ಸಿದ್ದರಾಮಯ್ಯನ್ನ ತಾಲಿಬಾನ್ ಪ್ರದೇಶಕ್ಕೆ ಕಳಿಸಬೇಕು: ಕೇಂದ್ರಕ್ಕೆ ಮನವಿ ಮಾಡಿದ ಸಂಸದ ಶ್ರೀನಿವಾಸ್ ಪ್ರಸಾದ್

| Updated By: ಸಾಧು ಶ್ರೀನಾಥ್​

Updated on: Oct 23, 2021 | 12:11 PM

ವಿರೋಧ ಪಕ್ಷದ ನಾಯಕ ಅವರ ಜವಾಬ್ದಾರಿ ಮರೆಯಬಾರದು. ಪ್ರಧಾನ ಮಂತ್ರಿಗಳಿಗೆ ಒಂದು ಗೌರವ ಇದೆ. ಸಿದ್ದರಾಮಯ್ಯನ್ನ ಒಂದು ತಿಂಗಳು ತಾಲಿಬಾನ್ ಗಳ ಜೊತೆಗೆ ಕಳಿಸಿ ಅಂತಾ ಕೇಂದ್ರ ಸರ್ಕಾರಕ್ಕೆ ಮನವಿ ಮಾಡ್ತಿನಿ. ಈ ರೀತಿಯ ಹೇಳಿಕೆಗಳಿಂದ ಬಹಳ ನೋವಾಗಿದೆ. ಬೇರೆ ಸಮಯದಲ್ಲಿ ಈ ವಿಚಾರದ ಬಗ್ಗೆ ಮಾತ್ನಾಡ್ತೀನಿ- ಮೈಸೂರಿನಲ್ಲಿ ಶ್ರೀನಿವಾಸ ಪ್ರಸಾದ್

ಸಿದ್ದರಾಮಯ್ಯನ್ನ ತಾಲಿಬಾನ್ ಪ್ರದೇಶಕ್ಕೆ ಕಳಿಸಬೇಕು: ಕೇಂದ್ರಕ್ಕೆ ಮನವಿ ಮಾಡಿದ ಸಂಸದ ಶ್ರೀನಿವಾಸ್ ಪ್ರಸಾದ್
ಸಿದ್ದರಾಮಯ್ಯ (ಸಂಗ್ರಹ ಚಿತ್ರ)
Follow us on

ಮೈಸೂರು: ಕರ್ನಾಟಕದ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನ ಆಫ್ಘಾನಿಸ್ತಾನದ ತಾಲಿಬಾನ್ ಪ್ರದೇಶಕ್ಕೆ ಕಳಿಸಬೇಕು ಎಂದು ಮೈಸೂರಿನಲ್ಲಿ ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್ ಹೇಳಿದ್ದಾರೆ. ರಾಜ್ಯದಲ್ಲಿ ಅಸಂಬ್ಲಿ ಉಪ ಚುನಾವಣೆಯಲ್ಲಿ ರಾಜ್ಯ ನಾಯಕರ ಮಾತು ಮಿತಿ ಮೀರಿದೆ. ನಾನು ನಿಮ್ಮ ರೀತಿ ಪೇಪರ್ ಹಾಗೂ ಟಿವಿ ಮಾಧ್ಯಮಗಳಲ್ಲಿ ನೋಡಿದ್ದೇನೆ. ನಾನು ಚುನಾವಣಾ ಕ್ಷೇತ್ರಗಳಿಗೆ ಹೋಗಿಲ್ಲ. ಚುನಾವಣೆಯಲ್ಲಿ ನಾವು ಎರಡೂ ಕ್ಷೇತ್ರವನ್ನ ಗೆಲ್ಲುತ್ತೇವೆ ಎಂದು ಶ್ರೀನಿವಾಸ್ ಪ್ರಸಾದ್ ಹಾಲಿ ಪರಿಸ್ಥಿತಿಯನ್ನು ವ್ಯಾಖ್ಯಾನಿಸಿದ್ದಾರೆ.

