AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯಲ್ಲಿ ಯಾರೆಲ್ಲಾ ಇರ್ತಾರೆ? ಏನೆಲ್ಲಾ ಸೌಲಭ್ಯ? ಇಲ್ಲಿದೆ ವಿವರ

Congress Guarantee: ರಾಜ್ಯ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳನ್ನು ರಚಿಸಲು ಸರ್ಕಾರ ಮುಂದಾಗಿದೆ. ರಾಜ್ಯ ಮಟ್ಟದ ಸಮಿತಿಯಿಂದ ಹಿಡಿದು, ವಿಧಾನಸಭಾ ಕ್ಷೇತ್ರವಾರ ಸಮಿತಿಯಲ್ಲಿ ಯಾರು ಯಾರು ಇರಲಿದ್ದಾರೆ? ಎಷ್ಟು ಮಂದಿ ಇರಲಿದ್ದಾರೆ? ಸಮಿತಿ ನಿರ್ವಹಣೆಗೆ ಎಷ್ಟು ಹಣವನ್ನು ಮೀಸಲಿಡಲಾಗುತ್ತದೆ? ಈ ಅನುದಾನವನ್ನು ಎಲ್ಲಿಂದ ಕೊಡಲಾಗುತ್ತದೆ ಎಂಬ ಮಾಹಿತಿಯನ್ನು ಸಿಎಂ ಸಿದ್ದರಾಮಯ್ಯ ನೀಡಿದ್ದಾರೆ.

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯಲ್ಲಿ ಯಾರೆಲ್ಲಾ ಇರ್ತಾರೆ? ಏನೆಲ್ಲಾ ಸೌಲಭ್ಯ? ಇಲ್ಲಿದೆ ವಿವರ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Jan 10, 2024 | 5:09 PM

ಬೆಂಗಳೂರು, (ಜನವರಿ 10): ಗ್ಯಾರಂಟಿ ಯೋಜನೆಗಳನ್ನು (Congress Guarantee) ಮುಂದಿಟ್ಟುಕೊಂಡು ಮುಂಬರುವ ಲೋಕಸಭಾ ಚುನಾವಣೆಗೆ ಹೋಗಲು ಕರ್ನಾಟಕ ಕಾಂಗ್ರೆಸ್ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಗ್ಯಾರಂಟಿಗಳನ್ನು ಸಮರ್ಒಕವಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಸಮಿತಿಗಳನ್ನು ರಚಿಸಲಾಗಿದೆ. ಇನ್ನು ಸಮಿತಿ ಅಧ್ಯಕ್ಷರಿಗೆ ಸಚಿವ ಸಂಪುಟ ದರ್ಜೆಯ ಸ್ಥಾನಮಾನ ನೀಡಲಾಗುತ್ತದೆ. ಹಾಗಾದ್ರೆ, ಸಮಿತಿ ಹೇಗೆ ಇರಲಿದೆ. ಯಾರೆಲ್ಲ ಇರಲಿದ್ದಾರೆ. ಸಮಿತಿ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರಿಗೆ ಯಾವೆಲ್ಲ ಸೌಲಭ್ಯ ದೊರೆಯಲಿದೆ ಎನ್ಜುವ ವಿವರವನ್ನು ಸ್ವತಃ ಸಿಎಂ ಸಿದ್ದರಾಮಯ್ಯ ನೀಡಿದ್ದು, ಅದು ಈ ಕೆಳಗಿನಂತಿದೆ.

