AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಚ್​ಡಿ ದೇವೇಗೌಡರೇ ಜೆಡಿಎಸ್ ರಾಷ್ಟ್ರಾಧ್ಯಕ್ಷರಾಗಿ ಇರುವುದು ಅನುಮಾನ: ಸಿಎಂ ಇಬ್ರಾಹಿಂ ಸ್ಫೋಟಕ ಹೇಳಿಕೆ

ನಾನು ಈಗಲೂ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷನೇ ಎಂದು ಹೇಳಿದ್ದಲ್ಲದೆ, ಹೆಚ್​ಡಿ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕುಮಾರಸ್ವಾಮಿ ಅವರನ್ನು ರಾಜ್ಯ ಘಟಕದ ಅಧ್ಯಕ್ಷರಾಗಿ ಮಾಡಿದ್ದು ಮೊದಲ ತಪ್ಪು. ಅಮಾನತು ಮಾಡಲು ನನಗೆ ನೋಟಿಸ್ ಕೊಟ್ಟಿದ್ದಾರಾ ಎಂದು ಅವರು ಪ್ರಶ್ನಿಸಿದ್ದಾರೆ.

ಹೆಚ್​ಡಿ ದೇವೇಗೌಡರೇ ಜೆಡಿಎಸ್ ರಾಷ್ಟ್ರಾಧ್ಯಕ್ಷರಾಗಿ ಇರುವುದು ಅನುಮಾನ: ಸಿಎಂ ಇಬ್ರಾಹಿಂ ಸ್ಫೋಟಕ ಹೇಳಿಕೆ
ಸಿಎಂ ಇಬ್ರಾಹಿಂ
ಪ್ರಸನ್ನ ಗಾಂವ್ಕರ್​
| Edited By: |

Updated on: Nov 20, 2023 | 2:33 PM

Share

ಬೆಂಗಳೂರು, ನವೆಂಬರ್ 20: ಜೆಡಿಎಸ್ ಪಕ್ಷದಿಂದ ಅಮಾನತುಗೊಂಡ ಬಳಿಕ ಆ ಕುರಿತು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ​​ಸಿಎಂ ಇಬ್ರಾಹಿಂ (CM Ibrahim), ತಾವೀಗಲೂ ಪಕ್ಷದ ಅಧ್ಯಕ್ಷ ಎಂದು ಹೇಳಿದ್ದಾರೆ. ಅಲ್ಲದೆ, ಹೆಚ್​ಡಿ ದೇವೇಗೌಡ (HD Deve Gowda) ಅವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಇರುತ್ತಾರೋ ಇಲ್ಲವೋ ಎಂಬುದೇ ಅನುಮಾನವಿದೆ ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾನು ಈಗಲೂ ಜೆಡಿಎಸ್ ರಾಜ್ಯಾಧ್ಯಕ್ಷನೇ. ದೇವೇಗೌಡರೇ ರಾಷ್ಟ್ರಾಧ್ಯಕ್ಷರಾಗಿ ಇರ್ತಾರಾ ಇಲ್ಲವೋ ಎಂಬ ಅನುಮಾನವಿದೆ. ಆ ಬಗ್ಗೆ ರಾಷ್ಟ್ರೀಯ ಕಾರ್ಯಕಾರಣಿಯಲ್ಲಿ ನಿರ್ಧಾರ ಆಗಲಿದೆ ಎಂದು ಹೇಳಿದ್ದಾರೆ.

ರಾಷ್ಟ್ರೀಯ ಕಾರ್ಯಕಾರಣಿ ನಿರ್ಧಾರ ಕೈಗೊಂಡರೆ ಏನು ಮಾಡುತ್ತಾರೆ? ಒಬ್ಬ ವ್ಯಕ್ತಿ ತೆಗೆಯುತ್ತಿಲ್ಲ. ರಾಷ್ಟ್ರೀಯ ಕಾರ್ಯಕಾರಣಿ ಸಭೆ ಮಾಡಿ ಸ್ಥಾನದಿಂದ ತೆಗೆದುಹಾಕಿದರೆ ಏನು ಮಾಡುತ್ತೀರಿ? ಮಗನಿಗಾಗಿ ಈ ತರ ಮಾಡಿದ್ರೆ ಏನು ಮಾಡ್ತೀರಾ? ಈಗಲೂ ಮನವಿ ಮಾಡುತ್ತೇವೆ, ನಿರ್ಣಯವನ್ನು ವಾಪಸ್ ಪಡೆಯಿರಿ ಎಂದು ಇಬ್ರಾಹಿಂ ಅವರು ದೇವೇಗೌಡರನ್ನು ಒಯ್ತಾಯಿಸಿದ್ದಾರೆ.

