AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೂತನ ಸಚಿವರಿಗೆ ಶುಭ ಹಾರೈಸಿ ಟಾರ್ಗೆಟ್ ನೀಡಿದ ಸಿಎಂ ಸಿದ್ದರಾಮಯ್ಯ, ಏನದು ಟಾರ್ಗೆಟ್? ಇಲ್ಲಿದೆ ನೋಡಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸಂಪುಟದ ನೂತನ ಸಚಿವರಿಗೆ ಲೋಕಸಭಾ ಚುನಾವಣೆಗೆ ಸಂಬಂಧಪಟ್ಟಂತೆ ಟಾರ್ಗೆಟ್ ಫಿಕ್ಸ್ ಮಾಡಿದ್ದಾರೆ.

ನೂತನ ಸಚಿವರಿಗೆ ಶುಭ ಹಾರೈಸಿ ಟಾರ್ಗೆಟ್ ನೀಡಿದ ಸಿಎಂ ಸಿದ್ದರಾಮಯ್ಯ, ಏನದು ಟಾರ್ಗೆಟ್? ಇಲ್ಲಿದೆ ನೋಡಿ
ಸಿದ್ದರಾಮಯ್ಯ ಸಚಿವ ಸಂಪುಟ
Follow us
ರಮೇಶ್ ಬಿ. ಜವಳಗೇರಾ
|

Updated on:May 28, 2023 | 3:10 PM

ಬೆಂಗಳೂರು: ಚುನಾವಣಾ ಫಲಿತಾಂಶ ಪ್ರಕಟವಾಗಿ ಹದಿನೈದು ದಿನಗಳ ಒಳಗೆ ಪೂರ್ಣ ಪ್ರಮಾಣದ ಸರ್ಕಾರವನ್ನು ಅಸ್ತಿತ್ವಕ್ಕೆ ತಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲ್ಲಾ ಸಚಿವರಿಗೂ ಲೋಕಸಭಾ ಚುನಾವಣೆಗೆ ಸಂಬಂಧಪಟ್ಟಂತೆ ಟಾರ್ಗೆಟ್ ಫಿಕ್ಸ್ ಮಾಡಿದ್ದಾರೆ. ನಾಡಿನ ಜನತೆ ಅಭೂತಪೂರ್ವ ಬಹುಮತದಿಂದ ಗೆಲ್ಲಿಸಿ ನಮಗೆ ಬಹಳ ದೊಡ್ಡ ಜವಾಬ್ದಾರಿ ನೀಡಿದ್ದಾರೆ. ಅವರ ನಿರೀಕ್ಷೆಗೆ ತಕ್ಕಂತೆ ಜನಪರ ಆಡಳಿತ ನೀಡಬೇಕಾದ ಹೊಣೆಗಾರಿಕೆ ನಮ್ಮ ಮೇಲಿದೆ. ಜನರ ಸಮಸ್ಯೆಗಳನ್ನು ಕೇಳಿಸಿಕೊಳ್ಳಿ. ತಮ್ಮ ತಮ್ಮ ಕ್ಷೇತ್ರದಲ್ಲೇ ಸಮಸ್ಯೆ ಬಗೆಹರಿಸಲು ಬೇಕಾದ ಕ್ರಿಯಾಶೀಲತೆಯನ್ನು ರೂಢಿಸಿಕೊಳ್ಳಿ. ಸಣ್ಣ ಪುಟ್ಟ ಕೆಲಸಗಳಿಗೂ ಕ್ಷೇತ್ರದ ಜನ ಸರ್ಕಾರಿ ಕಚೇರಿಗಳಿಗೆ ಪದೆ ಪದೆ ಅಲೆಯುವುದನ್ನು ತಪ್ಪಿಸಿ. ಜನರು ತಮ್ಮ ಕೆಲಸಗಳನ್ನು ಪೂರೈಸಿಕೊಳ್ಳಲು ಬಸ್ಸು, ರೈಲು ಹತ್ತಿಕೊಂಡು ವಿಧಾನಸೌಧಕ್ಕೆ ಬರುವ ಹೊರೆಯನ್ನು ತಪ್ಪಿಸಿ ಎಂದು ಸೂಚಿಸಿದ್ದಾರೆ.

ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದಾಯ್ತು, ಖಾತೆ ಹಂಚಿಕೆ ಕಸರತ್ತು ಶುರು: ಸೀನಿಯರ್ಸ್​ಗೆ ಪ್ರಬಲ ಖಾತೆ ಭಾಗ್ಯ!ಇದನ್ನೂ ಓದಿ: 

ಒಂದು ವರ್ಷದಲ್ಲಿ ಲೋಕಸಭಾ ಚುನಾವಣೆ ಬರಲಿದೆ. ನಾವು ಕನಿಷ್ಠ 20 ಲೋಕಸಭಾ ಕ್ಷೇತ್ರಗಳನ್ನು ಗೆದ್ದು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮತ್ತು ವರಿಷ್ಠರಾದ ಸೋನಿಯಾಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ ಅವರಿಗೆ ಉಡುಗೊರೆ ನೀಡಬೇಕು. ಈ ಗುರಿ ಇಟ್ಟುಕೊಂಡು ಶ್ರದ್ದೆ, ಪ್ರಾಮಾಣಿಕತೆ ಹಾಗೂ ಚುರುಕಾಗಿ ಜವಾಬ್ದಾರಿ ನಿರ್ವಹಿಸಿ ಎಂದು ಎಲ್ಲಾ ಸಚಿವರಿಗೂ ಮನವರಿಕೆ ಮಾಡಿಸಿದ್ದಾರೆ.

