ರಾಜಕೀಯದಲ್ಲಿ ವಿಲನ್ ಅಂತ ಇದ್ದರೆ ಅದು ಕುಮಾರಸ್ವಾಮಿ: ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

| Updated By: Ganapathi Sharma

Updated on: Oct 25, 2023 | 3:13 PM

ಬಿಜೆಪಿಗಿಂತ ಕುಮಾರಸ್ವಾಮಿ ಜಾಸ್ತಿ ಹತಾಶರಾಗಿದ್ದಾರೆ. ಇವರು ಅವರ ಮೇಲೆ ಅವರು ಇವರ ಮೇಲೆ ಡಿಪೆಂಡ್​​ ಆಗಿದ್ದಾರೆ‌. ಖಾಲಿ ಡಬ್ಬ ಮಾತ್ರ ಶಬ್ದ ಮಾಡುತ್ತೆ, ತುಂಬಿದ ಕೊಡ ತುಳುಕುವುದಿಲ್ಲ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ರಾಜಕೀಯದಲ್ಲಿ ವಿಲನ್ ಅಂತ ಇದ್ದರೆ ಅದು ಕುಮಾರಸ್ವಾಮಿ: ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ
ಸಿಎಂ ಸಿದ್ದರಾಮಯ್ಯ & ಹೆಚ್​ಡಿ ಕುಮಾರಸ್ವಾಮಿ
Follow us on

ಮೈಸೂರು, ಅಕ್ಟೋಬರ್ 25: ರಾಜಕೀಯದಲ್ಲಿ ವಿಲನ್ ಅಂತ ಇದ್ದರೆ ಅದು ಜೆಡಿಎಸ್ ನಾಯಕ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಎಂದು ಸಿಎಂ ಸಿದ್ದರಾಮಯ್ಯ (Siddaramaiah) ವಾಗ್ದಾಳಿ ನಡೆಸಿದರು. ಮೈಸೂರಿನಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ಅವರು ಸಮ್ಮಿಶ್ರ ಸರಕಾರ ಬೀಳುವಾಗ ಅಮೆರಿಕದಲ್ಲಿದ್ರು, ಅದಕ್ಕೆ ಏನು ಹೇಳಬೇಕು? ಒಂದು ವರ್ಷ ಎರಡು ತಿಂಗಳು ತಾಜ್ ವೆಸ್ಟೆಂಡ್​ನಲ್ಲೇ ಕಾಲ ಕಳೆದರು. ವಿಧಾನಸಭೆಯಲ್ಲಿ ಬಿಜೆಪಿಯವೇ ಸರ್ಕಾರ ಬೀಳಿಸಿದ್ದು ಅಂತಾ ಹೇಳಿದ್ದರು. ಅಸೆಂಬ್ಲಿಯಲ್ಲಿ ರೆಕಾರ್ಡ್ ಬೇಕಾದರೆ ಬಿಡುಗಡೆ ಮಾಡುತ್ತೇನೆ ಎಂದು ಹೇಳಿದರು.

ಸಚಿವರು, ಶಾಸಕರನ್ನು ಭೇಟಿ ಮಾಡದೆ ಹೋಟೆಲ್​ನಲ್ಲಿ ಕುಮಾರಸ್ವಾಮಿ ಕೂತಿದ್ದರು. ರಾಜಕೀಯವಾಗಿ ಹತಾಶೆರಾಗಿ ಬಾಯಿಗೆ ಬಂದ ರೀತಿ ಮಾತಾಡುತ್ತಿದ್ದಾರೆ. ಬಿಜೆಪಿಗಿಂತ ಕುಮಾರಸ್ವಾಮಿ ಜಾಸ್ತಿ ಹತಾಶರಾಗಿದ್ದಾರೆ. ಇವರು ಅವರ ಮೇಲೆ ಅವರು ಇವರ ಮೇಲೆ ಡಿಪೆಂಡ್​​ ಆಗಿದ್ದಾರೆ‌. ಖಾಲಿ ಡಬ್ಬ ಮಾತ್ರ ಶಬ್ದ ಮಾಡುತ್ತೆ, ತುಂಬಿದ ಕೊಡ ತುಳುಕುವುದಿಲ್ಲ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಇದರೊಂದಿಗೆ ಇದೀಗ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಿಎಂ ಸಿದ್ದರಾಮಯ್ಯ ನೇರವಾಗಿ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ಆರಂಭಿಸಿದಂತಾಗಿದೆ.

ಕನಕಪುರ ತಾಲೂಕನ್ನು ಬೆಂಗಳೂರಿಗೆ ಸೇರ್ಪಡೆ ಮಾಡುವ ವಿಚಾರವಾಗಿ ಡಿಕೆ ಶಿವಕುಮಾರ್ ನೀಡಿದ್ದ ಹೇಳಿಕೆಗೆ ಕುಮಾರಸ್ವಾಮಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ಕುಮಾರಸ್ವಾಮಿ ರಾಮನಗರ ಜಿಲ್ಲೆ ಸ್ಥಾಪನೆ ಮಾಡಿದ್ದು ರಾಜಕೀಯವಾಗಿ ಹೆಸರು ಗಳಿಸಲು ಎಂದೂ ಡಿಕೆ ಹೇಳಿದ್ದು ಅವರನ್ನು ಕೆರಳಿಸಿತ್ತು. ಕುಮಾರಸ್ವಾಮಿ ವಾಗ್ದಾಳಿ ಬೆನ್ನಲ್ಲೇ ಇದೀಗ ಡಿಕೆ ಶಿವಕುಮಾರ್ ಸಹ ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ: ಬಿಜೆಪಿ ಅವಧಿಯ ಅರ್ಥಿಕ ಪರಿಸ್ಥಿತಿ ಬಗ್ಗೆ ಶ್ವೇತಪತ್ರ ಹೊರಡಿಸುತ್ತೇನೆ: ಸಿಎಂ ಸಿದ್ದರಾಮಯ್ಯ

ನನಗೆ ಯಾಕೆ ಡಿಕೆ ಎಂದು ಹೆಸರಿಟ್ಡಿದ್ದಾರೆ, ಅವರದ್ದು (ಕುಮಾರಸ್ವಾಮಿ) ಯಾಕೆ ಹೆಚ್‌ಡಿಕೆ ಅಂತಾ ಇದೆ? ಅಂದರೆ, ನನ್ನದು ಕನಕಪುರ, ಅವರದ್ದು ಹಾಸನ ಎಂದು ಹೇಳುವ ಮೂಲಕ ಡಿಕೆ ಶಿವಕುಮಾರ್ ನೇರ ವಾಗ್ದಾಳಿ ನಡೆಸಿದ್ದಾರೆ. ಈ ಮಧ್ಯೆ, ಸಿಎಂ ಸಿದ್ದರಾಮಯ್ಯ ಸಹ ಇದೀಗ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 3:12 pm, Wed, 25 October 23