AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾತಿವಾರು, ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ವರದಿ ಆಧರಿಸಿ ವಿವಿಧ ಸಮುದಾಯಗಳಿಗೆ ಅವಕಾಶ: ಸಿಎಂ ಸಿದ್ಧರಾಮಯ್ಯ ಭರವಸೆ

ಜಾತಿಗಣತಿ ವರದಿ ಆಧರಿಸಿ ವಿವಿಧ ಸಮುದಾಯಗಳಿಗೆ ಅವಕಾಶ ನೀಡಲಾಗುವುದು ಎಂದು ಶೋಷಿತ ವರ್ಗಗಳ ಮಹಾ ಒಕ್ಕೂಟದ ನಿಯೋಗಕ್ಕೆ ಸಿಎಂ ಸಿದ್ಧರಾಮಯ್ಯ ಭರವಸೆ ನೀಡಿದ್ದಾರೆ.

ಜಾತಿವಾರು, ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ವರದಿ ಆಧರಿಸಿ ವಿವಿಧ ಸಮುದಾಯಗಳಿಗೆ ಅವಕಾಶ: ಸಿಎಂ ಸಿದ್ಧರಾಮಯ್ಯ ಭರವಸೆ
ಸಿಎಂ ಸಿದ್ಧರಾಮಯ್ಯ
ಗಂಗಾಧರ​ ಬ. ಸಾಬೋಜಿ
|

Updated on: Jun 07, 2023 | 7:23 PM

Share

ಬೆಂಗಳೂರು: ಜಾತಿವಾರು, ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ವರದಿ ಆಧರಿಸಿ ಕ್ರಮ ಕೈಗೊಳ್ಳಲಾಗುವುದು. ಜಾತಿಗಣತಿ ವರದಿ ಆಧರಿಸಿ ವಿವಿಧ ಸಮುದಾಯಗಳಿಗೆ ಅವಕಾಶ ನೀಡಲಾಗುವುದು ಎಂದು ಶೋಷಿತ ವರ್ಗಗಳ ಮಹಾ ಒಕ್ಕೂಟದ ನಿಯೋಗಕ್ಕೆ ಸಿಎಂ ಸಿದ್ಧರಾಮಯ್ಯ (Siddaramaiah) ಭರವಸೆ ನೀಡಿದ್ದಾರೆ. ಬುಧವಾರ ಕರ್ನಾಟಕ ಶೋಷಿತ ವರ್ಗಗಳ ಮಹಾಒಕ್ಕೂಟದ ನಿಯೋಗವನ್ನು ಭೇಟಿ ಮಾಡಿ ಮಾತನಾಡಿದ ಅವರು, ಮೀಸಲಾತಿ ಮತ್ತಿತರ ಸೌಲಭ್ಯ ಒದಗಿಸಲು ವೈಜ್ಞಾನಿಕ, ನಿಖರ ಮಾಹಿತಿಯನ್ನು ಮುಂದಿನ ದಿನಗಳಲ್ಲಿ ವರದಿ ಪರಿಶೀಲಿಸಿ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

ಶೋಷಿತ ವರ್ಗಗಳ ಮಹಾ ಒಕ್ಕೂಟದ ಮುಖಂಡ ರಾಮ ಚಂದ್ರಪ್ಪ ಮಾವಳ್ಳಿ ಶಂಕರ್, ಪ್ರೊ. ರವಿ ವರ್ಮಕುಮಾರ್, ಅನಂತ್ ನಾಯಕ್, ಡಾ. ನರಸಿಂಹಯ್ಯ, ಪ್ರೊ.ಜಾಫೆಟ್, ಬಿ.ಟಿ.ಲಲಿತಾ ನಾಯಕ್​ ಜಿ.ಎಸ್.ಪಾಟೀಲ್ ಸೇರಿದಂತೆ 150ಕ್ಕೂ ಹೆಚ್ಚು ಮುಖಂಡರನ್ನು ನಿಯೋಗ ಒಳಗೊಂಡಿದೆ.

