ಬಸವರಾಜ ಬೊಮ್ಮಾಯಿ ಸಂಧಾನ ಸಭೆ ಯಶಸ್ವಿ; ಶಿವರಾಜ ಸಜ್ಜನರ ಪರ ಪ್ರಚಾರಕ್ಕೆ ನೆಹರು ಓಲೆಕಾರ್ ಒಪ್ಪಿಗೆ

ನಮ್ಮ ಮಧ್ಯೆ ಸಣ್ಣಪುಟ್ಟ ಭಿನ್ನಾಭಿಪ್ರಾಯವಿತ್ತು, ಈಗ ಸರಿಯಾಗಿದೆ. ಸಚಿವ ಸ್ಥಾನ ನೀಡುವುದಾಗಿ ಸಿಎಂ ಭರವಸೆ ನೀಡಿದ್ದಾರೆ ಎಂದು ಮಾತುಕತೆ ಬಳಿಕ ಶಾಸಕ ಓಲೇಕಾರ್ ಪ್ರತಿಕ್ರಿಯೆ ನೀಡಿದ್ದಾರೆ.

ಬಸವರಾಜ ಬೊಮ್ಮಾಯಿ ಸಂಧಾನ ಸಭೆ ಯಶಸ್ವಿ; ಶಿವರಾಜ ಸಜ್ಜನರ ಪರ ಪ್ರಚಾರಕ್ಕೆ ನೆಹರು ಓಲೆಕಾರ್ ಒಪ್ಪಿಗೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (ಸಂಗ್ರಹ ಚಿತ್ರ)
Follow us
TV9 Web
| Updated By: ganapathi bhat

Updated on: Oct 17, 2021 | 7:47 PM

ಹಾವೇರಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಂಧಾನ ಸಭೆ ಯಶಸ್ವಿಯಾಗಿದೆ. ಬಿಜೆಪಿ ಅಭ್ಯರ್ಥಿ ಶಿವರಾಜ ಸಜ್ಜನರ ಪರ ಪ್ರಚಾರಕ್ಕೆ ನೆಹರು ಓಲೇಕಾರ್ ಒಪ್ಪಿಗೆ ಸೂಚಿಸಿದ್ದಾರೆ. ಸಿಎಂ ಬೊಮ್ಮಾಯಿ ಜತೆ ಮಾತುಕತೆ ಬಳಿಕ ಶಾಸಕ ಓಲೇಕಾರ್ ಮಾತನಾಡಿದ್ದಾರೆ. ನಮ್ಮ ಮಧ್ಯೆ ಸಣ್ಣಪುಟ್ಟ ಭಿನ್ನಾಭಿಪ್ರಾಯವಿತ್ತು, ಈಗ ಸರಿಯಾಗಿದೆ. ಸಚಿವ ಸ್ಥಾನ ನೀಡುವುದಾಗಿ ಸಿಎಂ ಭರವಸೆ ನೀಡಿದ್ದಾರೆ ಎಂದು ಮಾತುಕತೆ ಬಳಿಕ ಶಾಸಕ ಓಲೇಕಾರ್ ಪ್ರತಿಕ್ರಿಯೆ ನೀಡಿದ್ದಾರೆ. ಹಾವೇರಿ ನಗರದ ವೈಭವ ಲಕ್ಷ್ಮೀ ಪಾರ್ಕ್‌ನಲ್ಲಿರುವ ಶಾಸಕ ನೆಹರು ಓಲೇಕಾರ್ ನಿವಾಸಕ್ಕೆ ಭೇಟಿ ಬಸವರಾಜ ಬೊಮ್ಮಾಯಿ ಭೇಟಿ ನೀಡಿದ್ದರು.

