AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಸಿಎಂ ಇಬ್ರಾಹಿಂ

ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷರಾಗಿ ಹಿರಿಯ ನಾಯಕ ಸಿ.ಎಂ.ಇಬ್ರಾಹಿಂ ಭಾನುವಾರ ಅಧಿಕಾರ ಸ್ವೀಕರಿಸಿದರು.

ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಸಿಎಂ ಇಬ್ರಾಹಿಂ
ಸಿ.ಎಂ.ಇಬ್ರಾಹಿಂ ಜೆಡಿಎಸ್ ಸೇರ್ಪಡೆ
TV9 Web
| Edited By: |

Updated on:Apr 17, 2022 | 11:34 AM

Share

ಬೆಂಗಳೂರು: ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷರಾಗಿ ಹಿರಿಯ ನಾಯಕ ಸಿ.ಎಂ.ಇಬ್ರಾಹಿಂ ಭಾನುವಾರ ಅಧಿಕಾರ ಸ್ವೀಕರಿಸಿದರು. ಈವರೆಗೆ ರಾಜ್ಯ ಘಟಕದ ಅಧ್ಯಕ್ಷರಾಗಿದ್ದ ಎಚ್​.ಕೆ.ಕುಮಾರಸ್ವಾಮಿ ಅವರು ಇಬ್ರಾಹಿಂಗೆ ಅಧಿಕಾರ ವಹಿಸಿಕೊಟ್ಟರು. ಮಾಜಿ ಪ್ರಧಾನಿ ದೇವೇಗೌಡ ಸಮ್ಮುಖದಲ್ಲಿ ಬೆಂಗಳೂರಿನ ಜೆ.ಪಿ.ಭವನದ ಜೆಡಿಎಸ್ ಕಚೇರಿಯಲ್ಲಿ ಅಧಿಕಾರ ಹಸ್ತಾಂತರ ಸಮಾರಂಭ ನಡೆಯಿತು.

ಸಮಾರಂಭದಲ್ಲಿ ಮಾತನಾಡಿದ ನಿಕಟಪೂರ್ವ ಜೆಡಿಎಸ್ ಅಧ್ಯಕ್ಷ ಎಚ್​.ಕೆ.ಕುಮಾರಸ್ವಾಮಿ, ಜೆಡಿಎಸ್ ಪಕ್ಷದಲ್ಲಿ ಹೊಸಪರ್ವ ಆರಂಭವಾಗಿದೆ. ಯಾರಿಗೆ ಕೃತಜ್ಞತೆ ಇರುತ್ತೋ ಅವರು ಭಾವುಕರಾಗುತ್ತಾರೆ. ನಾನು ಏನೂ ಕೇಳದಿದ್ದರೂ ನನ್ನನ್ನು ಎಚ್.ಡಿ.ದೇವೆಗೌಡರು ಬೆಳೆಸಿದ್ದಾರೆ. ಇದೀಗ ಸಿ.ಎಂ.ಇಬ್ರಾಹಿಂ ನಮ್ಮ ಪಕ್ಷಕ್ಕೆ ಬಂದಿರುವುದು ತುಂಬಾ ಖುಷಿಯಾಗಿದೆ. ಪಕ್ಷ ನನ್ನ ಹಕ್ಕು, ಅಧಿಕಾರ ನನ್ನ ಹಕ್ಕಲ್ಲ. ಎಲ್ಲರಿಗೂ ಅಭಿನಂದನೆ ಸಲ್ಲಿಸಿ ರಾಜ್ಯಾಧ್ಯಕ್ಷ ಸ್ಥಾನವನ್ನು ಖುಷಿಯಿಂದ ಬಿಟ್ಟುಕೊಡುತಿದ್ದೇನೆ ಎಂದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ರಾಜ್ಯದಲ್ಲಿ ಶಾಂತಿ ಕಾಪಾಡುವ ಮತ್ತು ಕರ್ನಾಟವನ್ನು ಸರ್ವ ಜನಾಂಗದ ಶಾಂತಿಯ ತೋಟವಾಗಿ ಉಳಿಸಿಕೊಳ್ಳುವ ಸಾಮರ್ಥ್ಯ ಜೆಡಿಎಸ್​ಗೆ ಮಾತ್ರವೇ ಇದೆ ಎಂದರು. ಬಿಜೆಪಿ ಸರ್ಕಾರ ಬೇಜವಾಬ್ದಾರಿಯಿಂದ ನಡೆದುಕೊಳ್ಳುತ್ತಿದೆ. ಕಾಂಗ್ರೆಸ್ ಪಕ್ಷವು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ. ಎರಡೂ ರಾಷ್ಟ್ರೀಯ ಪಕ್ಷಗಳು ಒಂದೇ ನಾಣ್ಯದ ಎರಡು ಮುಖಗಳಾಗಿ ಕೆಲಸ ಮಾಡುತ್ತಿವೆ ಎಂದರು.

ಸಮಾಜದಲ್ಲಿ ಮುಸ್ಲಿಮರ ವಿರುದ್ಧ ಕೆಟ್ಟ ಭಾವನೆ ಮೂಡುವಂತೆ ಮಾಡಲು ಬಿಜೆಪಿ ಯತ್ನಿಸುತ್ತಿದೆ. ನೀವು ಪ್ರಚೋದನೆಗೆ ಒಳಪಡುವ ಮೂಲಕ ಅವರ ತಾಳಕ್ಕೆ ತಕ್ಕಂತೆ ಕುಣಿಯಬೇಡಿ. ದುಷ್ಕರ್ಮಿಗಳು ಯಾವುದೇ ಧರ್ಮದಲ್ಲಿದ್ದರೂ ಅಂಥವರನ್ನು ಕಾಪಾಡದೇ, ಶಿಕ್ಷೆಗೆ ಒಳಪಡಿಸಬೇಕು. ಎಲ್ಲರೂ ಶಾಂತಿ ಕಾಪಾಡಬೇಕು ಎಂದು ಮನವಿ ಮಾಡಿದರು.

ಇದನ್ನೂ ಓದಿ: JDS: ಜೆಡಿಎಸ್ ಜನತಾ ಜಲಧಾರೆಗೆ ಚಾಲನೆ; ನೀರಾವರಿ ವಿಚಾರದಲ್ಲಿ ನಮ್ಮ ಪರವಾಗಿ ಯಾರೂ ಇಲ್ಲ ಎಂದ ಹೆಚ್​ಡಿ ದೇವೇಗೌಡ

ಇದನ್ನೂ ಓದಿ: ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ನಾಯಕರ ಜತೆಗಿನ ಮೃತ ಸಂತೋಷ್ ಪಾಟೀಲ್ ಫೋಟೋಗಳು ವೈರಲ್

Published On - 11:34 am, Sun, 17 April 22

ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು