ತಾಕತ್​ ಇದ್ರೆ ಎಫ್​ಸಿಐ ಬಗ್ಗೆ ಚರ್ಚೆಗೆ ಬನ್ನಿ: ಪ್ರತಾಪ್ ಸಿಂಹಗೆ ಪ್ರದೀಪ್ ಈಶ್ವರ್ ಬಹಿರಂಗ ಸವಾಲ್

ಅಕ್ಕಿಗಾಗಿ ರಾಜಕೀಯ ಕಿತ್ತಾಟ ಮುಂದುವರಿದಿದ್ದು, ಬಿಜೆಪಿ ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್​ ತಿರುಗೇಟು ಕೊಟ್ಟಿದ್ದಾರೆ. ಅಲ್ಲದೇ ಅವರನ್ನು ಚರ್ಚೆಗೆ ಬನ್ನಿ ಎಂದು ಸವಾಲು ಹಾಕಿದ್ದಾರೆ.

ತಾಕತ್​ ಇದ್ರೆ ಎಫ್​ಸಿಐ ಬಗ್ಗೆ ಚರ್ಚೆಗೆ ಬನ್ನಿ: ಪ್ರತಾಪ್ ಸಿಂಹಗೆ ಪ್ರದೀಪ್ ಈಶ್ವರ್ ಬಹಿರಂಗ ಸವಾಲ್
ಪ್ರತಾಪ್ ಸಿಂಹ- ಪ್ರದೀಪ್​ ಈಶ್ವರ್​
Follow us
ರಮೇಶ್ ಬಿ. ಜವಳಗೇರಾ
|

Updated on:Jun 23, 2023 | 12:16 PM

ಚಿಕ್ಕಬಳ್ಳಾಫುರ: ಮೊದಲ ಬಾರಿಗೆ ಗೆದ್ದಿರುವ ಶಾಸಕರಿಗೆ, ಗೊತ್ತಿಲ್ಲದವರಿಗೆ ಹಿರಿಯ ಶಾಸಕರು ಒರಿಯಂಟೇಶನ್ ಪ್ರೋಗ್ರಾಂ ನಡೆಸುವ ಅಗತ್ಯವಿದೆ ಎಂದಿದ್ದ ಮೈಸೂರು ಬಿಜೆಪಿ ಸಂಸದ ಪ್ರತಾಪ್ ಸಿಂಹಗೆ(Pratap Simha) ಚಿಕ್ಕಬಳ್ಳಾಫುರ ಶಾಸಕ ಪ್ರದೀಪ್​ ಈಶ್ವರ್​ (Pradeep Eshwar) ತಿರುಗೇಟು ನೀಡಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಇಂದು(ಜೂನ್ 23) ಸುದ್ದಿಗಾರರೊಂದಿಗೆ ಮಾತನಾಡಿದ ಪ್ರದೀಪ್ ಈಶ್ವರ್, ಸಿದ್ದರಾಮಯ್ಯ (Siddaramaiah), ಎಂ.ಬಿ.ಪಾಟೀಲ್ (MB Patil)ಬಗ್ಗೆ ವೈಯಕ್ತಿಕ ಹೇಳಿಕೆ ಕೊಡುತ್ತಿದ್ದಾರೆ. ವಿಷಯಾಧಾರಿತ ಬಿಟ್ಟು ವೈಯಕ್ತಿಕ ವಿಚಾರ ಬಗ್ಗೆ ಮಾತನಾಡುತ್ತಿದ್ದಾರೆ. ಪ್ರತಾಪ್ ಸಿಂಹ ಅವರೇ ನೀವು ಪತ್ರಕರ್ತರಾಗಿದ್ದಾಗ ಸ್ವಲ್ಪ ಓದುತ್ತಿದ್ರಿ. ಸಂಸದರಾದ ಮೇಲೆ ಓದುವುದೇ ಬಿಟ್ಟಿದ್ದೀರಿ. ನಿಮಗೆ ತಾಕತ್​ ಇದ್ದರೆ ಎಫ್​ಸಿಐ ವಿಚಾರದಲ್ಲಿ ಬಹಿರಂಗ ಚರ್ಚೆಗೆ ಬನ್ನಿ ಎಂದು ಸವಾಲು​ ಹಾಕಿದರು.

