ಆತ್ಮ ಸಾಕ್ಷಿಗೆ ವಿರುದ್ಧವಾದ ದ್ವೇಷದ ರಾಜಕಾರಣ ಬೇಡ: ಹೆಚ್​. ಡಿ ಕುಮಾರಸ್ವಾಮಿ ವಿರುದ್ಧ ಅಶ್ವತ್​ ನಾರಾಯಣ ಕಿಡಿ

ನಮ್ಮ ರಾಮನಗರ ಜಿಲ್ಲೆಯಲ್ಲಿ ನಮ್ಮ ಬಿಜೆಪಿ ಸರ್ಕಾರ ಮಾಡುತ್ತಿರುವ ಅಭಿವೃದ್ಧಿ ಕೆಲಸಗಳನ್ನು ತಡೆಯಲು ಹೆಚ್.ಡಿ. ಕುಮಾರಸ್ವಾಮಿ ಅವರು ವಾಮ ಮಾರ್ಗ ಅನುಸರಿಸುತ್ತಿರುವುದು ಖಂಡನೀಯ ಎಂದು ರಾಮನಗರ ಉಸ್ತುವಾರಿ ಸಚಿವ ಡಾ. ಸಿ ಎನ್​ ಅಶ್ವನಾರಾಯಣ ಆರೋಪಿಸಿದ್ದಾರೆ.

ಆತ್ಮ ಸಾಕ್ಷಿಗೆ ವಿರುದ್ಧವಾದ ದ್ವೇಷದ ರಾಜಕಾರಣ ಬೇಡ: ಹೆಚ್​. ಡಿ ಕುಮಾರಸ್ವಾಮಿ ವಿರುದ್ಧ ಅಶ್ವತ್​ ನಾರಾಯಣ ಕಿಡಿ
ಸಚಿವ ಸಿ ಎನ್ ಅಶ್ವತ್​ನಾರಾಯಣ
Follow us
TV9 Web
| Updated By: ವಿವೇಕ ಬಿರಾದಾರ

Updated on:Oct 01, 2022 | 4:11 PM

ಬೆಂಗಳೂರು: ನಮ್ಮ ರಾಮನಗರ ಜಿಲ್ಲೆಯಲ್ಲಿ ನಮ್ಮ ಬಿಜೆಪಿ ಸರ್ಕಾರ ಮಾಡುತ್ತಿರುವ ಅಭಿವೃದ್ಧಿ ಕೆಲಸಗಳನ್ನು ತಡೆಯಲು ಹೆಚ್.ಡಿ. ಕುಮಾರಸ್ವಾಮಿ (HD Kumarswamy) ಅವರು ವಾಮ ಮಾರ್ಗ ಅನುಸರಿಸುತ್ತಿರುವುದು ಖಂಡನೀಯ ಎಂದು ರಾಮನಗರ ಉಸ್ತುವಾರಿ ಸಚಿವ ಡಾ. ಸಿ ಎನ್​ ಅಶ್ವನಾರಾಯಣ (C N Ashwathnarayan) ಆರೋಪಿಸಿದ್ದಾರೆ. “ಅಧಿಕಾರವೂ ತಪ್ಪಬಾರದು, ಅಭಿವೃದ್ಧಿಯೂ ಆಗಬಾರದು ಎಂಬ ಸಿದ್ಧಾಂತಕ್ಕೆ ಕಟ್ಟುಬೀಳುವ ಬದಲು ನಾವು ಮಾಡುತ್ತಿರುವ ಜನಪರ ಕಾರ್ಯಗಳನ್ನು ಬೆಂಬಲಿಸಿ. ಮಾನ್ಯ ಕುಮಾರಸ್ವಾಮಿ ಅವರೇ, ಅಧಿಕಾರ ಬರುತ್ತದೆ, ಹೋಗುತ್ತದೆ. ಇದ್ದಷ್ಟು ದಿನ ಎಷ್ಟು ಜನಪರ ಕೆಲಸ ಮಾಡಿದ್ದೇವೆ ಎಂಬುದಷ್ಟೇ ಶಾಶ್ವತವಾಗಿ ಉಳಿಯುತ್ತದೆ ” ಎಂದು ಖಾರವಾಗಿ ಟ್ವೀಟ್​ ಮಾಡಿದ್ದಾರೆ.

ನಮ್ಮ ಸರ್ಕಾರದ ಅವಧಿಯಲ್ಲಿ ಹಿಂದೆಂದೂ ಕಾಣದಷ್ಟು ಅಭಿವೃದ್ಧಿ ಕಾರ್ಯ ಜಿಲ್ಲೆಯಲ್ಲಿ ನಡೆಯುತ್ತಿವೆ ಎಂಬುದು ನಿಮಗೂ ತಿಳಿದಿದೆ. ಆತ್ಮ ಸಾಕ್ಷಿಗೆ ವಿರುದ್ಧವಾದ ದ್ವೇಷದ ರಾಜಕಾರಣ ಬೇಡ ಎಂದು ಹೇಳಿದರು.

ಯೋಗೇಶ್ವರ್ ಕಾರಿನ ಮೇಲೆ ಕಲ್ಲು, ಮೊಟ್ಟೆ ಎಸೆದಿದ್ದು ಸರಿಯಲ್ಲ : ಸಿಎಂ ಬೊಮ್ಮಾಯಿ

ಯೋಗೇಶ್ವರ್ ಕಾರಿನ ಮೇಲೆ ಕಲ್ಲು, ಮೊಟ್ಟೆ ಎಸೆದಿದ್ದು ಸರಿಯಲ್ಲ. ಈ ದಾಳಿಯನ್ನು ಕಟುವಾಗಿ ಖಂಡಿಸುತ್ತೇನೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ. ಭೈರಾಪಟ್ಟಣ ಬಳಿ ಬಿಜೆಪಿ ಎಂಎಲ್​ಸಿ ಯೋಗೇಶ್ವರ್​ ಕಾರಿನ ಮೇಲೆ ದಾಳಿ ಮಾಡಲಾಗಿದೆ. ವಿಷಯಗಳು ಏನೇ ಇರಲಿ ಕಾನೂನಾತ್ಮಕವಾಗಿ ಬಗೆಹರಿಸಿಕೊಳ್ಳಬೇಕು. ಕಾನೂನನ್ನು ಯಾರೂ ಕೈಗೆತ್ತಿಕೊಳ್ಳಬಾರದು ಎಂದು ಟ್ವೀಟ್​ ಮೂಲಕ ಸಿಎಂ ಬೊಮ್ಮಾಯಿ ಸೂಚಿಸಿದ್ದಾರೆ.

ರಾಜ್ಯದಲ್ಲಿ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:10 pm, Sat, 1 October 22