ಬೆಂಗಳೂರು: ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ ಕುಮಾರಸ್ವಾಮಿಗೆ (MP Kumaraswamy) ಸಂಕಷ್ಟ ಎದುರಾಗಿದ್ದು, ಚೆಕ್‌ಬೌನ್ಸ್ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದಿಂದ ಚಿಕ್ಕಮಗಳೂರು ಎಸ್‌ಪಿ ಮೂಲಕ ಜಾಮೀನು ರಹಿತ ವಾರಂಟ್ ಜಾರಿಗೆ ನಿನ್ನೆ ಸೂಚನೆ ನೀಡಲಾಗಿತ್ತು. ಸದ್ಯ ಬಂಧನ ಭೀತಿ ಹಿನ್ನೆಲೆ ಎಂ.ಪಿ.ಕುಮಾರಸ್ವಾಮಿ ತಡೆಯಾಜ್ಞೆ ಕೋರಿ ಸೆಷನ್ಸ್ ಕೋರ್ಟ್ ಮೊರೆ ಹೋಗಿದ್ದು, ಷರತ್ತುಬದ್ಧ ರಿಲೀಫ್ ನೀಡಿದೆ. ಎಂ.ಪಿ.ಕುಮಾರಸ್ವಾಮಿ ಶಿಕ್ಷೆ ಅಮಾನತ್ತಿನಲ್ಲಿಟ್ಟು ಆದೇಶ ಹೊರಡಿಸಿದ್ದು, ಚೆಕ್‌ಬೌನ್ಸ್ ಕೇಸ್ ತೀರ್ಪಿನ ಮೊತ್ತದಲ್ಲಿ ಶೇ.20 ರಷ್ಟು ಠೇವಣಿಯನ್ನು 60 ದಿನಗಳಲ್ಲಿ ಇಡಲು ಸೆಷನ್ಸ್ ಕೋರ್ಟ್ ಸೂಚನೆ ನೀಡಿದೆ. ವಿಚಾರಣಾ ನ್ಯಾಯಾಲಯದಲ್ಲಿ 50 ಸಾವಿರ ಬಾಂಡ್, ಶ್ಯೂರಿಟಿ ನೀಡಲು ಆದೇಶಿಸಿದೆ. ಹೂವಪ್ಪಗೌಡ ಎಂಬುವರು ಚೆಕ್ ಬೌನ್ಸ್ ಕೇಸ್ ದಾಖಲಿಸಿದ್ದರು. ಒಟ್ಟು 8 ಕೇಸ್ಗಳಲ್ಲಿ 1.38 ಕೋಟಿ ಹಣ ಪಾವತಿಸಬೇಕಿತ್ತು. ಇಲ್ಲವಾದರೆ ತಲಾ 6 ತಿಂಗಳು ಜೈಲು ಶಿಕ್ಷೆ ಅನುಭವಿಸಬೇಕೆಂದು ತೀರ್ಪು ನೀಡಿತ್ತು.
ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ ಕುಮಾರಸ್ವಾಮಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆ ಎಂ.ಪಿ.ಕುಮಾರಸ್ವಾಮಿ ವಿರುದ್ಧ ಮೂಡಿಗೆರೆ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ. ಮಹಿಳಾ ಸಂಘಟನೆಗಳಿಗೆ ಸರ್ಕಾರಿ ಅನುದಾನದ ಚೆಕ್ಗಳ ವಿತರಣೆ ಮಾಡಿದ್ದಾರೆ ಎಂದು ಆರೋಪಿ ಮೂಡಿಗೆರೆ ತಾಲೂಕು ಚುನಾವಣಾಧಿಕಾರಿ ಪಿ.ರಾಜೇಶ್ರಿಂದ ದೂರು ನೀಡಲಾಗಿದೆ. ಕಾರ್ಯಕ್ರಮವನ್ನು ಅರ್ಧಕ್ಕೆ ನಿಲ್ಲಿಸಿದ್ದ ಚುನಾವಣಾ ಅಧಿಕಾರಿಗಳು ನೀತಿ ಸಂಹಿತೆ ಉಲ್ಲಂಘನೆಯಡಿ ದೂರು ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ: ಚೆಕ್‌ಬೌನ್ಸ್ ಪ್ರಕರಣ: ಶಾಸಕ ಎಂಪಿ ಕುಮಾರಸ್ವಾಮಿ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ
