AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಧಾನ ಸಭೆ ಸಕ್ಸಸ್; ಸಚಿವ ಆನಂದ್ ಸಿಂಗ್​ ಆನಂದದಲ್ಲಿ ಇನ್ನು ವ್ಯತ್ಯಯವಿಲ್ಲ: ಸಿಎಂ ಬೊಮ್ಮಾಯಿ

Karnataka Cabinet: ವಿಜಯನಗರದಲ್ಲಿ ಸಚಿವ ಆನಂದ್ ಸಿಂಗ್ ಅವರೇ ಧ್ವಜಾರೋಹಣ ಮಾಡಲಿದ್ದಾರೆ ಎಂದು ಸಹ ಅವರು ತಿಳಿಸಿದರು.

ಸಂಧಾನ ಸಭೆ ಸಕ್ಸಸ್; ಸಚಿವ ಆನಂದ್ ಸಿಂಗ್​ ಆನಂದದಲ್ಲಿ ಇನ್ನು ವ್ಯತ್ಯಯವಿಲ್ಲ: ಸಿಎಂ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ ಮತ್ತು ಆನಂದ್ ಸಿಂಗ್
TV9 Web
| Updated By: guruganesh bhat|

Updated on:Aug 11, 2021 | 9:25 PM

Share

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಸಚಿವ ಆನಂದ್ ಸಿಂಗ್ ನಡುವಿನ ಸಂಧಾನ ಸಭೆ ಯಶಸ್ವಿಯಾಗಿದ್ದು, ರಾಜೀನಾಮೆ ನೀಡುವ ಬಗ್ಗೆ ನಾನು ಎಂದೂ ಹೇಳಿಲ್ಲ. ಖಾತೆ ಬದಲಾವಣೆಗಾಗಿ ನಾನು ಮನವಿ ಮಾಡಿದ್ದು ನಿಜ. ಸಿಎಂ ಬಸವರಾಜ್‌ ಬೊಮ್ಮಾಯಿ (Basavaraj Bommai) ವರಿಷ್ಠರೊಂದಿಗೆ ಚರ್ಚಿಸಿ ತಿಳಿಸುವುದಾಗಿ ಭರವಸೆ ನೀಡಿದ್ದಾರೆ. ಸಿಎಂ ಭರವಸೆಯನ್ನು ಸ್ವೀಕರಿಸಿದ್ದೇನೆ, ಸಹಕರಿಸುತ್ತೇನೆ. ಸಹಕಾರ ತತ್ವದಡಿ ಕರ್ತವ್ಯ ನಿರ್ವಹಿಸುತ್ತೇನೆ ಎಂದು ಪರಿಸತರ ಮತ್ತು ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ (Anand Singh) ಸುದ್ದಿಗೋಷ್ಠಿ ನಡೆಸಿ ತಿಳಿಸಿದರು.

ಖಾತೆ ಬದಲಾವಣೆಗೆ ಆನಂದ್​ ಸಿಂಗ್ ಒತ್ತಾಯಿಸಿದ್ದು ನಿಜ. ಆದರೆ ನಾವು ಕ್ಲಿಷ್ಟ ಪರಿಸ್ಥಿತಿಯಲ್ಲಿ ಕೆಲಸ ಮಾಡುತ್ತಿದ್ದೇವೆ. ಮಾತುಕತೆ ವೇಳೆ ಅವರಿಗೆ ಮನವರಿಕೆ ಮಾಡಿದ್ದೇನೆ. ವರಿಷ್ಠರ ಗಮನಕ್ಕೆ ತಂದು ಬಗೆಹರಿಸುತ್ತೇವೆ. ಆನಂದ್ ಸಿಂಗ್ ಅಸಮಾಧಾನ ವಿಚಾರ ಸದ್ಯಕ್ಕೆ ಸುಖಾಂತ್ಯವಾಗಿದೆ. ನಾವೆಲ್ಲರೂ ಒಗ್ಗೂಡಿ ಪಕ್ಷ ಬಲವರ್ಧನೆಗೆ ಶ್ರಮಿಸುತ್ತೇವೆ. ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಹ ಸಂಧಾನ ಸಭೆಯ ನಂತರ ಸುದ್ದಿಗಾರರಿಗೆ ಸ್ಪಷ್ಟಪಡಿಸಿದರು. ವಿಜಯನಗರದಲ್ಲಿ ಸಚಿವ ಆನಂದ್ ಸಿಂಗ್ ಅವರೇ ಧ್ವಜಾರೋಹಣ ಮಾಡಲಿದ್ದಾರೆ ಎಂದು ಸಹ ಅವರು ತಿಳಿಸಿದರು.

ಇದನ್ನೂ ಓದಿ: 

ಬ್ಲಾಕ್‌ಮೇಲ್‌ ತಂತ್ರ ಮಾಡುವುದಿಲ್ಲ, ನೇರವಾಗಿ ಕೇಳುತ್ತೇನೆ: ಸಚಿವ ಆನಂದ್ ಸಿಂಗ್

ವಿಮಾ ಮಸೂದೆ ಚರ್ಚೆಗೆ ಒತ್ತಾಯಿಸಿದ ಮಹಿಳಾ ಸದಸ್ಯರ ಮೇಲೆ ರಾಜ್ಯಸಭೆಯಲ್ಲಿ ಹಲ್ಲೆ: ಶರದ್​ ಪವಾರ್

(CM Basavaraj Bommai clarifies meeting with tourism minister Anand Singh is success no more unsatisfaction)

Published On - 9:19 pm, Wed, 11 August 21

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು