ರಾಜ್ಯದಲ್ಲಿ ಶುರುವಾಯ್ತು ಪಕ್ಷಾಂತರ ಪರ್ವ: ಚಿಕ್ಕಬಳ್ಳಾಪುರ ಜಿಲ್ಲೆಯ ಪ್ರಮುಖ ಮುಖಂಡರು ಬಿಜೆಪಿ ಸೇರ್ಪಡೆ

ರಾಜ್ಯ ರಾಜಕಾರಣದಲ್ಲಿ ಪಕ್ಷಾಂತರ ಪರ್ವ ಶುರುವಾಗಿದೆ. ಇಂದು ಚಿಕ್ಕಬಳ್ಳಾಪುರ ಜಿಲ್ಲೆಯ ಪ್ರಮುಖ ಮುಖಂಡರು ಬಿಜೆಪಿ ಸೇರ್ಪಡೆಯಾದರು. ಈ ವೇಳೆ ಬೊಮ್ಮಾಯಿ ಹಾಗೂ ಕಟೀಲ್ ಮಹತ್ವದ ಹೇಳಿಕೆ ಕೊಟ್ಟರು.

ರಾಜ್ಯದಲ್ಲಿ ಶುರುವಾಯ್ತು ಪಕ್ಷಾಂತರ ಪರ್ವ: ಚಿಕ್ಕಬಳ್ಳಾಪುರ ಜಿಲ್ಲೆಯ ಪ್ರಮುಖ ಮುಖಂಡರು ಬಿಜೆಪಿ ಸೇರ್ಪಡೆ
ಚಿಕ್ಕಬಳ್ಳಾಪುರ ಜಿಲ್ಲೆಯ ಮುಖಂಡರು ಬಿಜೆಪಿ ಸೇರ್ಪಡೆ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Jan 30, 2023 | 4:34 PM

ಬೆಂಗಳೂರು: ವಿಧಾನಸಭೆ ಚುನಾವಣೆ (Karnataka Assembly Elections 2023)ಸಮೀಪಿಸುತ್ತಿದ್ದಂತೆಯೇ ರಾಜ್ಯದಲ್ಲಿ ಒಂದು ಪಕ್ಷದಿಂದ ಮತ್ತೊಂದು ಪಕ್ಷಕ್ಕೆ ಜಿಗಿಯುವ ಪಕ್ಷಾಂತರ ಪರ್ವ ಶುರುವಾಗಿದೆ. ಇಂದು(ಜನವರಿ 30) ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆಯ ಹಲವು ಮುಖಂಡರು ಬಿಜೆಪಿ ಸೇರ್ಪಡೆಯಾದರು. ರಾಜ್ಯ ಒಕ್ಕಲಿಗರ ಸಂಘದ ಪ್ರಧಾನ ಕಾರ್ಯದರ್ಶಿ ಮತ್ತು ಜೆಡಿಎಸ್ ಮುಖಂಡ ಕೋನಪ್ಪರೆಡ್ಡಿ, ಚಿಂತಾಮಣಿ ಕ್ಷೇತ್ರದ ಜಿ.ಎನ್. ವೇಣುಗೋಪಾಲ್, ವಾಣಿ ಕೃಷ್ಣಾರೆಡ್ಡಿ, ಬಮೂಲ್ ನಿರ್ದೇಶಕ ಶ್ರೀನಿವಾಸ್, ಜಿ.ಪಂ. ಮಾಜಿ ಸದಸ್ಯ ಪಿ.ಎಸ್. ಸುಬ್ಬಾರೆಡ್ಡಿ ಅವರು ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮ್ಮುಖದಲ್ಲಿ ಬಿಜೆಪಿ ಸೇರಿದರು.