ನಾನೇ ಜೆಡಿಎಸ್ ರಾಜ್ಯಾಧ್ಯಕ್ಷ: ಸಿಎಂ ಇಬ್ರಾಹಿಂ

ನಾನು ಈಗಲೂ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷನೇ ಎಂದು ಹೇಳಿದ್ದಲ್ಲದೆ, ಹೆಚ್​ಡಿ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕುಮಾರಸ್ವಾಮಿ ಅವರನ್ನು ರಾಜ್ಯ ಘಟಕದ ಅಧ್ಯಕ್ಷರಾಗಿ ಮಾಡಿದ್ದು ಮೊದಲ ತಪ್ಪು. ಅಮಾನತು ಮಾಡಲು ನನಗೆ ನೋಟಿಸ್ ಕೊಟ್ಟಿದ್ದಾರಾ ಎಂದು ಅವರು ಪ್ರಶ್ನಿಸಿದ್ದಾರೆ.

ಅಮಾನತು ಮಾಡುವ ಬಗ್ಗೆ ನನಗೆ ನೋಟಿಸ್ ಕೊಟ್ಟಿಲ್ಲ. ನಾನೇನು ಅವರ ಮನೆ ಕೆಲಸದವನಾ? ಏನು ಇವರ ಹುಚ್ಚಾಟ? ಈ ಬಗ್ಗೆ ನಾನು ಕಾನೂನು ಹೋರಾಟ ಮಾಡುತ್ತೇನೆ ಎಂದು ಸಿಎಂ ಇಬ್ರಾಹಿಂ ಹೇಳಿದ್ದಾರೆ.

ಎಲ್ಲೋ ರೆಸಾರ್ಟ್​​ನಲ್ಲಿ 8ರಿಂದ 10 ಜನ ಸಭೆ ಮಾಡುವುದಲ್ಲ. ನ್ಯಾಷನಲ್ ಕೌನ್ಸಿಲ್ ಮೆಂಬರ್​​ನಲ್ಲಿ 26 ಜನ ಇವರ ಮನೆಯವರೇ ಇದ್ದಾರೆ ಎಂದು ದೇವೇಗೌಡರು ಹಾಗೂ ಕುಮಾರಸ್ವಾಮಿ ವಿರುದ್ಧ ಇಬ್ರಾಹಿಂ ಕಿಡಿ ಕಾರಿದ್ದಾರೆ.

ಇದನ್ನೂ ಓದಿ: ಜೆಡಿಎಸ್​ನಿಂದ ಸಿಎಂ‌ ಇಬ್ರಾಹಿಂ ಅಮಾನತು: ಹೆಚ್​​ಡಿ ದೇವೇಗೌಡ ಆದೇಶ

ಪಕ್ಷ ವಿರೋಧಿ ಹೇಳಿಕೆಗಳನ್ನು ನೀಡುತ್ತಿರುವ ಮತ್ತು ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವ ಆರೋಪದ ಮೇಲೆ ಸಿಎಂ ಇಬ್ರಾಹಿಂ ಅವರನ್ನು ಶುಕ್ರವಾರ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್​​ಡಿ ದೇವೇಗೌಡ ಅಮಾನತುಗೊಳಿಸಿದ್ದರು. ಸಿಎಂ ಇಬ್ರಾಹಿಂ ಅವರು ಸಾರ್ವಜನಿಕವಾಗಿ ಪಕ್ಷದ ರಾಷ್ಟ್ರಧ್ಯಕ್ಷರ, ರಾಜ್ಯ ಶಾಸಕಾಂಗ ಪಕ್ಷದ ನಾಯಕರ ವಿರುದ್ಧ ಹಾಗೂ ರಾಜ್ಯದಲ್ಲಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದೊಂದಿಗೆ ಹೊಂದಾಣಿಕೆ ಬಗ್ಗೆ (ಒಮ್ಮತವಾದ ನಿರ್ಣಯವಾಗಿದ್ದರೂ) ಬಹಿರಂಗವಾಗಿ ಪಕ್ಷ ವಿರೋಧಿ ಹೇಳಿಕೆ ನೀಡಿ, ಪಕ್ಷದ ಹಿತಕ್ಕೆ ಧಕ್ಕೆ ತಂದಿರುತ್ತಾರೆ. ಇಂತಹ ನಡವಳಿಕೆ ಮತ್ತು, ಹೇಳಿಕೆಗಳು ಪಕ್ಷದ ವಿರೋಧಿ ಚಟುವಟಿಕೆಗಳಾಗಿರುತ್ತವೆ. ಹೀಗಾಗಿ ಜೆಡಿಎಸ್ ಸಂವಿಧಾನ ಮತ್ತು ನಿಯಮಾವಳಿಗಳ ಅಡಿಯಲ್ಲಿ ಸಿಎಂ ಇಬ್ರಾಹಿಂ ಅವರನ್ನು ತಕ್ಷಣದಿಂದಲೇ ಅಮಾನತುಗೊಳಿಸಲಾಗಿದೆ ಎಂದು ದೇವೇಗೌಡರು ಆದೇಶದಲ್ಲಿ ತಿಳಿಸಿದ್ದರು. ಇಷ್ಟೇ ಅಲ್ಲದೆ, ರಾಜ್ಯಾಧ್ಯಕ್ಷರನ್ನೊಳಗೊಂಡ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳನ್ನು ವಿಸರ್ಜಿಸಿದ್ದರು.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್
ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!