ಜೆಡಿಎಸ್ ಪಕ್ಷದಿಂದ ಉಚ್ಚಾಟನೆ ಪ್ರಶ್ನಿಸಿ ಕಾನೂನು ಹೋರಾಟಕ್ಕಿಳಿದ ಇಬ್ರಾಹಿಂ

ಹಿರಿಯ ರಾಜಕಾರಣಿ ಸಿ.ಎಂ. ಇಬ್ರಾಹಿಂ ಹೇಳಿದಂತೆ ಜೆಡಿಎಸ್ ವರಿಷ್ಠರ ವಿರುದ್ಧ ಕಾನೂನು ಹೋರಾಟಕ್ಕಿಳಿದಿದ್ದಾರೆ. ಜೆಡಿಎಸ್​ನಿಂದ ಪದಾಧಿಕಾರಿಗಳ ಉಚ್ಚಾಟನೆ ಹಾಗೂ ಹಂಗಾಮಿ ರಾಜ್ಯಾಧ್ಯಕ್ಷ ನೇಮಕ ಪ್ರಶ್ನಿಸಿ ಸಿಟಿ ಸಿವಿಲ್ ಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ಜೆಡಿಎಸ್ ಪಕ್ಷದಿಂದ ಉಚ್ಚಾಟನೆ ಪ್ರಶ್ನಿಸಿ ಕಾನೂನು ಹೋರಾಟಕ್ಕಿಳಿದ ಇಬ್ರಾಹಿಂ
ಸಿಎಂ ಇಬ್ರಾಹಿಂ ಮತ್ತು ಹೆಚ್​ಡಿ ದೇವೇಗೌಡ
Follow us
Ramesha M
| Updated By: ರಮೇಶ್ ಬಿ. ಜವಳಗೇರಾ

Updated on:Dec 21, 2023 | 7:07 PM

ಬೆಂಗಳೂರು, (ಡಿಸೆಂಬರ್ 21): ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ. ದೇವೇಗೌಡ (HD Devegowda) ಅವರು ಮಕ್ಕಳ ಸಮೇತರಾಗಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು ಭೇಟಿಯಾಗುತ್ತಿದ್ದಂತೆ, ಉಚ್ಛಾಟಿತ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ (CM Ibrahim) ಅವರು ಕೋರ್ಟ್‌ ಮೆಟ್ಟಿಲೇರಿದ್ದಾರೆ. ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ತಮ್ಮನ್ನು ಉಚ್ಚಾಟನೆ ಮಾಡಿದ ವರಿಷ್ಠರ ಕ್ರಮ ಪ್ರಶ್ನಿಸಿ ಇಬ್ರಾಹಿಂ ಅವರು ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ. ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ, ಹೆಚ್.ಡಿ ಕುಮಾರಸ್ವಾಮಿ ಅವರನ್ನು ಪ್ರತಿವಾದಿಯಾಗಿಸಿದ್ದಾರೆ.

ಜೆಡಿಎಸ್ ವರಿಷ್ಠರು ಯಾವುದೇ ಮುನ್ಸೂಚನೆ ನೀಡದೇ ತಮ್ಮನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಉಚ್ಛಾಟನೆ ಮಾಡಿ ಆದೇಶ ಹೊರಡಿಸಿದ್ದನ್ನು ಪ್ರಶ್ನಿಸಿ ಸಿಟಿ ಸಿವಿಲ್ ಕೋರ್ಟ್ ನಲ್ಲಿ ಮೊಕದ್ದಮೆ ದಾಖಲಿಸಿದ್ದು, ತಮ್ಮನ್ನು ಕಾನೂನು ಬಾಹಿರವಾಗಿ ಉಚ್ಚಾಟನೆ ಮಾಡಲಾಗಿದೆ ಎಂದು ಆರೋಪ ಮಾಡಿದ್ದಾರೆ. ವಕೀಲ ಶತಬೀಷ್ ಹಾಗೂ ಶಿವಣ್ಣ ಮೂಲಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆ ಮಾಡಿದ್ದು, ಈ ಅರ್ಜಿ ಕೋರ್ಟ್​ನಲ್ಲಿ ವಿಚಾರಣೆಗೆ ಬರಬೇಕಿದೆ.

ಇದನ್ನೂ ಓದಿ: ಪ್ರಧಾನಿ ಮೋದಿ ಭೇಟಿಯಾದ ಜೆಡಿಎಸ್ ವರಿಷ್ಠ ಹೆಚ್​ಡಿ ದೇವೇಗೌಡ, ಕುಮಾರಸ್ವಾಮಿ, ರೇವಣ್ಣ: ಲೋಕಸಭೆ ಟಿಕೆಟ್ ಹಂಚಿಕೆ ಚರ್ಚೆ

ಮುಂಬರುವ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಎನ್​ಡಿಎ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಂಡಿದೆ. ಈ ಹಿನ್ನೆಲೆಯಲ್ಲಿ ಸೀಟು ಹಂಚಿಕೆ ಸಂಭಂಧ ಇಂದು(ಡಿಸೆಂಬರ್ 21) ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್​ಡಿ ದೇವೇಗೌಡ ಹಾಗೂ ಜೆಡಿಎಸ್ ಹಂಗಾಮಿ ರಾಜ್ಯಾಧ್ಯಕ್ಷ ಹೆಚ್​ಡಿ ಕುಮಾರಸ್ವಾಮಿ ಸೇರಿದಂತೆ ಇತರೆ ಜೆಡಿಎಸ್ ನಾಯಕರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. ಈ ವೇಳೆ ಮುಂದಿನ ಲೋಕಸಭಾ ಚುನಾವಣೆ ಸಂಬಂಧ ಮಹತ್ವದ ಚರ್ಚೆ ನಡೆಸಿದ್ದಾರೆ. ಆದ್ರೆ, ಇತ್ತ ಇಬ್ರಾಹಿಂ ಜೆಡಿಎಸ್​ ವರಿಷ್ಠರ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದು, ಭಾರೀ ಕುತೂಹಲಕ್ಕೆ ಕಾರಣವಾಗಿದೆ.

Published On - 6:50 pm, Thu, 21 December 23

ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್