AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಬೊಮ್ಮಾಯಿ ತವರಿನಲ್ಲಿ ಬಿಜೆಪಿಗೆ ಸೋಲು: ರಾಜ್ಯ ಬಿಜೆಪಿ ಘಟಕಕ್ಕೆ ಅಭಿನಂದನೆ ಸಲ್ಲಿಸದ ಜೆ.ಪಿ.ನಡ್ಡಾ-ಅಮಿತ್ ಶಾ ಜೋಡಿ!

ಟ್ವೀಟ್ ಮೂಲಕ ಜಯ ದಾಖಲಿಸಿದ ಅವರಿಗೆಲ್ಲ ಅಭಿನಂದನೆ ಸಲ್ಲಿಸಿದ ಬಿಜೆಪಿ ಅಧ್ಯಕ್ಷ ನಡ್ಡಾ, ರಾಜ್ಯ ಬಿಜೆಪಿ ಘಟಕಕ್ಕೆ ಮಾತ್ರ ಅಭಿನಂದನೆ ಸಲ್ಲಿಸಿಲ್ಲ! ಇದರಿಂದ ಬಿಜೆಪಿ ಹೈಕಮಾಂಡ್ ಅಸಮಾಧಾನಗೊಂಡಿರುವ ಬಗ್ಗೆ ಸುಳಿವು ನೀಡಿದಂತಾಗಿದೆ. ನಿರೀಕ್ಷಿಸಿದಷ್ಟು ಫಲಿತಾಂಶ ಬಾರದ ಹಿನ್ನೆಲೆ ಅಭಿನಂದನೆ ಇಲ್ಲ ಎಂದು ಮಾತನಾಡಿಕೊಳ್ಳುವಂತಾಗಿದೆ.

ಸಿಎಂ ಬೊಮ್ಮಾಯಿ ತವರಿನಲ್ಲಿ ಬಿಜೆಪಿಗೆ ಸೋಲು: ರಾಜ್ಯ ಬಿಜೆಪಿ ಘಟಕಕ್ಕೆ ಅಭಿನಂದನೆ ಸಲ್ಲಿಸದ ಜೆ.ಪಿ.ನಡ್ಡಾ-ಅಮಿತ್ ಶಾ ಜೋಡಿ!
ಸಿಎಂ ಬಸವರಾಜ ಬೊಮ್ಮಾಯಿ ತವರಿನಲ್ಲಿ ಬಿಜೆಪಿಗೆ ಕಹಿ: ರಾಜ್ಯ ಬಿಜೆಪಿ ಘಟಕಕ್ಕೆ ಅಭಿನಂದನೆ ಸಲ್ಲಿಸದ ಜೆ.ಪಿ.ನಡ್ಡಾ-ಅಮಿತ್ ಶಾ!
TV9 Web
| Updated By: ಸಾಧು ಶ್ರೀನಾಥ್​|

Updated on:Nov 03, 2021 | 12:56 PM

Share

ಬೆಂಗಳೂರು: ಇತ್ತ ಬಸವರಾಜ ಬೊಮ್ಮಾಯಿ ಅವರು ರಾಜ್ಯದ ಮುಖ್ಯಮಂತ್ರಿಯಾಗಿ 100 ದಿನ ಪೂರೈಸಿರುವ ಸಂದರ್ಭದಲ್ಲಿಯೇ ಅವರಿಗೆ ತಮ್ಮ ತವರೂರಿನ ಜನ ಕಹಿ ಉಣಿಸಿದ್ದಾರೆ. ಇದರ ಮಧ್ಯೆ, ಅಸೆಂಬ್ಲಿ ಉಪಚುನಾವಣೆಯಲ್ಲಿ ಹಾನಗಲ್​​ನಲ್ಲಿ ಹೀನಾಯ ಸೋಲು ಅನುಭವಿಸಿರುವ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಘಟಕಕ್ಕೆ ಪಕ್ಷದ ಹೈಕಮಾಂಡ್ ಆಗಿರುವ ಅಮಿತ್ ಶಾ ಮತ್ತು ಜೆ.ಪಿ. ನಡ್ಡಾ ಇಬ್ಬರೂ ಅಭಿನಂದನೆ ಸಲ್ಲಿಸಿಲ್ಲ. ಇದರಿಂದ ಸಿಎಂ ಬೊಮ್ಮಾಯಿ ಅವರನ್ನು ನಿರಾಶೆಯ ಮಡುವಿಗೆ ದೂಡಿದಂತಾಗಿದೆ.

ರಾಜ್ಯ ಬಿಜೆಪಿಗೆ ವಿಶ್​ ಮಾಡುವ ಗೋಜಿಗೆ ಹೋಗದ ಅಮಿತ್ ಶಾ – ಜೆ.ಪಿ.ನಡ್ಡಾ ಜೋಡಿ! ರಾಜ್ಯದ 2 ಅಸೆಂಬ್ಲಿ ಕ್ಷೇತ್ರಗಳಿಗೆ ನಡೆದ ಉಪಚುನುವಾಣೆಯಲ್ಲಿ 1ರಲ್ಲಿ ಮಾತ್ರ (ಸಿಂದಗಿ) ಬಿಜೆಪಿ ಗೆಲುವು ದಕ್ಕಿಸಿಕೊಂಡಿದೆ. ಇದರಿಂದ ಅಸಮಾಧಾನಗೊಂಡಿರುವ ಅಮಿತ್ ಶಾ – ಜೆ.ಪಿ.ನಡ್ಡಾ ಜೋಡಿ ರಾಜ್ಯ ಬಿಜೆಪಿ ಘಟಕಕ್ಕೆ ಅಭಿನಂದನೆ ಸಲ್ಲಿಸಿಲ್ಲ. ಗಮನಾರ್ಹವೆಂದರೆ ತೆಲಂಗಾಣದಲ್ಲಿ ಬಿಜೆಪಿ ಗೆಲುವಿಗೆ ಅಭಿನಂದನೆ ಸಲ್ಲಿಕೆಯಾಗಿದೆ. ಬಿಹಾರ ಮತ್ತು ಮಧ್ಯ ಪ್ರದೇಶದ ಸಿಎಂಗಳಿಗೂ ಅಭಿನಂದನೆ ಸಲ್ಲಿಕೆಯಾಗಿದೆ! ಅಸ್ಸಾಂ ರಾಜ್ಯದ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಮತ್ತು ಮೈತ್ರಿ ಪಕ್ಷಗಳಿಗೂ ಭಾರತೀಯ ಜನತಾ ಪಕ್ಷದ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅಭಿನಂದನೆ ಸಲ್ಲಿಸಿದ್ದಾರೆ.