ಇದನ್ನೂ ಓದಿ: ಕೇಂದ್ರ ಗೃಹ ಅಮಿತ್​ ಶಾ ಭೇಟಿಯಾಗಿ ಒಂದು ಪ್ರಮುಖ ಬೇಡಿಕೆ ಇಟ್ಟ ಸಿದ್ದರಾಮಯ್ಯ: ಏನದು?

ಸೋಲಿನ ಭೀತಿಯಿಂದ ಪ್ರತಾಪ್ ಸಿಂಹ ಏನೇನೋ ಮಾತನಾಡುತ್ತಾರೆ. ವೈಯಕ್ತಿಕ ವರ್ಚಸ್ಸಿನಿಂದ ಚುನಾವಣೆಯಲ್ಲಿ ಗೆಲ್ಲುವುದಕ್ಕೆ ಆಗುತ್ತೇನ್ರಿ? ಪ್ರಧಾನಿ ನರೇಂದ್ರ ಮೋದಿಯವರ ಹೆಸರು ಹೇಳಿಕೊಂಡೇ ಗೆದ್ದಿದ್ದೀರಿ. ನಿಮ್ಮ ವೈಯಕ್ತಿಕ ವರ್ಚಸ್ಸು ಏನು, ನಿಮ್ಮ ಸಾಧನೆ ಏನು ಹೇಳಿ? ನೀವು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಗ್ಗೆ ಮಾತನಾಡುತ್ತೀರಿ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭೀತಿಯಿಂದ ಪ್ರತಾಪ್ ಏನೇನೋ ಮಾತನಾಡುತ್ತಿದ್ದಾರೆ ಶಾಸಕ ಪ್ರದೀಪ್​ ಈಶ್ವರ್​ ವಾಗ್ದಾಳಿ ನಡೆಸಿದರು.

ಫುಡ್ ಕಾರ್ಪೊರೇಷನ್ ಇಂಡಿಯಾಗೆ ಒಂದು ಇತಿಹಾಸ ಇದೆ. ಅದಕ್ಕೆ ದೊಡ್ಡ ವ್ಯವಸ್ಥೆ ಇದೆ. ಅಲ್ಲಿ ಶೇಖರಣೆಯಾಗುವ ದವಸ ಧಾನ್ಯ ಬಡವರಿಗೆ ತಲುಪಿಸಬೇಕಾಗಿರುವುದು ಅದರ ಜವಾಬ್ದಾರಿ. ಅದೆ ರೀತಿಯಾಗಿ ಫುಡ್ ಕಾರ್ಪೊರೇಷನ್ ಇಂಡಿಯಾ ಹಕ್ಕಿ ಕೊಡುತ್ತೇವೆ ಎಂದು ಹೇಳಿತ್ತು. ಅದಕ್ಕೆ ಹಣ ಕಟ್ಟಿ ಅಂತ ಹೇಳಿತ್ತು, ಇದನ್ನು ಗೊಡನ್ನಾ ಎಂದು ಕರಿತರಲ್ಲ ಇಂಥವರಿಗೆ ಏನು ಹೇಳಬೇಕು. ಸಿದ್ದರಾಮಯ್ಯ, ಎಂ.ಬಿ.ಪಾಟೀಲ್ ಬೈದರೆ ಸ್ಥಾನಮಾನ ಸಿಗುತ್ತದೆ ಎಂಬ ಭ್ರಮೆಯಲ್ಲಿ ಪ್ರತಾಪ್​​ಸಿಂಹ ಇದ್ದಾರೆ. ಹಾಗಾಗಿ ಸಿದ್ದರಾಮಯ್ಯ, ಎಂ.ಬಿ.ಪಾಟೀಲ್​​ರನ್ನು ಬೈಯ್ಯುತ್ತಿದ್ದಾರೆ ಎಂದು ಕಿಡಿಕಾರಿದರು.

