ಇದೊಂದು ಬೇಸ್​ಲೆಸ್ ಆರೋಪ: ಬಿಜೆಪಿ ನಾಯಕರಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಐಟಿ ದಾಳಿ ವೇಳೆ ಬರೋಬ್ಬರಿ 40 ಕೋಟಿ ರೂ. ನಗದು ಸಿಕ್ಕಿದ್ದು, ಯಾರದ್ದು ಎನ್ನುವ ಚರ್ಚೆ ರಾಜ್ಯ ರಾಜಕೀಯ ಬಿರುಗಾಳಿಯನ್ನೇ ಎಬ್ಬಿಸಿದೆ. ಆಡಳಿತ ಪಕ್ಷ-ವಿಪಕ್ಷಗಳ ಮಧ್ಯೆ ಆರೋಪ ಪ್ರತ್ಯಾರೋಪಕ್ಕೆ ವೇದಿಕೆಯಾಗಿದೆ. ಸದ್ಯ ಈ ಕುರಿತಾಗಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು,  ಇದೊಂದು ಬೇಸ್​ಲೆಸ್ ಆರೋಪ ಎಂದು ತಿರುಗೇಟು ನೀಡಿದ್ದಾರೆ.

ಇದೊಂದು ಬೇಸ್​ಲೆಸ್ ಆರೋಪ: ಬಿಜೆಪಿ ನಾಯಕರಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು
ಸಿಎಂ ಸಿದ್ದರಾಮಯ್ಯ
Edited By:

Updated on: Oct 15, 2023 | 5:13 PM

ಮೈಸೂರು, ಅಕ್ಟೋಬರ್​​​​ 15: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದ ಐಟಿ ರೇಡ್, ರಾಜ್ಯಾದ್ಯಂತ ಭಾರಿ ಸದ್ದು ಮಾಡುತ್ತಿದೆ. ಐಟಿ ದಾಳಿ ವೇಳೆ ಬರೋಬ್ಬರಿ 40 ಕೋಟಿ ರೂ. ನಗದು ಸಿಕ್ಕಿದ್ದು, ಯಾರದ್ದು ಎನ್ನುವ ಚರ್ಚೆ ರಾಜ್ಯ ರಾಜಕೀಯ ಬಿರುಗಾಳಿಯನ್ನೇ ಎಬ್ಬಿಸಿದೆ. ಆಡಳಿತ ಪಕ್ಷ-ವಿಪಕ್ಷಗಳ ಮಧ್ಯೆ ಆರೋಪ ಪ್ರತ್ಯಾರೋಪಕ್ಕೆ ವೇದಿಕೆಯಾಗಿದೆ. ಸದ್ಯ ಈ ಕುರಿತಾಗಿ ಸಿಎಂ ಸಿದ್ದರಾಮಯ್ಯ (Siddaramaiah) ಪ್ರತಿಕ್ರಿಯೆ ನೀಡಿದ್ದು,  ಇದೊಂದು ಬೇಸ್​ಲೆಸ್ ಆರೋಪ ಎಂದು ತಿರುಗೇಟು ನೀಡಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗುತ್ತಿಗೆದಾರರು ಯಾವ ಪಕ್ಷಕ್ಕೂ ಸೇರಿದವರಲ್ಲ. ಗುತ್ತಿಗೆದಾರರು ಕೇಳೋದು ಇಲ್ಲ, ನಾವೂ ಕೊಡೋದು ಇಲ್ಲ ಎಂದು ಹೇಳಿದ್ದಾರೆ.

