ಅರಮನೆ, ಸರ್ಕಾರದ ಮಧ್ಯೆ ಕಾನೂನು ಸಮರ‌: ನಾಳೆ ತುರ್ತು ಸಂಪುಟ ಸಭೆ ಕರೆದ ಸಿಎಂ

ಸಿಎಂ ಸಿದ್ದರಾಮಯ್ಯ ನಾಳೆ ಮಧ್ಯಾಹ್ನ 3 ಗಂಟೆಗೆ ತುರ್ತು ಸಂಪುಟ ಸಭೆ ಕರೆದಿದ್ದಾರೆ. ಅರಮನೆ ಮತ್ತು ಸರ್ಕಾರದ ನಡುವಿನ ಭೂಮಿ ವಿವಾದ ಮತ್ತು ಟಿಡಿಆರ್ ನೀಡುವ ವಿಷಯದಲ್ಲಿ ಈ ಸಭೆ ಮಹತ್ವದ್ದಾಗಿದೆ. ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್ ಸಲ್ಲಿಸುವ ಮೊದಲು ಸರ್ಕಾರ ಭೂಸ್ವಾಧೀನ ಪ್ರಕ್ರಿಯೆಯನ್ನು ಕೈಬಿಡುವ ಸಾಧ್ಯತೆಯಿದೆ.

ಅರಮನೆ, ಸರ್ಕಾರದ ಮಧ್ಯೆ ಕಾನೂನು ಸಮರ‌: ನಾಳೆ ತುರ್ತು ಸಂಪುಟ ಸಭೆ ಕರೆದ ಸಿಎಂ
ಅರಮನೆ, ಸರ್ಕಾರದ ಮಧ್ಯೆ ಕಾನೂನು ಸಮರ‌: ನಾಳೆ ತುರ್ತು ಸಂಪುಟ ಸಭೆ ಕರೆದ ಸಿಎಂ
Edited By:

Updated on: Jan 23, 2025 | 10:10 PM

ಬೆಂಗಳೂರು, ಜನವರಿ 23: ಮೈಸೂರು ರಾಜಮನೆತನ ಮತ್ತು ರಾಜ್ಯ ಸರ್ಕಾ ರದ ನಡುವಿನ ಜಟಾಪಟಿ ಮತ್ತೊಂದು ಹಂತಕ್ಕೆ ತಲುಪಿದೆ. ಅರಮನೆ ಭೂಮಿಗೆ ಟಿಡಿಆರ್ ನೀಡುವ ವಿಚಾರದಲ್ಲಿ ತಿಕ್ಕಾಟ ನಡೆದಿದೆ. ಹೀಗಾಗಿ ಅರಮನೆ ಮತ್ತು ಸರ್ಕಾರದ ನಡುವಿನ ಕಾನೂನು ಸಮರ‌ ಹಿನ್ನೆಲೆ ಸಿಎಂ ಸಿದ್ದರಾಮಯ್ಯ (Siddaramaiah) ನಾಳೆ ಮಧ್ಯಾಹ್ನ 3 ಗಂಟೆಗೆ ತುರ್ತು ಸಂಪುಟ ಸಭೆ ಕರೆದಿದ್ದಾರೆ. ಸದ್ಯ ತುರ್ತು ಸಂಪುಟ ಸಭೆ ಕರೆದಿರುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.

ಅರಮನೆ ಭೂಮಿಗೆ ಟಿಡಿಆರ್ ನೀಡುವ ವಿಚಾರದಲ್ಲಿ ರಾಜಮನೆತನ ಮತ್ತು ರಾಜ್ಯ ಸರ್ಕಾ ರದ ನಡುವಿನ  ತಿಕ್ಕಾಟ ನಡೆಯುತ್ತಿದೆ. ಸುಪ್ರೀಂಕೋರ್ಟ್‌ನಲ್ಲಿ ಅಫಿಡವಿಟ್ ಸಲ್ಲಿಸಬೇಕಾದ ಹಿನ್ನೆಲೆ ಸರ್ಕಾರ ಸಂಪುಟ ಸಭೆಯಲ್ಲಿ ನಿರ್ಣಯ ಮಾಡಬೇಕಿದೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ನಾಳೆ ಸಂಪುಟ ಸಭೆ ಕರೆದಿದ್ದಾರೆ.

ಇದನ್ನೂ ಓದಿ: ರಸ್ತೆ ಅಗಲೀಕರಣಕ್ಕೆ ಅರಮನೆ ಜಾಗ ಸ್ವಾಧೀನ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ರೋಷಾವೇಷ

ನಾಳೆಯ ಸಂಪುಟ ಸಭೆಯಲ್ಲಿ ಭೂಸ್ವಾಧೀನ ಪ್ರಕ್ರಿಯೆಯನ್ನು ಸರ್ಕಾರ ಕೈಬಿಡುವ ಸಾಧ್ಯತೆ ಇದೆ. ರಸ್ತೆ ಅಗಲೀಕರಣ ಮಾಡದೇ ಇರಲು ಸರ್ಕಾರ ತೀರ್ಮಾನಿಸಿದ್ದು, ಟಿಡಿಆರ್​ ನೀಡಿದರೆ ಮುಂದಿನ ಭೂಸ್ವಾಧೀನ‌ ಪ್ರಕ್ರಿಯೆಗಳಿಗೆ ಮಾನದಂಡ ಆಗುವ ಆತಂಕ ಎದುರಾಗಿದೆ. ಹೀಗಾಗಿ ಇಡೀ ಭೂಸ್ವಾಧೀನ ಪ್ರಕ್ರಿಯೆ ಕೈಬಿಡಲು ಸರ್ಕಾರದ ನಿರ್ಧಾರವಾಗಿದ್ದು, ನಾಳೆಯ ತುರ್ತು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಂಡು ಸುಪ್ರೀಂಕೋರ್ಟ್‌ನಲ್ಲಿ ಅಫಿಡವಿಟ್ ಸಲ್ಲಿಸಲು ಸರ್ಕಾರ ತೀರ್ಮಾನ ಮಾಡಿದೆ.

ಇದನ್ನೂ ಓದಿ: ರೈತರಿಗೆ ಭೂಮಿಯನ್ನು ಸರ್ಕಾರ ಕೊಡಬೇಕು, ನಾನು ಹೇಗೆ ಕೊಡಲು ಸಾಧ್ಯ? ಹೆಚ್ ಡಿ ಕುಮಾರಸ್ವಾಮಿ

ಇನ್ನು ಟಿಡಿಆರ್ ಪರಿಹಾರ ನೀಡಲು ವಿಳಂಬ ಮಾಡಿದ ರಾಜ್ಯ ಸರ್ಕಾರದ ವಿರುದ್ಧ ಮೈಸೂರು ರಾಜಮನೆತನ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿತ್ತು. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರದಿಂದ ಸಾಲು ಸಾಲು ಕಠಿಣ ಕ್ರಮ ಕೈಗೊಳ್ಳುವಂತೆ ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಸಲಾಗಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
Loading...
Unable to load recommendations.
Follow Us