ಎಂಪಿ ಅವಧಿ ಮುಗಿದ ಬಳಿಕ ರಾಜಕೀಯಕ್ಕೆ ವಿದಾಯ: ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್ ಘೋಷಣೆ

ಒಬ್ಬೊಬ್ಬರೇ ಬಿಜೆಪಿ ನಾಯಕರು ಚುನಾವಣೆ ಹಾಗೂ ರಾಜಕೀಯ ಕಣದಿಂದ ನಿವೃತ್ತಿ ತೆಗೆದುಕೊಳ್ಳುತ್ತಿದ್ದಾರೆ. ಇದೀಗ ಬಿಜೆಪಿ ಮತ್ತೋರ್ವ ನಾಯಕರ ರಾಜಕೀಯ ವಿದಾಯದ ಮಾತುಗಳನ್ನಾಡಿದ್ದಾರೆ.

ಎಂಪಿ ಅವಧಿ ಮುಗಿದ ಬಳಿಕ ರಾಜಕೀಯಕ್ಕೆ ವಿದಾಯ: ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್ ಘೋಷಣೆ
ಶ್ರೀನಿವಾಸ ಪ್ರಸಾದ್
Follow us
ರಮೇಶ್ ಬಿ. ಜವಳಗೇರಾ
|

Updated on:Apr 13, 2023 | 11:06 AM

ಚಾಮರಾಜನಗರ: ಕರ್ನಾಟಕದಲ್ಲಿ ಈಗ ವಿಧಾನಸಭೆ ಚುನಾವಣೆ ಕಾವು ರಂಗೇರುತ್ತಿದೆ. ಇದರ ಮಧ್ಯೆ ಬಿಜೆಪಿ ಕೆಲ ಶಾಸಕರು ಚುನಾವಣೆ ಹಾಗೂ ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದಾರೆ. ಇದರ ಇದೀಗ ಚಾಮರಾನಗರ ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ ಅವರು ರಾಜಕೀಯಕ್ಕೆ ವಿದಾಯ ಹೇಳುವ ಮಾತುಗಳನ್ನಾಡಿದ್ದಾರೆ. ಇಂದು(ಏಪ್ರಿಲ್ 13) ಚಾಮರಾನಗರದ ಗುಂಡ್ಲುಪೇಟೆಯಲ್ಲಿ ನಡೆದ ಬಿಜೆಪೊ ಕಾರ್ಯಕ್ರಮದಲ್ಲಿ ಮಾತನಾಡಿದ ಸಂಸದ ಶ್ರೀನಿವಾಸ ಪ್ರಸಾದ್, ಮುಂದಿನ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ. ಲೋಕಸಭೆ ಅವಧಿ ಮುಗಿದ ಕೂಡಲೇ ರಾಜಕೀಯಕ್ಕೆ ವಿದಾಯ ಹೇಳುತ್ತೇನೆ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಬಿಜೆಪಿಯ ಮತ್ತೋರ್ವ ನಾಯಕ ನಿವೃತ್ತಿ ಘೋಷಣೆ: ಸಕ್ರಿಯ ರಾಜಕಾರಣಕ್ಕೆ ಸಚಿವ ಎಸ್​ ಅಂಗಾರ ಗುಡ್​ ಬೈ

ಮುಂದಿನ ವರ್ಷ ನನ್ನ ಅವಧಿ ಮುಕ್ತಾಯವಾಗಲಿದೆ. ಆ ಬಳಿಕ ನಾನು ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಸುದೀರ್ಘ ರಾಜಕೀಯ ಜೀವನದಲ್ಲಿ ಒಂದು ಕಪ್ಪು ಚುಕ್ಕೆ ಇಲ್ಲದೆ ಕೆಲಸ ಮಾಡಿದ್ದೇನೆ. ಒಟ್ಟಾರೆ ಏಳು ಪ್ರಧಾನ ಮಂತ್ರಿಗಳನ್ನ ಕಂಡಿದ್ದೇನೆ. ಇನ್ನು ಮುಂದೆ ನಾನು ಚುನಾವಣೆ ರಾಜಕೀಯದಿಂದ ಸಕ್ರಿಯವಾಗಿ ಹಿಂದೆ ಸರಿಯುತ್ತೇನೆ ಎಂದು ಚಾಮರಾಜನಗರ ಸಂಸದ ವಿ. ಶ್ರೀನಿವಾಸ್ ಪ್ರಸಾದ್ ಹೇಳಿದರು.

ಅವರು ಮೂಲತಃ ಕಾಂಗ್ರೆಸ್‌ನಿಂದ ರಾಜಕೀಯ ಆರಂಭಿದ್ದ ಅವರು ನಂತರ ಜನತಾ ದಳ ಸೇರಿದ್ದರು. ಬಳಿಕ ಅವರು ವಾಪಸ್​ ಕಾಂಗ್ರೆಸ್‌ಗೆ ಮರಳಿ 2013 ರಲ್ಲಿ ನಂಜನಗೂಡಿನಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ನಂತರ ಆದ ಕೆಲ ರಾಜಕೀಯ ಬೆಳವಣಿಗೆಗಳಿಂದ ಬೇಸತ್ತು ಅವರು ಮತ್ತೆ ತಮ್ಮ ಪಕ್ಷವನ್ನು ಬದಲಾಯಿಸಿದರು. 2016, ಡಿಸೆಂಬರ್​ನಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು. ಅಲ್ಲದೇ ಬಿಜೆಪಿ 2017ರಲ್ಲಿ ನಂಜನಗೂಡು ಉಪಚುನಾವಣೆಯಲ್ಲಿ ಸ್ಪರ್ಧಿಸಿ ಸೋಲು ಅನುಭವಿಸಿದ್ದರು. ನಂತರ 2019 ರಲ್ಲಿ ಚಾಮರಾಜನಗರದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು.

ಚುನಾವಣೆ ರಾಜಕೀಯದಿಂದ ಬಿಎಸ್ ಯಡಿಯೂರಪ್ಪ ಹಾಗೂ ಕೆಎಸ್ ಈಶ್ವರಪ್ಪ, ದಾವಣಗೆರೆ ಬಿಜೆಪಿ ಶಾಸಕ ಎಸ್.ಎ ರವೀಂದ್ರನಾಥ್ ಅವರು ಈಗಾಗಲೇ ಘೋಷಣೆ ಮಾಡಿದ್ದಾರೆ. ಅಲ್ಲದೇ ನಿನ್ನೆ ಅಷ್ಟೇ ಬಿಜೆಪಿ ಶಾಸಕ ಎಸ್ ಅಂಗಾರ ಸಹ ರಾಜಕೀಯಕ್ಕೆ ಗುಡ್​ ಬೈ ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು.

ಕರ್ನಾಟಕ ವಿಧಾನಸಭೆ ಚುನಾವಣೆ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಕರ್ನಾಟಕ ರಾಜ್ಯ ರಾಜಕಾರಣದ ಕ್ಷಣ ಕ್ಷಣದ ಮಾಹಿತಿ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

Published On - 10:59 am, Thu, 13 April 23

ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