ನಾಳೆ ಶಿಗ್ಗಾಂವಿ ಪ್ರವಾಸ ರದ್ದು ಮಾಡಿದ ಸಿಎಂ ಬೊಮ್ಮಾಯಿ

ನಾಳೆ ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರದ ಕೊನೆ ಸಂಪುಟ ಸಭೆ ಸಾಧ್ಯತೆ ಹಿನ್ನೆಲೆ ಹಾವೇರಿಯಲ್ಲಿ ನಾಳೆ ಶಿಗ್ಗಾಂವಿ ಪ್ರವಾಸ ರದ್ದು ಮಾಡಿದ್ದಾರೆ.

ನಾಳೆ ಶಿಗ್ಗಾಂವಿ ಪ್ರವಾಸ ರದ್ದು ಮಾಡಿದ ಸಿಎಂ ಬೊಮ್ಮಾಯಿ
ಸಿಎಂ ಬೊಮ್ಮಾಯಿ Image Credit source: indianexpress.com
Follow us
ಗಂಗಾಧರ​ ಬ. ಸಾಬೋಜಿ
|

Updated on:Mar 22, 2023 | 11:12 PM

ಹಾವೇರಿ: ನಾಳೆ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಸರ್ಕಾರದ ಕೊನೆ ಸಂಪುಟ ಸಭೆ ಸಾಧ್ಯತೆ ಹಿನ್ನೆಲೆ ಹಾವೇರಿಯಲ್ಲಿ ನಾಳೆ ಶಿಗ್ಗಾಂವಿ ಪ್ರವಾಸ ರದ್ದು ಮಾಡಿದ್ದಾರೆ. ತಾವು ಪ್ರತಿನಿಧಿಸುವ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಿಲಾನ್ಯಾಸ ಮಾಡಬೇಕಿತ್ತು. ಆದರೆ ಸಂಪುಟ ಸಭೆ ಹಿನ್ನೆಲೆ ಪ್ರವಾಸ ರದ್ದಾಗಿದೆ. ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸೇರಿದಂತೆ ಹಲವು ಮಹತ್ವದ ವಿಚಾರಗಳ ಬಗ್ಗೆ ನಾಳಿನ ಸಂಪುಟದಲ್ಲಿ ಚರ್ಚೆ ನಡೆಯುವ ಸಾಧ್ಯತೆ ಎನ್ನಲಾಗುತ್ತಿದೆ. ನಾನು ಯಾವುದೇ ಕಾರಣಕ್ಕೂ ಶಿಗ್ಗಾಂವಿ ಕ್ಷೇತ್ರ ಬಿಟ್ಟು ಬೇರೆಡೆ ಹೋಗುವುದಿಲ್ಲ. ನಾನು ಕ್ಷೇತ್ರ ಬಿಡುತ್ತೇನೆ ಅಂತ ಯಾರು ಹೇಳಿದ್ದರು ಎಂದು ಇತ್ತೀಚೆಗೆ ಹೇಳಿದ್ದರು. ಆ ಮೂಲಕ ಸಿಎಂ ಬೊಮ್ಮಾಯಿ ಬೇರೆ ಕ್ಷೇತ್ರದಿಂದ ಸ್ಪರ್ಧೆಗಿಳಿಯುತ್ತಾರೆ ಎಂಬ ಊಹಾಪೋಹಗಳಿಗೆ ತೆರೆ ಎಳೆದಿದ್ದರು.

ಬಿಜೆಪಿಗೆ ಠಕ್ಕರ್‌ ಕೊಡಲು ಕಾಂಗ್ರೆಸ್‌ ಭಾರೀ ತಂತ್ರಕ್ಕೆ ರೂಪಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ವಿನಯ್‌ ಕುಲಕರ್ಣಿಯನ್ನು( Vinay Kulkarni) ಕಣಕ್ಕಿಳಿಸಲು ಕಾಂಗ್ರೆಸ್‌ ಹೈಕಮಾಂಡ್‌ ಗ್ರೀನ್‌ ಸಿಗ್ನಲ್‌ ನೀಡಿದೆ ಎಂದು ತಿಳಿದುಬಂದಿದೆ. ಶಿಗ್ಗಾಂವಿ(Shiggaon) ಕ್ಷೇತ್ರದಲ್ಲಿ ಪಂಚಮಸಾಲಿ ಮತಗಳು ಹೆಚ್ಚಿವೆ. ಹೀಗಾಗಿ ಕಾಂಗ್ರೆಸ್​ ಪಂಚಮಸಾಲಿ ಸಮುದಾಯದ ನಾಯಕ ವಿನಯ್ ಕುಲಕರ್ಣಿ ಅವರನ್ನು ಕಣಕ್ಕಿಳಿಸುವ ಪ್ಲಾನ್​ ಮಾಡಿದೆ.

