ಬೆಂಗಳೂರು ವಿಮಾನ ನಿಲ್ದಾಣಕ್ಕೆ ಕೆಂಪೇಗೌಡರ ಹೆಸರಿಟ್ಟಿದ್ದು ಕಾಂಗ್ರೆಸ್: ಸಿದ್ದು ಹೇಳಿಕೆಗೆ ಬೊಮ್ಮಾಯಿ ಗುದ್ದು

ಬೆಂಗಳೂರು ಏರ್ಪೋರ್ಟ್​ಗೆ ನಾಡ ಪ್ರಭು ಕೆಂಪೇಗೌಡರ ಹೆಸರು ಇಡುವ ತೀರ್ಮಾನ ಮಾಡಿದ್ದು ಅಂದಿನ ಬಿಜೆಪಿ ಸರ್ಕಾರ ಎಂದು ಸಿಎಂ ಬೊಮ್ಮಾಯಿ ಅವರು ಸಿದ್ದರಾಮಯ್ಯನವರಿಗೆ ತಿರುಗೇಟು ಕೊಟ್ಟಿದ್ದಾರೆ.

ಬೆಂಗಳೂರು ವಿಮಾನ ನಿಲ್ದಾಣಕ್ಕೆ ಕೆಂಪೇಗೌಡರ ಹೆಸರಿಟ್ಟಿದ್ದು ಕಾಂಗ್ರೆಸ್: ಸಿದ್ದು ಹೇಳಿಕೆಗೆ ಬೊಮ್ಮಾಯಿ ಗುದ್ದು
bommai and siddaramaiah
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Nov 11, 2022 | 11:30 PM

ಬೆಂಗಳೂರು:  ಬೆಂಗಳೂರು ವಿಮಾನ ನಿಲ್ದಾಣಕ್ಕೆ (Bengaluru international Airport) ಕೆಂಪೇಗೌಡರ ಹೆಸರು ಇಟ್ಟಿದ್ದು ಕಾಂಗ್ರೆಸ್​ ಎನ್ನುವ ಸಿದ್ದರಾಮಯ್ಯನವರ ಹೇಳಿಕೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. ಸರಣಿ ಟ್ವೀಟ್ ಮಾಡಿ ಮಾಡಿರುವ ಬೊಮ್ಮಾಯಿ , ಹುಟ್ಟುವ ಮಗುವಿಗೆಲ್ಲಾ ನಾಮಕರಣ ಮಾಡಿದ್ದು ನಾನೇ ಎನ್ನುವಂತೆ ಹೇಳಿಕೊಳ್ಳುವ ಸಿದ್ದರಾಮಯ್ಯನವರೇ, ಬೆಂಗಳೂರು ಏರ್ಪೋರ್ಟ್​ಗೆ ನಾಡ ಪ್ರಭು ಕೆಂಪೇಗೌಡರ ಹೆಸರು ಇಡುವ ತೀರ್ಮಾನ ಮಾಡಿದ್ದು ಅಂದಿನ ಬಿಜೆಪಿ ಸರ್ಕಾರ ಎಂದು ತಿವಿದಿದ್ದಾರೆ.

ಕೆಂಪೇಗೌಡ ಪ್ರತಿಮೆ ಉದ್ಘಾಟನೆಗೆ ದೇವೇಗೌಡ್ರನ್ನ ಆಹ್ವಾನಿಸಿಲ್ಲ: ಜೆಡಿಎಸ್ ಆರೋಪಕ್ಕೆ ಸಾಕ್ಷಿ ಸಮೇತ ತಿರುಗೇಟು ಕೊಟ್ಟ ಬಿಜೆಪಿ

27 ಫೆಬ್ರವರಿ 2009 ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು ಅಂದಿನ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ. ಆದರೆ ಕೆಂಪೇಗೌಡರ ಹೆಸರನ್ನು ಏರ್ಪೋಟ್’ಗೆ ಇಡಬೇಕೊ ಬೇಡವೊ ಎಂದು ತೀರ್ಮಾನ ಮಾಡಲು ಅಂದಿನ ಯುಪಿಎ ಸರ್ಕಾರ ತೆಗೆದುಕೊಂಡ ಸಮಯ ಬರೋಬ್ಬರಿ 4 ವರ್ಷ ಎಂದು ಸಿದ್ದರಾಮಯ್ಯನವರಿಗೆ ಟಾಂಗ್ ಕೊಟ್ಟಿದ್ದಾರೆ.

