MLC Election: ಗೆದ್ದವರಿಗೆ ಅಭಿನಂದನೆ ಸಲ್ಲಿಸಿದ ಸಿಎಂ ಬೊಮ್ಮಾಯಿ; ತೀರ್ಪಿನಿಂದ ಅತಿ ಸಂತೋಷವಾಗಿಲ್ಲ ಎಂದ ಡಿಕೆಶಿ
ಸೋತ ಕ್ಷೇತ್ರಗಳಲ್ಲಿ ತೀರ್ಪಿನ ಬಗ್ಗೆ ಪರಾಮರ್ಶಿಸುತ್ತೇವೆ. ಜನರು, ಜನಪ್ರತಿನಿಧಿಗಳು ಮುಂದಿನ ದಿಕ್ಕು ತೋರಿಸಿದ್ದಾರೆ. ಮುಂದಿನ ಚುನಾವಣೆಗೆ ಫಲಿತಾಂಶ ದಿಕ್ಸೂಚಿ ಎಂದು ಬೆಳಗಾವಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿಕೆ ನೀಡಿದ್ದಾರೆ.
ಬೆಳಗಾವಿ: ಪರಿಷತ್ ಚುನಾವಣೆ ಫಲಿತಾಂಶ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿ ಪ್ರತಿಕ್ರಿಯೆ ನೀಡಿದ್ದಾರೆ. ಚುನಾವಣೆಯಲ್ಲಿ ಗೆಲುವು ಸಾಧಿಸಿದವರಿಗೆ ಅಭಿನಂದನೆಗಳು. ರಾಜ್ಯ ಸರ್ಕಾರದ ಮೇಲೆ ವಿಶ್ವಾಸವನ್ನಿಟ್ಟು ಮತ ನೀಡಿದ್ದಾರೆ. ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳಿಗೆ ಹಾಗೂ ಗೆಲುವಿಗೆ ಶ್ರಮಿಸಿದ ಪಕ್ಷದ ಪ್ರಮುಖರು, ಪದಾಧಿಕಾರಿಗಳು, ಕಾರ್ಯಕರ್ತರಿಗೆ ಹೃತ್ಪೂರ್ವಕ ಧನ್ಯವಾದಗಳು ಎಂದು ಟ್ವೀಟ್ ಮೂಲಕ ಸಿಎಂ ಬೊಮ್ಮಾಯಿ ಧನ್ಯವಾದ ತಿಳಿಸಿದ್ದಾರೆ.
ಬಳಿಕ ಬೆಳಗಾವಿ ಏರ್ಪೋರ್ಟ್ನಲ್ಲಿ ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನಲ್ಲಿ ಮರುಮತದಾನಕ್ಕೆ ಮನವಿ ಮಾಡಿದ್ದೇವೆ. ಒಟ್ಟಾರೆಯಾಗಿ ನಮಗೆ ಉತ್ತಮ ಫಲಿತಾಂಶ ಬಂದಿದೆ. ಇದನ್ನ ಇಟ್ಕೊಂಡು ಮುಂದಿನ ದಿನಗಳಲ್ಲಿ ಒಳ್ಳೇ ಕೆಲಸ ಮಾಡುತ್ತೇವೆ. ಕೆಲವೆಡೆ ಮತಗಳಲ್ಲಿ ಹೆಚ್ಚುಕಡಿಮೆ ಆಗಿದೆ, ಚರ್ಚಿಸ್ತೇವೆ. ಯಾವುದೇ ಅವಸರದ ಕ್ರಮಗಳನ್ನು ತೆಗೆದುಕೊಳ್ಳುವುದಿಲ್ಲ. ಕುಳಿತು ಚರ್ಚೆ ಮಾಡಿ ವರಿಷ್ಠರು ತೀರ್ಮಾನಿಸುತ್ತಾರೆ. ಬೆಳಗಾವಿ ಫಲಿತಾಂಶದ ಬಗ್ಗೆ ಯೋಚನೆ ಮಾಡಬೇಕಿದೆ ಎಂದು ಬೆಳಗಾವಿ ಏರ್ಪೋರ್ಟ್ನಲ್ಲಿ ಸಿಎಂ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.