ಇದನ್ನೂ ಓದಿ: ಚುನಾವಣೆ ಹೊತ್ತಲ್ಲೇ ಕೇಸರಿ ಪಡೆಗೆ ಬಿಗ್ ಶಾಕ್, ಬಿಜೆಪಿ ತೊರೆದು ಜೆಡಿಎಸ್​ ಸೇರಿದ ಮಾಜಿ ಶಾಸಕ ಬಸವರಾಜ ಮಂಡಿಮಠ

ಪಕ್ಷ ಸೇರ್ಪಡೆ ಬಳಿಕ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಬಿಜೆಪಿ ಒಂದು ಕುಟುಂಬ ಇದ್ದ ಹಾಗೆ. ಇವತ್ತು ಪಕ್ಷಕ್ಕೆ ಸೇರಿದವರು ನಮ್ಮ ಕುಟುಂಬಕ್ಕೆ ಸೇರಿದವರು. ಎಲ್ಲರನ್ನೂ ಇಲ್ಲಿ ಗೌರವದಿಂದ ನೋಡಿಕೊಳ್ಳುತ್ತೇವೆ. ಎಲ್ಲಾ ರಾಜ್ಯಗಳಲ್ಲಿ ಸದೃಢವಾಗಿರುವ, ಭವಿಷ್ಯವಿರುವ ಪಕ್ಷ ಬಿಜೆಪಿ. ಬಿಜೆಪಿಗೆ ಬರುವವರ ಭವಿಷ್ಯವೂ ಉತ್ತಮವಾಗುತ್ತದೆ. ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳು ಅಭಿವೃದ್ಧಿ ಆಗುತ್ತಿವೆ. ಈ ಎರಡೂ ಕಡೆಯೂ ನಾವೇ ಪ್ರಬಲರು ಅಂತ ಕಾಂಗ್ರೆಸ್, ಜೆಡಿಎಸ್ ಅಂದುಕೊಂಡಿದ್ದಾರೆ. ಎರಡೂ ಜಿಲ್ಲೆಗಳಲ್ಲೂ ರಾಜಕೀಯವಾಗಿ ದೊಡ್ಡ ಬದಲಾವಣೆ ಆಗುತ್ತಿದೆ ಎಂದು ಹೇಳಿದರು.

2023 ರಲ್ಲಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತದೆ. ಕಾಂಗ್ರೆಸ್ ನವರು ಹತಾಶೆಯಾಗಿ ಏನೇನೋ ಭರವಸೆ ಕೊಡುತ್ತಿದ್ದಾರೆ. ಕಾಂಗ್ರೆಸ್ ನವರ ಮಾತಿಗೂ ಕೃತಿಗೂ ಸಂಬಂಧವಿಲ್ಲ. ಅವರಿಗೆ ಜನ ಈಗಾಗಲೇ ಅಧಿಕಾರ ಕೊಟ್ಟು ನೋಡಿ ಸಾಕಾಗಿದ್ದಾರೆ ಎಂದು ಬಸವರಾಜ ಬೊಮ್ಮಾಯಿ ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

ಇನ್ನು ಇದೇ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಾತನಾಡಿ, ದೇಶ ಹಾಗೂ ರಾಜ್ಯದಲ್ಲಿ ರಾಜಕೀಯ ಪರಿವರ್ತನೆ ಆಗುತ್ತಿದೆ. 5 ವರ್ಷದ ಹಿಂದೆ ಜನ ಕಾಂಗ್ರೆಸ್ ಮತ್ತು ಜೆಡಿಎಸ್ ತಿರಸ್ಕರಿಸಿದರು. ಆದರೆ ಬಿಜೆಪಿ ಅಧಿಕಾರಕ್ಕೆ ಬರಬಾರದು ಎಂದಯ ಕುಟುಂಬವಾದ ಮತ್ತು ಪರಿವಾರವಾದ ಒಂದಾಗಿ ಅನೈತಿಕ ಸಂಬಂಧದ ಮೂಲಕ ಶುರುವಾಯಿತು. ಕಾಂಗ್ರೆಸ್ ಪಕ್ಷದ ಬಸ್ ಹೊರಟಿದ್ದು, ಅದು ಪಂಚರ್ ಆಗಲಿದೆ. ಜೆಡಿಎಸ್​​ನ ಪಂಚರತ್ನ ರಥಯಾತ್ರೆ ಹಾಸನದಲ್ಲಿ ಪಂಚರ್ ಮಾಡುವ ಕೆಲಸ ಆಗುತ್ತಿದೆ ಎಂದು ವ್ಯಂಗ್ಯವಾಡಿದರು.

ಮತ್ತಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