Karnataka Cabinet: ಬೊಮ್ಮಾಯಿ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ಪಡೆದ ಬೆಂಗಳೂರಿನ ಶಾಸಕರಿವರು

ಡಾ.ಸಿ.ಎನ್.ಅಶ್ವತ್ಥ್ ನಾರಾಯಣ ಮಲ್ಲೇಶ್ವರಂ ಶಾಸಕರು.ಪೂರ್ತಿ ಹೆಸರು ಚಿಕ್ಕಕಲ್ಯಾಣ ನಾರಾಯಣಪ್ಪ ಅಶ್ವತ್ಥ್ ನಾರಾಯಣ. ಜನನ 2 ಫೆಬ್ರವರಿ 1968. ಭಾರತದ 8 ನೇ ಉಪ ಮುಖ್ಯಮಂತ್ರಿಯಾಗಿ 20 ಆಗಸ್ಟ್ 2019 ರಿಂದ 26 ಜುಲೈ 2021 ರವರೆಗೆ ಸೇವೆ ಸಲ್ಲಿಸಿದ್ದಾರೆ

Karnataka Cabinet: ಬೊಮ್ಮಾಯಿ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ಪಡೆದ ಬೆಂಗಳೂರಿನ ಶಾಸಕರಿವರು
ವಿ.ಸೋಮಣ್ಣ, ಆರ್. ಅಶೋಕ, ಅಶ್ವತ್ಥ್ ನಾರಾಯಣ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Aug 04, 2021 | 4:26 PM

ಕರ್ನಾಟಕದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಚಿವ ಸಂಪುಟದಲ್ಲಿ 29 ಸಚಿವರು ಇರುತ್ತಾರೆ. ಈ ಪೈಕಿ 3 ದಲಿತ, 8 ಲಿಂಗಾಯತ, 7 ಒಕ್ಕಲಿಗ, 7 ಒಬಿಸಿ ಸಚಿವರು ಇದ್ದಾರೆ. ಪ್ರಸ್ತುತ ಸಚಿವ ಸಂಪುಟದಲ್ಲಿ ಬೆಂಗಳೂರು ನಗರ  ಜಿಲ್ಲೆಯ ನಾಲ್ವರು ಶಾಸಕರಿಗೆ  ಸಚಿವ ಸ್ಥಾನ ಒಲಿದಿದೆ. ಸಚಿವ ಸಂಪುಟಕ್ಕೆ ಸೇರ್ಪಡೆಯಾದ ಬೆಂಗಳೂರಿನ ನೂತನ ಸಚಿವರ  ಕಿರು ಪರಿಚಯ ಇಲ್ಲಿದೆ.

ಡಾ.ಸಿ.ಎನ್.ಅಶ್ವತ್ಥ್ ನಾರಾಯಣ

ಮಲ್ಲೇಶ್ವರಂ ಶಾಸಕ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ ಮಲ್ಲೇಶ್ವರಂ ಕ್ಷೇತ್ರದ ಶಾಸಕ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ  ಅವರ ಪೂರ್ತಿ ಹೆಸರು ಚಿಕ್ಕಕಲ್ಯಾಣ ನಾರಾಯಣಪ್ಪ ಅಶ್ವತ್ಥ್ ನಾರಾಯಣ. ಜನನ 2ನೇ ಫೆಬ್ರವರಿ 1968. ಕರ್ನಾಟಕದ 8ನೇ ಉಪಮುಖ್ಯಮಂತ್ರಿಯಾಗಿ 20ನೇ ಆಗಸ್ಟ್ 2019ರಿಂದ 26ನೇ ಜುಲೈ 2021ರವರೆಗೆ ಸೇವೆ ಸಲ್ಲಿಸಿದ್ದಾರೆ. ಯಡಿಯೂರಪ್ಪ ಸಚಿವ ಸಂಪುಟದಲ್ಲಿ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ, ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ.

2004ರಲ್ಲಿ ಮಲ್ಲೇಶ್ವರಂ ಕ್ಷೇತ್ರದಿಂದ ಸ್ಪರ್ಧಿಸಿದ್ದ ಡಾ. ಅಶ್ವತ್ಥ್ ನಾರಾಯಣ, ಕಾಂಗ್ರೆಸ್‌ನ ಎಂ.ಆರ್.ಸೀತಾರಾಮ್ ವಿರುದ್ಧ ಸೋಲು ಕಂಡಿದ್ದರು. 2008ರ ಚುನಾವಣೆಯಲ್ಲಿ ಗೆದ್ದ ಅವರು ನಂತರದ ಎರಡು ಚುನಾವಣೆಯಲ್ಲಿ ಸತತವಾಗಿ ಗೆಲುವು ಕಂಡಿದ್ದಾರೆ. ಮಲ್ಲೇಶ್ವರದಲ್ಲಿರುವ ‘ಧೋಬಿ ಘಾಟ್’ ಅನ್ನು 2009 ರಲ್ಲಿ ಬೆಂಗಳೂರು ಮತ್ತು ಕರ್ನಾಟಕದಲ್ಲಿ ಮೊದಲ ಆಧುನಿಕ ಧೋಬಿ ಘಾಟ್ ಆಗಿ ಪರಿವರ್ತಿಸಿದ ಶ್ರೇಯಸ್ಸು ಅಶ್ವತ್ಥ್ ನಾರಾಯಣ ಅವರಿಗೆ ಸಲ್ಲುತ್ತದೆ.

