ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಾದರೆ ತಿಳಿಸುತ್ತೇನೆ: ಸೈಲೆಂಟ್ ಸುನೀಲ್ ಸ್ಪಷ್ಟನೆ

Karnataka Election 2023: ರಾಜಕೀಯ ಪ್ರವೇಶ ಹಾಗೂ ಚುನಾವಣೆ ಸ್ಪರ್ಧೆ ಸುದ್ದಿಯಷ್ಟೇ. ರಾಜಕೀಯ ಸೇರ್ಪಡೆ, ಚುನಾವಣೆಯಲ್ಲಿ ಸ್ಪರ್ಧೆ ಮಾಡಿದರೆ ತಿಳಿಸುತ್ತೇನೆ ಎಂದು ಸೈಲೆಂಡ್ ಸುನೀಲ್ ಹೇಳಿದ್ದಾರೆ.

ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಾದರೆ ತಿಳಿಸುತ್ತೇನೆ: ಸೈಲೆಂಟ್ ಸುನೀಲ್ ಸ್ಪಷ್ಟನೆ
ಸೈಲೆಂಟ್ ಸುನೀಲ್
Follow us
TV9 Web
| Updated By: Rakesh Nayak Manchi

Updated on:Feb 18, 2023 | 10:15 PM

ಚಾಮರಾಜಪೇಟೆ: ಈ ಕ್ಷೇತ್ರದ ಮೂಲಕ ರಾಜಕೀಯಕ್ಕೆ ಎಂಟ್ರಿ ಕೊಡುವ ಸುದ್ದಿಯಲ್ಲಿರುವ ಸೈಲೆಂಟ್ ಸುನೀಲ್, ಶಿವರಾತ್ರಿ ಹಿನ್ನಲೆ ಇಂದು ಟೆಂಪಲ್ ರನ್ ಆರಂಭಿಸಿದ್ದಾರೆ. ಮಹದೇಶ್ವರ ದೇಗುಲಕ್ಕೆ ತನ್ನ ಸಹಚರರೊಂದಿಗೆ ಸೈಲೆಂಟ್​ ಸುನೀಲ್ ಭೇಟಿ ನೀಡಿದ್ದು, ಕೇಸರಿ ಶಾಲು ಧರಿಸಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಇನ್ನು, ಮಹದೇಶ್ವರ ದೇಗುಲದ ಬಳಿ ಸೇರಿದಂತೆ ಚಾಮರಾಜಪೇಟೆ ಕ್ಷೇತ್ರದ ವಿವಿಧ ಕಡೆಗಳಲ್ಲಿ ಸೈಲೆಂಟ್ ಸುನೀಲ್ (Silent Sunil) ಬ್ಯಾನರ್​ಗಳು ಹಾಗೂ ಕಟೌಟ್​ಗಳು ರರಾಜಿಸುತ್ತಿವೆ. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸುನೀಲ್, ಎಲ್ಲರಿಗೂ ಶಿವರಾತ್ರಿಯ ಶುಭಾಷಯಗಳು. ವಿಶೇಷ ಏನೂ ಇಲ್ಲ, ನಾನು ರಾಜಕೀಯ ಪ್ರವೇಶ ಹಾಗೂ ಚುನಾವಣೆ (Karnataka Assembly Election 2023) ಸ್ಪರ್ಧೆ ಸುದ್ದಿಯಷ್ಟೇ. ರಾಜಕೀಯ ಸೇರ್ಪಡೆ, ಚುನಾವಣೆಯಲ್ಲಿ ಸ್ಪರ್ಧೆ ಮಾಡಿದರೆ ತಿಳಿಸುತ್ತೇನೆ ಎಂದು ಸ್ಪಷ್ಟನೆ ನೀಡಿದರು. ಟೆಂಪಲ್ ರನ್ ಬಗ್ಗೆ ಪ್ರತಿಕ್ರಿಯಿಸಿದ ಅವರು, ನನ್ನ ಹಿತೈಷಿಗಳು, ಸ್ನೇಹಿತರು ನನ್ನ ಹೆಸರಲ್ಲಿ ಸೇವೆ ಮಾಡುತ್ತಿದ್ದಾರೆ ಎಂದರು.

