AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನ್ನಭಾಗ್ಯ ಯೋಜನೆಗೆ ಅಕ್ಕಿ ನೀಡಲು ಛತ್ತೀಸ್‌ಗಢ ಸರ್ಕಾರ ಒಪ್ಪಿದೆ: ಆಹಾರ ಇಲಾಖೆ ಸಚಿವ ಮುನಿಯಪ್ಪ

ರಾಜ್ಯ ಸರ್ಕಾರಕ್ಕೆ ಅನ್ನಭಾಗ್ಯ ಯೋಜನೆ ಸವಾಲಾಗಿದ್ದು, ಅಕ್ಕಿ ನೀಡಲು ಛತ್ತೀಸ್‌ಗಢ ಸರ್ಕಾರ ಒಪ್ಪಿದೆ. ಆದರೆ ಎಷ್ಟು ಕೊಡುತ್ತೇವೆ ಎಂಬುದು ಛತ್ತೀಸ್‌ಗಢ ಸರ್ಕಾರ ತೀರ್ಮಾನಿಸಬೇಕಾಗುತ್ತೆ ಎಂದು ಆಹಾರ ಇಲಾಖೆ ಸಚಿವ ಮುನಿಯಪ್ಪ ಹೇಳಿದ್ದಾರೆ.

ಅನ್ನಭಾಗ್ಯ ಯೋಜನೆಗೆ ಅಕ್ಕಿ ನೀಡಲು ಛತ್ತೀಸ್‌ಗಢ ಸರ್ಕಾರ ಒಪ್ಪಿದೆ: ಆಹಾರ ಇಲಾಖೆ ಸಚಿವ ಮುನಿಯಪ್ಪ
ಆಹಾರ ಇಲಾಖೆ ಸಚಿವ ಮುನಿಯಪ್ಪ
ಗಂಗಾಧರ​ ಬ. ಸಾಬೋಜಿ
|

Updated on: Jun 17, 2023 | 8:53 PM

Share

ಬೆಂಗಳೂರು: ಅನ್ನಭಾಗ್ಯ ಯೋಜನೆ (Anna Bhagya Scheme) ಗೆ ಅಕ್ಕಿ ನೀಡಲು ಛತ್ತೀಸ್‌ಗಢ ಸರ್ಕಾರ ಒಪ್ಪಿದೆ. ಎಷ್ಟು ಕೊಡುತ್ತೇವೆ ಎಂದು ಛತ್ತೀಸ್‌ಗಢ ಸರ್ಕಾರ ತೀರ್ಮಾನಿಸಬೇಕಾಗುತ್ತೆ ಎಂದು ಆಹಾರ ಇಲಾಖೆ ಸಚಿವ ಮುನಿಯಪ್ಪ (KH Muniyappa) ಹೇಳಿದರು. ಅನ್ನಭಾಗ್ಯ ಯೋಜನೆಗೆ ಅಕ್ಕಿ ವ್ಯವಸ್ಥೆ ಮಾಡುವ ಸಂಬಂಧ ಗೃಹಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಸಭೆ ಮಾಡಲಾಗಿದೆ. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪತ್ರ ವ್ಯವಹಾರ ಮಾಡುವಂತೆ ಸಿಎಸ್‌ಗೆ ಸೂಚನೆ ನೀಡಿದ್ದೇವೆ. ಓಪನ್ ಮಾರ್ಕೆಟ್‌ನಲ್ಲಿ ಅಕ್ಕಿಯನ್ನು ಖರೀದಿಸಲ್ಲ. NCCF ಸೇರಿ ಕೇಂದ್ರ ಸ್ವಾಯತ್ತ ಸಂಸ್ಥೆಗಳ ಜೊತೆ ಸಂಪರ್ಕದಲ್ಲಿದ್ದೇವೆ ಎಂದು ತಿಳಿಸಿದರು.

