AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚನ್ನಪಟ್ಟಣ ಉಪ ಚುನಾವಣೆ: ಹೆಚ್​ಡಿಕೆಗೆ “ಕರಿಯ ಕುಮಾರಸ್ವಾಮಿ” ಎಂದ ಜಮೀರ್​

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಉಪಚುನಾವಣೆ ಪ್ರಚಾರ ರಂಗೇರಿದೆ. ರಾಜ್ಯದ ಹಲವಾರು ನಾಯಕರು ತಂಡೋಪ ತಂಡವಾಗಿ ಚನ್ನಪಟ್ಟಣಕ್ಕೆ ತೆರಳಿ ಪ್ರಚಾರ ನಡೆಸುತ್ತಿದ್ದಾರೆ. ರವಿವಾರ ರಾತ್ರಿ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದ ಸಚಿವ ಜಮೀರ್ ಅಹ್ಮದ್​ ​ಕಪ್ಪು ವರ್ಣದ ಜನಾಂಗೀಯ ನಿಂದನೆ ಮಾಡಿದ್ದಾರೆ.

ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Edited By: ವಿವೇಕ ಬಿರಾದಾರ|

Updated on:Nov 11, 2024 | 10:05 AM

Share

ರಾಮನಗರ, ನವೆಂಬರ್​ 11: ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ, ಸಚಿವ ಬಿ. ಝಡ್​. ಜಮೀರ್​ ಅಹ್ಮದ್​ ಖಾನ್ (Zameer Ahmed)​​ ಅವರು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಭಾಷಣದ ಮಧ್ಯೆ “ಕರಿಯ ಕುಮಾರಸ್ವಾಮಿ” ಎಂದು ಟೀಕಿಸಿದ್ದಾರೆ. ಈ ಮೂಲಕ ಕಪ್ಪು ವರ್ಣದ ಜನಾಂಗೀಯ ನಿಂದನೆ ಮಾಡಿದ್ದಾರೆ.

ರವಿವಾರ ರಾತ್ರಿ ಚನ್ನಪಟ್ಟಣದಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಸಿಪಿ ಯೋಗೇಶ್ವರ ಪರವಾಗಿ ಜಮೀರ್​ ಅಹ್ಮದ್​ ಪ್ರಚಾರಕ್ಕೆ ಇಳಿದಿದ್ದರು. ಪ್ರಚಾರ ಭಾಷಣದಲ್ಲಿ ಹೆಚ್​ಡಿ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ಮಾಡುವ ಭರದಲ್ಲಿ “ಬಿಜೆಪಿಯವರಿಗಿಂತ ಕಾಲಾ ಕುಮಾರಸ್ವಾಮಿ (ಕರಿಯ ಕುಮಾರಸ್ವಾಮಿ) ಹೆಚ್ಚು ಖತರ್ನಾಕ್​​” ಎಂದು ಉರ್ದುವಿನಲ್ಲಿ ಹೇಳಿದರು.

ಇದನ್ನೂ ಓದಿ: ಸರ್ಕಾರ ಕಿತ್ತಾಕೋಕೆ ಏನು ಕಡ್ಲೆಕಾಯಿ ಗಿಡನಾ? ಕುಮಾರಸ್ವಾಮಿ, ದೇವೇಗೌಡರಿಗೆ ಡಿಕೆಶಿ ಟಾಂಗ್​

ಜಮೀರ್ ಹೇಳಿಕೆ

“ಯೋಗೇಶ್ವರ್ ನಮ್ಮ ಪಕ್ಷದಿಂದ ರಾಜಕೀಯ ಪ್ರಾರಂಭ ಮಾಡಿದರು. ಕೆಲವು ವ್ಯತ್ಯಾಸಗಳಾಗಿ ಬಿಜೆಪಿಗೆ ಹೋದರು. ಜೆಡಿಎಸ್ ಹೋಗಬೇಕು ಅಂತ ಅಂದುಕೊಂಡಿದ್ದರು, ಆದರೆ ಕರಿಯ ಕುಮಾರಸ್ವಾಮಿ, ಬಿಜೆಪಿಗಿಂತ ಡೇಂಜರ್ ಅಂತ‌ ಜೆಡಿಎಸ್​ಗೆ ಹೋಗಿಲ್ಲ. ಈ ಹಿಂದೆ ಹಿಜಾಬ್ ಬೇಡೆ ಅಂದಿದ್ದೀರಿ. ಈಗ ನಿನಗೆ ಮುಸಲ್ಮಾನರ ಮತ ಬೇಕಾ? ಕುಮಾರಸ್ವಾಮಿ ಬಿಜೆಪಿಗೆ ಹೋಗಿ ಮುಸಲ್ಮಾನರನ್ನು ಖರೀದಿ ಮಾಡ್ತಾನಂತೆ. ಏ ಕುಮಾರಸ್ವಾಮಿ ನಿನ್ ರೇಟು ಹೇಳು, ಮುಸಲ್ಮಾನರು ಒಂದೊಂದ್ ಪೈಸೆ ಹಾಕಿ ಇಡೀ ನಿನ್ನ ಕುಟುಂಬವನ್ನೇ ಖರೀದಿ ಮಾಡುತ್ತಾರೆ” ಎಂದು ವಾಗ್ದಾಳಿ ಮಾಡಿದ್ದಾರೆ.

ಜಮೀರ್​ ಅಹ್ಮದ್​ ಈ ಹಿಂದೆಯೂ ಇದೇ ರೀತಿಯಾದ ಹೇಳಿಕೆ ನೀಡಿದ್ದರು. 2021ರಲ್ಲಿ ಬೀದರ್​ ಜಿಲ್ಲೆಯ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣಾ ಪ್ರಚಾರದ ಬಹಿರಂಗ ಸಭೆಯಲ್ಲಿ ಹೆಚ್​ಡಿ ಕುಮಾರಸ್ವಾಮಿ ಅವರನ್ನು ಜಮೀರ್​ ಅಹ್ಮದ್​ ಕಾಲಾ ಕುಮಾರಸ್ವಾಮಿ (ಕರಿಯ ಕುಮಾರಸ್ವಾಮಿ) ಎಂದು ಉರ್ದು ಭಾಷೆಯಲ್ಲಿ ನಿಂದಿಸಿದ್ದರು.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:01 am, Mon, 11 November 24

Follow Us
Syed Nizamuddin
Syed Nizamuddin

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

Read More