ಟಿವಿ ಕ್ಯಾಮರಾ ಮುಂದೆ ಬಂದು ಒಳ್ಳೆಯದಕ್ಕೆಲ್ಲಾ ನಾನೇ ಕಾರಣ ಎನ್ನುವ ಸಿದ್ದರಾಮಯ್ಯರೇ ಬಿಜೆಪಿ ಸರ್ಕಾರ ತೆಗೆದುಕೊಂಡ ನಿರ್ಧಾರಕ್ಕೆ 4 ವರ್ಷ ನಿಮ್ಮ ಯುಪಿಎ ಸರ್ಕಾರ ಕಾಯಿಸಿದ್ದು ಯಾಕೆ? 2011 ರವರೆಗೆ ಕೇಂದ್ರ ಸರ್ಕಾರದಿಂದ ಯಾವುದೇ ಉತ್ತರ ಬಾರದಿದ್ದಾಗ ಪುನಃ 2011ರಲ್ಲಿ ಸದನದಲ್ಲಿ ಚರ್ಚಿಸಿ, ನಾಡಪ್ರಭು ಕೆಂಪೇಗೌಡರ ಹೆಸರನ್ನು ವಿಮಾನ ನಿಲ್ದಾಣಕ್ಕೆ ಇಡಬೇಕೆಂದು ಪುನಃ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ತೆಗೆದುಕೊಂಡು, ಕೇಂದ್ರ ಸರ್ಕಾರಕ್ಕೆ ಮರು ಪ್ರಸ್ತಾವನೆಯನ್ನು ಸಲ್ಲಿಸಿದರು ಎಂದು ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.

ಆಗಲೂ ಸಹ ಅಂದಿನ ಯು.ಪಿ.ಎ ನೇತೃತ್ವದ ಕೇಂದ್ರ ಸರ್ಕಾರ ಈ ಬಗ್ಗೆ ಮೌನ ವಹಿಸಿದ ಕಾರಣ , ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೆಂಪೇಗೌಡರ ಹೆಸರು ನಾಮಕರಣ ಮಾಡಬೇಕೆಂದು ಪುನಃ 2012ರಲ್ಲಿ ಉಭಯ ಸದನಗಳಲ್ಲಿ ಸಹ ನಿರ್ಣಯವನ್ನು ತೆಗೆದುಕೊಂಡು ಮತ್ತೊಮ್ಮೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಯಿತು. ಹಲವಾರು ಪ್ರಯತ್ನಗಳ ನಂತರ 2013 ಜುಲೈನಲ್ಲಿ ರಾಜ್ಯದ ಈ ಪ್ರಸ್ತಾವನೆಯನ್ನು ಅಂದಿನ ಯು.ಪಿ.ಎ ಸರ್ಕಾರ ಅನುಮೋದಿಸಿತು. ಆ ಸಂದರ್ಭದಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿತ್ತು. ಈಗ ಹೇಳಿ, ಕೆಂಪೇಗೌಡರ ಹೆಸರನ್ನು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಾಮಕರಣ ಮಾಡಲು ಕಾಂಗ್ರೆಸ್ ಏಕೆ ಮೀನಾಮೇಷ ಮಾಡಿತ್ತು..? ಎಂದು ಪ್ರಶ್ನಿಸಿದ್ದಾರೆ.

ಮಳೆಗಾಲದಲ್ಲಿ ಮಾತ್ರ ಮಿನುಗುವ ಮಿಂಚುಳ್ಳಿ ಹುಳಕ್ಕೆ ಜಗತ್ತಿಗೆಲ್ಲಾ ಬೆಳಕು ನೀಡೋದು ನಾನೇ ಎನ್ನುವ ಭ್ರಮೆಯಂತೆ. ಸಿದ್ದರಾಮಯ್ಯರದು ಕೂಡ ಅದೇ ರೀತಿಯ ಭ್ರಮೆ. ಯಾರೊ ಬೆಳಕು ನೀಡಿದರೆ, ರಾಜ್ಯ ನನ್ನಿಂದಲೇ ಬೆಳಗುತ್ತಿದೆ ಎಂದು ಹೇಳಿಕೊಳ್ಳುವ ಚಪಲತೆ.ಕೆಂಪೇಗೌಡರ ಹೆಸರನ್ನು ಏರ್ಪೋಟ್ ಗೆ ಇಡುವ ತೀರ್ಮಾನ ಮಾಡಿದ್ದು ಬಿಜೆಪಿ ಸರ್ಕಾರ. ಆದರೆ ಅದನ್ನು ನಾವು ಮಾಡಿದ್ದು ಎನ್ನುವ ಸಿದ್ದರಾಮಯ್ಯ ಹೇಳಿಕೆ ನೋಡಿದರೆ, ಮಳೆಗಾಲದ ಮಿಂಚುಳ್ಳಿ ನೆನಪಾಗುತ್ತದೆ ಎಂದು ಲೇವಡಿ ಮಾಡಿದ್ದಾರೆ.