AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೇತಾಜಿ ಸುಭಾಷ್​​​ ಚಂದ್ರ ಬೋಸ್​​ ಮೊಮ್ಮಗ ಚಂದ್ರಬೋಸ್ ಬಿಜೆಪಿಗೆ ರಾಜೀನಾಮೆ

Chandra Bose: ನೇತಾಜಿ ಸುಭಾಷ್​​​ ಚಂದ್ರ ಬೋಸ್​​ ಅವರ ಮೊಮ್ಮಗ ಚಂದ್ರಬೋಸ್ ಅವರು ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ. ಬಿಜೆಪಿ ನಾಯಕರು ನಮ್ಮ ದೂರದೃಷ್ಟಿಗಳನ್ನು ಪ್ರಚಾರ ಮಾಡುವ ಭರವಸೆಗಳನ್ನು ಈಡೇರಿಸಲಿಲ್ಲ ಎಂದು ಹೇಳಿದ್ದಾರೆ.

ನೇತಾಜಿ ಸುಭಾಷ್​​​ ಚಂದ್ರ ಬೋಸ್​​ ಮೊಮ್ಮಗ ಚಂದ್ರಬೋಸ್ ಬಿಜೆಪಿಗೆ ರಾಜೀನಾಮೆ
ಚಂದ್ರ ಬೋಸ್​​
Follow us
ಅಕ್ಷಯ್​ ಪಲ್ಲಮಜಲು​​
|

Updated on:Sep 06, 2023 | 5:33 PM

ದೆಹಲಿ, ಸೆ.6: ನೇತಾಜಿ ಸುಭಾಷ್​​​ ಚಂದ್ರ ಬೋಸ್ (Subhas chandra Bose)​​ ಅವರ ಮೊಮ್ಮಗ ಚಂದ್ರಬೋಸ್  (Chandra Bose) ಅವರು ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ. ಬಿಜೆಪಿ (BJP) ನಾಯಕರು ನಮ್ಮ ದೂರದೃಷ್ಟಿಗಳನ್ನು ಪ್ರಚಾರ ಮಾಡುವ ಭರವಸೆಗಳನ್ನು ಈಡೇರಿಸಲಿಲ್ಲ ಎಂದು ಹೇಳಿದ್ದಾರೆ. ಚಂದ್ರಬೋಸ್ ಅವರು 2016ರಲ್ಲಿ ಬಿಜೆಪಿ ಸೇರಿದ್ದರು ಮತ್ತು 2016ರ ವಿಧಾನಸಭೆ ಮತ್ತು 2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಎರಡು ಬಾರಿ ಸ್ಪರ್ಧಿಸಿದ್ದರು. ನಾನು ಬಿಜೆಪಿಗೆ ಸೇರಿದಾಗ ನೇತಾಜಿ ಸುಭಾಷ್ ಚಂದ್ರ ಬೋಸ್ ಮತ್ತು ಶರತ್ ಚಂದ್ರ ಬೋಸ್ ಅವರನ್ನು ಒಳಗೊಳ್ಳುವ ಸಿದ್ಧಾಂತವನ್ನು ಪ್ರಚಾರ ಮಾಡಲು ನನಗೆ ಅವಕಾಶ ನೀಡಲಾಗುವುದು ಎಂದು ಭರವಸೆ ನೀಡಲಾಯಿತು. ಆದರೆ ಈ ಬಗ್ಗೆ ಪಕ್ಷದ ನಾಯಕರು ಯಾವುದೇ ರೀತಿಯ ಬೆಂಬಲವನ್ನು ನೀಡುತ್ತಿಲ್ಲ ಎಂದು ಹೇಳಿದ್ದಾರೆ.

