ಲೋಕಸಭಾ ಚುನಾವಣೆ ಬಳಿಕ ಎಚ್​​​ಡಿಕೆ ಮತ್ತವರ ಕುಟುಂಬ ಕೇಸರಿ ಶಾಲು ಕಿತ್ತೆಸೆಯುವುದು ನಿಶ್ಚಿತ: ಸಿದ್ದು ಭವಿಷ್ಯ

| Updated By: ರಮೇಶ್ ಬಿ. ಜವಳಗೇರಾ

Updated on: Feb 20, 2024 | 7:20 PM

ವಿಧಾನ ಪರಿಷತ್‍ನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಜಯಶಾಲಿಯಾಗಿದ್ದು, ಸಿಎಂ ಸಿದ್ದರಾಮಯ್ಯ ಹರ್ಷ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಬಿಜೆಪಿ ಮತ್ತು ಜೆಡಿಎಸ್ ನಾಯಕರ ನಡುವೆ ಮೈತ್ರಿ ಆಗಿದೆಯೇ ವಿನಃ ಇದಕ್ಕೆ ಮತದಾರರ ಒಪ್ಪಿಗೆ ಇಲ್ಲ ಎಂಬುದನ್ನು ವಿಧಾನ ಪರಿಷತ್ ಉಪ ಚುನಾವಣೆ ಫಲಿತಾಂಶ ಸ್ಪಷ್ಟಪಡಿಸಿದೆ ಎಂದಿದ್ದಾರೆ.

ಲೋಕಸಭಾ ಚುನಾವಣೆ ಬಳಿಕ ಎಚ್​​​ಡಿಕೆ ಮತ್ತವರ ಕುಟುಂಬ ಕೇಸರಿ ಶಾಲು ಕಿತ್ತೆಸೆಯುವುದು ನಿಶ್ಚಿತ: ಸಿದ್ದು ಭವಿಷ್ಯ
ಕುಮಾರಸ್ವಾಮಿ-ಸಿದ್ದರಾಮಯ್ಯ
Follow us on

ಬೆಂಗಳೂರು, (ಫೆಬ್ರವರಿ 20): ವಿಧಾನಪರಿಷತ್​ನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆ (Bangalore Teachers Constituency) ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್​​ನ ಪುಟ್ಟಣ್ಣ (Congress candidate Puttanna) ಗೆಲುವು ಸಾಧಿಸಿದ್ದಾರೆ. ಇದರೊಂದಿಗೆ ಬಿಜೆಪಿ ಮತ್ತು ಬಿಜೆಪಿ ಮೈತ್ರಿಗೆ ಸೋಲಾಗಿದೆ. ಇನ್ನು ಈ ಫಲಿತಾಂಶದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ( Siddaramaiah) ಮಾಧ್ಯಮ ಪ್ರಕಟಣೆ ಮೂಲಕ ಪ್ರತಿಕ್ರಿಯಿಸಿದ್ದು, ಬಿಜೆಪಿ, ಜೆಡಿಎಸ್ ನಾಯಕರ ನಡುವೆ ಮೈತ್ರಿಯಾಗಿದೆಯೇ (BJP JDS Alliance) ವಿನಃ ಮತದಾರರ ಒಪ್ಪಿಗೆ ಇಲ್ಲ ಎಂಬುದನ್ನು ಈ ಫಲಿತಾಂಶ ಸ್ಪಷ್ಟಪಡಿಸಿದೆ. ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡ ಜೆಡಿಎಸ್‌ ಮುಖವಾಡ ಕಳಚಿದೆ ಎಂದು ಟಾಂಗ್ ಕೊಟ್ಟಿದ್ದಾರೆ.

JDS ಕೋಮುವಾದಿ ಅವತಾರಕ್ಕೆ ಮತದಾರ ಕಪಾಳಮೋಕ್ಷ ಮಾಡಿದ್ದಾನೆ. ಉಪ ಚುನಾವಣೆಯಲ್ಲಿ ಗೆದ್ದ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣಗೆ ಅಭಿನಂದನೆ. ಇದು ನಮ್ಮ ಸರ್ಕಾರದ 9 ತಿಂಗಳ ಜನಪರವಾದ ಆಡಳಿತ ಮತ್ತು ಸರ್ಕಾರದ ಬಗ್ಗೆ ಪ್ರಜ್ಞಾವಂತ ಮತದಾರರು ಇಟ್ಟಿರುವ ವಿಶ್ವಾಸದ ಗೆಲುವು. ಬಿಜೆಪಿ, ಜೆಡಿಎಸ್ ಒಟ್ಟಾಗಿ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ರೂ ಸೋಲು ಇದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು, H.D.ಕುಮಾರಸ್ವಾಮಿ, ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ನಡುವಿನ ಮೈತ್ರಿ ಅಷ್ಟೇ. 2 ಪಕ್ಷಗಳ ಮತದಾರರ ನಡುವಿನ ಮೈತ್ರಿಯಲ್ಲ ಎಂಬುದು ಸಾಬೀತಾಗಿದೆ. ಈ ಅಪವಿತ್ರ ಮೈತ್ರಿಗೆ ಗ್ಯಾರಂಟಿ, ವಾರಂಟಿ ಯಾವುದೂ ಇಲ್ಲ. ಲೋಕಸಭಾ ಚುನಾವಣೆ ಬಳಿಕ ಕೇಸರಿ ಶಾಲು ಕಿತ್ತೆಸೆಯುವುದು ನಿಶ್ಚಿತ. ಹೆಚ್​ಡಿಕೆ ಮತ್ತವರ ಕುಟುಂಬ ಕೇಸರಿಶಾಲು ಕಿತ್ತೆಸೆಯುವುದು ನಿಶ್ಚಿತ ಎಂದು ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ಪರಿಷತ್ ಉಪ ಚುನಾವಣೆಯಲ್ಲಿ ಕಾಂಗ್ರೆಸ್​ನ ಪುಟ್ಟಣ್ಣಗೆ ಜಯ, ಜೆಡಿಎಸ್-ಬಿಜೆಪಿ ಮೈತ್ರಿಗೆ ಮುಖಭಂಗ

