ಗೌರವ ರೂಪದಲ್ಲಿ ಹಾರ-ತುರಾಯಿ, ಶಾಲು-ಶಲ್ಯ ಸ್ವೀಕರಿಸದಿರಲು ಸಿಎಂ ಸಿದ್ದರಾಮಯ್ಯ ನಿರ್ಧಾರ

ಸಾರ್ವಜನಿಕರಿಗೆ ತಮ್ಮಿಂದಾಗು ಕಿರಿಕಿರಿಗಳನ್ನು ತಪ್ಪಿಸಲು ಝೀರೋ ಟ್ರಾಫಿಕ್ ನಿರಾಕಿರಿಸಿದ ಸಿಎಂ ಸಿದ್ದರಾಮಯ್ಯ ಅವರು ಇದೀಗ, ಗೌರವ-ಸನ್ಮಾನದ ರೂಪದಲ್ಲಿ ಹಾರ-ತುರಾಯಿ, ಶಾಲು-ಶಲ್ಯಗಳನ್ನು ಸ್ವೀಕರಿಸದೆ ಇರಲು ನಿರ್ಧರಿಸಿದ್ದಾರೆ.

ಗೌರವ ರೂಪದಲ್ಲಿ ಹಾರ-ತುರಾಯಿ, ಶಾಲು-ಶಲ್ಯ ಸ್ವೀಕರಿಸದಿರಲು ಸಿಎಂ ಸಿದ್ದರಾಮಯ್ಯ ನಿರ್ಧಾರ
ಗೌರವಾರ್ಥವಾಗಿ ನೀಡುವ ಹಾರ-ತುರಾಯಿ, ಶಾಲು-ಶಲ್ಯ ಸ್ವೀಕರಿಸದಿರಲು ಸಿಎಂ ಸಿದ್ದರಾಮಯ್ಯ ನಿರ್ಧಾರ
Rakesh Nayak Manchi

Updated on: May 21, 2023 | 9:50 PM

ಬೆಂಗಳೂರು: ಸಾರ್ವಜನಿಕರಿಗೆ ತಮ್ಮಿಂದಾಗು ಕಿರಿಕಿರಿಗಳನ್ನು ತಪ್ಪಿಸಲು ಝೀರೋ ಟ್ರಾಫಿಕ್ (Zero Traffic) ನಿರಾಕಿರಿಸಿದ ಸಿಎಂ ಸಿದ್ದರಾಮಯ್ಯ (Siddaramaiah) ಅವರು ಇದೀಗ, ಗೌರವ-ಸನ್ಮಾನದ ರೂಪದಲ್ಲಿ ಹಾರ-ತುರಾಯಿ, ಶಾಲು-ಶಲ್ಯಗಳನ್ನು ಸ್ವೀಕರಿಸದೆ ಇರಲು ನಿರ್ಧರಿಸಿದ್ದಾರೆ. ನೀಡುವುದಾದರೆ ಪುಸ್ತಕ ನೀಡಿ ಎಂದು ಸಿದ್ದರಾಮಯ್ಯ ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ. ಮುಖ್ಯಮಂತ್ರಿ ಅವರ ಈ ನಿರ್ಧಾರವನ್ನು ನೆಟ್ಟಿಗರು ಸ್ವಾಗತಿಸಿದ್ದಾರೆ.

