ತುಮಕೂರಿನಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ನಡುವೆ ಘರ್ಷಣೆ; ಹಲವರಿಗೆ ಗಾಯ

ಇಂದು(ಏ.22) ಮುಂಜಾನೆ ಜಿಲ್ಲೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರ ಘರ್ಷಣೆಯಾಗಿದ್ದು, ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಈ ವೇಳೆ ಹಲವು ಕಾರ್ಯಕರ್ತರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ತುಮಕೂರಿನಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ನಡುವೆ ಘರ್ಷಣೆ; ಹಲವರಿಗೆ ಗಾಯ
ಬಿಜೆಪಿ ಜೆಡಿಎಸ್​ ಕಾರ್ಯಕರ್ತರ ನಡುವೆ ಗಲಾಟೆ
Follow us
ಕಿರಣ್ ಹನುಮಂತ್​ ಮಾದಾರ್
|

Updated on:Apr 22, 2023 | 12:40 PM

ತುಮಕೂರು: ಇಂದು(ಏ.22) ಮುಂಜಾನೆ ಜಿಲ್ಲೆಯಲ್ಲಿ ಬಿಜೆಪಿ(BJP) ಮತ್ತು ಜೆಡಿಎಸ್(JDS) ಕಾರ್ಯಕರ್ತರ ನಡುವೆ ಘರ್ಷಣೆಯಾಗಿದ್ದು, ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಈ ವೇಳೆ ಹಲವು ಕಾರ್ಯಕರ್ತರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರು ಬಿಜೆಪಿ ಕಾರ್ಯಕರ್ತರಾದ ಮುಬಾರಕ್ ಪಾಷಾ ಮತ್ತು ನಜೀರ್ ಅವರ ಮೇಲೆ ಜೆಡಿಎಸ್ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ” ಎಂದು ಬಿಜೆಪಿ ಕಡೆಯವರು ತಿಳಿಸಿದ್ದಾರೆ. ಈ ಘಟನೆಯ ಬೆನ್ನಲ್ಲೇ ಜೆಡಿಎಸ್ ಕಾರ್ಯಕರ್ತರು ಬಿಜೆಪಿ ಕಾರ್ಯಕರ್ತರನ್ನ ಒಡೆದ ಬಾಟಲಿಗಳು ಮತ್ತು ಚಾಕುವಿನಿಂದ ಇರಿದಿದ್ದಾರೆ ಎಂದು ಸ್ಥಳೀಯ ಅಂಗಡಿಕಾರರು ಆರೋಪಿಸಿದ್ದಾರೆ. ಈ ಕುರಿತು ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನು ಕಳೆದ ತಿಂಗಳು ಬೆಂಗಳೂರಿನ ಗೋವಿಂದರಾಜನಗರ ಕ್ಷೇತ್ರದ ಮೈದಾನದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆಯಾಗಿದ್ದು, ನಂತರ ಪೊಲೀಸರು ಅವರ ವಿರುದ್ದ ಎಫ್‌ಐಆರ್ ದಾಖಲಿಸಿದ್ದರು. ಮಾರ್ಚ್ 19 ರಂದು ನಡೆಯಲಿರುವ ಮಹಿಳಾ ಸಮಾವೇಶಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಬ್ಯಾನರ್ ಮತ್ತು ಭಿತ್ತಿಪತ್ರಗಳನ್ನು ಹಾಕುವುದನ್ನು ಬಿಜೆಪಿ ಬೆಂಬಲಿಗರು ವಿರೋಧಿಸಿ, ಮಾತಿಗೆ ಮಾತು ಬೆಳೆದು ಜಗಳಕ್ಕೆ ತಿರುಗಿದ್ದು, ಎರಡೂ ಪಕ್ಷಗಳ ಬೆಂಬಲಿಗರು ಕಲ್ಲುಗಳು ಮತ್ತು ದೊಣ್ಣೆಗಳಿಂದ ಪರಸ್ಪರ ದಾಳಿ ಮಾಡಿಕೊಂಡಿದ್ದರು.

ಇದನ್ನೂ ಓದಿ:ವರುಣಾ ಅಖಾಡಕ್ಕಿಳಿದ ಬಿಜೆಪಿ ಘಟಾನುಘಟಿಗಳು, ಠಕ್ಕರ್ ನೀಡಲು ಇಂದು ತವರಿನತ್ತ ಹೊರಟ ಸಿದ್ದರಾಮಯ್ಯ

ಬಳಿಕ ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಗುಂಪನ್ನು ಹತೋಟಿಗೆ ತರಲು ಲಾಠಿ ಪ್ರಹಾರ ನಡೆಸಿದ್ದರು. ಈ ವೇಳೆ ಎರಡೂ ಗುಂಪುಗಳು ಕಲ್ಲು ತೂರಾಟ ನಡೆಸಿದ್ದು, ನಮ್ಮ ಪೊಲೀಸ್ ಸಿಬ್ಬಂದಿಗೂ ಗಾಯಗಳಾಗಿವೆ. ಘಟನೆಗೆ ಸಂಬಂಧಿಸಿದಂತೆ ಮೂರು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಎಂದು ಡಿಸಿಪಿ ಲಕ್ಷ್ಮಣ್ ಬಿ ನಿಂಬರಗಿ ತಿಳಿಸಿದ್ದರು.

ಇನ್ನಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:39 pm, Sat, 22 April 23

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