ಎಂ.ಪಿ. ಕುಮಾರಸ್ವಾಮಿ ವಿರುದ್ಧ ಬಿಜೆಪಿ ಕಾರ್ಯಕರ್ತರ ಬಂಡಾಯ ಮುಂದುವರೆದಿದೆ. ಮಾರ್ಚ್ 22ರಂದು ನೂರಾರು ಕಾರ್ಯಕರ್ತರು ಸಿ.ಟಿ. ರವಿ ಮನೆಗೆ ಮುತ್ತಿಗೆ ಹಾಕಿ ಶಾಸಕ ಎಂ.ಪಿ. ಕುಮಾರಸ್ವಾಮಿ ಅವರಿಗೆ ಈ ಬಾರಿ ಟಿಕೆಟ್ ನೀಡಬಾರದು ಎಂದು ಒತ್ತಾಯಿಸಿದ್ದರು. ಇದಕ್ಕೆ ಕಾರಣ, ಮೂಡಿಗೆರೆ ಶಾಸಕ ಕುಮಾರಸ್ವಾಮಿಗೆ ಜೆಡಿಎಸ್ ಮುಖಂಡೆ ಭಾರತಿ ಕಂಟಕವಾಗಿದ್ದಾರಂತೆ. ತನ್ನ ಆಪ್ತೆಯ ಮೇಲಿನ ವ್ಯಾಮೋಹದಿಂದಲೇ ಶಾಸಕರು ತಮ್ಮ ಕಾರ್ಯಕರ್ತರನ್ನು ದೂರ ಮಾಡಿದ್ದು ಈ ವಿಚಾರ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ.
ಇದನ್ನೂ ಓದಿ: ಅಕ್ರಮ ಕುಕ್ಕರ್ ಸಂಗ್ರಹಿಸಿಟ್ಟ ಆರೋಪ: ಬಿಟಿಎಂ ಲೇಔಟ್ ಬಿಜೆಪಿ ಟಿಕೆಟ್ ಆಕಾಂಕ್ಷಿ ಅನಿಲ್ ಶೆಟ್ಟಿ ವಿರುದ್ಧ FIR
ಮೂಡಿಗೆರೆ ಜೆಡಿಎಸ್ ಮುಖಂಡೆ ಭಾರತಿಗಾಗಿ ಎಂ.ಪಿ. ಕುಮಾರಸ್ವಾಮಿಯವರು ಜನರ ಕೋಟ್ಯಾಂತರ ರೂಪಾಯಿ ತೆರಿಗೆ ಹಣ ಖರ್ಚು ಮಾಡಿದ್ದಾರೆ. ಕಾರ್ಯಕರ್ತರ ವಿರೋಧದ ನಡುವೆಯೂ ಸರ್ಕಾರಿ ದುಡ್ಡನ್ನ ತನ್ನ ಆಪ್ತೆಗಾಗಿ ಖರ್ಚು ಮಾಡಿದ್ದಾರೆ. ತನ್ನ ಆಪ್ತೆಯ ಹೋಂ ಸ್ಟೇ ರಸ್ತೆಗೆ ಲಕ್ಷಾಂತರ ರೂಪಾಯಿ ಅನುದಾನ ನೀಡಿದ್ದಾರೆ. ನೆರೆ ಪರಿಹಾರದ ಹಣವನ್ನು ಹೋಂ ಸ್ಟೇ ರಸ್ತೆಗಾಗಿ ಖರ್ಚು ಮಾಡಿದ್ದಾರೆ. ಹೋಂ ಸ್ಟೇಗೆ ಸಿಮೆಂಟ್ ರಸ್ತೆ, ಚರಡಿ, ವಿದ್ಯುತ್ ಪೂರೈಕೆಗಾಗಿ 80 ಲಕ್ಷ ಅನುದಾನ ನೀಡಿದ್ದಾರೆ ಎಂದು ಕಾರ್ಯಕರ್ತರು ಶಾಸಕನ ಮೇಲೆ ಅಸಮಾಧಾನಗೊಂಡಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 9:24 pm, Fri, 31 March 23