2016ರಲ್ಲಿ ಪಶ್ಚಿಮ ಬಂಗಾಳದ ಬಿಜೆಪಿ ಉಪಾಧ್ಯಕ್ಷರಾಗಿ ನೇಮಕಗೊಂಡ  ಚಂದ್ರ ಬೋಸ್ ಅವರನ್ನು 2020ರ ಸಾಂಸ್ಥಿಕ ಪುನರ್​​ ರಚನೆ ಸಮಯದಲ್ಲಿ ಅವರನ್ನು ಇದರಿಂದ ಕೈಬಿಡಲಾಯಿತು. ಇನ್ನು ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಚಂದ್ರ ಬೋಸ್​​, ನನ್ನ ಚರ್ಚೆಗಳು (ಬಿಜೆಪಿಯೊಂದಿಗೆ) ಆಗ ಬೋಸ್ ಸಹೋದರರ (ನೇತಾಜಿ ಮತ್ತು ಅವರ ಹಿರಿಯ ಸಹೋದರ ಶರತ್ ಚಂದ್ರ ಬೋಸ್, ಸ್ವಾತಂತ್ರ್ಯ ಹೋರಾಟಗಾರ) ಅಂತರ್ಗತ ಸಿದ್ಧಾಂತದ ಮೇಲೆ ಕೇಂದ್ರೀಕೃತವಾಗಿತ್ತು. ಆಗ ಮತ್ತು ನಂತರ, ನಾನು ಈ ಸಿದ್ಧಾಂತವನ್ನು ಎಲ್ಲೆಡೆ ಪ್ರಚಾರ ಮಾಡುತ್ತೇನೆ ಎಂಬುದನ್ನು ಹೇಳಿ ಬಿಜೆಪಿಗೆ ಸೇರಿದ್ದೆ, ಜತೆಗೆ ಇದು  ನನ್ನ ಪ್ರಮುಖ ಕಾರ್ಯವಾಗಿತ್ತು. ಬಿಜೆಪಿ ವೇದಿಕೆಯಲ್ಲಿ ದೇಶ, ಧರ್ಮ, ಜಾತಿ ಮತ್ತು ಪಂಥದ ಭೇದವಿಲ್ಲದೆ ಎಲ್ಲಾ ಸಮುದಾಯಗಳನ್ನು ಭಾರತೀಯರಾಗಿ ಒಗ್ಗೂಡಿಸುವ ನೇತಾಜ್ ಅವರ ಸಿದ್ಧಾಂತವನ್ನು ಪ್ರಚಾರ ಮಾಡುವ ಪ್ರಾಥಮಿಕ ಉದ್ದೇಶದೊಂದಿಗೆ ಬಿಜೆಪಿಯ ಚೌಕಟ್ಟಿನೊಳಗೆ ಆಜಾದ್ ಹಿಂದ್ ಮೋರ್ಚಾವನ್ನು ರಚಿಸಲು ನಿರ್ಧರಿಸಲಾಯಿತು. ಆದರೆ ನನಗೆ ಈ ಯಾವುದಕ್ಕೂ ಅವಕಾಶಗಳನ್ನು ಬಿಜೆಪಿ ಸರಿಯಾಗಿ ನೀಡಿಲ್ಲ ಮತ್ತು ಬೆಂಬಲವನ್ನು ಕೊಟ್ಟಿಲ್ಲ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇದೀಗ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ರಾಜೀನಾಮೆ ಪತ್ರ ನೀಡಲಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ:  ದೆಹಲಿಯಲ್ಲಿ ಇಂದು ಸಂಜೆ ಪ್ರಧಾನಿ ಮೋದಿಯಿಂದ ಕರ್ತವ್ಯ ಪಥ ಉದ್ಘಾಟನೆ; ನೇತಾಜಿ ಸುಭಾಷ್ ಚಂದ್ರ ಬೋಸ್ ಪ್ರತಿಮೆ ಅನಾವರಣ

ದೇಶವನ್ನು ಒಗ್ಗೂಡಿಸುವ ದೃಷ್ಟಿಯಿಂದ ಈ ನಿರ್ಧಾರ ಅಗತ್ಯ ಎಂದು ಹೇಳಿದ್ದಾರೆ. ಇನ್ನು ನನ್ನ ಈ ವಿಚಾರಧಾರೆಗಳ ಪ್ರಚಾರಕ್ಕೆ ಬಿಜೆಪಿಯಿಂದ, ಕೇಂದ್ರ ಅಥವಾ ಪಶ್ಚಿಮ ಬಂಗಾಳದ ರಾಜ್ಯ ಮಟ್ಟದಲ್ಲಿ ಯಾವುದೇ ಬೆಂಬಲವನ್ನು ಪಡೆದಿಲ್ಲ. ಜನರನ್ನು ತಲುಪಲು ಬಂಗಾಳದ ಕಾರ್ಯತಂತ್ರವನ್ನು ಸೂಚಿಸುವ ವಿವರವಾದ ಪ್ರಸ್ತಾಪವನ್ನು ನಾನು ಮುಂದಿಟ್ಟಿದ್ದೇನೆ. ಆದರೆ ರಾಜ್ಯ ಬಿಜೆಪಿ ನನ್ನ ಈ ಪ್ರಸ್ತಾಪಗಳನ್ನು ನಿರ್ಲಕ್ಷಿಸಲಾಗಿದೆ ಎಂದು ಹೇಳಿದ್ದಾರೆ.

