AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜೀನಾಮೆ ನಿರ್ಧಾರ ಪ್ರಕಟಿಸಿದ ಸಿಎಂ ಇಬ್ರಾಹಿಂ: ಕಾಂಗ್ರೆಸ್​ನಿಂದ ಮುಸ್ಲಿಮರ ನಿರ್ಲಕ್ಷ್ಯ ಆರೋಪ

ಜನರ ಜೊತೆ ಸಂಪರ್ಕ ಇಲ್ಲದಿರುವವರನ್ನೇ ನಾಯಕರನ್ನಾಗಿ ಬೆಳೆಸುತ್ತಿದೆ. ಅದರ ಪರಿಣಾಮ ಏನು ಎಂಬುದು ಪಂಚರಾಜ್ಯಗಳ ಚುನಾವಣಾ ಫಲಿತಾಂಶದಲ್ಲಿ ತಿಳಿಯುತ್ತದೆ ಎಂದು ಸಿಎಂ ಇಬ್ರಾಹಿಂ ಹೇಳಿದರು.

ರಾಜೀನಾಮೆ ನಿರ್ಧಾರ ಪ್ರಕಟಿಸಿದ ಸಿಎಂ ಇಬ್ರಾಹಿಂ: ಕಾಂಗ್ರೆಸ್​ನಿಂದ ಮುಸ್ಲಿಮರ ನಿರ್ಲಕ್ಷ್ಯ ಆರೋಪ
ಸಿ.ಎಂ.ಇಬ್ರಾಹಿಂ
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Mar 12, 2022 | 2:25 PM

Share

ಬೆಂಗಳೂರು: ಕಾಂಗ್ರೆಸ್ ಪಕ್ಷವು ಮುಸ್ಲಿಮರನ್ನು ಗೌರವದಿಂದ ನಡೆಸಿಕೊಳ್ಳುತ್ತಿಲ್ಲ. ನಮ್ಮನ್ನು ಬಳಸಿಕೊಳ್ಳುತ್ತಿದೆ, ಆದರೆ ಅಧಿಕಾರ ಕೊಡುತ್ತಿಲ್ಲ. ಹೀಗಾಗಿ ಕಾಂಗ್ರೆಸ್ ಪಕ್ಷವನ್ನು ತೊರೆಯಲು, ಎಂಎಲ್​ಸಿ ಸ್ಥಾನಕ್ಕೆ ರಾಜೀನಾಮೆ ಕೊಡಲು ನಿರ್ಧರಿಸಿದ್ದೇನೆ ಎಂದು ಬೆಂಗಳೂರಿನಲ್ಲಿ ಸಿ.ಎಂ.ಇಬ್ರಾಹಿಂ ಹೇಳಿದರು. ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, 1995ನೇ ಇಸವಿಯಲ್ಲಿ ಆಗಿದ್ದ ಬೆಳವಣಿಗೆಯೇ ಈಗಲೂ ಕಂಡುಬರುತ್ತಿದೆ. ಕಾಂಗ್ರೆಸ್ ಪಕ್ಷವು ಕರ್ನಾಟಕದಲ್ಲಿ ನೆಲೆ ಕಳೆದುಕೊಳ್ಳುತ್ತಿದೆ ಎನ್ನುವುದನ್ನು ನಾನು ಹಲವು ದಿನಗಳಿಂದ ಹೇಳುತ್ತಲೇ ಇದ್ದೇನೆ ಎಂದು ಹೇಳಿದರು.

ಜನರ ಜೊತೆ ಸಂಪರ್ಕ ಇಲ್ಲದಿರುವವರನ್ನೇ ನಾಯಕರನ್ನಾಗಿ ಬೆಳೆಸುತ್ತಿದೆ. ಅದರ ಪರಿಣಾಮ ಏನು ಎಂಬುದು ಪಂಚರಾಜ್ಯಗಳ ಚುನಾವಣಾ ಫಲಿತಾಂಶದಲ್ಲಿ ತಿಳಿಯುತ್ತದೆ. ಆದರೆ ಕರ್ನಾಟಕವನ್ನ ಉತ್ತರ ಪ್ರದೇಶ ಆಗಲು ನಾವು ಬಿಡುವುದಿಲ್ಲ. ಇದು ಬಸವಣ್ಣ, ಸರ್ವಜ್ಞ, ಕನಕದಾಸ, ಪುರಂದರದಾಸ, ರಾಘವೇಂದ್ರ ಸ್ವಾಮಿಗಳ ಪುಣ್ಯಸ್ಥಳ. ಹೀಗಾಗಿ ನಾನಿವತ್ತು ಕಾಂಗ್ರೆಸ್ ಪಕ್ಷ ತೊರೆದು ನನ್ನ ಎಂಎಲ್​ಸಿ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ ಎಂದರು.

