ರಾಮನಗರ, ನವೆಂಬರ್ 11: ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ, ಸಚಿವ ಬಿ. ಝಡ್. ಜಮೀರ್ ಅಹ್ಮದ್ ಖಾನ್ (Zameer Ahmed) ಅವರು ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ (HD Kumaraswamy) ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಭಾಷಣದ ಮಧ್ಯೆ “ಕರಿಯ ಕುಮಾರಸ್ವಾಮಿ” ಎಂದು ಟೀಕಿಸಿದ್ದಾರೆ. ಈ ಮೂಲಕ ಕಪ್ಪು ವರ್ಣದ ಜನಾಂಗೀಯ ನಿಂದನೆ ಮಾಡಿದ್ದಾರೆ.
ರವಿವಾರ ರಾತ್ರಿ ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ ಪರವಾಗಿ ಜಮೀರ್ ಅಹ್ಮದ್ ಪ್ರಚಾರಕ್ಕೆ ಇಳಿದಿದ್ದರು. ಪ್ರಚಾರ ಭಾಷಣದಲ್ಲಿ ಹೆಚ್ಡಿ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ಮಾಡುವ ಭರದಲ್ಲಿ “ಬಿಜೆಪಿಯವರಿಗಿಂತ ಕಾಲಾ ಕುಮಾರಸ್ವಾಮಿ (ಕರಿಯ ಕುಮಾರಸ್ವಾಮಿ) ಹೆಚ್ಚು ಖತರ್ನಾಕ್” ಎಂದು ಉರ್ದುವಿನಲ್ಲಿ ಹೇಳಿದರು.
ಇದನ್ನೂ ಓದಿ: ಸರ್ಕಾರ ಕಿತ್ತಾಕೋಕೆ ಏನು ಕಡ್ಲೆಕಾಯಿ ಗಿಡನಾ? ಕುಮಾರಸ್ವಾಮಿ, ದೇವೇಗೌಡರಿಗೆ ಡಿಕೆಶಿ ಟಾಂಗ್
“ಯೋಗೇಶ್ವರ್ ನಮ್ಮ ಪಕ್ಷದಿಂದ ರಾಜಕೀಯ ಪ್ರಾರಂಭ ಮಾಡಿದರು. ಕೆಲವು ವ್ಯತ್ಯಾಸಗಳಾಗಿ ಬಿಜೆಪಿಗೆ ಹೋದರು. ಜೆಡಿಎಸ್ ಹೋಗಬೇಕು ಅಂತ ಅಂದುಕೊಂಡಿದ್ದರು, ಆದರೆ ಕರಿಯ ಕುಮಾರಸ್ವಾಮಿ, ಬಿಜೆಪಿಗಿಂತ ಡೇಂಜರ್ ಅಂತ ಜೆಡಿಎಸ್ಗೆ ಹೋಗಿಲ್ಲ. ಈ ಹಿಂದೆ ಹಿಜಾಬ್ ಬೇಡೆ ಅಂದಿದ್ದೀರಿ. ಈಗ ನಿನಗೆ ಮುಸಲ್ಮಾನರ ಮತ ಬೇಕಾ? ಕುಮಾರಸ್ವಾಮಿ ಬಿಜೆಪಿಗೆ ಹೋಗಿ ಮುಸಲ್ಮಾನರನ್ನು ಖರೀದಿ ಮಾಡ್ತಾನಂತೆ. ಏ ಕುಮಾರಸ್ವಾಮಿ ನಿನ್ ರೇಟು ಹೇಳು, ಮುಸಲ್ಮಾನರು ಒಂದೊಂದ್ ಪೈಸೆ ಹಾಕಿ ಇಡೀ ನಿನ್ನ ಕುಟುಂಬವನ್ನೇ ಖರೀದಿ ಮಾಡುತ್ತಾರೆ” ಎಂದು ವಾಗ್ದಾಳಿ ಮಾಡಿದ್ದಾರೆ.
ಜಮೀರ್ ಅಹ್ಮದ್ ಈ ಹಿಂದೆಯೂ ಇದೇ ರೀತಿಯಾದ ಹೇಳಿಕೆ ನೀಡಿದ್ದರು. 2021ರಲ್ಲಿ ಬೀದರ್ ಜಿಲ್ಲೆಯ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣಾ ಪ್ರಚಾರದ ಬಹಿರಂಗ ಸಭೆಯಲ್ಲಿ ಹೆಚ್ಡಿ ಕುಮಾರಸ್ವಾಮಿ ಅವರನ್ನು ಜಮೀರ್ ಅಹ್ಮದ್ ಕಾಲಾ ಕುಮಾರಸ್ವಾಮಿ (ಕರಿಯ ಕುಮಾರಸ್ವಾಮಿ) ಎಂದು ಉರ್ದು ಭಾಷೆಯಲ್ಲಿ ನಿಂದಿಸಿದ್ದರು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 10:01 am, Mon, 11 November 24