Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ, ಜೆಡಿಎಸ್ ಮೈತ್ರಿ ಬಗ್ಗೆ ಮೌನ ಮುರಿದ ಸಿಎಂ ಇಬ್ರಾಹಿಂ: ಜೆಡಿಎಸ್ ರಾಜ್ಯಾಧ್ಯಕ್ಷ ಹೇಳಿದ್ದೇನು?

CM Ibrahim breaks silence on BJP-JDS alliance; ನಾನೊಂದು ಪಕ್ಷದ ಅಧ್ಯಕ್ಷ. ನೀವು ದೆಹಲಿಗೆ ಹೋದಿರಿ, ನನಗೆ ಒಂದು ಮಾತು ಹೇಳಿಲ್ಲ. ಏನು ಚರ್ಚೆ ಮಾಡಿದ್ದೀರಿ, ಈವರೆಗೆ ಮಾಹಿತಿ ಬಂದಿಲ್ಲ. ಮೈತ್ರಿ ಎಲ್ಲಿ ಆಗಿದೆ? ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಪ್ರಶ್ನಿಸಿದ್ದು ಯಾರನ್ನು? ಇಲ್ಲಿದೆ ವಿವರ

Follow us
ಕಿರಣ್​ ಹನಿಯಡ್ಕ
| Updated By: ಅಕ್ಷಯ್​ ಪಲ್ಲಮಜಲು​​

Updated on:Sep 30, 2023 | 2:14 PM

ಬೆಂಗಳೂರು, ಸೆಪ್ಟೆಂಬರ್ 30: ಮುಂಬರುವ ಲೋಕಸಭೆ ಚುನಾವಣೆಗಾಗಿ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ (BJP JDS alliance) ಮಾಡಿಕೊಂಡಿರುವ ವಿಚಾರವಾಗಿ ಇದೇ ಮೊದಲ ಬಾರಿಗೆ ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ (CM Ibrahim) ಮೌನಮುರಿದಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮೈತ್ರಿ ವಿಚಾರವಾಗಿ ಅಕ್ಟೋಬರ್ 16 ರಂದು ಕನ್ನಡ ಮಾಧ್ಯಮಗಳ ಜತೆ ಮಾತಾಡಬೇಕು ಎಂಬ ನಿರ್ಧಾರ ಮಾಡಿದ್ದೆ. ಅಲ್ಲಿವರೆಗೆ ಅವಕಾಶ ಕೊಡಿ. ಎಲ್ಲರ ಅಭಿಪ್ರಾಯ ಪಡೆದು ಕನ್ನಡ ಮಾಧ್ಯಮಗಳ ಜೊತೆ ಮಾತಾಡುತ್ತೇನೆ ಎಂದು ಹೇಳಿದ್ದಾರೆ.

ರಾಜ್ಯದ ವಿಷಯಗಳ ಬಗ್ಗೆ ಈಗಾಗಲೇ ಹೆಚ್​ಡಿ ಕುಮಾರಸ್ವಾಮಿ ಮಾತನಾಡಿದ್ದಾರೆ ಎಂದಿರುವ ಅವರು, ನಾನೊಂದು ಪಕ್ಷದ ಅಧ್ಯಕ್ಷ. ನೀವು ದೆಹಲಿಗೆ ಹೋದಿರಿ, ನನಗೆ ಒಂದು ಮಾತು ಹೇಳಿಲ್ಲ. ಏನು ಚರ್ಚೆ ಮಾಡಿದ್ದೀರಿ, ಈವರೆಗೆ ಮಾಹಿತಿ ಬಂದಿಲ್ಲ. ಮೈತ್ರಿ ಎಲ್ಲಿ ಆಗಿದೆ? ನಾನು ಪಕ್ಷದ ಅಧ್ಯಕ್ಷ, ಪಕ್ಷದಲ್ಲಿ ಎಲ್ಲಿ ಚರ್ಚೆ ಆಗಿದೆ? ಜನತಾದಳದ ಮೂಲ ಮತಗಳು ಈ ಬಾರಿ ಕಾಂಗ್ರೆಸ್​ಗೆ ಹೋಗಿದೆ. ಅದನ್ನು ಒಪ್ಪಲು ತಯಾರಿಲ್ಲ, ಅದನ್ನು ಒಪ್ಪಿಕೊಳ್ಳಿ. ಪಕ್ಷದಲ್ಲಿ ಚರ್ಚೆ ಆಗಿ ನಿರ್ಣಯ ಆದ ಮೇಲೆ ರಾಜ್ಯಾಧ್ಯಕ್ಷನಾಗಿ ನಾನು ಸಹಿ ಹಾಕಬೇಕು. ಕೋರ್ ಕಮಿಟಿ ಪ್ರವಾಸ ಶುರು ಮಾಡಿಲ್ಲ, ಆಗಲೇ ಹೋಗಿ ಭೇಟಿ ಮಾಡಿ ಬಂದಿದ್ದಾರೆ ಎಂದು ಕುಮಾರಸ್ವಾಮಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.