ಚುನಾವಣೆಯಲ್ಲಿ ಆಡಳಿತ ಹಾಗೂ ಪ್ರತಿಪಕ್ಷಗಳ ಮಾತು ಮಿತಿ ಮೀರಿದೆ. ಆಡಳಿತ ಪಕ್ಷಕ್ಕೂ ಜವಾಬ್ದಾರಿ ಇದೆ. ಪ್ರತಿ ಪಕ್ಷಕ್ಕೂ ಒಂದು ಜವಾಬ್ದಾರಿ ಇದೆ. ಪ್ರತಿಪಕ್ಷದ ನಾಯರ ಮಾತು‌ ಮಿತಿ ಮೀರಿದೆ. ವಿರೋಧ ಪಕ್ಷದ ನಾಯಕ ಅವರ ಜವಾಬ್ದಾರಿ ಮರೆಯಬಾರದು. ಪ್ರಧಾನ ಮಂತ್ರಿಗಳಿಗೆ ಒಂದು ಗೌರವ ಇದೆ. ಅವರ ಬಗ್ಗೆ ಈ ರೀತಿಯಲ್ಲಿ ಅವಹೇಳನ ಮಾಡಬಾರದು. ಸಿದ್ದರಾಮಯ್ಯನ್ನ ಒಂದು ತಿಂಗಳು ತಾಲಿಬಾನ್ ಗಳ ಜೊತೆಗೆ ಕಳಿಸಿ ಅಂತಾ ಕೇಂದ್ರ ಸರ್ಕಾರಕ್ಕೆ ಮನವಿ ಮಾಡ್ತಿನಿ. ಈ ರೀತಿಯ ಹೇಳಿಕೆಗಳಿಂದ ಬಹಳ ನೋವಾಗಿದೆ. ಬೇರೆ ಸಮಯದಲ್ಲಿ ಈ ವಿಚಾರದ ಬಗ್ಗೆ ಮಾತ್ನಾಡ್ತೀನಿ ಎಂದು ಮೈಸೂರಿನಲ್ಲಿ ಶ್ರೀನಿವಾಸ ಪ್ರಸಾದ್ ಹೇಳಿದ್ದಾರೆ.

ಸಿದ್ದರಾಮಯ್ಯಗೆ ಟ್ವಿಟರ್​ನಲ್ಲೇ ಬಿಜೆಪಿ ಟಾಂಗ್​​:
ಮಾಜಿ ಸಿಎಂ ಸಿದ್ದರಾಮಯ್ಯಗೆ ಕರ್ನಾಟಕ ಬಿಜೆಪಿ ಟ್ವಿಟರ್​ನಲ್ಲೇ ಟಾಂಗ್​​ ನೀಡಿದೆ. ಇನ್ನೆಷ್ಟು ದಿನ ಸಂತೆ ಭಾಷಣ ಹೊಡೆಯುತ್ತೀರಿ ಸಿದ್ದರಾಮಯ್ಯ? ನೀವು ಘೋಷಣೆ ಮಾಡಿದ 15 ಲಕ್ಷ ಮನೆಗಳು ಎಲ್ಲಿವೆ? ಭೂಮಿಯ ಮೇಲಿದೆಯೋ, ಮಂಗಳ ಗ್ರಹದಲ್ಲಿದೆಯೋ? ಘೋಷಣೆ ಮಾಡಿದ ಮಾತ್ರಕ್ಕೆ ಮನೆ ನಿರ್ಮಾಣವಾಗುತ್ತಾ? ಮಂತ್ರಕ್ಕೆ ಮಾವಿನ ಕಾಯಿ ಉದುರುತ್ತದೆಯೇ? ಬುರುಡೆ ರಾಮಯ್ಯ ಎಂದು ಟ್ವಿಟರ್​ನಲ್ಲೇ ಬಿಜೆಪಿ ಟಾಂಗ್​​ ನೀಡಿದೆ.

Siddaramaiah ಹೋಗೋ ಸ್ಪೀಡ್​ಲ್ಲೇ ಆಡಳಿತ ಪಕ್ಷದವ್ರು ರಿಯಾಕ್ಟ್ ಮಾಡ್ತಾರೆ |Tv9kannada

(clp leader siddaramaiah should be sent to taliban area pleads bjp mp srinivas prasad in mysuru)

Published On - 11:57 am, Sat, 23 October 21