ಆರ್. ಅಶೋಕ

ಪದ್ಮನಾಭನಗರ ಶಾಸಕ ಆರ್.ಅಶೋಕ ಪದ್ಮನಾಭನಗರ ಕ್ಷೇತ್ರದ ಶಾಸಕ, ಬಿಜೆಪಿ ನಾಯಕ ಆರ್.ಅಶೋಕ ಅವರು ಒಕ್ಕಲಿಗ ಸಮುದಾಯದ ಪ್ರಭಾವಿ ನಾಯಕ. ಜಾಲಹಳ್ಳಿ ಹುಟ್ಟೂರು. ಅಶೋಕ ಅವರ ತಂದೆ ರಾಮಯ್ಯ, ತಾಯಿ ಆಂಜನಮ್ಮ. ಆರ್​ಎಸ್ಎಸ್ ನಂಟುಹೊಂದಿರುವ ಅಶೋಕ್ 1997ರ ಉಪಚುನಾವಣೆಯಲ್ಲಿ ಕರ್ನಾಟಕ ವಿಧಾನಸಭೆಗೆ ಉತ್ತರಹಳ್ಳಿಯಿಂದ ಆಯ್ಕೆಯಾದರು. 1999 ಮತ್ತು 2004 ರ ವಿಧಾನಸಭಾ ಚುನಾವಣೆಯಲ್ಲಿ ಅದೇ ಕ್ಷೇತ್ರದಿಂದ ಮರು ಆಯ್ಕೆಯಾದರು. 2004ರ ಚುನಾವಣೆಯಲ್ಲಿ, ಅವರು 84,001 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಇದು ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಅತಿ ಹೆಚ್ಚು ಮತಗಳ ಅಂತರದಿಂದ ಪಡೆದ ಗೆಲುವು ಎಂದು ಹೇಳಲಾಗುತ್ತಿದೆ.

2008 ರಲ್ಲಿಅವರು ಬಿಜೆಪಿ, ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದರು. 2008 ರಿಂದ ಯಡಿಯೂರಪ್ಪ ಸರ್ಕಾರದಲ್ಲಿ ಸಾರಿಗೆ ಸಚಿವರಾದ ಅಶೋಕ ಇಲಾಖೆಯನ್ನು ಆಧುನೀಕರಿಸುವಲ್ಲಿ ಮತ್ತು ಇಲಾಖೆಯ ಕಾರ್ಯವನ್ನು ಸ್ವಯಂಚಾಲಿತಗೊಳಿಸಲು ಹೈಟೆಕ್ ವಿಧಾನಗಳನ್ನು ಬಳಸುವುದರಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಜೂನ್ 2012ರಲ್ಲಿ ಜಗದೀಶ್ ಶೆಟ್ಟರ್ ಮುಖ್ಯಮಂತ್ರಿಯಾದಾಗ, ಅಶೋಕ ಅವರು ಉಪಮುಖ್ಯಮಂತ್ರಿಯಾಗಿದ್ದು ಗೃಹ ಮತ್ತು ಸಾರಿಗೆ ಸಚಿವಾಲಯಗಳನ್ನು ನಿರ್ವಹಿಸಿದ್ದರು.  2019ರಿಂದ ಯಡಿಯೂರಪ್ಪ ಸಂಪುಟದಲ್ಲಿ ಕಂದಾಯ ಸಚಿವರಾಗಿ ಸೇವೆ ಸಲ್ಲಿಸಿದ್ದರು.

ಎಸ್.ಟಿ.ಸೋಮಶೇಖರ್

ಯಶವಂತಪುರ ಶಾಸಕ ಎಸ್.ಟಿ.ಸೋಮಶೇಖರ್ ಯಶವಂತಪುರ ಕ್ಷೇತ್ರದ ಶಾಸಕರಾಗಿರುವ ಶೆಟ್ಟಿಹಳ್ಳಿ ತಿಮ್ಮೇಗೌಡ ಸೋಮಶೇಖರ್ (ಎಸ್.ಟಿ.ಸೋಮಶೇಖರ್ ) 2018ರಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ನಂತರ 2019ರಲ್ಲಿ ಬಿಜೆಪಿಗೆ ಸೇರಿ, ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದರು. 6ನೇ ಫೆಬ್ರುವರಿ 2020ರಿಂದ 26ನೇ ಜುಲೈ 2021 ರವರೆಗೆ ಸಹಕಾರ ಸಚಿವರಾಗಿದ್ದರು.