ಅಕ್ಟೋಬರ್ 16ರ ಸಭೆಯ ಬಳಿಕ ಪಕ್ಷದ ವರಿಷ್ಠ ಹೆಚ್​​ಡಿ ದೇವೇಗೌಡರು, ಕುಮಾರಸ್ವಾಮಿ ಜೊತೆ ಮಾತಾಡುತ್ತೇನೆ. ಶರದ್ ಪವಾರ್ ಸೇರಿದಂತೆ ಹಲವರು ಮತ್ತು ದೆಹಲಿಯಿಂದ ಕಾಂಗ್ರೆಸ್ ನಾಯಕರು ಮಾತಾಡಿದ್ದಾರೆ. ಸಿದ್ದರಾಮಯ್ಯ ಜೊತೆ ಏನೂ ಮಾತುಕತೆ ಮಾಡಿಲ್ಲ ಎಂದು ಇಬ್ರಾಹಿಂ ಹೇಳಿದ್ದಾರೆ.

ಮುಸ್ಲಿಂ ನಾಯಕರು ಯಾರೂ ಪಕ್ಷ ಬಿಟ್ಟು ಹೋಗಿಲ್ಲ; ಇಬ್ರಾಹಿಂ

ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಬೆನ್ನಲ್ಲೇ ಮಸ್ಲಿಂ ನಾಯಕರು ಜೆಡಿಎಸ್ ತೊರೆಯುತ್ತಿರುವುದಕ್ಕೆ ಸಂಬಂಧಿಸಿದ ವರದಿಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು, ಮುಸ್ಲಿಂ ನಾಯಕರು ಯಾರೂ ಪಕ್ಷ ಬಿಟ್ಟು ಹೋಗಿಲ್ಲ. ಒಂದು ವೇಳೆ ಹೋಗಿದ್ದರೆ ರಾಜೀನಾಮೆ ನನಗೇ ಬರಬೇಕಲ್ವಾ? ದೇವೇಗೌಡರು ತಂದೆ ಸಮಾನ, ನಾನು ಜನತಾದಳಕ್ಕೆ ಹೋಗಲು ಅವರೇ ಕಾರಣ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿ ಜತೆ ಮೈತ್ರಿ ಎಫೆಕ್ಟ್: ದೇವೇಗೌಡ್ರು ಭರವಸೆ ಕೊಟ್ಟರೂ ಜೆಡಿಎಸ್​ನಲ್ಲಿ ಮುಂದುವರೆದ ರಾಜೀನಾಮೆ ಪರ್ವ

ಲೋಕಸಭೆ ಚುನಾವಣೆ ದೃಷ್ಟಿಯಿಂದ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿರುವ ವಿಚಾರವಾಗಿ ಉಭಯ ಪಕ್ಷಗಳ ನಾಯಕರು ಈಗಾಗಲೇ ಬಹಿರಂಗ ಹೇಳಿಕೆ ನೀಡಿದ್ದಾರೆ. ಕುಮಾರಸ್ವಾಮಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸಹ ಟ್ವೀಟ್​ ಮೂಲಕ ಮೈತ್ರಿ ವಿಚಾರ ಖಚಿತಪಡಿಸಿದ್ದರು. ಇದರ ಬೆನ್ನಲ್ಲೇ ರಾಜ್ಯದಲ್ಲಿ ಜೆಡಿಎಸ್ ವಿರುದ್ಧ ಕಾಂಗ್ರೆಸ್ ಮುಗಿಬಿದ್ದಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:28 pm, Sat, 30 September 23