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ

ರಾಜ್ಯ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳನ್ನು ರಚಿಸಲಾಗುವುದು. ವಿಧಾನಸಭೆಯಲ್ಲಿಯೂ ಒಂದು ಸಮಿತಿ ಇರಲಿದ್ದು, ರಾಜ್ಯಮಟ್ಟದಲ್ಲಿ ಅಧ್ಯಕ್ಷರು, ಐದು ಜನ ಉಪಾಧ್ಯಕ್ಷರು ಇರಲಿದ್ದಾರೆ. ಅಧ್ಯಕ್ಷರಾದವರಿಗೆ ಸಂಪುಟ ದರ್ಜೆ ಸ್ಥಾನಮಾನ ಇರಲಿದೆ. ಉಪಾಧ್ಯಕ್ಷರಿಗೆ ರಾಜ್ಯ ಸಚಿವ ಸ್ಥಾನ ನೀಡಲಾಗುವುದು. ಸುಮಾರು 31 ಜನ ಸದಸ್ಯರು ಇರಲಿದ್ದು ಇವರೆಲ್ಲರೂ ಕಾರ್ಯಕರ್ತರು. 31 ಜಿಲ್ಲಾ ಮಟ್ಟದಲ್ಲಿ ಒಬ್ಬ ಅಧ್ಯಕ್ಷರು ಹಾಗೂ ಉಪಾಧ್ಯಕ್ಷ ರು ಹಾಗೂ ಸದಸ್ಯರು ಇರಲಿದ್ದಾರೆ.

ಇದನ್ನೂ ಓದಿ: ಲೋಕಸಭೆ ಚುನಾವಣೆಗೆ ಗ್ಯಾರಂಟಿಯೇ ಕಾಂಗ್ರೆಸ್ ಅಸ್ತ್ರ: ರಾಜ್ಯ ಮಟ್ಟದ ಸಮಿತಿ ರಚನೆ, ಅಧ್ಯಕ್ಷರಿಗೆ ಸಂಪುಟ ದರ್ಜೆ ಸ್ಥಾನಮಾನ

224 ಕ್ಷೇತ್ರಗಳಲ್ಲಿ ಅಧ್ಯಕ್ಷರು ಹಾಗೂ 11 ಸದಸ್ಯರು ಇರಲಿದ್ದಾರೆ. ಇವರಿಗೆ ಗೌರವ ಧನ ಹಾಗೂ ಸಿಟ್ಟಿಂಗ್ ಫೀಸ್ ಸಹ ಒದಗಿಸಲಾಗುವುದು. ಅವರಿಗೆ ಕಚೇರಿ ವ್ಯವಸ್ಥೆ ಹಾಗೂ ಗೌರವ ಧನ ನೀಡುವ ವ್ಯವಸ್ಥೆ ಆಗಲಿದೆ ಹಾಗೂ 50 ಸಾವಿರ ರೂ.ಗಳನ್ನು ಪ್ರತಿ ತಿಂಗಳು ನೀಡಲಾಗುವುದು. ಈ ಮೊತ್ತವನ್ನು ರಾಜ್ಯ ಖಜಾನೆಯಿಂದ ಭರಿಸಲಾಗುವುದು. ಇದರಿಂದ ಸರ್ಕಾರಕ್ಕೆ ಇದು ದೊಡ್ಡ ಹೊರೆಯೇನಲ್ಲ. ಪರಿಣಾಮಕಾರಿಯಾಗಿ ಗ್ಯಾರಂಟಿ ಗಳ ಅನುಷ್ಠಾನವಾಗಬೇಕು ಎಂಬ ಕಾರಣಕ್ಕೆ 16 ಕೋಟಿ ರೂ.ಗಳನ್ನು ಭರಿಸುತ್ತೇವೆ. ಅಪಪ್ರಚಾರಕ್ಕೆ ಉತ್ತರ ಕೊಡಲು ಈ ಸಮಿತಿಗಳನ್ನು ರಚಿಸಲಾಗುತ್ತಿದೆ ಎಂದು ಹೇಳಿದರು.

