ಚಾಮರಾಜಪೇಟೆ: ಈ ಕ್ಷೇತ್ರದ ಮೂಲಕ ರಾಜಕೀಯಕ್ಕೆ ಎಂಟ್ರಿ ಕೊಡುವ ಸುದ್ದಿಯಲ್ಲಿರುವ ಸೈಲೆಂಟ್ ಸುನೀಲ್, ಶಿವರಾತ್ರಿ ಹಿನ್ನಲೆ ಇಂದು ಟೆಂಪಲ್ ರನ್ ಆರಂಭಿಸಿದ್ದಾರೆ. ಮಹದೇಶ್ವರ ದೇಗುಲಕ್ಕೆ ತನ್ನ ಸಹಚರರೊಂದಿಗೆ ಸೈಲೆಂಟ್ ಸುನೀಲ್ ಭೇಟಿ ನೀಡಿದ್ದು, ಕೇಸರಿ ಶಾಲು ಧರಿಸಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಇನ್ನು, ಮಹದೇಶ್ವರ ದೇಗುಲದ ಬಳಿ ಸೇರಿದಂತೆ ಚಾಮರಾಜಪೇಟೆ ಕ್ಷೇತ್ರದ ವಿವಿಧ ಕಡೆಗಳಲ್ಲಿ ಸೈಲೆಂಟ್ ಸುನೀಲ್ (Silent Sunil) ಬ್ಯಾನರ್ಗಳು ಹಾಗೂ ಕಟೌಟ್ಗಳು ರರಾಜಿಸುತ್ತಿವೆ. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸುನೀಲ್, ಎಲ್ಲರಿಗೂ ಶಿವರಾತ್ರಿಯ ಶುಭಾಷಯಗಳು. ವಿಶೇಷ ಏನೂ ಇಲ್ಲ, ನಾನು ರಾಜಕೀಯ ಪ್ರವೇಶ ಹಾಗೂ ಚುನಾವಣೆ (Karnataka Assembly Election 2023) ಸ್ಪರ್ಧೆ ಸುದ್ದಿಯಷ್ಟೇ. ರಾಜಕೀಯ ಸೇರ್ಪಡೆ, ಚುನಾವಣೆಯಲ್ಲಿ ಸ್ಪರ್ಧೆ ಮಾಡಿದರೆ ತಿಳಿಸುತ್ತೇನೆ ಎಂದು ಸ್ಪಷ್ಟನೆ ನೀಡಿದರು. ಟೆಂಪಲ್ ರನ್ ಬಗ್ಗೆ ಪ್ರತಿಕ್ರಿಯಿಸಿದ ಅವರು, ನನ್ನ ಹಿತೈಷಿಗಳು, ಸ್ನೇಹಿತರು ನನ್ನ ಹೆಸರಲ್ಲಿ ಸೇವೆ ಮಾಡುತ್ತಿದ್ದಾರೆ ಎಂದರು.