ಕಾರ್ ಮಂಚದ ಮೇಲೆ ಮಲಗಿ ಯುವಕನ ಸವಾರಿ; ಇದೆಂಥಾ ಶೋಕಿ ಎಂದ ನೆಟ್ಟಿಗರು
ಕಾರ್ ಮಂಚದ ಮೇಲೆ ಮಲಗಿ ಯುವಕನ ಸವಾರಿ; ಇದೆಂಥಾ ಶೋಕಿ ಎಂದ ನೆಟ್ಟಿಗರು
IAF ಪೈಲಟ್ ಸಿದ್ಧಾರ್ಥ್ ಯಾದವ್ ಶವದೆದುರು ಬಿಕ್ಕಿ ಬಿಕ್ಕಿ ಅತ್ತ ಭಾವಿ ಪತ್ನಿ
IAF ಪೈಲಟ್ ಸಿದ್ಧಾರ್ಥ್ ಯಾದವ್ ಶವದೆದುರು ಬಿಕ್ಕಿ ಬಿಕ್ಕಿ ಅತ್ತ ಭಾವಿ ಪತ್ನಿ
50 ಸಾವಿರ ರೂಪಾಯಿ ನೀಡಿದರು: ದರ್ಶನ್ ಸಹಾಯದ ಬಗ್ಗೆ ಶೈಲಶ್ರೀ ಮಾತು
50 ಸಾವಿರ ರೂಪಾಯಿ ನೀಡಿದರು: ದರ್ಶನ್ ಸಹಾಯದ ಬಗ್ಗೆ ಶೈಲಶ್ರೀ ಮಾತು
ಶ್ರೀಲಂಕಾದ ಕೊಲಂಬೋಗೆ ಆಗಮಿಸಿದ ಮೋದಿಗೆ ಮಳೆಯು ನಡುವೆಯೂ ವಿಶೇಷ ಸ್ವಾಗತ
ಶ್ರೀಲಂಕಾದ ಕೊಲಂಬೋಗೆ ಆಗಮಿಸಿದ ಮೋದಿಗೆ ಮಳೆಯು ನಡುವೆಯೂ ವಿಶೇಷ ಸ್ವಾಗತ
‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದ ಹಾಡು ಬಿಡುಗಡೆ ಮಾಡಿದ ಆನೆ; ವಿಡಿಯೋ ಸೂಪರ್
‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದ ಹಾಡು ಬಿಡುಗಡೆ ಮಾಡಿದ ಆನೆ; ವಿಡಿಯೋ ಸೂಪರ್
4 ಪಂದ್ಯಗಳಲ್ಲೂ ಮಾಲೀಕರಿಗೆ ನಿರಾಶೆ ಮೂಡಿಸಿದ ಪಂತ್
4 ಪಂದ್ಯಗಳಲ್ಲೂ ಮಾಲೀಕರಿಗೆ ನಿರಾಶೆ ಮೂಡಿಸಿದ ಪಂತ್
ಜಿಗಣಿಯಲ್ಲಿ ಮನೆಯೊಳಗೆ ನುಗ್ಗಿ ಬಿಂದಾಸಾಗಿ ಮಲಗಿದ ಚಿರತೆ; ಕಂಗಾಲಾದ ಮನೆಮಂದಿ
ಜಿಗಣಿಯಲ್ಲಿ ಮನೆಯೊಳಗೆ ನುಗ್ಗಿ ಬಿಂದಾಸಾಗಿ ಮಲಗಿದ ಚಿರತೆ; ಕಂಗಾಲಾದ ಮನೆಮಂದಿ
ಶಾಸಕರ ಹೆಸರು ಎಫ್​ಐಅರ್​ನಲ್ಲಿ ಬಂದ ನಂತರವೇ ವಿನಯ್ ಅಂತ್ಯ ಸಂಸ್ಕಾರ: ಪ್ರತಾಪ
ಶಾಸಕರ ಹೆಸರು ಎಫ್​ಐಅರ್​ನಲ್ಲಿ ಬಂದ ನಂತರವೇ ವಿನಯ್ ಅಂತ್ಯ ಸಂಸ್ಕಾರ: ಪ್ರತಾಪ
ಮೈಗೆ ದೂರಿನ ಪತ್ರ ಕಟ್ಟಿ ತೆವಳುತ್ತಾ ಸರ್ಕಾರಿ ಕಚೇರಿಗೆ ತೆರಳಿದ ವ್ಯಕ್ತಿ
ಮೈಗೆ ದೂರಿನ ಪತ್ರ ಕಟ್ಟಿ ತೆವಳುತ್ತಾ ಸರ್ಕಾರಿ ಕಚೇರಿಗೆ ತೆರಳಿದ ವ್ಯಕ್ತಿ
ಥೈಲ್ಯಾಂಡ್ ಪ್ರವಾಸ ಮುಗಿಸಿ, ಶ್ರೀಲಂಕಾಗೆ ತೆರಳಿದ ಪ್ರಧಾನಿ ಮೋದಿ
ಥೈಲ್ಯಾಂಡ್ ಪ್ರವಾಸ ಮುಗಿಸಿ, ಶ್ರೀಲಂಕಾಗೆ ತೆರಳಿದ ಪ್ರಧಾನಿ ಮೋದಿ