ಕೆ.ಗೋಪಾಲಯ್ಯ

ಮಹಾಲಕ್ಷ್ಮೀ ಲೇಔಟ್ ಶಾಸಕ ಕೆ.ಗೋಪಾಲಯ್ಯ ಮಹಾಲಕ್ಷ್ಮೀ ಲೇಔಟ್ ಕ್ಷೇತ್ರದ ಶಾಸಕ ಕೆ.ಗೋಪಾಲಯ್ಯ (ಕಾಮಾಕ್ಷಿಪಾಳ್ಯ ಗೋಪಾಲಯ್ಯ ) 21 ಜನವರಿ 2021 ರಿಂದ ಕರ್ನಾಟಕದ ಅಬಕಾರಿ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ . 2018ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಜನತಾ ದಳದ (ಜಾತ್ಯತೀತ) ಟಿಕೆಟ್ ಮೇಲೆ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. 2019ರಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದರು. ಅದೇ ವರ್ಷ ನಡೆದ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು.

ವಿ.ಸೋಮಣ್ಣ

ಗೋವಿಂದರಾಜನಗರ ಶಾಸಕ ವಿ.ಸೋಮಣ್ಣ ವಿ.ಸೋಮಣ್ಣ (ವೀರಣ್ಣ ಸೋಮಣ್ಣ) ಮೇ 2018 ರಿಂದ ಗೋವಿಂದರಾಜ ನಗರ ಕ್ಷೇತ್ರದ ಶಾಸಕರು. ಕಾಲೇಜು ದಿನಗಳಿಂದಲೇ ವಿದ್ಯಾರ್ಥಿ ನಾಯಕತ್ವ ವಹಿಸುತ್ತಿದ್ದ ಸೋಮಣ್ಣ 1983ರಲ್ಲಿ ವಿಜಯನಗರದ ಮಹಾನಗರ ಪಾಲಿಕೆ ಸದಸ್ಯರಾಗಿ ಹಾಗೂ ವಿವಿಧ ಸ್ಥಾಯಿ ಸಮಿತಿಗಳ ಸದಸ್ಯರಾಗಿ, ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. 1994ರಲ್ಲಿ ಬಿನ್ನಿಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ದಾಖಲೆ ಬಹುಮತದಿಂದ ವಿಧಾನಸಭೆಗೆ ಆಯ್ಕೆಯಾದುರ. 1996ರಲ್ಲಿ ಕರ್ನಾಟಕ ಸರ್ಕಾರದ ಬಂಧಿಖಾನೆ ಸಚಿವರಾಗಿ ಹಾಗೂ 1999ರಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿ ಕೆಲಸ ಮಾಡಿದ್ದರು. 1999ರ ವಿಧಾನಸಭಾ ಚುನಾವಣೆಯಲ್ಲಿ ಬಿನ್ನಿಪೇಟೆ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದರು. 2004ರಲ್ಲಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಯಾಗಿ 3ನೇ ಬಾರಿಗೆ ವಿಧಾನಸಭೆಗೆ ಆಯ್ಕೆಯಾದರು. 2008ರಲ್ಲಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಯಾಗಿ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಿಂದ 4ನೇ ಬಾರಿ ಆಯ್ಕೆಯಾದರು. ನಂತರ ಬಿಜೆಪಿಗೆ ಸೇರಿ, ಯಡಿಯೂರಪ್ಪ ಆಪ್ತ ಬಣದಲ್ಲಿ ಗುರುತಿಸಿಕೊಂಡಿದ್ದರು.

(CM Basavaraj Bommai Cabinet CN Ashwath Narayan VSomanna RAshoka STSomashekhar KGopalaiah take oath as minister here is the profile)

ಇದನ್ನೂ ಓದಿ: ಸಚಿವ ಸಂಪುಟದಲ್ಲಿ 29 ಸಚಿವರು; 3 ದಲಿತ, 8 ಲಿಂಗಾಯಿತ, 7 ಒಕ್ಕಲಿಗರಿಗೆ ಸ್ಥಾನ, ಡಿಸಿಎಂ ಹುದ್ದೆಯೇ ಇಲ್ಲ

ಇದನ್ನೂ ಓದಿ: ಯಡಿಯೂರಪ್ಪ ಸರ್ಕಾರದ ಸೂಪರ್ ಸಿಎಂ​ ವಿಜಯೇಂದ್ರಗೆ ಬೊಮ್ಮಾಯಿ ಸಂಪುಟದಲ್ಲಿ ಸ್ಥಾನ ಇಲ್ಲ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್