧಿಕಾರ ಇರೋದೆ ಚುನಾವಣಾ ಅಧಿಕಾರಿಗಳಿಗೆ. ಚುನಾವಣಾ ಅಧಿಕಾರಿಗಳ ಮೇಲೆ ಜನರಿಗೆ ತಪ್ಪು ಕಲ್ಪನೆ ಬರುವ ರೀತಿಯಲ್ಲಿ ಸಿದ್ದರಾಮಯ್ಯ ನಡೆದುಕೊಳ್ಳುತ್ತಿದ್ದಾರೆ. ಚುನಾವಣಾ ಅಧಿಕಾರಿಗಳಿಗೆ ಬೆದರಿಕೆ ಹಾಕುವ ಕೆಲಸ ಮಾಡುತ್ತಿದ್ದಾರೆ. ಇವರ ವಿರುದ್ಧ ಸ್ಟ್ರಿಂಜನ್ ಆಕ್ಷನ್ ತೆಗೆದುಕೊಳ್ಳಬೇಕೆಂದು ದೂರು ನೀಡಿದ್ದೇವೆ.

ಇದನ್ನೂ ಓದಿ: ಜೆಡಿಎಸ್​ನಲ್ಲಿ ಅಪ್ಪ, ಮಕ್ಕಳ ಮಾತು ಕೇಳದಿದರೆ ಹೊರ ಹಾಕುತ್ತಾರೆ: ಸಿದ್ಧರಾಮಯ್ಯ ಹೇಳಿಕೆಗೆ ಕುಮಾರಸ್ವಾಮಿ ಆಕ್ರೋಶ

ಆಧಾರವಿಲ್ಲದೆ ಆರೋಪ ಮಾಡುವುದು ತಪ್ಪು

ಈಗ ಬಿಜೆಪಿ 40% ಸರ್ಕಾರ, ರಾಜ್ಯವನ್ನೇ ಲೂಟಿ ಮಾಡಿದ್ದೇವೆ ಎನ್ನುವ ಅರ್ಥದಲ್ಲಿ ಹೇಳಿದ್ದಾರೆ. ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಯಾವುದೇ ಆಧಾರವಿಲ್ಲದೆ ಈ ರೀತಿ ಮಾತನಾಡುತ್ತಾರೆ. ಹಾಗಾದರೆ ದೇಶದಲ್ಲಿ ಚುನಾವಣಾ ಆಯೋಗ, ಲೋಕಾಯುಕ್ತ ಹಾಗೂ ಯಾವುದೇ ಕೋರ್ಟ್​ನಲ್ಲಿ ದೂರು ಕೊಡಬೇಕಿತ್ತು.

ಇವರ ಯೋಗ್ಯತೆಗೆ ಕೊಡೋಕೆ‌ ಆಗಿದೆಯಾ ಎಂದು ಪ್ರಶ್ನಿಸಿದರು. ಆಧಾರವಿಲ್ಲದೆ ಆರೋಪ ಮಾಡುವುದು ತಪ್ಪು. ನಾವು ನಿಮ್ಮ ಮೇಲೆ ಸಾಕಷ್ಟು ಆರೋಪ ಮಾಡಬಹುದು. ಇನ್ಮುಂದೆ ನೀವು ಏನೇ ಮಾತನಾಡಿದರೂ ಆಧಾರ ಕೊಡಬೇಕು. ಇಲ್ಲವಾದರೆ ಜೈಲಿಗೆ ಹೋಗಬೇಕಾಗುತ್ತೆ ಎಂದು ಚಲವಾದಿ ನಾರಾಯಣಸ್ವಾಮಿ ಕಿಡಿಕಾರಿದ್ದಾರೆ.

ಇದನ್ನೂ ಓದಿ: ಒಳ ಮೀಸಲಾತಿಯಿಂದ ಲಂಬಾಣಿ ಸಮಾಜ ಆಕ್ರೋಶ: ಈ ಬಗ್ಗೆ ಸಂಸದ ಉಮೇಶ್ ಜಾಧವ್ ಹೇಳಿದ್ದಿಷ್ಟು

ಟಿಕೆಟ್​ ಆಕಾಂಕ್ಷಿಗಳ ಬೆಂಬಲಿಗರಿಂದ ಸಿದ್ಧರಾಮಯ್ಯ ಮನೆ ಮುಂದೆ ಗದ್ದಲ

ನಗರದ ಮಾಜಿ ಸಿಎಂ ಸಿದ್ದರಾಮಯ್ಯ ನಿವಾಸದ ಮುಂದೆ ವಿವಿಧ ಕ್ಷೇತ್ರಗಳ ಟಿಕೆಟ್​ ಆಕಾಂಕ್ಷಿಗಳ ಬೆಂಬಲಿಗರಿಂದ ಗದ್ದಲ ಮಾಡಲಾಗಿದೆ. ಮೊಳಕಾಲ್ಮೂರು ಟಿಕೆಟ್ ಆಕಾಂಕ್ಷಿ ಯೋಗೀಶ್ ಬಾಬು ಬೆಂಬಲಿಗರಿಂದ ಕೆಪಿಸಿಸಿ ಕಚೇರಿಗೆ ತೆರಳುವಾಗ ಹೈಡ್ರಾಮಾ ಮಾಡಲಾಗಿದೆ. ಮೊಳಕಾಲ್ಮೂರು ಕ್ಷೇತ್ರದಲ್ಲಿ ಬಿಜೆಪಿ ಶಾಸಕ ಎನ್.ವೈ.ಗೋಪಾಲಕೃಷ್ಣಗೆ ಟಿಕೆಟ್ ಸಾಧ್ಯತೆಯಿದ್ದು, ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ನಿವಾಸದ ಮುಂದೆ ಬೆಂಬಲಿಗರಿಂದ ಗದ್ದಲ ಮಾಡಲಾಗಿದೆ.

ಅದೇ ರೀತಿಯಾಗಿ ಗೃಹಸಚಿವರ ಕ್ಷೇತ್ರದಲ್ಲೇ ಚುನಾವಣಾ ಬಹಿಷ್ಕಾರಕ್ಕೆ ತೀರ್ಮಾನ ಮಾಡಲಾಗಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಕ್ಷೇತ್ರ ವ್ಯಾಪ್ತಿಯ ಹುಂಚದಕಟ್ಟೆ ಗ್ರಾಮದಲ್ಲಿ ಚುನಾವಣಾ ಬಹಿಷ್ಕಾರಕ್ಕೆ ಗ್ರಾಮಸ್ಥರು ಮುಂದಾಗಿದ್ದಾರೆ. ಗ್ರಾಮದ ಪಂಚಾಯಿತಿ ವ್ಯಾಪ್ತಿಯಲ್ಲಿ ರಸ್ತೆ ಹದಗೆಟ್ಟಿದ್ದು, ರಸ್ತೆ ದುರಸ್ತಿ ಮಾಡದ ಹಿನ್ನೆಲೆ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರ ಮಾಡಲಾಗುತ್ತಿದೆ.

ವಿಧಾನಸಭಾ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 5:53 pm, Thu, 30 March 23