AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ: ಲೋಕಸಭೆ ಚುನಾವಣೆಯಲ್ಲಿ ರಕ್ಷಾ ರಾಮಯ್ಯಗೆ ಬೆಂಬಲಿಸಲು ಒಪ್ಪಿದ ಸುಬ್ಬಾ ರೆಡ್ಡಿ, ಆದರೆ ಷರತ್ತುಗಳು ಅನ್ವಯ

Lok Sabha Election 2024: ಲೋಕಸಭೆ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದ ಟಿಕೆಟ್ ಘೋಷಣೆಗೂ ಮುನ್ನವೇ ಬಂಡಾಯ ಕ್ಷೇತ್ರದ ಶಾಸಕರು, ಸಚಿವರು, ಕಾಂಗ್ರೆಸ್​ ಮುಂಡರು ಮತ್ತು ಡಿಸಿಸಿ ಅಧ್ಯಕ್ಷರು ಬಂಡಾಯವೆದಿದ್ದಾರೆ. ಆದರೆ ನಾಯಕರ ಈ ಬಂಡಾಯ ಸದ್ಯದ ಮಟ್ಟಿಗೆ ಶಮನಗೊಂಡಂತೆ ಕಾಣುತ್ತಿದೆ.

ಚಿಕ್ಕಬಳ್ಳಾಪುರ: ಲೋಕಸಭೆ ಚುನಾವಣೆಯಲ್ಲಿ ರಕ್ಷಾ ರಾಮಯ್ಯಗೆ ಬೆಂಬಲಿಸಲು ಒಪ್ಪಿದ ಸುಬ್ಬಾ ರೆಡ್ಡಿ, ಆದರೆ ಷರತ್ತುಗಳು ಅನ್ವಯ
ಚಿಕ್ಕಬಳ್ಳಾಪುರ ಕಾಂಗ್ರೆಸ್​ ಮುಖಂಡರ ಸಭೆ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: ವಿವೇಕ ಬಿರಾದಾರ|

Updated on: Mar 29, 2024 | 9:41 AM

Share

ಚಿಕ್ಕಬಳ್ಳಾಪುರ, ಮಾರ್ಚ್​ 29: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ (Chikkaballapur Lok Sabha Constituency) ಕಾಂಗ್ರೆಸ್ (Congress)​ ಟಿಕೆಟ್​ ವಿಚಾರವಾಗಿ ಹೊತ್ತಿದ್ದಂತೆ ಬೆಂಕಿ ಸದ್ಯದ ಮಟ್ಟಿಗೆ ಆರಿದಂತೆ ಕಾಣುತ್ತಿದೆ. ಷರತ್ತುಗಳ ಮೇಲೆ ರಕ್ಷಾ ರಾಮಯ್ಯಗೆ ಬೆಂಬಲ ಸೂಚಿಸಲು ಕ್ಷೇತ್ರದ ಕಾಂಗ್ರೆಸ್​ ಮುಖಂಡರು ನಿರ್ಧರಿಸಿದ್ದಾರೆ. ನಿನ್ನೆ (ಮಾ.28) ರಂದು ಖಾಸಗಿ ಹೋಟಲ್​ನಲ್ಲಿ ನಡೆದ ಸಭೆಯಲ್ಲಿ ಬಾಗೇಪಲ್ಲಿ ಶಾಸಕ ಎಸ್.ಎನ್ ಸುಬ್ಬಾರೆಡ್ಡಿ ಹಲವು ಷರತ್ತುಗಳನ್ನು ಮುಂದಿಟ್ಟು ಬೆಂಬಲ ಸೂಚಿಸಲು ಒಪ್ಪಿಕೊಂಡಿದ್ದಾರೆ. ಹಾಗಾದರೆ ಶಾಸಕ ಎಸ್​.ಎನ್​ ಸುಬ್ಬಾರೆಡ್ಡಿ ವಿಧಿಸಿದ ಷರತ್ತುಗಳೇನು?….

“ಸರ್ಕಾರದ ಸಚಿವ ಸಂಪುಟ ವಿಸ್ತರಣೆ ವೇಳೆ ಸಚಿವ ಸ್ಥಾನಕ್ಕೆ ಬೆಂಬಲ ಕೊಡಬೇಕು. ಬಾಗೇಪಲ್ಲಿ ಕ್ಷೇತ್ರದಲ್ಲಿ ಸುಬ್ಬಾರೆಡ್ಡಿ ಮೂಲಕವೆ ಚುನಾವಣೆ ನಡೆಸಬೇಕು. ಶಾಸಕ ಸುಬ್ಬಾರೆಡ್ಡಿ ವಿರೋಧಿ ಪಾಳಯವನ್ನು ದೂರ ಇಡಬೇಕು. ಮುಂಬರುವ ಸ್ಥಳಿಯ ಚುನಾವಣೆಯಲ್ಲಿ ಹಸ್ತಕ್ಷೇಪ ಮಾಡಬಾರದು. ಷರತ್ತುಗಳಿಗೆ ಒಪ್ಪಿದರೇ ಲೋಕಸಭಾ ಚುನಾವಣೆಯಲ್ಲಿ ಬಹುಮತ ಕೊಡಿಸುವ ಜವಾಬ್ದಾರಿ ನಮ್ಮದು” ಎಂದು ಎಸ್​.ಎನ್​ ಸುಬ್ಬಾರೆಡ್ಡಿ ಷರತ್ತು ವಿಧಿಸಿದ್ದಾರೆ.

