AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣೆ ಹೊತ್ತಲ್ಲೇ ಕೇಸರಿ ಪಡೆಗೆ ಬಿಗ್ ಶಾಕ್, ಬಿಜೆಪಿ ತೊರೆದು ಜೆಡಿಎಸ್​ ಸೇರಿದ ಮಾಜಿ ಶಾಸಕ ಬಸವರಾಜ ಮಂಡಿಮಠ

ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ಜೆ.ಪಿ.ನಡ್ಡಾ ಕರ್ನಾಟಕದಲ್ಲಿ ಆಗಲೇ ಚುನಾವಣೆ ಪ್ರಚಾರ ಆರಂಭಿಸಿದ್ದಾರೆ. ಇದರ ಮಧ್ಯೆ ಕೋಟೆನಾಡು ಚಿತ್ರದುರ್ಗದಲ್ಲಿ ಬಿಜೆಪಿಗೆ ಆರಂಭಕ ಆಘಾತವಾಗಿದೆ.

ಚುನಾವಣೆ ಹೊತ್ತಲ್ಲೇ ಕೇಸರಿ ಪಡೆಗೆ ಬಿಗ್ ಶಾಕ್, ಬಿಜೆಪಿ ತೊರೆದು ಜೆಡಿಎಸ್​ ಸೇರಿದ ಮಾಜಿ ಶಾಸಕ ಬಸವರಾಜ ಮಂಡಿಮಠ
ಬಿಜೆಪಿ ಮಾಜಿ ಶಾಸಕ ಬಸವರಾಜ ಮಂಡಿಮಠ ಜೆಡಿಎಸ್ ಸೇರ್ಪಡೆ
TV9 Web
| Updated By: ರಮೇಶ್ ಬಿ. ಜವಳಗೇರಾ|

Updated on: Jan 29, 2023 | 5:55 PM

Share

ಚಿತ್ರದುರ್ಗ: ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ (Karnataka Assembly Elections 2023) ಸಮೀಪಿಸುತ್ತಿದ್ದಂತೆಯೇ ಸದ್ದಿಲ್ಲದೇ ಪಕ್ಷಾಂತರ ಪರ್ವ ಜೋರಾಗಿದೆ. ಈ ಬಾರಿ ಶತಾಯಗತಾಯವಾಗಿ ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರಿಕ್ಕೆ ತರಬೇಕೆಂದು ಹೈಕಮಾಂಡ್​ ಭರ್ಜರಿ ತಂತ್ರಗಳನ್ನು ರೂಪಿಸಿದ್ದಾರೆ. ಅಲ್ಲದೇ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ಜೆ.ಪಿ.ನಡ್ಡಾ ಕರ್ನಾಟಕದಲ್ಲಿ ಆಗಲೇ ಚುನಾವಣೆ ಪ್ರಚಾರ ಆರಂಭಿಸಿದ್ದಾರೆ. ಇದರ ಮಧ್ಯೆ ಕೋಟೆನಾಡು ಚಿತ್ರದುರ್ಗದಲ್ಲಿ ಬಿಜೆಪಿಗೆ ಆರಂಭಕ ಆಘಾತವಾಗಿದೆ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ಕ್ಷೇತ್ರದ ಬಿಜೆಪಿ ಮಾಜಿ ಶಾಸಕ ಬಸವರಾಜ ಮಂಡಿಮಠ(Basavaraj Mandimutt) ಜೆಡಿಎಸ್ ಸೇರ್ಪಡೆಯಾಗಿದ್ದಾರೆ. ಇಂದು (ಜನವರಿ 29) ಜೆಡಿಎಸ್ ಜಿಲ್ಲಾಧ್ಯಕ್ಷ ಯಶೋಧರ್ ಹಾಗೂ ಚಳ್ಳಕೆರೆ ಅಭ್ಯರ್ಥಿ ರವೀಶ್ ಉಪಸ್ಥಿತಿಯಲ್ಲಿ ಮಾಜಿ ಶಾಸಕ ಬಸವರಾಜ ಮಂಡಿಮಠ ಅವರು ಬಿಜೆಪಿ ತೊರೆದು ಜೆಡಿಎಸ್ ಸೇರಿದರು.