ಕರ್ನಾಟಕ ವಿಧಾನ ಪರಿಷತ್ ಚುನಾವಣೆಯಲ್ಲಿ ಗೆಲವು ಸಾಧಿಸಿದ ಪಕ್ಷದ ಎಲ್ಲ ಅಭ್ಯರ್ಥಿಗಳಿಗೆ ಅಭಿನಂದನೆಗಳು. ರಾಜ್ಯ ಸರ್ಕಾರದ ಮೇಲೆ ವಿಶ್ವಾಸವನ್ನಿಟ್ಟು ಮತ ನೀಡಿದ ಸ್ಥಳೀಯಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳಿಗೆ ಹಾಗೂ ಈ ಗೆಲುವಿಗೆ ಶ್ರಮಿಸಿದ ಪಕ್ಷದ ಪ್ರಮುಖರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರಿಗೆ ಹೃತ್ಪೂರ್ವಕ ಧನ್ಯವಾದಗಳು.@BJP4Karnataka pic.twitter.com/6GX8VrbXH1
— Basavaraj S Bommai (@BSBommai) December 14, 2021
ತೀರ್ಪಿನಿಂದ ನನಗೆ ಅತಿ ಸಂತೋಷವಾಗಿಲ್ಲ: ಡಿ.ಕೆ. ಶಿವಕುಮಾರ್ ತೀರ್ಪಿನಿಂದ ನನಗೆ ಅತಿ ಸಂತೋಷವಾಗಿಲ್ಲ. 11 ಕ್ಷೇತ್ರ ಗೆದ್ದಿದ್ದೇವೆ, 14 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲಬೇಕಿತ್ತು. ಇನ್ನೂ ಕೆಲ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ನಿರೀಕ್ಷಿಸಿದ್ದೆವು. ಸಿಎಂ ತವರು ಜಿಲ್ಲೆಯಲ್ಲಿ ಕಾಂಗ್ರೆಸ್ ಗೆಲುವು ನಿರೀಕ್ಷಿಸಿರಲಿಲ್ಲ. ಒಟ್ಟಾರೆ ಮತದಾರರು ಬದಲಾವಣೆ ಬಯಸಿದ್ದಾರೆ ಎಂದು ಬೆಳಗಾವಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿಕೆ ನೀಡಿದ್ದಾರೆ.
ಹಾವೇರಿಯ ಜನ ನಾಯಕತ್ವ ಬದಲಾವಣೆ ಬಯಸಿದ್ದಾರೆ. ಒಗ್ಗಟ್ಟಿನಿಂದ ಕಾಂಗ್ರೆಸ್‌ಗೆ ಹೆಚ್ಚು ಸ್ಥಾನ ಬಂದಿದೆ. ನಾಯಕರು, ಕಾಂಗ್ರೆಸ್ ಕಾರ್ಯಕರ್ತರಿಗೆ ಅಭಿನಂದನೆಗಳು. ಎಲ್ಲಾ ಪಕ್ಷದವರು ಕಾಂಗ್ರೆಸ್ ಪರ ಮತ ಚಲಾಯಿಸಿದ್ದಾರೆ. ಸೋತ ಕ್ಷೇತ್ರಗಳಲ್ಲಿ ತೀರ್ಪಿನ ಬಗ್ಗೆ ಪರಾಮರ್ಶಿಸುತ್ತೇವೆ. ಜನರು, ಜನಪ್ರತಿನಿಧಿಗಳು ಮುಂದಿನ ದಿಕ್ಕು ತೋರಿಸಿದ್ದಾರೆ. ಮುಂದಿನ ಚುನಾವಣೆಗೆ ಫಲಿತಾಂಶ ದಿಕ್ಸೂಚಿ ಎಂದು ಬೆಳಗಾವಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿಕೆ ನೀಡಿದ್ದಾರೆ.
ಇದನ್ನೂ ಓದಿ: MLC Election Results: ಈ 10 ಕಾರಣಗಳಿಂದ ವಿಧಾನ ಪರಿಷತ್ ಚುನಾವಣೆ ಫಲಿತಾಂಶ ಬಿಜೆಪಿಗೆ ಸಮಸ್ಯೆ ತಂದೊಡ್ಡಲಿದೆ
ಇದನ್ನೂ ಓದಿ: MLC Election Results: ವಿಧಾನ ಪರಿಷತ್ ಚುನಾವಣೆ ಫಲಿತಾಂಶ ಪ್ರಕಟ; ಯಾವ ಕ್ಷೇತ್ರದಲ್ಲಿ ಯಾರಿಗೆ ಗೆಲುವು? ಇಲ್ಲಿದೆ ವಿವರ
Published On - 8:05 pm, Tue, 14 December 21