ಬಂಡಾಯಕ್ಕೆ ಕಾರಣವೇನು?

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಟಿಕೆಟ್​ ರಕ್ಷಾ ರಾಮಯ್ಯ ಅವರಿಗೆ ನೀಡದಂತೆ ಸ್ಥಳೀಯ ಶಾಸಕರು ವಿರೋಧ ವ್ಯಕ್ತಪಡಿಸಿದ್ದರು. ರಕ್ಷಾ ರಾಮಯ್ಯ ಅವರ ಬದಲು ವೀರಪ್ಪ ಮೊಯ್ಲಿ ಅಥವಾ ಶಿವಶಂಕರ ರೆಡ್ಡಿ ಅವರಿಗೆ ನೀಡುವಂತೆ ಟಿಕೆಟ್ ನೀಡುವಂತೆ ಪಟ್ಟು ಹಿಡಿದಿದ್ದರು.

ಏಕಪಕ್ಷೀಯವಾಗಿ ರಕ್ಷಾ ರಾಮಯ್ಯ ಅವರ ಆಯ್ಕೆಯಾಗುತ್ತಿದೆ, ಇದಕ್ಕೆ ನಾವು ವಿರೋಧ ವ್ಯಕ್ತಪಡಿಸುತ್ತೇವೆ. ಯೂತ್ ಕಾಂಗ್ರೆಸ್ ಚುನಾವಣೆ ಗೆಲ್ಲಲು ಸಾಧ್ಯವಾಗದವರಿಗೆ ನಮ್ಮ ಕ್ಷೇತ್ರಕ್ಕೆ ಕಳಿಸುವುದು ಯಾಕೆ? ಶಾಸಕರ ಅಭಿಪ್ರಾಯ ಪಡೆಯದೇ ಟಿಕೆಟ್ ಘೋಷಣೆ ಸರಿಯಲ್ಲ ಎಂದು ಶಾಸಕ ಸುಬ್ಬಾ ರೆಡ್ಡಿ ಸೇರಿಂದತೆ ಕ್ಷೇತ್ರದ ಮತ್ತಷ್ಟು ಶಾಸಕರು ಹೈಕಮಾಂಡ್ ನಾಯಕರು ಮತ್ತು ಸಿಎಂ, ಡಿಸಿಎಂರನ್ನು ಭೇಟಿಯಾಗಲು ತೀರ್ಮಾನ ಮಾಡಿದ್ದರು.

ಇದನ್ನೂ ಓದಿ: ಕೋಲಾರ ಕಾಂಗ್ರೆಸ್​ ಶಾಸಕರ ಸಂಧಾನ ಸಭೆ ಯಶಸ್ವಿ: ಹಾಗಾದ್ರೆ ಲೋಕಸಭೆ ಟಿಕೆಟ್ ಯಾರಿಗೆ..?

ಮತ್ತೊಂದಡೆ ಮಾಜಿ ಸಚಿವ ಎನ್.ಎಚ್.ಶಿವಶಂಕರ ರೆಡ್ಡಿ ಅವರಿಗೆ ಟಿಕೆಟ್ ನೀಡುವಂತೆ ಗೌರಿಬಿದನೂರಿನಲ್ಲಿ ಬೆಂಬಲಿಗರು ಒತ್ತಾಯಿಸಿದ್ದಾರೆ. ಎನ್.ಹೆಚ್.ಶಿವಶಂಕರ ರೆಡ್ಡಿ ಅವರಿಗೆ ಟಿಕೆಟ್ ತಪ್ಪಿದರೆ ತಮ್ಮ ಸ್ಥಾನಮಾನಗಳಿಗೆ ರಾಜೀನಾಮೆ ನೀಡುತ್ತೇವೆ ಎಂದು ನಗರಸಭಾ ಸದಸ್ಯರು ಹಾಗೂ ಸ್ಥಳಿಯ ಕಾಂಗ್ರೆಸ್​​ ಮುಖಂಡರು ಎಚ್ಚರಿಕೆ ನೀಡಿದ್ದರು.

ಒಟ್ಟಿನಲ್ಲಿ ಇಂದು (ಮಾರ್ಚ್​ 29) ನಡೆಯುವ ಸಿಇಸಿ ಸಮಿತಿಯತ್ತ ಎಲ್ಲರ ಚಿತ್ತ ನೆಟ್ಟಿದೆ. ಚಿಕ್ಕಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್​ ಟಿಕೆಟ್​ಗಾಗಿ ನಡೆದ ಹೈಡ್ರಾಮಾ ಅಂತ್ಯ ಕಾಣಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರ ಎಂಬ ಸುಂದರ ಊರು ನನಗೆ ಸುಂದರವಾದ ಬದುಕನ್ನು ಕಟ್ಟಿಕೊಟ್ಟಿದೆ. 18 ವರ್ಷಗಳಿಂದ ಹಗಲುರಾತ್ರಿ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಜನ ಸೇವೆಯಲ್ಲಿದ್ದೇನೆ. ಶಿಕ್ಷಣವೆಲ್ಲ ಬೆಂಗಳೂರಿನಲ್ಲಿ. ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಪದವಿ. ಬೆಂಗಳೂರು ವಿವಿಯಲ್ಲಿ ಬಿ.ಸಿ.ಎ ವ್ಯಾಸಂಗ. ವಿದ್ಯಾರ್ಥಿದೆಸೆಯಿಂದಲೆ ಟಿವಿ9 ಕನ್ನಡದಲ್ಲಿ ಕೆಲಸ.

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