ಜೆಡಿಎಸ್​ ಇಬ್ಭಾಗ: ರಾಷ್ಟ್ರೀಯ ಅಧ್ಯಕ್ಷರಾಗಿ ಸಿಕೆ ನಾಣು ನೇಮಕ, ಇಬ್ರಾಹಿಂ ಘೋಷಣೆ

ಜೆಡಿಎಸ್​ನಲ್ಲಿ ಎರಡು ಗುಂಪುಗಳಾಗಿ ಇಬ್ಭಾಗವಾಗಿದ್ದು, ಮಹಾರಾಷ್ಟ್ರದ ಶಿವಸೇನೆ ರೀತಿಯಲ್ಲಿ ಜೆಡಿಎಸ್​ ಛಿದ್ರ-ಛಿದ್ರವಾಗಿ ಎರಡು ಭಾಗವಾಗುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ. ಯಾಕಂದ್ರೆ, ದೇವೇಗೌಡ್ರಿಗೆ ಸೆಡ್ಡು ಹೊಡೆದು ಮತ್ತೊಂದು ಗುಂಪು ತಮ್ಮ ರಾಷ್ಟ್ರೀಯ ಅಧ್ಯಕ್ಷರನ್ನ ನೇಮಕ ಮಾಡಿದೆ.

ಜೆಡಿಎಸ್​ ಇಬ್ಭಾಗ: ರಾಷ್ಟ್ರೀಯ ಅಧ್ಯಕ್ಷರಾಗಿ  ಸಿಕೆ ನಾಣು ನೇಮಕ, ಇಬ್ರಾಹಿಂ ಘೋಷಣೆ
ದೇವೇಗೌಡ-ನಾಣು
Edited By:

Updated on: Dec 11, 2023 | 2:43 PM

ಬೆಂಗಳೂರು, (ಡಿಸೆಂಬರ್ 11): ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್​ಡಿ ದೇವೇಗೌಡ (HD Devegowda) ಅವರಿಗೆ ಅಸಮಾಧಾನಿತ ಹಾಗೂ ಉಚ್ಛಾಟಿತ ನಾಯಕರು ಸೆಡ್ಡು ಹೊಡೆದಿದ್ದಾರೆ. ಇಂದು(ಡಿಸೆಂಬರ್ 11) ನಡೆದ ಸಭೆಯಲ್ಲಿಉಚ್ಛಾಟಿತ ನಾಯಕ ಸಿಕೆ ನಾಣು(CK Nanu ಅವರನ್ನು ಜೆಡಿಎಸ್​ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಬೆಂಗಳೂರಿನ ಕೆ.ಜಿ.ಹಳ್ಳಿಯ ಖಾಸಗಿ ಹೋಟೆಲ್​ನಲ್ಲಿ ಸಿ.ಎಂ.ಇಬ್ರಾಹಿಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸಿಕೆ ನಾಣು ಅವರನ್ನು ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಈ ಬಗ್ಗೆ ಸಿ.ಎಂ ಇಬ್ರಾಹಿಂ ಮಾಹಿತಿ ನೀಡಿದ್ದಾರೆ.

ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಇಬ್ರಾಹಿಂ,  ಜೆಡಿಎಸ್ ನೂತನ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಸಿ.ಕೆ.ನಾಣು ಅವರನ್ನು ನೇಮಕ ಮಾಡಲಾಗಿದೆ.  ಇದು ನನ್ನ ನಿರ್ಣಯ ಅಲ್ಲ, ರಾಷ್ಟ್ರೀಯ ಕೌನ್ಸಿಲ್ ನಿರ್ಣಯ. ನಿತೀಶ್ ಕುಮಾರ್, ಲಾಲು ಪ್ರಸಾದ್​ ಭೇಟಿಗೆ ಹೋಗುತ್ತಿದ್ದೇವೆ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಜೆಡಿಎಸ್​ನಿಂದ ಸಿ.ಎಂ.ಇಬ್ರಾಹಿಂ ಅಧಿಕೃತವಾಗಿ ಉಚ್ಚಾಟನೆ, ರಾಷ್ಟ್ರೀಯ ಉಪಾಧ್ಯಕ್ಷರಿಗೂ ಗೇಟ್​ಪಾಸ್