ಇದನ್ನೂ ಓದಿ: ಚಿಂಚನಸೂರ್ ಆಯ್ತು, ಈಗ ಎ.ಬಿ ಮಾಲಕರೆಡ್ಡಿ ಸರದಿ; ನಾಳೆ ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ

ವಿನಯರ್ ಕುಲಕರ್ಣಿ ಹೆಸರು ಹೇಳಿಬರುತ್ತಿದ್ದಂತೆಯೇ ಸಿಎಂ ಬಸವರಾಜ ಬೊಮ್ಮಾಯಿ ಸ್ಪರ್ಧಿಸುವ ಶಿಗ್ಗಾಂವಿಯಲ್ಲಿ ರಾಜಕೀಯ ಚಿತ್ರಣ ಬದಲಾಗಿದ್ದು, ಸೋಲು ಗೆಲುವಿನ ಲೆಕ್ಕಾಚಾರಗಳು ನಡೆದಿವೆ. ಅದರಲ್ಲು ಸಿಎಂ ಆಪ್ತರು ಶಿಗ್ಗಾಂವಿ ಕ್ಷೇತ್ರದಲ್ಲಿ ಲಾಭ-ನಷ್ಟದ ಬಗ್ಗೆ ಲೆಕ್ಕಾಚಾರಗಳನ್ನು ಹಾಕುತ್ತಿದ್ದಾರೆ.

ಕ್ಷೇತ್ರದಲ್ಲಿ ಪಂಚಮಸಾಲಿ ಹಾಗೂ ಮುಸ್ಲಿಂ ಮತಗಳು ನಿರ್ಣಾಯಕವಾಗಿವೆ. ಪಂಚಮಸಾಲಿ ಸಮಾಜದ 65 ಸಾವಿರ ಮತಗಳಿದ್ದರೆ, 50 ಸಾವಿರ ಮುಸ್ಲಿಂ ಮತಗಳಿವೆ. ಎಸ್ಸಿ 20 ಸಾವಿರ, ಎಸ್ಟಿ17 ಸಾವಿರ, ಕುರುಬ 20 ಸಾವಿರ ಮತಗಳಿವೆ. 2ಎ ಮೀಸಲಾತಿಗಾಗಿ ಪಂಚಮಸಾಲಿ ಹೋರಾಟ ಈ ಚುನಾವಣೆ ಮೇಲೆ ಪರಿಣಾಮ ಬೀರುವ ಆತಂಕದಲ್ಲಿ ಬಿಜೆಪಿ ನಾಯಕರು ಇದ್ದಾರೆ.

ಇದನ್ನೂ ಓದಿ: ಡಿಕೆ ಶಿವಕುಮಾರ್ ನಿವಾಸದಲ್ಲಿ ಕಾಂಗ್ರೆಸ್ ಸೇರ್ಪಡೆಯಾದ ಬಾಬುರಾವ್ ಚಿಂಚನಸೂರ್

ಇನ್ನು ವಿನಯ್ ಕುಲಕರ್ಣಿ ಶಿಗ್ಗಾಂವಿಯಲ್ಲಿ ಸ್ಪರ್ಧೆ ಮಾಡುತ್ತಾರೆ ಎನ್ನುವ ಸುದ್ದಿ ಕೇಳುತ್ತಿದ್ದಂತೆಯೇ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಪ್ತರು ಲಾಭ-ನಷ್ಟದ ಲೆಕ್ಕಚಾರಗಳನ್ನು ಹಾಕುತ್ತಿದ್ದಾರೆ. ವಿನಯ್ ಕುಲಕರ್ಣಿ ಕಾಂಗ್ರೆಸ್ ಅಭ್ಯರ್ಥಿಯಾದರೆ ಪಂಚಮಸಾಲಿ ಮತಗಳು ಕಾಂಗ್ರೆಸ್​ ಪಾಲಾಗುವ ವಾಲುವ ಭಯ ಶುರುವಾಗಿದೆ. ಇನ್ನು ಅಜ್ಜಂಪೀರ್ ಖಾದ್ರಿ ಅಭ್ಯರ್ಥಿಯಾದರೆ ಕ್ಷೇತ್ರದ ಮುಸ್ಲಿಂ ಮತಗಳು ಸಂಪೂರ್ಣ ಖಾದ್ರಿ ಪಾಲಾಗಲಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 11:11 pm, Wed, 22 March 23