“ನಾಳೆಯಿಂದ ಸಾರ್ವಜನಿಕರಿಂದ ಗೌರವ-ಸನ್ಮಾನದ ರೂಪದಲ್ಲಿ ಹಾರ-ತುರಾಯಿ, ಶಾಲು-ಶಲ್ಯಗಳನ್ನು ಸ್ವೀಕರಿಸದೆ ಇರಲು ನಿರ್ಧರಿಸಿದ್ದೇನೆ. ಇದು ನನ್ನ ಮನೆ-ಕಚೇರಿ ಮತ್ತು ಸಾರ್ವಜನಿಕ ಸಮಾರಂಭಗಳಿಗೂ ಅನ್ವಯ. ಪ್ರೀತಿ-ಗೌರವವನ್ನು ಕಾಣಿಕೆಗಳ ಮೂಲಕವೇ ಸಲ್ಲಿಸಬೇಕೆನ್ನುವವರು ಪುಸ್ತಕಗಳನ್ನು ನೀಡಬಹುದು. ನಿಮ್ಮೆಲ್ಲರ ಪ್ರೀತಿ-ಅಭಿಮಾನ ಸದಾ ನನ್ನ ಮೇಲಿರಲಿ” ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: Zero Traffic: ಬೆಂಗಳೂರಿನಲ್ಲಿ ತಮಗೆ ಜೀರೋ ಟ್ರಾಫಿಕ್ ಬೇಡ ಎಂದ ಸಿದ್ದರಾಮಯ್ಯ

ಇದಕ್ಕೂ ಮುನ್ನ ಟ್ವೀಟ್ ಮಾಡಿದ್ದ ಸಿದ್ದರಾಮಯ್ಯ, ಝೀರೋ ಟ್ರಾಫಿಕ್ ವ್ಯವಸ್ಥೆ ಕಲ್ಪಿಸುವುದು ಬೇಡ ಎಂದಿದ್ದರು. “ನನ್ನ ವಾಹನ ಸಂಚಾರಕ್ಕೆ ನೀಡಲಾಗಿರುವ ಜೀರೋ ಟ್ರಾಫಿಕ್ ಸೌಲಭ್ಯವನ್ನು ಹಿಂದಕ್ಕೆ ಪಡೆಯುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ತಿಳಿಸಿದ್ದೇನೆ. ಜೀರೊ ಟ್ರಾಪಿಕ್‌ನಿಂದಾಗಿ ರಸ್ತೆಯಲ್ಲಿ ವಾಹನ ದಟ್ಟಣೆ ಉಂಟಾಗಿ ಸಾರ್ವಜನಿಕರಿಗೆ ಅನಾನುಕೂಲವಾಗುತ್ತಿರುವುದನ್ನು ಕಂಡು ಈ ನಿರ್ಧಾರ ಕೈಗೊಂಡಿದ್ದೇನೆ” ಎಂದ ಹೇಳಿದ್ದರು.

ಬಿಜೆಪಿ ಸರ್ಕಾರ ಅವಧಿಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾಗಿದ್ದ ಸುನಿಲ್ ಕುಮಾರ್ ಅವರು ಕೂಡ ಗೌರವ-ಸನ್ಮಾನದ ರೂಪದಲ್ಲಿ ನೀಡುವ ಹಾರ-ತುರಾಯಿ, ಶಾಲು-ಶಲ್ಯಗಳನ್ನು ನಿರಾಕರಿಸಿದ್ದರು. ಅಭಿನಂದಿಸಲು ಹಾರ ತುರಾಯಿ ತರಬೇಡಿ, ಕೊಡಲೇಬೇಕು ಅಂದಿದ್ದರೆ ಕನ್ನಡ ಪುಸ್ತಕ ಕೊಂಡು ತನ್ನಿ, ಅದನ್ನು ಕಾರ್ಕಳ ಗ್ರಂಥಾಲಯಕ್ಕೆ ಕೊಡುತ್ತೇನೆ ಎಂದಿದ್ದರು. ಕರ್ನಾಟಕದಲ್ಲಿ ಮಾತ್ರವಲ್ಲದೆ, ಇಂತಹ ಉತ್ತಮವಾದ ನಡೆಯನ್ನು ದೇಶದ ವಿವಿಧ ರಾಜ್ಯಗಳ ರಾಜಕಾರಣಿಗಳೂ ಅನುಸರಿಸುತ್ತಿದ್ದಾರೆ.

ರಾಜಕೀಯ ಸುದ್ದಿಗಳನ್ನ ಓದಲು ಇಲ್ಲಿ ಕ್ಲಿಕ್ ಮಾಡಿ

Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

Follow Us