ಕಾಂಗ್ರೆಸ್​ ವಿರುದ್ಧ ಮಾಜಿ ಶಾಸಕ ಸಿ.ಟಿ.ರವಿ ವಾಗ್ದಾಳಿ

ಪಂಚರಾಜ್ಯಗಳ ಚುನಾವಣೆಗೆ ಈ ಸರ್ಕಾರವನ್ನು ಎಟಿಎಂ ಮಾಡಿಕೊಂಡಿದ್ದಾರೆ. ಇದಕ್ಕೆ ಅಂಬಿಕಾಪತಿ, ಬಿಲ್ಡರ್ ಸಂತೋಷ್​ ಮನೆಯಲ್ಲಿ ಸಿಕ್ಕ ಹಣವೇ ಸಾಕ್ಷಿ ಎಂದು ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಮಾಜಿ ಶಾಸಕ ಸಿ.ಟಿ.ರವಿ ವಾಗ್ದಾಳಿ ಮಾಡಿದ್ದರು. 98 ಜನ ಬೇನಾಮಿಯ ಹೆಸರು ಹೊರ ಬರಬೇಕು. ಲೋಕಸಭೆ ಚುನಾವಣೆಗೆ 2 ಸಾವಿರ ಕೋಟಿ ಕೊಡ್ತೀನಿ ಅನ್ನೋ ಚರ್ಚೆ ಆಗುತ್ತಿದೆ. ಭ್ರಷ್ಟ ಬೆಂಗಳೂರು ಮಾಡಲು ಹೋಗುತ್ತಿದ್ದಾರೆ ಎಂದು ಕಿಡಿಕಾರಿದ್ದರು.

ಇದನ್ನೂ ಓದಿ: ಸಿಕ್ಕಸಿಕ್ಕ ಕಡೆ ಬಾಯಿ ಹಾಕುತ್ತಿರುವ ‘ಪರ್ಸಂಟೇಜ್ ಪಟಾಲಂ’ ಈಗ ಕಸಕ್ಕೂ ಬಾಯಿ: ಯಾರ ಮೇಲೆ ಕುಮಾರಸ್ವಾಮಿ ಟ್ವೀಟ್ ದಾಳಿ?

ತಮ್ಮ ಪ್ರಾಮಾಣಿಕತೆ ಸಾಬೀತುಪಡಿಸಿಕೊಳ್ಳಬೇಕಾದ್ರೆ ಸಿಬಿಐಗೆ ವಹಿಸಿ. ಗುತ್ತಿಗೆದಾರರ ಮನೆ ಮೇಲೆ ದಾಳಿಯಾದ್ರೆ ಡಿಸಿಎಂ ಡಿಕೆ ಶಿವಕುಮಾರ್​ ರಾಜಕೀಯ ಅಂತಾರೆ. ಐಟಿ ದಾಳಿ ಬಗ್ಗೆ ಸಚಿವ ಪ್ರಿಯಾಂಕ್​ ಖರ್ಗೆ ಕೂಡ ಪ್ರಶ್ನೆ ಮಾಡುತ್ತಾರೆ. ಒಬ್ಬೊಬ್ಬರ ಮನೆಯಲ್ಲಿ 40, 42 ಕೋಟಿ ರೂ. ಸಿಕ್ಕಿದೆಯಲ್ಲ ಏನ್ ಹೇಳ್ತೀರಿ ಎಂದು ಪ್ರಶ್ನಿಸಿದ್ದರು.

ಇದನ್ನೂ ಓದಿ: ಚಿಕ್ಕಮಗಳೂರು ನಗರಸಭೆ ಅಧ್ಯಕ್ಷ ರಾಜೀನಾಮೆ ವಾಪಸ್ ಪಡೆದು ಕಣ್ಮರೆ, ಆಪರೇಷನ್ ಹಸ್ತಕ್ಕೆ ಇಳಿದ ಕಾಂಗ್ರೆಸ್

ನಾಡಿಗೆ ಕಳಂಕ ತರುವ ರೀತಿಯಲ್ಲಿ ಸರ್ಕಾರ ಕೆಲಸ ಮಾಡುತ್ತಿದೆ. ಸಮಾಜಕ್ಕೆ ಯಾವುದು ದುಷ್ಟವಾಗಿ ಕಾಡ್ತಿದೆಯೋ ಅದು ದಮನವಾಗಲಿ. ರಾಜೀವ್ ತಾರನಾಥ್ ಅವರ ಮೈಸೂರು ದಸರಾ ಕಾರ್ಯಕ್ರಮ ಆಯೋಜನೆಗೆ 5 ಲಕ್ಷ ರೂ. ಲಂಚ ಕೇಳುತ್ತಾರೆ. ನಾಡಹಬ್ಬಕ್ಕೆ ಇದಕ್ಕಿಂತ ಕಳಂಕ ಮತ್ತೊಂದು ಇಲ್ಲ. ಗುತ್ತಿಗೆದಾರರು, ಯೋಜನೆಗೆ ಮಾತ್ರ ಕಮಿಷನ್​ ದಂಧೆ ಸೀಮಿತವಾಗಿಲ್ಲ. ಕಲಾವಿದರ ಗೌರವಧನದವರೆಗೆ ಈ ದಂಧೆ ಮುಂದುವರೆದಿದೆ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:04 pm, Sun, 15 October 23

Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
Follow Us