ರೌಡಿಸಂ ಹಾಗೂ ರಾಜಕಾರಣ ಯಾವಾಗಲೂ ಜೊತೆಜೊತೆಗೆ ಹೆಜ್ಜೆ ಹಾಕುತ್ತವೆ. ರಾಜಕೀಯ ತೆರೆಯ ಮುಂದಿನ ಕೆಲಸ ಮಾಡಿದರೆ, ರೌಡಿಸಂ ತೆರೆಯ ಹಿಂದಿನ ಕೆಲಸ ಮಾಡುತ್ತದೆ. ರೌಡಿಸಂ ಹಿನ್ನೆಲೆಯಿರುವ ಸೋಕಾಲ್ಡ್ ಡಾನ್​ಗಳು ಈಗ ರಾಜಕೀಯಕ್ಕೆ ಬರಲು ಮುಂದಾಗಿದ್ದಾರೆ. ಇಂಥವರ ಪೈಕಿ ಸೈಲೆಂಟ್ ಸುನೀಲ ಸಹ ಒಬ್ಬರು. ಈ ಹಿಂದೆ ಚಾಮರಾಜಪೇಟೆಯಲ್ಲಿ ನಡೆದ ರಕ್ತದಾನ ಶಿಬಿರ ಕಾರ್ಯಕ್ರಮದಲ್ಲಿ ಬಹಿರಂಗವಾಗಿಯೇ ಕಾಣಿಸಿಕೊಂಡಿದ್ದರು. ಸದ್ಯ ಚಾಮರಾಜಪೇಟೆಯಲ್ಲಿ ಕಾಂಗ್ರೆಸ್​ನ ಪ್ರಭಾವಿ ಶಾಸಕ ಜಮೀರ್ ಎದುರಿಗೆ ಭವಿಷ್ಯ ಕಟ್ಟಿಕೊಳ್ಳಲು ಸೈಲೆಂಟಾಗಿ ಸುನೀಲ ಸ್ಕೆಚ್ ಹಾಕಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Viral Video: ಏನೇ ಸಮಸ್ಯೆ ಇದ್ರೂ ಕೂತು ಬಗೆಹರಿಸಿಕೊಳ್ಳೋಣ: ರೌಡಿಶೀಟರ್ ಸೈಲೆಂಟ್ ಸುನೀಲನ ಬಾಯಲ್ಲಿ ಶಾಂತಿ ಮಂತ್ರ

ಸೈಲೆಂಟ್ ಸುನೀಲಾ ಈಗ ರಾಜಕೀಯಕ್ಕೆ ಬರಲು ತಯಾರಿ ನಡೆಸುತ್ತಿದ್ದಾರೆ. ಇದೇ ಕಾರಣಕ್ಕೆ ಸುತ್ತಲು ರೌಡಿಗಳನ್ನು ಹಾಕಿಕೊಂಡು ತಿರುಗುತಿದ್ದವರು ಈಗ ಎಂಎಲ್ಎ, ಎಂಪಿಗಳೊಂದಿಗೆ ತಿರುಗುತ್ತಿದ್ದಾರೆ. ತಾನೊಬ್ಬ ರೌಡಿ ಎನ್ನುವ ಪಟ್ಟ ಹೊಂದಿದ್ದರೆ ಪಟ್ಟಿ ಹೊಂದಿದ್ರೆ ಸಮಾಜದಲ್ಲಿ ಕೊನೆಯತನಕವೂ ರೌಡಿಯಾಗಿಯೇ ಇರಬೇಕಾಗುತ್ತದೆ. ಅದರೆ ಅದೇ ರೌಡಿ ಎನ್ನುವ ಹಣೆಪಟ್ಟಿಯ ಬದಲು ರಾಜಕೀಯ ನಾಯಕ ಎಂದು ಬದಲಾದರೆ ಯಾವುದೇ ಆತಂಕ ಇರುವುದಿಲ್ಲ ಎನ್ನುವ ನಿಲುವಿಗೆ ಬಂದಿರುವಂತಿದೆ.

ಆದರೆ ಯಾವಾಗ ಸುನೀಲ ಬಿಜೆಪಿ ನಾಯಕರೊಂದಿಗೆ ಕಾಣಿಸಿಕೊಂಡರೋ ಅಂದಿನಿಂದ ವಿಪಕ್ಷಗಳಿಗೆ ಅಸ್ತ್ರವೊಂದು ಸಿಕ್ಕಂತಾಗಿತ್ತು. ಸೈಲೆಂಟ್ ಸುನೀಲ ಪಕ್ಷ ಸೇರುತ್ತಿರುವ ಬಗ್ಗೆ ಬಿಜೆಪಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡಿತ್ತು. ರೌಡಿ ಮೋರ್ಚಾ ತೆರೆಯುವುತ್ತಿದ್ದಾರೆ ಎಂಬಿತ್ಯಾದಿ ಟೀಕೆಗಳನ್ನು ಕಾಂಗ್ರೆಸ್ ನಡೆಸಿತ್ತು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:45 pm, Sat, 18 February 23

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್