ಅಕ್ಕಿ ವಿಚಾರದಲ್ಲಿ ಕೇಂದ್ರ ರಾಜಕೀಯ ಮಾಡುತ್ತಿದೆ

2 ಮಾರ್ಗಗಳ ಮೂಲಕ ಅಕ್ಕಿ ಖರೀದಿ ಮಾಡುವ ಕೆಲಸ ಮಾಡುತ್ತಿದ್ದೇವೆ. ನಾನು ಬೇರೆ ರಾಜ್ಯದ ಪ್ರವಾಸ ಕೈಗೊಳ್ಳುವ ಅಗತ್ಯತೆ ಇಲ್ಲ. ಸಿಎಸ್‌ರವರೇ ಛತ್ತೀಸ್‌ಗಢದಿಂದ ಅಕ್ಕಿ ಖರೀದಿಸುವ ಕೆಲಸ ಮಾಡುತ್ತಾರೆ. ಕೇಂದ್ರ ಸರ್ಕಾರದ ರಾಜಕೀಯದಿಂದ ತಡವಾಗಿದೆ ಅಷ್ಟೇ. ಆದಷ್ಟು ಬೇಗ 10 ಕೆ.ಜಿ ಅಕ್ಕಿ ಕೊಡುತ್ತೇವೆ, ಸಿಎಂ ಸಿದ್ಧರಾಮಯ್ಯ ಹಣ ಮೀಸಲಿಟ್ಟಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: ಅನ್ನಭಾಗ್ಯ ಯೋಜನೆ ಅಕ್ಕಿಗಾಗಿ ಅನ್ಯ ರಾಜ್ಯಗಳ ಮೊರೆ ಹೋದ ಸರ್ಕಾರ; ತೆಲಂಗಾಣ ಸಿಎಂಗೆ ಸಿದ್ದರಾಮಯ್ಯ ಕರೆ

ಅನ್ನಭಾಗ್ಯ ಯೋಜನೆ ಜುಲೈ 1ರಂದು ಜಾರಿಯಾಗುವುದು ಡೌಟ್​

ಅನ್ನಭಾಗ್ಯ ಯೋಜನೆ ಇದೇ ಜುಲೈ 1 ರಂದು ಜಾರಿ ಮಾಡಲು ಕಾಂಗ್ರೆಸ್ ಸರ್ಕಾರ ಚಿಂತನೆ ನಡೆಸಿತ್ತು. ಆದರೆ ಅಕ್ಕಿ ಪೂರೈಸಲು ಕೇಂದ್ರ ಸರ್ಕಾರ ನಿರಾಕರಿಸಿದೆ. ಹೀಗಾಗಿ ಜುಲೈ 1ರಂದು ಈ ಯೋಜನೆ ಜಾರಿಯಾಗುವುದು ಬಹುತೇಕ ಡೌಟ್ ಎನ್ನಲಾಗುತ್ತಿದೆ.

ಇದನ್ನೂ ಓದಿ: ರಾಜ್ಯ ಸರ್ಕಾರ ನ್ಯಾಯವಾಗಿ ಒಟ್ಟು 15 ಕೆಜಿ ಅಕ್ಕಿ ಕೊಡಬೇಕು: ಸಂಸದ ತೇಜಸ್ವಿ ಸೂರ್ಯ ಆಗ್ರಹ

ಸದ್ಯ ಅನ್ನಭಾಗ್ಯ ಜಾರಿಗೆ ಎದುರಾಗಿರುವ ಅಕ್ಕಿ ಸಮಸ್ಯೆ ನಿವಾರಿಸಲು ರಾಜ್ಯ ಆಹಾರ ಇಲಾಖೆ ಪಂಜಾಬ್, ಹರಿಯಾಣ, ತೆಲಂಗಾಣ, ಆಂಧ್ರಪ್ರದೇಶ, ಛತ್ತೀಸ್‌ಘಡ್, ಮಧ್ಯಪ್ರದೇಶ ರಾಜ್ಯಗಳನ್ನ ಸಂಪರ್ಕ ಮಾಡಿದೆ. ಆ ಮೂಲಕ ಸದ್ಯ ಛತ್ತೀಸ್‌ಘಡ್ ಸರ್ಕಾರ ಅಕ್ಕಿ ನೀಡಲು ಒಪ್ಪಿಕೊಂಡಿದೆ. ರಾಜ್ಯದ ಜನತೆಗೆ ಪ್ರತಿ ತಿಂಗಳಿಗೆ ಉಚಿತವಾಗಿ ವಿತರಿಸಲು ಒಟ್ಟು 2.28 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?