ಕಾರ್ಯಕರ್ತರಿಗೆ, ಶಾಸಕರಲ್ಲದವರಿಗೆ, ಸಂಸದರಲ್ಲದವರಿಗೆ, ಸಮಿತಿ ಸದಸ್ಯತ್ವ ದೊರೆಯಲಿದೆ. ವಿವಿಧ ಇಲಾಖೆಗಳ ಸಮಿತಿಗಳನ್ನು ಕೂಡಲೇ ರಚಿಸಲು ಆಯಾ ಇಲಾಖೆಗಳ ಸಚಿವರ ವಿವೇಚನೆಗೆ ಬಿಡಲಾಗಿದೆ. ಹೆಸರುಗಳನ್ನು ಪಡೆಯುವಾಗ, ನಮ್ಮ ಶಾಸಕರು, ಸಂಸದರ ಸಲಹೆ ಪಡೆಯುವಂತೆ ಸೂಚನೆ ನೀಡಲಾಗಿದೆ. ಕೆಲವು ಶಾಸಕರಿಗೆ , ವಿಧಾನಸಭೆ ಟಿಕೆಟ್ ದೊರೆಯದವರಿಗೆ ಅವಕಾಶ ಕಲ್ಪಿಸಲಾಗುವುದು. ಎರಡು ವರ್ಷಗಳ ಅವಧಿ ಇರಲಿದೆ. ಕಾರ್ಯಕರ್ತರ ಶ್ರಮದಿಂದ ಪಕ್ಷ ಗಟ್ಟಿಯಾಗಿದೆ ಎಂದರು.

ನಾಯಕರಿಗೆ ಸಿಎಂ ಕಿವಿಮಾತು

ಲೋಕಸಭೆ ಚುನಾವಣೆ ಸಂಬಂಧ ಇಂದು (ಜನವರಿ 10) ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾಂಗ್ರೆಸ್ ನಾಯಕರ ಮಹತ್ವದ ಸಭೆಯಲ್ಲಿ ಸಿದ್ದರಾಮಯ್ಯನವರು ಶಾಸಕರಿಗೆ ಕೆಲ ಸಲಹೆ ಸೂಚನೆಗಳನ್ನು ನೀಡಿದ್ದಾರೆ. ಜನರ ನಾಡಿ ಮಿಡಿತ ನಮ್ಮ ಪರವಾಗಿದೆ. ಆದ್ದರಿಂದ ಅಪಪ್ರಚಾರದಿಂದ ನಾವು ಅಪಪ್ರಚಾರದಿಂದ ಹತಾಶರಾಗಬೇಡಿ, ಸಕಾರಾತ್ಮಕವಾಗಿರಿ. ಚುನಾವಣೆಯನ್ನು ನಾವು ಗೆಲ್ಲಲೇ ಬೇಕು. ಇಷ್ಟೆಲ್ಲ ಮಾಡಿ ಗೆಲ್ಲದಿದ್ರೆ ಅದು ನಮಗೆ ಹಿನ್ನಡೆಯಾಗಲಿದೆ. 28 ಎಂಪಿ ಸೀಟ್​ಗಳ ಪೈಕಿ ಕನಿಷ್ಠ 26 ಸ್ಥಾನ ಗೆಲ್ಲಬೇಕು ಅಪಪ್ರಚಾರದಿಂದ ನಾವು ಯಾರೂ ಸಹ ಹತಾಶರಾಗಬಾರದು. ಸಕಾರಾತ್ಮಕವಾಗಿರಬೇಕೆಂದು ಸಭೆಯಲ್ಲಿ ಶಾಸಕರಿಗೆ ಕಿವಿಮಾತು ಹೇಳಿದ್ದಾರೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ನೆಲೆಮಂಗಲ: ಮನೆ ಮುಂದೆ ಕಟ್ಟಿದ್ದ ಹಸುಗಳನ್ನ ಕದ್ದು ಪರಾರಿ, ರೈತ ಕಂಗಾಲು
ನೆಲೆಮಂಗಲ: ಮನೆ ಮುಂದೆ ಕಟ್ಟಿದ್ದ ಹಸುಗಳನ್ನ ಕದ್ದು ಪರಾರಿ, ರೈತ ಕಂಗಾಲು
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್