ನಾವು ನೀಡಿರುವ ಗ್ಯಾರಂಟಿಗಳು ಜನರಿಗೆ ಸಮರ್ಪಕವಾಗಿ ತಲುಪುವಂತೆ ಪ್ರಾಮಾಣಿಕವಾಗಿ ಶ್ರಮಿಸಬೇಕು. ಹಿಂದಿನ ಬಾರಿಯ ತಪ್ಪುಗಳು ಈ ಬಾರಿ ಮರುಕಳಿಸಬಾರದು.

ಖಾತೆ ಹಂಚಿಕೆ ಸದ್ಯದಲ್ಲೇ ಪೂರ್ಣಗೊಳ್ಳಲಿದೆ. ನೀವೆಲ್ಲಾ ಸಕ್ರಿಯರಾಗಿ. ವಿರೋಧಪಕ್ಷದಲ್ಲಿದ್ದಾಗ ನಾವು ನಡೆಸಿದ ಹೋರಾಟದ ಫಲವಾಗಿ ಜನತೆ ಬಿಜೆಪಿಯ ದುರಾಡಳಿತವನ್ನು ತಿರಸ್ಕರಿಸಿ ನಮ್ಮ ಕೈ ಹಿಡಿದಿದ್ದಾರೆ. ಈಗ ನಾವು ಸರ್ಕಾರವನ್ನು, ಸರ್ಕಾರದ ಸವಲತ್ತುಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಬೇಕು. ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು. ನಮ್ಮ ಜನಪರ ನಿಷ್ಠೆ ಮತ್ತು ಕೆಲಸಗಳ ಮೂಲಕ ಮತ್ತೆ ಲೋಕಸಭಾ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವನ್ನು ದಾಖಲಿಸಬೇಕಿದೆ ಎಂದು ಸಚಿವರಿಗೆ ಸೂಚಿಸಿದ್ದಾರೆ.

ಕೇಂದ್ರದ ದುರಾಡಳಿತವನ್ನು ಕರ್ನಾಟಕದ ಮೂಲಕ ಕೊನೆಗೊಳಿಸಲು ಪರಿಸ್ಥಿತಿ ಹದವಾಗಿದೆ. ಇದನ್ನು ನಾವು ಮರೆಯಬಾರದು. ಹೀಗಾಗಿ ಸಚಿವರು ತಮಗೆ ಉಸ್ತುವಾರಿ ವಹಿಸಲಾಗುವ ಜಿಲ್ಲೆಗಳಿಗೆ ಹೆಚ್ಚೆಚ್ಚು ಪ್ರವಾಸ ಮಾಡಬೇಕು. ಜಿಲ್ಲೆ, ತಾಲ್ಲೂಕು ಮಟ್ಟದಲ್ಲೇ ಸಮಸ್ಯೆಗಳನ್ನು ಬಗೆಹರಿಸಬೇಕು. ಅಧಿಕಾರಿಗಳ ಮೇಲೆ ಕಟ್ಟು ನಿಟ್ಟಿನ ನಿಗಾ ಇಟ್ಟು ಭ್ರಷ್ಟಾಚಾರಕ್ಕೆ ಬರೆ ಎಳೆಯಬೇಕು ಎಂದು ಮುಖ್ಯಮಂತ್ರಿಗಳು ಎಲ್ಲಾ ಸಚಿವರಿಗೂ ಟಾರ್ಗೆಟ್ ನೀಡಿ ಶುಭ ಹಾರೈಸಿದ್ದಾರೆ.

Published On - 3:01 pm, Sun, 28 May 23

Daily Devotional: ಅಸಹಾಯಕರ ಶಾಪ ಹೇಗೆ ಪರಿಣಾಮ ಬೀರುತ್ತೆ ಗೊತ್ತಾ?
Daily Devotional: ಅಸಹಾಯಕರ ಶಾಪ ಹೇಗೆ ಪರಿಣಾಮ ಬೀರುತ್ತೆ ಗೊತ್ತಾ?
ಈ ರಾಶಿಯವರಿಗೆ ಕೆಲಸ ಕಾರ್ಯಗಳಲ್ಲಿ ಯಶಸ್ಸು, ಆರ್ಥಿಕ ಲಾಭ, ಸಂತೋಷ
ಈ ರಾಶಿಯವರಿಗೆ ಕೆಲಸ ಕಾರ್ಯಗಳಲ್ಲಿ ಯಶಸ್ಸು, ಆರ್ಥಿಕ ಲಾಭ, ಸಂತೋಷ
ಇದು ಆತ್ಮದ ಹಾಡು; ‘ಶಿವಂ ಶಿವಂ ಸನಾತನಂ’ ಬಗ್ಗೆ ವಿಜಯ್ ಪ್ರಕಾಶ್ ಮಾತು
ಇದು ಆತ್ಮದ ಹಾಡು; ‘ಶಿವಂ ಶಿವಂ ಸನಾತನಂ’ ಬಗ್ಗೆ ವಿಜಯ್ ಪ್ರಕಾಶ್ ಮಾತು
ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