ಸಚಿವರ ವಿರುದ್ಧ ಸಿಡಿದೆದ್ದ ಕಾಂಗ್ರೆಸ್ ಶಾಸಕರು: ಶಾಸಕಾಂಗ ಸಭೆ ಬಗ್ಗೆ ಸಿಎಂ, ಡಿಸಿಎಂ ಹೇಳಿದ್ದಿಷ್ಟು

ಸಚಿವರ ವಿರುದ್ಧ ಕಾಂಗ್ರೆಸ್ ಶಾಸಕ ಅಸಮಾಧಾನ ವ್ಯಕ್ತಪಡಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸ್ವತಃ ಸಿಎಂ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರು ಡಿಕೆ ಶಿವಕುಮಾರ್​ ಸ್ಪಷ್ಟನೆ ನೀಡಿದ್ದಾರೆ.

ಸಚಿವರ ವಿರುದ್ಧ ಸಿಡಿದೆದ್ದ ಕಾಂಗ್ರೆಸ್ ಶಾಸಕರು: ಶಾಸಕಾಂಗ ಸಭೆ ಬಗ್ಗೆ ಸಿಎಂ, ಡಿಸಿಎಂ ಹೇಳಿದ್ದಿಷ್ಟು
ಸಿದ್ದರಾಮಯ್ಯ, ಡಿಕೆ ಶಿವಕುಮಾರ್
Follow us
| Updated By: ರಮೇಶ್ ಬಿ. ಜವಳಗೇರಾ

Updated on: Jul 25, 2023 | 12:55 PM

ಬೆಂಗಳೂರು/ಹುಬ್ಬಳ್ಳಿ, (ಜುಲೈ 25): ಕರ್ನಾಟಕದಲ್ಲಿ ಕಾಂಗ್ರೆಸ್ (Congress) ಅಧಿಕಾರಕ್ಕೆ ಬಂದು ಎರಡು ತಿಂಗಳು ಆಗಿದೆ ಅಷ್ಟೇ. ಆಗಲೇ ಸಚಿವರು ಹಾಗೂ ಶಾಸಕ ನಡುವೆ ಮುಸುಕಿನ ಗುದ್ದಾಟ ಶುರುವಾಗಿದೆ. ಸಚಿವರ ನಡೆಯಿಂದ ಅಸಮಾಧಾನಗೊಂಡಿರುವ 20ಕ್ಕೂ ಹೆಚ್ಚು ಶಾಸಕರು ಸಿಎಂ ಸಿದ್ದರಾಮಯ್ಯಗೆ (Siddaramaiah) ದೂರು ನೀಡಿದ್ದಾರೆ. ಅಲ್ಲದೇ ಶಾಸಕಾಂಗ ಸಭೆ ಕರೆಯುವಂತೆ ಆಗ್ರಹಿಸಿದ್ದಾರೆ. ಇನ್ನು ಈ ಬೆಳವಣಿಗೆಗಳ ಬಗ್ಗೆ ಸ್ವತಃ ಸಿದ್ದರಾಮಯ್ಯ ಅವರು ಇಂದು(ಜುಲೈ 25) ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದು, ಶಾಸಕರು ದೂರು ಕೊಟ್ಟಿಲ್ಲ. ಶಾಸಕಾಂಗ ಸಭೆ ಕರೆಯಿರಿ ಎಂದಿದ್ದಾರೆ. ಹೀಗಾಗಿ ಗುರುವಾರ(ಜುಲೈ 27) ಶಾಸಕಾಂಗ ಸಭೆ ಕರೆದಿದ್ದೇವೆ. ಕಳೆದ ವಾರ ಶಾಸಕಾಂಗ ಸಭೆ ಆಗಬೇಕಿತ್ತು. ರಾಹುಲ್ ಗಾಂಧಿ ಬರುತ್ತಿದ್ದ ಕಾರಣ ಶಾಸಕಾಂಗ ಸಭೆ ಕರೆದಿರಲಿಲ್ಲ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಕಾಂಗ್ರೆಸ್​ ಸರ್ಕಾರದಲ್ಲಿ ಅಸಮಾಧಾನ ಸ್ಫೋಟ, ತಮ್ಮದೇ ಸಚಿವರ ವಿರುದ್ದ ಸಿಎಂಗೆ ದೂರು ನೀಡಿದ ಶಾಸಕರು

ಇನ್ನು ಇತ್ತ ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿ, ಎಲ್ಲಾ ಊಹಾಪೋಹ, ಯಾವುದೇ ಪತ್ರ ಬರೆದಿಲ್ಲ. ಶಾಸಕರು ಅವರ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದಾರೆ. ಎಲ್ಲಾ ಸುಮ್ಮನೆ ಊಹಾಪೋಹದ ಸುದ್ದಿ ಹಬ್ಬಿಸಲಾಗಿದೆ. ನಮ್ಮ 5 ಕಾರ್ಯಕ್ರಮ ಇದಾವೆ ಜನರಿಗೆ ಯಾವ ರೀತಿ ತಲುಪುತ್ತಿದ್ದೇವೆ. ಭ್ರಷ್ಟಾಚಾರ ಏನಾದರೂ ನಡೆಯುತ್ತಿದೆಯಾ? ನಮ್ಮ ಶಾಸಕರಿಗೆ ಗೈಡ್ ಲೈನ್ಸ್ ಕೊಡಬೇಕು. ಮಾಹಿತಿ ಕೊಡಬೇಕು, ಪ್ರತಿ ಗ್ರಾಮ ಪಂಚಾಯತಿಯಲ್ಲಿ ನಮ್ಮ ಕಾರ್ಯಕ್ರಮ ಜನರಿಗೆ ತಲುಪಬೇಕು. ಎಲ್ಲ ಸಚಿವರೂ ಮಾತು ಕೇಳುತ್ತಿದ್ದಾರೆ, ಎಲ್ಲರೂ ಅವರವರ ಕೆಲಸ ಮಾಡುತ್ತಿದ್ದಾರೆ. ಯಾವುದೇ ಅಸಮಾಧಾನ ಇಲ್ಲ, ವರ್ಗಾವಣೆ ಅವಧಿ ಮುಗಿದಿದೆ ಎಂದು ಹೇಳಿದರು.

ಇನ್ನು ಕಾಂಗ್ರೆಸ್​ನಲ್ಲಿ ಅಸಮಾಧಾನ ಸ್ಫೋಟಗೊಂಡಿರುವ ಬಗ್ಗೆ ಬಿಜೆಪಿ ವಿಧಾನ ಪರಿಷತ್ ನಾಯಕ ಎನ್​, ರವಿಕುಮಾರ್ ಮಾತನಾಡಿ, ಸಚಿವರ ಭೇಟಿಗೆ ಸಾಧ್ಯವಾಗುತ್ತಿಲ್ಲ ಎಂದು 20ಕ್ಕೂ ಹೆಚ್ಚು ಶಾಸಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಸರ್ಕಾರ ಬಂದು ಎರಡು ತಿಂಗಳಾಗುವಷ್ಟರಲ್ಲೇ ಶಾಸಕರು, ಸಚಿವರ ವಿರುದ್ಧ ದೂರು ಕೊಟ್ಟಿದ್ದಾರೆ. ನಮ್ಮ ಪರಿಸ್ಥಿತಿ ಹೀಗಾದರೇ ಜನರ ಸ್ಥಿತಿ ಹೇಗೆ? ಎಂದು ಪ್ರಶ್ನಿಸಿದ್ದಾರೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು