ವಾಸ್ತು ಸರಿಯಿಲ್ಲವೆಂದು ಮುಚ್ಚಿದ್ದ ಕಚೇರಿಯ ದಕ್ಷಿಣ ಬಾಗಿಲು ತೆರೆಸಿ ಒಳ ಪ್ರವೇಶಿಸಿದ ಸಿಎಂ ಸಿದ್ದರಾಮಯ್ಯ, ಬಳಿಕ ಹೇಳಿದ್ದೇನು ಗೊತ್ತಾ?

ವಾಸ್ತು ಸರಿಯಿಲ್ಲ ಎನ್ನುವ ಕಾರಣದಿಂದ ಬಂದ್ ಮಾಡಲಾಗಿದ್ದ ವಿಧಾನಸೌಧದ ಮುಖ್ಯಮಂತ್ರಿ ಕಚೇರಿಯ ದಕ್ಷಿಣ ದ್ವಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೆರೆಸಿ ಅದೇ ದ್ವಾರದಿಂದ ಕಚೇರಿ ಪ್ರವೇಶಿಸಿದ್ದಾರೆ.

ವಾಸ್ತು ಸರಿಯಿಲ್ಲವೆಂದು ಮುಚ್ಚಿದ್ದ ಕಚೇರಿಯ ದಕ್ಷಿಣ ಬಾಗಿಲು ತೆರೆಸಿ ಒಳ ಪ್ರವೇಶಿಸಿದ ಸಿಎಂ ಸಿದ್ದರಾಮಯ್ಯ, ಬಳಿಕ ಹೇಳಿದ್ದೇನು ಗೊತ್ತಾ?
ವಾಸ್ತು ದೋಷದಿಂದ ಮುಚ್ಚಿದ್ದ ಕಚೇರಿಯ ದಕ್ಷಿಣ ದ್ವಾರ ತೆರೆಸಿ ಅಲ್ಲಿಂದಲೇ ಒಳ ಪ್ರವೇಶಿಸಿದ ಸಿಎಂ ಸಿದ್ದರಾಮಯ್ಯ
Follow us
Rakesh Nayak Manchi
|

Updated on:Jun 24, 2023 | 5:44 PM

ಬೆಂಗಳೂರು: ಮನಸ್ಸು ಸರಿ ಇದ್ದರೆ ಎಲ್ಲವೂ ಸರಿ ಇದ್ದಂತೆ ಎಂದು ಹೇಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ವಾಸ್ತು ಸರಿ ಇಲ್ಲ ಎಂದು ಮುಚ್ಚಿದ್ದ ಕಚೇರಿಯ ದಕ್ಷಿಣ ದ್ವಾರವನ್ನು ತೆರೆಸಿದರು. ಅನ್ನಭಾಗ್ಯ (Anna Bhagya) ಸಂಬಂಧ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲು ವಿಧಾನಸೌಧಕ್ಕೆ (Vidhana Soudha) ಆಗಮಿಸಿದ ಸಿದ್ದರಾಮಯ್ಯ ಅವರು ವಾಸ್ತು ಸಮಸ್ಯೆ ಇರುವ ದ್ವಾರವನ್ನು ತೆರೆಸಿ ಅದೇ ದ್ವಾರದಿಂದ ಒಳ ಪ್ರವೇಶಿಸಿ ವಾಸ್ತು ಬಗೆಗಿನ ತಮ್ಮ ನಿಲುವನ್ನು ಅಧಿಕಾರಿಗಳಿಗೆ ತಿಳಿಸಿದ್ದಾರೆ.

ಸಭೆ ಹಿನ್ನೆಲೆ ಕಚೇರಿಗೆ ಆಗಮಿಸಿದಾಗ ದಕ್ಷಿಣ ದ್ವಾರ ಮುಚ್ಚಿರುವುದನ್ನು ಗಮನಿಸಿದ ಸಿದ್ದರಾಮಯ್ಯ ಅವರು, ಅಧಿಕಾರಿಗಳನ್ನು ಪ್ರಶ್ನಿಸಿದ್ದಾರೆ. ಈ ವೇಳೆ, ವಾಸ್ತು ಕಾರಣದಿಂದ ಬಂದ್ ಮಾಡಲಾಗಿದೆ ಎಂದು ಅಧಿಕಾರಿಗಳು ಮುಖ್ಯಮಂತ್ರಿ ಅವರಿಗೆ ತಿಳಿಸಿದ್ದಾರೆ. ಅಧಿಕಾರಿಗಳ ಮಾತು ಕೇಳೀ ಅಲ್ಲೇ ನಿಂತ ಸಿದ್ದರಾಮಯ್ಯ ಅವರು ಬಾಗಿಲು ತೆರೆಯುವಂತೆ ಸೂಚಿಸಿದರು. ಅದರಂತೆ ಪಶ್ಚಿಮ ದ್ವಾರದಿಂದ ಒಳಗೆ ಹೋದ ಸಿಬ್ಬಂದಿ ದಕ್ಷಿಣದ ದ್ವಾರವನ್ನು ತೆರೆದಿದ್ದಾರೆ.

ಇದನ್ನೂ ಓದಿ: ಕರ್ನಾಟಕಕ್ಕೆ ತೆಲಂಗಾಣದಿಂದ ಭತ್ತ, ಛತ್ತೀಸಗಢದಿಂದ ಅಕ್ಕಿ: ಸಿದ್ದರಾಮಯ್ಯ

ದಕ್ಷಿಣ ದ್ವಾರ ತೆರೆಯುತ್ತಿದ್ದಂತೆ ಅದೇ ದ್ವಾರದ ಮೂಲಕವೇ ಸಿದ್ದರಾಮಯ್ಯ ತಮ್ಮ ಕಚೇರಿ ಪ್ರವೇಶಿಸಿದರು. ಈ ವೇಳೆ ಆರೋಗ್ಯಕರ ಮನಸ್ಸು, ಸ್ವಚ್ಚ ಹೃದಯ, ಜನಪರ ಕಾಳಜಿ, ಒಳ್ಳೆ ಗಾಳಿ ಬೆಳಕು ಬರುವಂತಿದ್ದರೆ ಅದೇ ಉತ್ತಮ ವಾಸ್ತು ಎಂದು ಅಧಿಕಾರಿಗಳಿಗೆ ತಮ್ಮ ನಿಲುವನ್ನು ಹಂಚಿಕೊಂಡರು.

ಕಾಗೆ ಕುಳಿತಿದ್ದ ಕಾರು ಬದಲಾಯಿಸಿದ್ದ ಸಿದ್ದರಾಮಯ್ಯ

ಇದೇ ಸಿದ್ದರಾಮಯ್ಯ ಅವರು 2016ರಲ್ಲಿ ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ಅವರ ಕಾರಿನ ಮೇಲೆ ಕಾಗೆಯೊಂದು ಕೂತಿತ್ತು. ಇದನ್ನು ಅಪಶಕುನ ಎಂದು ಹೇಳಲಾಗಿತ್ತು. ಮೂಢನಂಬಿಕೆಗಳನ್ನು ನಂಬಲ್ಲ ಎಂದಿದ್ದ ಸಿದ್ದರಾಮಯ್ಯ ತಮ್ಮ ಕಾರಿನ ಮೇಲೆ ಕಾಗೆ ಕುಳಿತ ಕೆಲವು ದಿನಗಳ ನಂತರ ತಾಂತ್ರಿಕ ಸಮಸ್ಯೆ ನೆಪ ಹೇಳಿ ಕಾರನ್ನು ಬದಲಾಯಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:42 pm, Sat, 24 June 23

ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