ಮೀಸಲಾತಿ ಗೊಂದಲ ನಿವಾರಣೆಗೆ ಕ್ರಮ

ಮೀಸಲಾತಿಯಲ್ಲಿನ ಎಲ್ಲ ಗೊಂದಲಗಳನ್ನು ಸರಿಪಡಿಸಲಾಗುವುದು. ಎಸ್​ಸಿ ಎಸ್​ಟಿ ಪಂಗಡದವರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಹೆಚ್ಚಿಸಿರುವುದನ್ನು ಸಂವಿಧಾನದ 9ನೇ ಶೆಡ್ಯೂಲ್​ನಲ್ಲಿ ಸೇರಿಸಲು ನಾವು ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಈ ಬಗ್ಗೆ ಕರ್ನಾಟಕ ಮುಖ್ಯಮಂತ್ರಿಗಳ ಅಧಿಕೃತ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಮಾಡಿದ್ದರು.

ಇದನ್ನೂ ಓದಿ: ಗ್ಯಾರಂಟಿ ಚುನಾವಣಾ ಗಿಮಿಕ್; ಚೆಲುವರಾಯಸ್ವಾಮಿ ಏನೋ ಹೇಳಲು ಹೋಗಿ ಏನೋ ಹೇಳಿರಬೇಕೆಂದ ಸತೀಶ್ ಜಾರಕಿಹೊಳಿ

ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಹೆಚ್ಚಿಸಿರುವುದನ್ನು ಸಂವಿಧಾನದ 9ನೇ ಶೆಡ್ಯೂಲ್​ನಲ್ಲಿ ಸೇರಿಸಲು ನಾವು ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತೇವೆ ಎಂದು ಸಿದ್ದರಾಮಯ್ಯ ಟ್ವೀಟ್​ನಲ್ಲಿ ಉಲ್ಲೇಖಿಸಿದ್ದರು.

ಹಿಂದುಳಿದ ವರ್ಗಗಳ ಮೀಸಲಾತಿಯಲ್ಲಿ ಹಾಗೂ ಪರಿಶಿಷ್ಟ ಜಾತಿ ಒಳ ಮೀಸಲಾತಿ ಕಲ್ಪಿಸುವ ನೆಪದಲ್ಲಿ ಹಿಂದಿನ ಸರ್ಕಾರ ಗೊಂದಲ ಸೃಷ್ಟಿಸಿದೆ. ಎಲ್ಲ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಒಳ ಮೀಸಲಾತಿ ಕಲ್ಪಿಸುವಂತೆ ತಾವು ನೀಡಿದ್ದ ಸಲಹೆಯನ್ನು ನಿರ್ಲಕ್ಷಿಸಿದ ಪರಿಣಾಮ ವಿವಿಧ ಸಮುದಾಯಗಳ ವಿರೋಧ ಎದುರಿಸುವಂತಾಯಿತು. ಸಾಮಾಜಿಕ ನ್ಯಾಯದ ಕುರಿತು ಬದ್ಧತೆ ಇಲ್ಲದೆ ಹೋದರೆ ಇಂತಹ ಗೊಂದಲಗಳಾಗುತ್ತವೆ.

ಇದನ್ನೂ ಓದಿ: ಕರ್ನಾಟಕದ ತೆರಿಗೆದಾರರು ಗೃಹಲಕ್ಷ್ಮಿ ಯೋಜನೆಯಡಿ 2000 ರೂ. ಕೇಳುತ್ತಿಲ್ಲ; ಡಿಕೆ ಶಿವಕುಮಾರ್

ಕಾಂಗ್ರೆಸ್‌ ಸರ್ಕಾರ ಯಾವತ್ತೂ ಜಾತ್ಯತೀತ ಪಕ್ಷ

ಕರ್ನಾಟಕದಲ್ಲಿ ಜನ ಬದಲಾವಣೆ ಬಯಸಿ ಮತ್ತೆ ಕಾಂಗ್ರೆಸ್‌ ಪಕ್ಷಕ್ಕೆ ಅವಕಾಶ ನೀಡಿದ್ದಾರೆ. ಕಾಂಗ್ರೆಸ್‌ ಸರ್ಕಾರ ಯಾವತ್ತೂ ಜಾತ್ಯತೀತ ಪಕ್ಷವಾಗಿದ್ದು, ಅಧಿಕಾರದಲ್ಲಿ ಇರಲಿ, ಇಲ್ಲದಿರಲಿ, ಸಾಮಾಜಿಕ ನ್ಯಾಯದ ನಿಲುವಿನಲ್ಲಿ ರಾಜಿ ಇಲ್ಲ. ನಮ್ಮ ಸರ್ಕಾರವು ಮೀಸಲಾತಿಯಲ್ಲಿನ ಎಲ್ಲ ಗೊಂದಲಗಳನ್ನು ಸರಿಪಡಿಸಲಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್