ಇದನ್ನೂ ಓದಿ: ಹುಬ್ಬಳ್ಳಿ-ಧಾರವಾಡ, ಬೆಳಗಾವಿ ಜಿಲ್ಲೆಯಲ್ಲಿ ಮಿಂಚಿನ ಸಂಚಾರ: ಜನ ಬೆಂಬಲ ನೋಡಿ ಬಿಜೆಪಿ ಸೀಕ್ರೆಟ್ ಸಭೆಯಲ್ಲಿ ಅಮಿತ್ ಶಾ ಫುಲ್ ಖುಷ್

1999ರ ಚಳ್ಳಕೆರೆ ವಿಧಾನಸಭೆ ಚುನಾವಣೆಯಲ್ಲಿ ಬಸವರಾಜ ಮಂಡಿಮಠ ಅವರು ಬಿಜೆಪಿಯಿಂದ ಸ್ಪರ್ಧಿಸಿ 26517 ಮತಗಳೊಂದಿಗೆ ತಿಪ್ಪೇಸ್ವಾಮಿ ಅವರನ್ನು ಸೋಲಿಸಿದ್ದರು. ಬಳಿಕ 2004ರಲ್ಲಿ ಕಾಂಗ್ರೆಸ್​ನ ಸುಧಾಕರ್ ಡಿ ಅವರ ವಿರುದ್ಧ ಬಸವರಾಜ ಮಂಡಿಮಠ ಸೋಲುಕಂಡಿದ್ದರು. 2008ರಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ತಿಪ್ಪೇಸ್ವಾಮಿ ಅವರು ಕಾಂಗ್ರೆಸ್​ನಿಂದ ಅಖಾಡಕ್ಕಿಳಿದಿದ್ದ ನಟ ಶಶಿಕುಮಾರ್ ಅವರನ್ನು ಸೋಲಿಸಿದ್ದರು.

ಇತ್ತೀಚೆಗೆ ನಟ ಶಶಿಕುಮಾರ್ ಅವರು ಬಸವರಾಜ ಮಂಡಿಮಠ ಅವರ ನಿವಾಸಕ್ಕೆ ಭೇಟಿ ನೀಡಿದ್ದರು. ಈ ಹಿನ್ನೆಲೆಯಲ್ಲಿ ಶಶಿಕುಮಾರ್ ಮತ್ತೆ ರಾಜಕೀಯಕ್ಕೆ ರೀ ಎಂಟ್ರಿಯಾಗುತ್ತಾರಾ ಎನ್ನುವ ಚರ್ಚೆಗಳು ನಡೆದಿದ್ದವು.

ಇನ್ನು ಕಳೆದ ಅಂದರೆ 2018ರಲ್ಲಿ ನಡೆದಿದ್ದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ನ ರಘುಮೂರ್ತಿ ಅವರು ಗೆಲುವು ಸಾಧಿಸಿದ್ದರು. ಆದ್ರೆ, ಈ ಚುನಾವಣೆಯಲ್ಲಿ ಜೆಡಿಎಸ್​ನ ರವೀಶ್ ಕುಮಾರ್ ಅವರು 59335 ಮತಗಳನ್ನು ಪಡೆದುಕೊಂಡು ಭಾರೀ ಪೈಪೋಟಿ ನೀಡಿ ಕೊನೆಗೆ 2ನೇ ಸ್ಥಾನಕ್ಕೆ ತೃಪ್ತಿಪಟ್ಟಿದ್ದರು. ಈ ಬಾರಿ ಚಳ್ಳಕೆರೆ ವಿಧಾನಸಭೆ ಚುನಾವಣೆಗೆ ಜೆಡಿಎಸ್ ಮತ್ತೆ ರವೀಶ್ ಕುಮಾರ್ ಅವರನ್ನು ಅಭ್ಯರ್ಥಿ ಎಂದು ಘೋಷಿಸಿದೆ. ಇದೀಗ ಬಿಜೆಪಿ ಮಾಜಿ ಶಾಸಕ ಬಸವರಾಜ ಮಂಡಿಮಠ ಸಹ ಜೆಡಿಎಸ್​ ಸೇರ್ಪಡೆಯಾಗಿದ್ದು, ರವೀಶ್ ಕುಮಾರ್ ಗೆಲ್ಲುವ ಉತ್ಸಹದಲ್ಲಿದ್ದಾರೆ.

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​