ಟ್ವೀಟ್ ಮೂಲಕ ಜಯ ದಾಖಲಿಸಿದ ಅವರಿಗೆಲ್ಲ ಅಭಿನಂದನೆ ಸಲ್ಲಿಸಿದ ಬಿಜೆಪಿ ಅಧ್ಯಕ್ಷ ನಡ್ಡಾ, ರಾಜ್ಯ ಬಿಜೆಪಿ ಘಟಕಕ್ಕೆ ಮಾತ್ರ ಅಭಿನಂದನೆ ಸಲ್ಲಿಸಿಲ್ಲ! ಇದರಿಂದ ಬಿಜೆಪಿ ಹೈಕಮಾಂಡ್ ಅಸಮಾಧಾನಗೊಂಡಿರುವ ಬಗ್ಗೆ ಸುಳಿವು ನೀಡಿದಂತಾಗಿದೆ. ನಿರೀಕ್ಷಿಸಿದಷ್ಟು ಫಲಿತಾಂಶ ಬಾರದ ಹಿನ್ನೆಲೆ ಅಭಿನಂದನೆ ಇಲ್ಲ ಎಂದು ಮಾತನಾಡಿಕೊಳ್ಳುವಂತಾಗಿದೆ.

ಸಿಎಂ ಬೊಮ್ಮಾಯಿ ದೆಹಲಿಗೆ ಪ್ರಯಾಣ: ಈ ಮಧ್ಯೆ, ಸಿಎಂ ಬೊಮ್ಮಾಯಿ ನವೆಂಬರ್ 6 ರಂದು ಸಂಜೆ ಬೆಂಗಳೂರಿನಿಂದ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಅಕ್ಟೋಬರ್ 6ರಂದು ದೆಹಲಿಗೆ ತೆರಳಲಿರುವ ಸಿಎಂ ಬೊಮ್ಮಾಯಿ 7 ನೇ ತಾರೀಖು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಇದೇ ವೇಳೆ ವರಿಷ್ಠರ ಭೇಟಿ ಮಾಡಿ ವಿವಿಧ ವಿಚಾರಗಳ ಚರ್ಚೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

ನ.8ರಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಬೆಂಗಳೂರಿಗೆ: ನವೆಂಬರ್ 8ರಂದು ಬಿಜೆಪಿ ರಾಜ್ಯ ಉಸ್ತುವಾರಿ ನಾಯಕ ಅರುಣ್ ಸಿಂಗ್ ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ. ಉಪಚುನಾವಣಾ ಫಲಿತಾಂಶದ ಅವಲೋಕನದ ಭಾಗವಾಗಿ ಅರುಣ್ ಸಿಂಗ್ ಸಭೆಗಳನ್ನು ನಡೆಸಲಿದ್ದಾರೆ. ಸಿಎಂ ಬೊಮ್ಮಾಯಿ‌, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳ ಜೊತೆ ಸಭೆಗಳಲ್ಲಿ ಅರುಣ್ ಸಿಂಗ್ ಪಾಲ್ಗೊಳ್ಳಲಿದ್ದಾರೆ. ನವೆಂಬರ್ ಹತ್ತರಂದು ದೆಹಲಿಗೆ ವಾಪಸಾಗಲಿದ್ದಾರೆ.

ಮುಖ್ಯಮಂತ್ರಿಯಾಗಿ ಶತ ದಿನ: ಮುಖ್ಯಮಂತ್ರಿಯಾಗಿ ಶತ ದಿನವಾಗಿರುವ ಹಿನ್ನೆಲೆ ಪ್ರತಿಕ್ರಿಯಿಸಿರುವ ಬಸವರಾಜ ಬೊಮ್ಮಾಯಿ 100 ದಿನ ಅನ್ನೋದು ವಿಶೇಷ ಅಲ್ಲ. 100 ದಿನಗಳಲ್ಲಿ ಏನು ಮಾಡಿದ್ದೇವೆ ಅನ್ನೋದು ಮುಖ್ಯ. ನೂರು ದಿನ ಒಂದು ವರ್ಷದ ಹಾಗೆ ಪ್ರಮುಖ ಘಟ್ಟ ಅಲ್ಲ. ನಮ್ಮ ಕೆಲಸವನ್ನು ಜನರಿಗೆ ತಿಳಿಸುವ ಕೆಲಸ ಮಾಡುತ್ತೇವೆ ಎಂದು ಬೆಂಗಳೂರಿನಲ್ಲಿ ಹೇಳಿದ್ದಾರೆ.

TV9 Daily Horoscope: Effects on zodiac sign | Dr. Basavaraj Guruji, Astrologer (03-11-2021)

(CM Bommai loses hometown sindagi by election bjp high command not in a mood congratulate him)

Published On - 10:27 am, Wed, 3 November 21

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!