ಪುಡ್ ಕಾರ್ಪೋರೇಷನ್ ಆಪ್ ಇಂಡಿಯಾ ಅಕ್ಕಿ ಕೊಡದಿರುವುದರ ಹಿಂದೆ ರಾಜ್ಯ ಬಿಜೆಪಿ ನಾಯಕರ ಕೈವಾಡ ಇದೆ. ರಾಜ್ಯ ಸರ್ಕಾರ ಜನರಿಗೆ ಅಕ್ಕಿ ಕೊಟ್ಟರೆ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲುತ್ತೆ. ರಾಜಕೀಯ ಕುತಂತ್ರದಿಂದ ಕೇಂದ್ರದ ಅಕ್ಕಿ ರಾಜ್ಯಕ್ಕೆ ಬರದಿರುವಂತೆ ತಡೆಯಲಾಗಿದೆ. ರಾಜ್ಯ ಸರ್ಕಾರ ಅಕ್ಕಿ ಕೊಡಬಾರದು ಬಿಜೆಪಿಯವರ ಪ್ರತಿಭಟನೆ ಯಶಸ್ವಿಯಾಗಬೇಕು ಎನ್ನುವುದು ಅವರ ಧೋರಣೆ. ಇದರ ಹಿಂದೆ ರಾಜ್ಯ ಬಿಜೆಪಿ ಸಂಸದರ ಕುತಂತ್ರ ಇದೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲುವ ಭಿತಿಯಿಂದ ಈ ರೀತಿ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಇನ್ನು ಇದೇ ವೇಳೆ ತಮ್ಮ ಕ್ಷೇತ್ರದ ಬಗ್ಗೆ ಮಾತನಾಡಿದ ಪ್ರದೀಪ್ ಈಶ್ವರ್, ಚಿಕ್ಕಬಳ್ಳಾಪುರವನ್ನ ಸಿಂಗಾಪುರ ಮಾಡುವುದಕ್ಕೆ ಆಗಲ್ಲ. ಚಿಕ್ಕಬಳ್ಳಾಪುರ ಚಿಕ್ಕಬಳ್ಳಾಪುರ ಆಗುವುದಕ್ಕೆ ಇನ್ನೂ 20 ವರ್ಷಗಳು ಬೇಕು. ಚಿಕ್ಕಬಳ್ಳಾಪುರದಲ್ಲಿ ಸಮಸ್ಯೆಗಳ ಸರಮಾಲೆಯೇ ಇದೆ. ಇಷ್ಟು ವರ್ಷಗಳ ಕಾಲ ಶಾಸಕರು ಆಗಿದ್ದವರು ಏನ್ ಮಾಡಿದ್ದಾರೋ ಗೊತ್ತಿಲ್ಲ. ಹಿಂದಿನ ಶಾಸಕರ ಭ್ರಷ್ಟಾಚಾರ ಮಾಡಿದ್ದಕ್ಕೆ ನನ್ನನ್ನು ಜೈಲಿಗೆ ಹಾಕಿಸಿದ್ದರು. ನನಗೆ ಟಾರ್ಚರ್ ಕೊಟ್ಟಿದ್ದಕ್ಕೆ ಇಂದು ನಾನು ಶಾಸಕ ಆಗಿದ್ದೇನ. ನನ್ನಂತವರು ಸಮಾಜದಲ್ಲಿ ತುಂಬಾ ವಿರಳ. ನಗರದಲ್ಲಿರುವ ಒಂದೊಂದೆ ಸಮಸ್ಯೆಗಳನ್ನು ಬಗೆಯರಿಸುತ್ತೇನೆ ಎಂದರು.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 12:14 pm, Fri, 23 June 23

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್