ನಾನು ಸ್ವಾಭಿಮಾನದಿಂದ ಕಾಂಗ್ರೆಸ್ ಪಕ್ಷ ತೊರೆಯುತ್ತಿದ್ದೇನೆ. ರಾಜೀನಾಮೆ ಪತ್ರವನ್ನು ಸಿದ್ದರಾಮಯ್ಯನವರಿಗೆ ಕಳಿಸುತ್ತೇನೆ. ರಾಜೀನಾಮೆ ಅಂಗೀಕಾರ ಮಾಡುವುದು ಅವರಿಗೆ ಸೇರಿದ್ದು. ನಾನು ನನ್ನ ಜವಾಬ್ದಾರಿಯಿಂದ ಮುಕ್ತನಾಗಿದ್ದೇನೆ. ನಾನು ಮುಂದೆ ಯಾವ ನಿರ್ಧಾರ ಬೇಕಿದ್ದರೂ ತೆಗೆದುಕೊಳ್ಳಬೇಕು. ನೀವೂ ಪಕ್ಷ ತೊರೆಯಬೇಡಿ ಅಂತಾ ಜನರನ್ನು ಕಳುಹಿಸಿದ್ರು. ಪಕ್ಷ ತೊರೆಯಬೇಡಿ ಎಂದು ನನ್ನನ್ನು ಬೈಯಿಸಿದ್ದಾರೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಡಿ.ಕೆ.ಶಿವಕುಮಾರ, ಸಿದ್ದರಾಮಾಯ್ಯ ಅವರಿಗೆ ಧನ್ಯವಾದ ಅರ್ಪಿಸುತ್ತೇನೆ ಎಂದು ನುಡಿದರು.

ಕೆಲವರನ್ನ ಪಕ್ಷದಿಂದ ಅವರೇ ತಳ್ಳುತ್ತಿದ್ದಾರೆ. ನನ್ನನ್ನು ತಳ್ಳುವ ಮೊದಲೇ ಕಾಂಗ್ರೆಸ್ ಪಕ್ಷ ತೊರೆಯುತ್ತಿದ್ದೇನೆ. ನನ್ನ ಜೊತೆ ಅನೇಕರು ಬರುತ್ತಾರೆ. ಮುಂದೆ ದೇವೇಗೌಡ, ಕುಮಾರಣ್ಣ, ರೇವಣ್ಣರ ಜೊತೆ ಚರ್ಚೆ ಮಾಡಿ ನಿರ್ಣಯ ಪ್ರಕಟ ಮಾಡುತ್ತೇನೆ ಎಂದರು.

ಇಬ್ರಾಹಿಂ ಜೊತೆ ಚರ್ಚೆ ನಡೆಸಿಲ್ಲ: ದೇವೇಗೌಡ

ವಿಧಾನ ಪರಿಷತ್ ಸದಸ್ಯ ಸಿ.ಎಂ.ಇಬ್ರಾಹಿಂ ಅವರು ಜೆಡಿಎಸ್ ಸೇರುವ ವಿಚಾರದ ಬಗ್ಗೆ ಹಲವು ತಿಂಗಳುಗಳಿಂದ ಚರ್ಚೆ ನಡೆಯುತ್ತಲೇ ಇದೆ. ಆದರೆ ಈವರೆಗೂ ಅವರು ನನ್ನೊಡನೆ ಚರ್ಚಿಸಿಲ್ಲ ಎಂದು ಜೆಡಿಎಸ್ ವರಿಷ್ಠ ಎಚ್​.ಡಿ.ದೇವೇಗೌಡ ಹೇಳಿದರು.

ಇದನ್ನೂ ಓದಿ: ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್​ಗೆ ಹೀನಾಯ ಸೋಲಾಗಿದೆ, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರೋಲ್ಲ -ಸಿ.ಎಂ.ಇಬ್ರಾಹಿಂ

ಇದನ್ನೂ ಓದಿ: ನನ್ನನ್ನು ಶ್ವಾನಕ್ಕೆ ಹೋಲಿಸುವ ಇಬ್ರಾಹಿಂ ತಮ್ಮನ್ನು ವಿಧಾನ ಪರಿಷತ್ ಸದಸ್ಯ ಮಾಡಿದವರಿಗೆ ನಿಷ್ಠರಾಗಿದ್ದಾರೆಯೇ? ವಿಎಸ್ ಉಗ್ರಪ್ಪ

Published On - 2:20 pm, Sat, 12 March 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