ಚಂದ್ರ ಬೋಸ್ ಅವರ ಹಲವಾರು ವಿಷಯಗಳ ಬಗ್ಗೆ ರಾಜ್ಯ ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ. ಇನ್ನು ಚಂದ್ರ ಬೋಸ್​​ ಅವರ ರಾಜೀನಾಮೆ ಕುರಿತು ಪ್ರತಿಕ್ರಿಯಿಸಿದ ಬಿಜೆಪಿ ರಾಜ್ಯ ವಕ್ತಾರ ಸಮಿಕ್ ಭಟ್ಟಾಚಾರ್ಯ ಅವರು ಚಂದ್ರ ಬೋಸ್​​ ಅವರು 2019ರಲ್ಲಿ ಸಿಎಎಯನ್ನು ವಿರೋಧಿಸಿದ್ದಾರೆ. ಪಕ್ಷದ ನೀತಿ ನಿಯಮಗಳ ರೇಖೆಗೆ ವಿರುದ್ಧವಾಗಿದ್ದಾರೆ. ಸಾಕಷ್ಟು ಸಮಯದಿಂದ ಅವರು ಪಕ್ಷದ ಕಾರ್ಯಚಟುವಟಿಕೆಯಿಂದ ದೂರವಿದ್ದರು ಎಂದು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:04 pm, Wed, 6 September 23

ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಬಿಡಿಎನಲ್ಲಿ ಬಾಕಿಯುಳಿಸಿಕೊಂಡಿರುವ ಸಂಸ್ಥೆಗಳ ಬಡ್ಡಿ ಒಮ್ಮೆ ಮನ್ನಾ: ಡಿಕೆಶಿ
ಬಿಡಿಎನಲ್ಲಿ ಬಾಕಿಯುಳಿಸಿಕೊಂಡಿರುವ ಸಂಸ್ಥೆಗಳ ಬಡ್ಡಿ ಒಮ್ಮೆ ಮನ್ನಾ: ಡಿಕೆಶಿ
ಖರ್ಗೆ ಬಾಯಲ್ಲಿ ಪಾಪಿ ಪಾಕಿಸ್ತಾನದ ಹೆಸರು ಬರಬಾರದು: ವಿ ಸೋಮಣ್ಣ
ಖರ್ಗೆ ಬಾಯಲ್ಲಿ ಪಾಪಿ ಪಾಕಿಸ್ತಾನದ ಹೆಸರು ಬರಬಾರದು: ವಿ ಸೋಮಣ್ಣ
ಅರವಿಂದ ಲಿಂಬಾವಳಿ ಮತ್ತು ಜಿಎಂ ಸಿದ್ದೇಶ್ವರ ಸಭೆಗೆ ಗೈರು
ಅರವಿಂದ ಲಿಂಬಾವಳಿ ಮತ್ತು ಜಿಎಂ ಸಿದ್ದೇಶ್ವರ ಸಭೆಗೆ ಗೈರು
ಮುನಿರತ್ನ ಮೇಲಿರೋದು ಆರೋಪಗಳಲ್ಲ, ಎಫ್​ಐಅರ್ ಆಗಿದೆ: ಖರ್ಗೆ
ಮುನಿರತ್ನ ಮೇಲಿರೋದು ಆರೋಪಗಳಲ್ಲ, ಎಫ್​ಐಅರ್ ಆಗಿದೆ: ಖರ್ಗೆ
ಪರೀಕ್ಷೆ ಬರೆಯುವ ಆಸೆಗೆ ಪೋಷಕ ಮತ್ತು ಪತಿ ಮನೆಯವರಿಂದ ಆಕ್ಷೇಪಣೆ ಇಲ್ಲ
ಪರೀಕ್ಷೆ ಬರೆಯುವ ಆಸೆಗೆ ಪೋಷಕ ಮತ್ತು ಪತಿ ಮನೆಯವರಿಂದ ಆಕ್ಷೇಪಣೆ ಇಲ್ಲ
ತಾಳಿ ಕಟ್ಟಿದ ಮರುಕ್ಷಣವೇ ಪರೀಕ್ಷೆಗೆ ಹಾಜರಾದ ನವವಧು: ವಿಡಿಯೋ ನೋಡಿ
ತಾಳಿ ಕಟ್ಟಿದ ಮರುಕ್ಷಣವೇ ಪರೀಕ್ಷೆಗೆ ಹಾಜರಾದ ನವವಧು: ವಿಡಿಯೋ ನೋಡಿ
ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆ ಸಮೂಹದ ಮೇಲೆ ಈಡಿ ದಾಳಿ ನಡೆದಿದೆ
ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆ ಸಮೂಹದ ಮೇಲೆ ಈಡಿ ದಾಳಿ ನಡೆದಿದೆ