ಹಾವೇರಿ ಜಿಲ್ಲೆ ಹಾನಗಲ್ ಕ್ಷೇತ್ರದ ಉಪಚುನಾವಣೆ ಅಕ್ಟೋಬರ್ 30ರಂದು ನಡೆಯಲಿರುವ ಹಿನ್ನೆಲೆ ಸಂಧಾನ ಸಭೆ ನಡೆಸಲಾಗಿದೆ. ಹಾನಗಲ್ ಕ್ಷೇತ್ರದ ಉಪಚುನಾವಣೆ ಗೆಲ್ಲಲು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮಾಸ್ಟರ್ ಪ್ಲಾನ್ ಮಾಡಿಕೊಂಡಿದ್ದಾರೆ. ಹಾನಗಲ್ ಬಿಜೆಪಿ ಅಭ್ಯರ್ಥಿ ಶಿವರಾಜ ಸಜ್ಜನರ ಮತ್ತು ಓಲೇಕಾರ‌ ನಡುವಿನ‌ ಮುನಿಸು ಶಮನಕ್ಕೆ ಸಿಎಂ ಬೊಮ್ಮಾಯಿ ನಡೆಸಿದ ಪ್ರಯತ್ನ ಫಲ ಕೊಟ್ಟಿದೆ.

ಸಿಎಂ ಬಸವರಾಜ ಬೊಮ್ಮಾಯಿ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ಸಿಗದಿರೋದಕ್ಕೆ ಶಾಸಕ ಓಲೇಕಾರ ಮುನಿಸಿಕೊಂಡಿದ್ದರು. ಶಾಸಕ ಓಲೇಕಾರ ಹಾನಗಲ್ ಉಪಚುನಾವಣೆ ಪ್ರಚಾರದಲ್ಲಿ ಎಲ್ಲೂ ಕಾಣಿಸಿಕೊಳ್ಳದಂತಿದ್ದರು. ಈ ಹಿನ್ನೆಲೆ ಇಂದು ಸಂಧಾನ ಸಭೆ ನಡೆಸಲಾಗಿದೆ. ಸಿಎಂ ಜೊತೆಗೆ ಸಂಸದ ಶಿವಕುಮಾರ ಉದಾಸಿ ಆಗಮಿಸಿದ್ದರು. ಸಿಎಂ ಜೊತೆಗೆ ಶಾಸಕ ಓಲೇಕಾರ ನಿವಾಸಕ್ಕೆ ಬಿಜೆಪಿ ಅಭ್ಯರ್ಥಿ ಸಜ್ಜನರ ಕೂಡ ಆಗಮಿಸದ್ದರು.

