ಸೋಲಿನ ನೈತಿಕ ಹೊಣೆಹೊತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಸಿಎಂ ಇಬ್ರಾಹಿಂ
ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ಗೆ ಸೋಲು ಹಿನ್ನೆಲೆ ನೈತಿಕ ಹೊಣೆಹೊತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬುಧವಾರ ಸಿ.ಎಂ.ಇಬ್ರಾಹಿಂ ರಾಜೀನಾಮೆ ನೀಡಿದ್ದಾರೆ.
ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ಗೆ ಸೋಲು ಹಿನ್ನೆಲೆ ನೈತಿಕ ಹೊಣೆಹೊತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬುಧವಾರ ಸಿ.ಎಂ.ಇಬ್ರಾಹಿಂ (CM Ibrahim) ರಾಜೀನಾಮೆ ನೀಡಿದ್ದಾರೆ. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇವತ್ತು ದೇವೆಗೌಡ್ರು ಹಿರಿಯರು, ಮುಖಂಡರು ಎಲ್ಲರನ್ನ ಕರೆದಿದ್ದಾರೆ. ಫಲಿತಾಂಶ ಬಂದ ಮರುದಿನ ಸೋಲಿನ ನೈತಿಕ ಹೊಣೆ ಹೊತ್ತು ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಕಾಂಗ್ರೆಸ್ ನಡೆಗೆ ಸಿ.ಎಂ.ಇಬ್ರಾಹಿಂ ಟೀಕೆ
ಹೊಸ ಸರ್ಕಾರ ರಚನೆಯಾಗಿದೆ ಶುಭವಾಗಲಿ. ಕಾಂಗ್ರೆಸ್‌ನಲ್ಲಿದ್ದರೆ ಮಂತ್ರಿಯಾಗುತ್ತಿದ್ರಿ ಎಂಬ ಪ್ರಶ್ನೆಗೆ ಉತ್ತರಿಸಿ, ಗೌರವ ಇಲ್ಲದ ಕಡೆ ಸ್ಥಾನಕ್ಕೆ ಹೋಗಲ್ಲ, ಮಾನಕ್ಕೆ ಹೋಗುತ್ತೇವೆ. ಯು.ಟಿ.ಖಾದರ್‌ನ ಡಿಸಿಎಂ ಮಾಡಬಹುದಿತ್ತಲ್ಲ. ಈಗ ಅವರು ಎದ್ದೇಳುವ ಹಾಗೂ ಇಲ್ಲ, ಮಾತನಾಡುವ ಹಾಗೂ ಇಲ್ಲ. ಯು.ಟಿ.ಖಾದರ್ ಸ್ಪೀಕರ್ ಮಾಡಿದ ಕಾಂಗ್ರೆಸ್ ನಡೆಗೆ ಟೀಕೆ ಮಾಡಿದರು.
ಇದನ್ನೂ ಓದಿ: ವಾರ್ನ್ ಮಾಡಿಸಿಕೊಳ್ಳುವಷ್ಟು ವೀಕ್ ಇಲ್ಲ ಎಂದ ನೂತನ ಸಚಿವ ಎಂಬಿ ಪಾಟೀಲ್
ರಾಜ್ಯದಲ್ಲಿ 60 ಲಕ್ಷ ಮತ ಪಡೆದಿದ್ದೇವೆ
ಬಿಜೆಪಿ ವಿರೋಧಿ ಅಲೆ ಲಾಭ ಪಡೆಯುವಲ್ಲಿ ಕಾಂಗ್ರೆಸ್ ಯಶಸ್ವಿಯಾಗಿದೆ. ಆದರೂ ನಾವು ರಾಜ್ಯದಲ್ಲಿ 60 ಲಕ್ಷ ಮತ ಪಡೆದಿದ್ದೇವೆ. ಜಿಪಂ, ತಾಪಂ ಚುನಾವಣೆಗೆ ಸಜ್ಜಾಗಿ ಅಂತ ಕಾರ್ಯಕರ್ತರಿಗೆ ಹೇಳುತ್ತೇನೆ. ಈ ಸರ್ಕಾರದ ಮೂರು ತಿಂಗಳ ಹನಿಮೂನ್ ಪಿರ್ಯಾಡ್ ನೋಡುತ್ತೇವೆ. ನಮ್ಮಲ್ಲಿ ಮತ ಪರಿವರ್ತನೆಗಾಗಿ ಸಿದ್ದತೆ ಮಾಡಿಕೊಳ್ಳುವಲ್ಲಿ ವಿಫಲವಾಗಿದ್ದೇವೆ. ಕೊನೆಯ ನಾಲ್ಕು ದಿನದ ತಂತ್ರಗಾರಿಕೆಯಲ್ಲಿ ವಿಫಲವಾಗಿದ್ದೇವೆ ಎಂದು ಹೇಳಿದರು.
ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 4:21 pm, Wed, 24 May 23