ರೌಡಿಸಂ ಹಾಗೂ ರಾಜಕಾರಣ ಯಾವಾಗಲೂ ಜೊತೆಜೊತೆಗೆ ಹೆಜ್ಜೆ ಹಾಕುತ್ತವೆ. ರಾಜಕೀಯ ತೆರೆಯ ಮುಂದಿನ ಕೆಲಸ ಮಾಡಿದರೆ, ರೌಡಿಸಂ ತೆರೆಯ ಹಿಂದಿನ ಕೆಲಸ ಮಾಡುತ್ತದೆ. ರೌಡಿಸಂ ಹಿನ್ನೆಲೆಯಿರುವ ಸೋಕಾಲ್ಡ್ ಡಾನ್ಗಳು ಈಗ ರಾಜಕೀಯಕ್ಕೆ ಬರಲು ಮುಂದಾಗಿದ್ದಾರೆ. ಇಂಥವರ ಪೈಕಿ ಸೈಲೆಂಟ್ ಸುನೀಲ ಸಹ ಒಬ್ಬರು. ಈ ಹಿಂದೆ ಚಾಮರಾಜಪೇಟೆಯಲ್ಲಿ ನಡೆದ ರಕ್ತದಾನ ಶಿಬಿರ ಕಾರ್ಯಕ್ರಮದಲ್ಲಿ ಬಹಿರಂಗವಾಗಿಯೇ ಕಾಣಿಸಿಕೊಂಡಿದ್ದರು. ಸದ್ಯ ಚಾಮರಾಜಪೇಟೆಯಲ್ಲಿ ಕಾಂಗ್ರೆಸ್ನ ಪ್ರಭಾವಿ ಶಾಸಕ ಜಮೀರ್ ಎದುರಿಗೆ ಭವಿಷ್ಯ ಕಟ್ಟಿಕೊಳ್ಳಲು ಸೈಲೆಂಟಾಗಿ ಸುನೀಲ ಸ್ಕೆಚ್ ಹಾಕಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ: Viral Video: ಏನೇ ಸಮಸ್ಯೆ ಇದ್ರೂ ಕೂತು ಬಗೆಹರಿಸಿಕೊಳ್ಳೋಣ: ರೌಡಿಶೀಟರ್ ಸೈಲೆಂಟ್ ಸುನೀಲನ ಬಾಯಲ್ಲಿ ಶಾಂತಿ ಮಂತ್ರ
ಸೈಲೆಂಟ್ ಸುನೀಲಾ ಈಗ ರಾಜಕೀಯಕ್ಕೆ ಬರಲು ತಯಾರಿ ನಡೆಸುತ್ತಿದ್ದಾರೆ. ಇದೇ ಕಾರಣಕ್ಕೆ ಸುತ್ತಲು ರೌಡಿಗಳನ್ನು ಹಾಕಿಕೊಂಡು ತಿರುಗುತಿದ್ದವರು ಈಗ ಎಂಎಲ್ಎ, ಎಂಪಿಗಳೊಂದಿಗೆ ತಿರುಗುತ್ತಿದ್ದಾರೆ. ತಾನೊಬ್ಬ ರೌಡಿ ಎನ್ನುವ ಪಟ್ಟ ಹೊಂದಿದ್ದರೆ ಪಟ್ಟಿ ಹೊಂದಿದ್ರೆ ಸಮಾಜದಲ್ಲಿ ಕೊನೆಯತನಕವೂ ರೌಡಿಯಾಗಿಯೇ ಇರಬೇಕಾಗುತ್ತದೆ. ಅದರೆ ಅದೇ ರೌಡಿ ಎನ್ನುವ ಹಣೆಪಟ್ಟಿಯ ಬದಲು ರಾಜಕೀಯ ನಾಯಕ ಎಂದು ಬದಲಾದರೆ ಯಾವುದೇ ಆತಂಕ ಇರುವುದಿಲ್ಲ ಎನ್ನುವ ನಿಲುವಿಗೆ ಬಂದಿರುವಂತಿದೆ.
ಆದರೆ ಯಾವಾಗ ಸುನೀಲ ಬಿಜೆಪಿ ನಾಯಕರೊಂದಿಗೆ ಕಾಣಿಸಿಕೊಂಡರೋ ಅಂದಿನಿಂದ ವಿಪಕ್ಷಗಳಿಗೆ ಅಸ್ತ್ರವೊಂದು ಸಿಕ್ಕಂತಾಗಿತ್ತು. ಸೈಲೆಂಟ್ ಸುನೀಲ ಪಕ್ಷ ಸೇರುತ್ತಿರುವ ಬಗ್ಗೆ ಬಿಜೆಪಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡಿತ್ತು. ರೌಡಿ ಮೋರ್ಚಾ ತೆರೆಯುವುತ್ತಿದ್ದಾರೆ ಎಂಬಿತ್ಯಾದಿ ಟೀಕೆಗಳನ್ನು ಕಾಂಗ್ರೆಸ್ ನಡೆಸಿತ್ತು.
ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 9:45 pm, Sat, 18 February 23