ಜನವರಿಯಲ್ಲಿ ಹುಬ್ಬಳ್ಳಿಯಲ್ಲಿ ಬೃಹತ್ ಸಮಾವೇಶ ಮಾಡುತ್ತೇವೆ. ಸಮಾವೇಶಕ್ಕೆ ಅಖಿಲೇಶ್, ನಿತೀಶ್, ರಾಹುಲ್​ ಗಾಂಧಿಗೆ ಆಹ್ವಾನ ನೀಡಲಾಗುವುದು. ಸತ್ತವರ ಫೋಟೋ ಹಾಕಿದ್ದಾರೆ ಎಂದು ದೇವೇಗೌಡರು ಹೇಳಿದ್ರು. ಜಯಪ್ರಕಾಶ್ ನಾರಾಯಣ್, ಗಾಂಧೀಜಿ‌, ರಾಮಕೃಷ್ಣ ಹೆಗಡೆ ಇವರು ಸತ್ತರೂ ಸಿದ್ದಾಂತದಿಂದ ಜೀವಂತವಾಗಿರುತ್ತಾರೆ. ಕೆಲವರು ಬದುಕಿದ್ದರೂ ಹೆಣ ಎನ್ನುವುದನ್ನು ಹೇಳಲು ಇಷ್ಟಪಡುತ್ತೇನೆ ಎಂದು ದೇವೇಗೌಡ ಅವರಿಗೆ ತಿರುಗೇಟು ನೀಡಿದರು.

ಮಕ್ಕಳ ಹಿತ, ಎರಡು ಸೀಟ್​ಗಾಗಿ ಸಿದ್ಧಾಂತ ಬಲಿ ಕೊಟ್ಟಿದ್ದೀರಿ. ಎಲ್ಲಾ ರಾಜ್ಯಗಳ ಅಧ್ಯಕ್ಷರ ನೇಮಕವನ್ನು ನಾಣುಗೆ ನೀಡಲಾಗಿದೆ. ನಾವು ಮೂರು ಅವಕಾಶ ಕೊಟ್ಟೆ. ಕೊನೆಗೆ ಇವತ್ತು ಅವರನ್ನ(ದೇವೇಗೌಡ) ಅಧ್ಯಕ್ಷಗಿರಿಯಿಂದ ತೆಗೆದು ಸಿಕೆ ನಾಣು ಅವರಿಗೆ ಅಧಿಕಾರ ಕೊಟ್ಟಿದ್ದೇವೆ 92ನೇ ವಯಸ್ಸಿನಲ್ಲಿ ತಮ್ಮ ಸಿದ್ದಾಂತ ಬಿಟ್ಟು ಕೊಟ್ರಿ. ನಾನು ಹುಟ್ಟಿದ್ದು ಸಿದ್ದಾಂತಕ್ಕಾಗಿ. ವಾಜಪೇಯಿಯವರು ಮಂತ್ರಿಯಾಗಲು ಕರೆದರೂ ನಾನು ಹೋಗಲಿಲ್ಲ.ಗೌವರ್ನರ್ ಆಗಲು ಕರೆದದೂ ಹೋಗಲಿಲ್ಲ. 5 ಮಂದಿ ಶಾಸಕರು ನಮ್ಮ ಬಳಿ ಇದ್ದಾರೆ ಎಂದು ಹೊಸ ಬಾಂಬ್ ಸಿಡಿಸಿದರು.

ಡಿಸೆಂಬರ್ 9ರಂದು :ಜೆಡಿಎಸ್ (JDS) ಕಚೇರಿ ಜೆ.ಪಿ.ಭವನದಲ್ಲಿ ನಡೆದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಸಿ.ಎಂ.ಇಬ್ರಾಹಿಂ (CM Ibrahim) ಹಾಗೂ ಪಕ್ಷದ ಜೆಡಿಎಸ್​ ರಾಷ್ಟ್ರೀಯ ಉಪಾಧ್ಯಕ್ಷ ಸಿ.ಕೆ.ನಾಣು (CK Nanu) ಅವರನ್ನು ಕೂಡ ಉಚ್ಚಾಟನೆ ಮಾಡಲಾಗಿಗುತ್ತು. ಆದ್ರೆ, ಇದೀಗ ಉಚ್ಛಾಟಿತ ನಾಯಕರೇ ದೇವೇಗೌಡ್ರಿಗೆ ತೊಡೆತಟ್ಟಿದ್ದು, ಪರ್ಯಾಯವಾಗಿ ಪದಾಧಿಕಾರಗಳ ನೇಮಕ ಪ್ರಕ್ರಿಯೆ ನಡೆಸಿದ್ದಾರೆ.

ಈ ಬೆಳವಣಿಗೆಗಳನ್ನು ನೋಡಿದರೆ ಮಹಾರಾಷ್ಟ್ರದಲ್ಲಿ ಶಿವಸೇನೆ ಹೇಗೆ ಎರಡು ಬಣಗಳಾಗಿ ಇಬ್ಭಾಗವಾಯ್ತೋ ಹಾಗೇ ಜೆಡಿಎಸ್​ ಸಹ ಇಬ್ಭಾಗವಾಗಗಿದೆ. ಮುಂದೆ ಪಕ್ಷದ ಚಿಹ್ನೆ ಹಾಗೂ ಪಕ್ಷದ ಅಸ್ತಿತ್ವದಕ್ಕಾಗಿ ಕಾನೂನು ಹೋರಾಟುಗಳು ನಡೆಯವ ಲಕ್ಷಣಗಳು ಕಾಣುತ್ತಿವೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:31 pm, Mon, 11 December 23