ಕಾಂಗ್ರೆಸ್ ಪಕ್ಷ ಭ್ರಷ್ಟಾಚಾರದ ಗಂಗೋತ್ರಿ ಇದ್ದಂತೆ: ಬಸವರಾಜ ಬೊಮ್ಮಾಯಿ ವಾಗ್ದಾಳಿ ಸಿ.ಎಂ. ಉದಾಸಿ 4 ದಶಕಗಳ ಕಾಲ ಕ್ಷೇತ್ರ ಪ್ರತಿನಿಧಿಸಿದ್ದರು. ದಿವಂಗತ ಸಿ.ಎಂ.ಉದಾಸಿಗೆ ಮತ್ಯಾರೂ ಇಲ್ಲಿ ಸಾಟಿ ಇಲ್ಲ. ಉದಾಸಿ ಏನು ಮಾಡಿದ್ದಾರೆಂದು ಕಾಂಗ್ರೆಸ್‌ನವರೇ ಹೇಳ್ತಾರೆ. ಕಾಂಗ್ರೆಸ್ ಅಭ್ಯರ್ಥಿ ಈ ಕ್ಷೇತ್ರವನ್ನು ಪೂರ್ಣವಾಗಿ ನೋಡಿಲ್ಲ. ನಿನ್ನೆ ಮೊನ್ನೆ ಬಂದು ದೊಡ್ಡ ಸಾಧನೆ ಮಾಡಿದಂತೆ ಹೇಳ್ತಿದ್ದಾರೆ. ಕ್ಷೇತ್ರದ ಜನರ ಬಳಿ ಮತ ಕೇಳುವುದಕ್ಕೆ ಬಂದಿದ್ದಾರೆ. ಇಂತಹ ಎಷ್ಟು ಜನರನ್ನು ನೀವು ನೋಡಿಲ್ಲ ಹೇಳಿ. ಕೊರೊನಾ ಸಂದರ್ಭದಲ್ಲಿ ಬಿ.ಎಸ್‌. ಯಡಿಯೂರಪ್ಪರಿಂದ ಉತ್ತಮ ಆಡಳಿತ ಲಭಿಸಿದೆ. ಕೊರೊನಾ ವೇಳೆ ನೂರಾರು ಜನರ ಪ್ರಾಣ ಉಳಿಸಿದ್ದು ಬಿಜೆಪಿ. ಈ ಕ್ಷೇತ್ರದಲ್ಲಿ 20 ಸಾವಿರ ಫುಡ್ ಕಿಟ್ ಕೊಟ್ಟಿದ್ದೇವೆ. ನಾವು ಶಾಶ್ವತವಾಗಿ ನಿಮ್ಮ ಜೊತೆ ನಿಲ್ಲುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾವೇರಿ ಜಿಲ್ಲೆ ಹಾನಗಲ್‌ನಲ್ಲಿ ನಡೆದ ಬಿಜೆಪಿ ಪ್ರಚಾರ ಸಭೆಯಲ್ಲಿ ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷ ಭ್ರಷ್ಟಾಚಾರದ ಗಂಗೋತ್ರಿ ಇದ್ದಂತೆ. ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ. ಕಾಂಗ್ರೆಸ್​ನಲ್ಲಿ ಸಿದ್ದರಾಮಯ್ಯಗೆ ಅಚ್ಛೇ ದಿನ್ ಬರಲ್ಲ. ಪಿಸುಮಾತು ಯಾಕೆ ಆರಂಭ ಆಗಿದೆ ಎಂದು ಗೊತ್ತಾ? ಸೋನಿಯಾ ಗಾಂಧಿ ದಿಲ್ಲಿಗೆ ಬರುವಂತೆ ಹೇಳಿದರು. ಇಲ್ಲೇ ಸ್ಥಾನ ಗಟ್ಟಿ ಮಾಡಿಕೊಳ್ಳಲು ಸಿದ್ದರಾಮಯ್ಯ ಪಿಸುಮಾತು ಶುರು ಮಾಡಿದ್ದಾರೆ. ಕಾಂಗ್ರೆಸ್ ಮುಗಿಸಲು ಬೇರೆ ಯಾರೂ ಬೇಕಾಗಿಲ್ಲ. ಕಾಂಗ್ರೆಸ್ ಮುಗಿಸಲು ಕಾಂಗ್ರೆಸ್ ಪಕ್ಷದವರೇ ಸಾಕು ಎಂದು ಪ್ರಚಾರ ಸಭೆಯಲ್ಲಿ ಸಿಎಂ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ. ನಾವು ಯಾವುದೇ ಸಮುದಾಯಕ್ಕೆ ಅನ್ಯಾಯ ಆಗಲು ಬಿಡಲ್ಲ. ಎಲ್ಲರಿಗೂ ನ್ಯಾಯ ಕೊಡುವ ಕೆಲಸ ಮಾಡುತ್ತೇನೆ ಎಂದು ಸಿಎಂ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ತೈಲ ದರ ಇಳಿಕೆ ಬಗ್ಗೆ ಸಿಎಂ ಬೊಮ್ಮಾಯಿ ಸುಳಿವು; ಚುನಾವಣೆಗೋಸ್ಕರ ಹೀಗೆ ಮಾತಾಡಿದ್ದಾರೆ ಎಂದ ಸಿದ್ದರಾಮಯ್ಯ

ಇದನ್ನೂ ಓದಿ: ಕಾಂಗ್ರೆಸ್ ಪಕ್ಷ ಭ್ರಷ್ಟಾಚಾರದ ಗಂಗೋತ್ರಿ ಇದ್ದಂತೆ: ಚುನಾವಣಾ ಪ್ರಚಾರ ವೇಳೆ ಬಸವರಾಜ ಬೊಮ್ಮಾಯಿ ವಾಗ್ದಾಳಿ