ಇದು ಬಿಜೆಪಿ-ಜೆಡಿಎಸ್​ ಸೋಲು ಅಲ್ಲ ಎಂದ ರಂಗನಾಥ್

ಇನ್ನು ಫಲಿತಾಂಶದ ಬಗ್ಗೆ ಪರಾಜಿತ ಮೈತ್ರಿ ಅಭ್ಯರ್ಥಿ ರಂಗನಾಥ್​ ಮಾತನಾಡಿ, ಇದು ಭಾರತೀಯ ಜನತಾ ಪಾರ್ಟಿ, ಜೆಡಿಎಸ್ ಮೈತ್ರಿಗೆ ಆದ ಸೋಲಲ್ಲ. ಇದು ನನ್ನ ವೈಯಕ್ತಿಕ ಸೋಲು. ಆಡಳಿತಾರೂಢ ಕಾಂಗ್ರೆಸ್ ಪಕ್ಷ ಅಧಿಕಾರ ದುರ್ಬಳಕೆ ಮಾಡಿಕೊಂಡಿದೆ. ಡಿಡಿಪಿಐ, ಬಿಇಒಗಳನ್ನ ದುರ್ಬಳಕೆ ಮಾಡಿಕೊಂಡಿದ್ದಾರೆ. ಅಧಿಕಾರಿಗಳ ಮೇಲೆ ಒತ್ತಡ ಹಾಕಿ ತಮ್ಮ ಕೆಲಸ ಮಾಡಿಸಿಕೊಂಡಿದ್ದಾರೆ. ಹಣ ದುರುಪಯೋಗ ಮಾಡಿಕೊಂಡು ಗೆಲವು ಪಡೆದಿದ್ದಾರೆ ಎಂದು ಆರೋಪಿಸಿದರು.

ಗೆಲುವಿನ ಬಳಿಕ ಪುಟ್ಟಣ್ಣ ಹೇಳಿದ್ದೇನು?

ಇನ್ನು ಗೆಲುವಿನ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಪುಟ್ಟಣ್ಣ, ಕಳೆದ ಮೂರು ಬಾರಿಯಿಂದ ಮೊದಲ ರೌಂಡ್ ನಿಂದಲೇ ಗೆಲ್ಲುತ್ತಿದ್ದೇನೆ. ಸಮಸ್ತ ಶಿಕ್ಷಕ ಸಮುದಾಯಕ್ಕೆ ಗೆಲುವು ಅರ್ಪಿಸುತ್ತೇನೆ. ಶಿಕ್ಷಕ ಸಮುದಾಯದ ಹಿತ ಕಾಯುವಂತ ಕೆಲಸ ಮಾಡುತ್ತೇನೆ. ನಂಬಿಕೆ ಉಳಿಸಿಕೊಂಡು ಕೆಲಸ ಮಾಡಿದ್ದೇನೆ. ಕಾರ್ಯಕರ್ತರು ಓಟು ಇದಲ್ಲ, ಶಿಕ್ಷಕರ ಓಟು ಇದು. ಸೋತಿರುವವರು ಪಾಪ ಆರೋಪ ಮಾಡಲೇಬೇಕು. ಅವರ ಮನಸ್ಸಿಗೆ ಸಾಂತ್ವನ ಹೇಳಿಕೊಳ್ಳಬೇಕು ಅದಕ್ಕಾಗಿ ಹೇಳಿದ್ದಾರೆ. ಚುನಾವಣೆ ಸೋತೂ ಸೋತೂ ಸೋತು ಕೊನೆಗೆ ಅವರು ಒಮ್ಮೆ ಲಾಯರ್ ಚುನಾವಣೆ ಗೆದ್ದಿದ್ದರು. ನನ್ನನ್ನು ಸೋಲಿಸಲೇಬೇಕು ಅಂತ ಬಿಜೆಪಿ ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದರು. ಆದರೂ ಶಿಕ್ಷಕರು ನನ್ನ ಮೇಲೆ ನಂಬಿಕೆ ಇಟ್ಟಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.